Site icon Vistara News

Karnataka Weather : ವೆದರ್‌ ಸಖತ್‌ ಹಾಟ್‌ ಗುರು! ಬೆವರಲ್ಲೇ ತೋಯಿಸುತ್ತಿದ್ದಾನೆ ಸೂರ್ಯ

Maximum temperature rise in Karnataka

ಬೆಂಗಳೂರು: ಸೋಮವಾರ ರಾಜ್ಯಾದ್ಯಂತ ತಾಪಮಾನದಲ್ಲಿ ಏರಿಳಿತ (Dry Weather) ಉಂಟಾಗಲಿದೆ. ಮಾರ್ಚ್ 16ರವೆರಗೂ ಶುಷ್ಕ ವಾತಾವರಣವೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆ ನೀಡಿದೆ.

ರಾಜಧಾನಿ ಬೆಂಗಳೂರಲ್ಲಿ ಗರಿಷ್ಟ ತಾಪಮಾನವು 35 ಡಿ.ಸೆ ತಲುಪುವ ನಿರೀಕ್ಷೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಹಾಗೂ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Drowned in Water: ಕೊಳದಲ್ಲಿ ಈಜಲು ಹೋಗಿ ಯುವಕ ನೀರುಪಾಲು; ಸಮುದ್ರದ ಸುಳಿಗೆ ಸಿಲುಕಿದ ಯುವತಿಯರು

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ.

ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಹೆಚ್ಚಲಾಗಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 35 ಡಿ.ಸೆ – 20 ಡಿ.ಸೆ
ಮಂಗಳೂರು: 34 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 22 ಡಿ.ಸೆ
ಗದಗ: 36 ಡಿ.ಸೆ – 22 ಡಿ.ಸೆ
ಹೊನ್ನಾವರ: 35 ಡಿ.ಸೆ- 20 ಡಿ.ಸೆ
ಕಲಬುರಗಿ: 38 ಡಿ.ಸೆ – 25 ಡಿ.ಸೆ
ಬೆಳಗಾವಿ: 35 ಡಿ.ಸೆ – 18 ಡಿ.ಸೆ
ಕಾರವಾರ: 36 ಡಿ.ಸೆ – 21 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version