Karnataka Weather: ಏರಲಿದೆ ಗರಿಷ್ಠ ತಾಪಮಾನ; ಹೇಗಿರಲಿದೆ ರಾಜ್ಯದ ಹವಾಮಾನ? - Vistara News

ಮಳೆ

Karnataka Weather: ಏರಲಿದೆ ಗರಿಷ್ಠ ತಾಪಮಾನ; ಹೇಗಿರಲಿದೆ ರಾಜ್ಯದ ಹವಾಮಾನ?

Karnataka Weather: ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಬಿಸಿಲ ಧಗೆ ಹೆಚ್ಚಾಗಲಿದೆ.

VISTARANEWS.COM


on

Karnataka Weather Maximum temperature to rise in Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ರಾಜ್ಯದ ಹಲವು ಕಡೆ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಲಿದೆ. ಇದರಿಂದ ಸೆಖೆಯ ಪ್ರಮಾಣ ಹೆಚ್ಚಾಗಲಿದೆ. ಮಧ್ಯಾಹ್ನದ ವೇಳೆ ಬಿಸಿಲಿನ ಪ್ರಭಾವ ಜಾಸ್ತಿಯಾಗಿದೆ. ಹೀಗಾಗಿ ಹೊರಗೆ ಹೋದರೆ ಮೈಯೆಲ್ಲ ಉರಿದಂತೆ ಭಾಸವಾಗುತ್ತದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast) ಹೇಳಿದೆ.

ದಕ್ಷಿಣ ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಕನಿಷ್ಠ ಹಾಗೂ ಗರಿಷ್ಠ ತಾಪಮಾನವು 2-3 ಡಿ.ಸೆ ಏರಿಕೆ ಆಗಲಿದೆ. ಇದರಿಂದಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಮತ್ತು ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗದಲ್ಲಿ ಶುಷ್ಕ ವಾತಾವರಣ ಇರಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಬಿಸಿಲ ಧಗೆ ಹೆಚ್ಚಾಗಲಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉಡುಪಿಯ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದಾಗಿ ಸೆಕೆಯ ವಾತಾವರಣ ಇರಲಿದ್ದು, ಚಳಿ ಎಂಬುದು ಮಾಯವಾಗಿದೆ.

ಬೆಂಗಳೂರಿನಲ್ಲಿ ವಾತಾವರಣ ಹೇಗೆ

ಬೆಂಗಳೂರಲ್ಲಿ ಸೋಮವಾರ ಮುಂಜಾನೆ ಅಲ್ಲಲ್ಲಿ ಮಂಜು ಆವರಿಸಿತ್ತಾದರೂ ವಾತಾವರಣ ಸಾಮಾನ್ಯವಾಗಿತ್ತು. ಆದರೆ, ಬೆಳಕು ಹರಿಯುತ್ತಿದ್ದಂತೆ ಬಿಸಿಲ ತಾಪ ಹೆಚ್ಚಾಗಿದೆ. ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶವು ಕ್ರಮವಾಗಿ 31 ಹಾಗೂ 17 ಡಿ.ಸೆ ಇತ್ತು. ಇದು ಮಂಗಳವಾರವೂ ಹೀಗೆಯೇ ಮುಂದುವರಿಯುವ ಲಕ್ಷಣ ಇದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ ಹೇಳಿದೆ.

ಹಲವು ಕಡೆ ಗರಿಷ್ಠ ತಾಪಮಾನ 34ರಿಂದ 35 ಡಿ.ಸೆ

ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್‌ನಿಂದ 14 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾವೇರಿ ಮತ್ತು ರಾಯಚೂರಲ್ಲಿ ಗರಿಷ್ಠ ತಾಪಮಾನ 34ರಿಂದ 35 ಡಿ.ಸೆ ದಾಖಲಾಗಲಿದೆ.

ಇದನ್ನೂ ಓದಿ: Ayushman Bharat : ಮೋದಿ ಗ್ಯಾರಂಟಿಯ ಆಯುಷ್ಮಾನ್ ಭಾರತ್​ ಕಾರ್ಡ್​ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 31 ಡಿ.ಸೆ -17 ಡಿ.ಸೆ
ಮಂಗಳೂರು: 34 ಡಿ.ಸೆ – 17 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 18 ಡಿ.ಸೆ
ಗದಗ: 34 ಡಿ.ಸೆ – 21 ಡಿ.ಸೆ
ಹೊನ್ನಾವರ: 36 ಡಿ.ಸೆ- 23 ಡಿ.ಸೆ
ಕಲಬುರಗಿ: 36 ಡಿ.ಸೆ – 16 ಡಿ.ಸೆ
ಬೆಳಗಾವಿ: 34 ಡಿ.ಸೆ – 18 ಡಿ.ಸೆ
ಕಾರವಾರ: 34 ಡಿ.ಸೆ – 22 ಡಿ.ಸೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬಿಸಿಲ ತಾಪಕ್ಕೆ ಕರಾವಳಿ, ಉತ್ತರ ಕರ್ನಾಟಕ ತತ್ತರ

Heat Summer : ಬಿಸಿಲ ತಾಪಕ್ಕೆ ಕರಾವಳಿ ಹಾಗೂ ಉತ್ತರ ಒಳನಾಡಿನ ಜನರು ತತ್ತರಿಸಿ ಹೋಗಿದ್ದಾರೆ. ಮಾರ್ಚ್‌ ಮೊದಲ ವಾರದಿಂದ ಬಿಸಿಲ ಧಗೆಯು ಜನರನ್ನು (Karnataka Weather Forecast) ಮತ್ತಷ್ಟು ಹೈರಾಣಾಗಿಸಲಿದೆ.

VISTARANEWS.COM


on

By

Dry weather likely to prevail over the State
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ಶುಷ್ಕ ವಾತಾವರಣವೇ (Dry Weather) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ರಾಜ್ಯಾದ್ಯಂತ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇತ್ತ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿ ಇರಲಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಆದರೆ ಬೆಂಗಳೂರು ವಿಮಾನ ನಿಲ್ದಾಣ ಸೇರಿ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Murder Case : ನಿಗೂಢವಾಗಿ ನಾಪತ್ತೆಯಾಗಿದ್ದ ಯುವಕ ಹೊಲದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆ

ರಾಜ್ಯಾದ್ಯಂತ ಬುಧವಾರ ಒಣ ಹವೆ ಇತ್ತು. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಕನಿಷ್ಠ ಉಷ್ಣಾಂಶ 15.8 ಡಿ.ಸೆ. ಮಂಡ್ಯದಲ್ಲಿ ದಾಖಲಾಗಿತ್ತು. ಕೋಲಾರದಲ್ಲಿ ಸರಾಸರಿ ಕನಿಷ್ಠ ಉಷ್ಣಾಂಶ 12.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ದಕ್ಷಿಣ ಕನ್ನಡದಲ್ಲಿ ಗರಿಷ್ಠ ಉಷ್ಣಾಂಶ 37.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರದ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್‌ನಿಂದ 12 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗಿದೆ. ಹಾವೇರಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 40ರಿಂದ 42 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಇದನ್ನೂ ಓದಿ: Murder Case : ನಿಗೂಢವಾಗಿ ನಾಪತ್ತೆಯಾಗಿದ್ದ ಯುವಕ ಹೊಲದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆ

ಹೊಟ್ಟೆ ಬಿರಿಯುವಂತೆ ಉಂಡ ಬಳಿಕ ಜೀರ್ಣಿಸಿಕೊಳ್ಳುವುದು ಹೇಗೆ? ಇಲ್ಲಿದೆ ಸರಳೋಪಾಯ!

ಕೆಲವೊಮ್ಮೆ ಯಾವುದೋ ಮದುವೆಯಲ್ಲೋ, ಹಬ್ಬದೂಟದ ಸಂದರ್ಭವೋ, ಅಥವಾ ಗೆಳೆಯರ ಜೊತೆಗೆ ರೆಸ್ಟೋರೆಂಟಿಗೆ ಹೋಗಿಯೋ ಅಗತ್ಯಕ್ಕಿಂತ ಹೆಚ್ಚೇ ಊಟ ಮಾಡಿ ಬಂದುಬಿಡುತ್ತೇವೆ. ಊಟ ಮಾಡುವ ಸಂದರ್ಭ ಮಾತುಕತೆಯಲ್ಲೋ, ಅಥವಾ ಊಟ ಬಹಳ ರುಚಿಯಾಗಿದೆಯೆಂದೋ, ತನ್ನ ಫೇವರಿಟ್‌ ಅಡುಗೆ ಬಹಳ ದಿನಗಳ ನಂತರ ಸಿಕ್ಕಿದೆಯೆಂದೋ ಹೊಟ್ಟೆ ಬಿರಿಯ ತಿಂದುಬಿಡುತ್ತೇವೆ. ಊಟ ಕುತ್ತಿಗೆವರೆಗೆ ಬಂದಿದೆ ಅನಿಸಿದರೂ, ಕೊನೆಯಲ್ಲಿ ಸಿಹಿತಿನಿಸನ್ನೋ, ಐಸ್‌ಕ್ರೀಮನ್ನೋ ಹೊಟ್ಟೆಗಿಳಿಸಿ ತೇಗುತ್ತೇವೆ. ಎಲ್ಲ ಮುಗಿದ ಮೇಲೆ ಹೊಟ್ಟೆ ಮೇಲೆ ಕೈಯಾಡಿಸುವಾಗಲೇ ಇಹಲೋಕಕ್ಕೆ ಮರಳಿ, ಅಗತ್ಯಕ್ಕಿಂತ ಹೆಚ್ಚೇ ತಿಂದೆ ಎಂಬ ಅನುಭವವಾಗುವುದು. ಕೆಲವೊಮ್ಮೆ ಇಂಥ ಊಟ ಮಾಡುವ ಸಂದರ್ಭ ಮನಸ್ಸಿಗೆ ಖುಷಿಯಾದರೂ, ಜ್ಞಾನೋದಯವಾಗುವ ಹೊತ್ತಿಗೆ ಹೊಟ್ಟೆ ಉಬ್ಬರಿಸಿದಂಥ ಭಾವ. ಇನ್ನೇನು ಮಾಡುವುದು, ಹೊಟ್ಟೆ ಹೊತ್ತುಕೊಂಡು ನಾಲ್ಕು ಹೆಜ್ಜೆ ನಡೆಯಲಾರದಷ್ಟು ಹೊಟ್ಟೆ ಭಾರ. ಅದಕ್ಕಾಗಿಯೇ ಯಾವಾಗಲೂ ನಾವು ತಿನ್ನುತ್ತಿರುವ ಆಹಾರ ಪೋಷಕಾಂಶಗಳಿಂದ ಸಮೃದ್ಧವಾಗಿದೆಯೇ ಎಂದು ಯೋಚಿಸಬೇಕು. ದೇಹದ ಪಚನಕ್ರಿಯೆಯನ್ನು ಚುರುಕಾಗಿಸಲು ಯಾವಾಗಲೂ ಸಮೃದ್ಧ ಆಹಾರಗಳಲ್ಲೇ ಹೆಚ್ಚು ತಾಕತ್ತಿದೆ. ಆದರೂ, ಕೆಲವೊಮ್ಮೆ ನಮ್ಮ ಮನೋಸಾಮರ್ಥ್ಯವನ್ನು ಮೀರಿ ನಾವು ತಿಂದು ಬಿಡುತ್ತೇವೆ. ಅಂಥ ಸಂದರ್ಭ ನಮ್ಮ ಪಚನಕ್ರಿಯೆಯನ್ನು ಚುರುಕಾಗಿಸಲು, ಕೊಂಚ ಬೇಗನೆ ಹೊಟ್ಟೆ ಹಗುರಾಗಿಸಲು ಯಾವ ಉತ್ತೇಜಕ ಆಹಾರಗಳನ್ನು ಕೊನೆಯಲ್ಲಿ ಊಟದ ನಂತರ ಸೇವಿಸಬಹುದು (health tips for digestion) ಎಂಬುದನ್ನು ನೋಡೋಣ.

ಸೋಂಪು ಹಾಗೂ ಜೀರಿಗೆ

ಸೋಂಪು ಹಾಗೂ ಜೀರಿಗೆಯಲ್ಲಿರುವ ಅಂಶಗಳು ನಮ್ಮ ದೇಹದಲ್ಲಿ ಜೀರ್ಣಕಾರಕ ಕಿಣ್ವಗಳನ್ನು ಪ್ರಚೋದಿಸುತ್ತವೆ. ಜೀರಿಗೆ ಜೀರ್ಣಕ್ರಿಯೆಗೆ ಸಹಾಯ ಮಾಡುವುದಲ್ಲದೆ ಕೊಬ್ಬು ಕರಗಿಸುವಲ್ಲಿಯೂ ನೆರವಾಗುತ್ತದೆ. ತೂಕ ಇಳಿಸುವ ಮಂದಿಗೂ ಇದು ತೂಕ ಇಳಿಕೆಗೆ ನೆರವಾಗುತ್ತದೆ. ಆರೋಗ್ಯಕರ ಆಹಾರದ ಸೇವನೆಯೊಂದಿಗೆ ಇವುಗಳ ಸೇವನೆಯು ಈ ಎಲ್ಲ ಕ್ರಿಯೆಗಳನ್ನು ಇನ್ನಷ್ಟು ಚುರುಕುಗೊಳಿಸುವಲ್ಲಿ ನೆರವಾಗುತ್ತದೆ.

Raw Brown Organic Ajwain Seed Benefits Of Omkalu Ajwain

ಅಜ್ವೈನ್‌ (ಓಂಕಾಳು)

ಓಂಕಾಳನ್ನು ನೀರಿನಲ್ಲಿ ಕುದಿಸಿ ಕುಡಿಯುವುದರಿಂದ ಸಾಕಷ್ಟು ಜೀರ್ಣ ಸಂಬಂಧೀ ಸಮಸ್ಯೆಗಳು ಪರಿಹಾರವಾಗುತ್ತವೆ. ತಿಂದಿದ್ದು ಅತಿಯಾದಾಗ ಅಥವಾ ರಾತ್ರಿ ಇದರ ನೀರನ್ನು ಕೊನೆಯಲ್ಲಿ ಕುಡಿದು ಮಲಗುವುದರಿಂದ ಸಮರ್ಪಕವಾಗಿ ಜೀರ್ಣವಾಗಲು ಸಹಾಯವಾಗುತ್ತದೆ. ಅಜೀರ್ಣವಾದಾಗ, ಜೀರ್ಣಕ್ರಿಯೆ ಸಮರ್ಪಕವಾಗಿ ನಡೆಯದಾದಾಗ ಇದರ ನೀರನ್ನು ಕುಡಿಯುವುದರಿಂದ ಜೀರ್ಣಕಾರಕ ಕಿಣ್ವಗಳು ಬಿಡುಗಡೆಯಾಗಿ ಬೇಗನೆ ಜೀರ್ಣವಾಗಲು ನೆರವಾಗುತ್ತವೆ.

Do not stop using probiotics like yogurt buttermilk They keep the digestive system healthy Gastric Problem

ಮಜ್ಜಿಗೆ

ಮಜ್ಜಿಗೆ ನೀರೂ ಕೂಡ ಜೀರ್ಣಕ್ಕೆ ಒಳ್ಳೆಯದು. ಅತಿಯಾಗಿ ಉಂಡಾಗ, ಮದುವೆಯೂಟದಂತಹ ಹಬ್ಬದಡುಗೆ ಉಂಡಾಗ ಒಂದು ಮಜ್ಜಿಗೆ ನೀರು ಕುಡಿದು ಅಂತ್ಯಗೊಳಿಸಿದರೆ, ಜೀರ್ಣಕ್ರಿಯೆ ಚುರುಕಾಗುತ್ತದೆ.

Berries

ಬೆರ್ರಿ ಹಣ್ಣುಗಳು

ಆಂಟಿ ಆಕ್ಸಿಡೆಂಟ್‌ಗಳು ಹಾಗೂ ನಾರಿನಂಶ ಹೇರಳವಾಗಿರುವ ಬೆರ್ರಿ ಹಣ್ಣುಗಳು ಹುಳಿಸಿಹಿಯಾದ ಹಣ್ಣುಗಳು. ಇವುಗಳ ಸೇವನೆ ಜೀರ್ಣಕ್ರಿಯೆಯನ್ನು ಚುರುಕಾಗಿಸುತ್ತದೆ. ಊಟವಾದ ನಂತರ ಸ್ವಲ್ಪ ಹೊತ್ತಿನ ಮೇಲೆ ಇವುಗಳನ್ನು ಸೇವಿಸುವ ಮೂಲಕ ಜೀರ್ಣಕ್ರಿಯೆಗೆ ಪ್ರಚೋದನೆ ನೀಡಬಹುದು.

reen Tea Benefits Of Drinking Green Tea

ಗ್ರೀನ್‌ ಟೀ

ಗ್ರೀನ್‌ ಟೀಯಲ್ಲಿರುವ ಕೆಟಚಿನ್‌ ಎಂಬ ಅಂಶವು ಜೀರ್ಣಕ್ರಿಯೆಯನ್ನು ಚುರುಕುಗೊಳಿಸುವ ಗುಣವನ್ನು ಹೊಂದಿದೆ. ಅಷ್ಟೇ ಅಲ್ಲ, ಇದಕ್ಕೆ ಕೊಬ್ಬು ಕರಗಿಸುವ ಗುಣವೂ ಇದೆ. ಹಾಗಾಗಿಯೇ ಗ್ರೀನ್‌ಟೀ ತೂಕ ಇಳಿಸುವವರ ಅತ್ಯಂತ ಪ್ರಿಯವಾದ ಪೇಯ. ಊಟದ ಸ್ವಲ್ಪ ಹೊತ್ತಿನ ನಂತರ ಗ್ರೀನ್‌ಟೀ ಕುಡಿಯುವ ಮೂಲಕ ಜೀರ್ಣಕ್ರಿಯೆಗೆ ಚುರುಕು ಮುಟ್ಟಿಸಬಹುದು.

Lettuce

ಸೊಪ್ಪು

ನಾರಿನಂಶ ಹೆಚ್ಚಿರುವ, ಪೋಷಕಾಂಶಗಳಿಂದ ಸಂಪದ್ಭರಿತವಾಗಿರುವ ಪಾಲಕ್‌, ಬಸಳೆ, ಕೊತ್ತಂಬರಿ ಸೊಪ್ಪು, ಮೆಂತ್ಯ ಸೊಪ್ಪು ಸೇರಿದಂತೆ ಬಹುತೇಕ ಎಲ್ಲ ಸೊಪ್ಪುಗಳೂ ಕೂಡಾ, ಹೊಟ್ಟೆಯಲ್ಲಿ ಸುಲಭವಾಗಿ ಜೀರ್ಣವಾಗುವಂಥವುಗಳು. ಹೆಚ್ಚು ಉಂಡ ಸಂದರ್ಭಗಳಲ್ಲಿ, ನಂತರದ ಊಟವನ್ನು ಮಿತವಾಗಿ ಇಟ್ಟುಕೊಳ್ಳುವ ಮೂಲಕ ಅಥವಾ ಸೊಪ್ಪಿನ ಸೂಪ್‌ ಅಥವಾ ಸೊಪ್ಪಿನ ಆಹಾರ ಪದಾರ್ಥಗಳ ಸೇವನೆಯ ಮೂಲಕ ಜೀರ್ಣಕ್ರಿಯೆ ಸರಾಗವಾಗಿ ಆಗವಂತೆ ನೋಡಿಕೊಳ್ಳಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ‌

Continue Reading

ಕರ್ನಾಟಕ

Karnataka Weather : ಕರ್ನಾಟಕದಲ್ಲಿ ಹೆಚ್ಚುತ್ತಿದೆ ಸೆಕೆ; ಮಾರ್ಚ್‌ ಮೊದಲ ವಾರಕ್ಕೆ ಮಳೆ?

Karnataka Weather: ಬೆಂಗಳೂರು ಭಾಗದ ಸುತ್ತಮುತ್ತ ಭಾಗಶಃ ಮಂಜು ಮುಸುಕಿದ ವಾತಾವರಣವಿರುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದೇ ವೇಳೆ ಮುಂದಿನ ಒಂದು ವಾರದ ವಾತಾವರಣವನ್ನು ಗಮನಿಸುವುದಾದರೆ, ಗರಿಷ್ಠ ಉಷ್ಣಾಂಶವು 32 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

VISTARANEWS.COM


on

Karnataka Weather Rain for first week of March
Koo

ಬೆಂಗಳೂರು: ರಾಜ್ಯಾದ್ಯಂತ ಬಿಸಿಲು ತೀವ್ರತೆ ಪಡೆದುಕೊಂಡಿರುವುದರಿಂದ ಜನರು ಹೈರಾಣಾಗಿದ್ದಾರೆ. ಬಿಸಿಲಿಗೆ ತತ್ತರಿಸಿ ಹೋಗಿದ್ದಾರೆ. ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶಗಳಲ್ಲಿ ಏರಿಕೆ ಕಾಣುತ್ತಿರುವುದು ಜನರನ್ನು ಕಂಗೆಡಿಸಿದೆ. ಬೇಸಿಗೆ ಬಿಸಿಲಿನ ಹೊಡೆತ ಬಲವಾಗಿ ಬೀಳುತ್ತಿದೆ. ಈ ಮಧ್ಯೆ ಉತ್ತರ ಭಾರತದ ಹಲವು ಕಡೆ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸಹ ಮಾರ್ಚ್‌ ಮೊದಲ ವಾರದಲ್ಲಿ ಮಳೆಯಾಗಬಹುದು ಎಂಬ ನಿರೀಕ್ಷೆಯನ್ನು ಮೂಡಿಸಿದೆ. ಆದರೆ, ಸದ್ಯದ ವರದಿ ಪ್ರಕಾರ ಅಂತಹ ಯಾವುದೇ ವಾತಾವರಣದ ಮುನ್ಸೂಚನೆ ಇಲ್ಲ. ಆದರೆ, ಬಿಸಿಲು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆ ನೀಡಿದೆ.

ಮುಂದಿನ ಎರಡು ದಿನದ ವಾತಾವರಣವನ್ನು ಗಮನಿಸುವುದಾದರೆ, ಗುರುವಾರ ಮತ್ತು ಶುಕ್ರವಾರ ಗರಿಷ್ಠ ಹಾಗೂ ಕನಿಷ್ಠ ತಾಪಮಾನಗಳಲ್ಲಿ (Maximum and Minimum Temperature) 1 – 2 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಳವಾಗಬಹುದು. ಇದು ರಾಜ್ಯದ ಜನರ ನೆತ್ತಿಯನ್ನು ಸುಡಲಿದೆ.

ಬೆಂಗಳೂರಲ್ಲಿ ಇನ್ನೊಂದು ವಾರದ ಸ್ಥಿತಿ ಹೇಗೆ?

ಬೆಂಗಳೂರು ಭಾಗದ ಸುತ್ತಮುತ್ತ ಭಾಗಶಃ ಮಂಜು ಮುಸುಕಿದ ವಾತಾವರಣವಿರುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದೇ ವೇಳೆ ಮುಂದಿನ ಒಂದು ವಾರದ ವಾತಾವರಣವನ್ನು ಗಮನಿಸುವುದಾದರೆ, ಗರಿಷ್ಠ ಉಷ್ಣಾಂಶವು 32 ಡಿಗ್ರಿ ಸೆಲ್ಸಿಯಸ್‌ ಇರಲಿದ್ದರೆ, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಅಂದಾಜಿಸಲಾಗಿದೆ. ಇದರಿಂದ ತೀವ್ರ ಪ್ರಮಾಣದಲ್ಲಿ ಸೆಕೆ ಇರಲಿದೆ.

ಇನ್ನು ಬೆಂಗಳೂರಿನಲ್ಲಿ ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರುವ ಸಾಧ್ಯತೆಯಿದೆ. ಇದರಿಂದಾಗಿ ಹಗಲಿರುಳು ಗಾಳಿ ವೇಗವು ಹೆಚ್ಚಾಗಿ ಇರಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತೀವ್ರತೆ

ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ 35-36 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಇರಲಿದೆ. ಗದಗದಲ್ಲಿ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ಇನ್ನು ಈ ಭಾಗದ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನ ಸಹ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಏರಿಕೆ ಆಗಲಿದೆ.

ಕರಾವಳಿಯಲ್ಲಿ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಳ

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಹೇಳಿದೆ.

ದಕ್ಷಿಣ ಒಳನಾಡಲ್ಲೂ ಬಿಸಿಲ ಧಗೆ

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಹಾಗೂ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಣವು ಹೆಚ್ಚಳವಾಗಲಿದೆ. ಈ ಭಾಗದ ಕೆಲವು ಕಡೆ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಹೆಚ್ಚಾಗಿರುವ ಸಾಧ್ಯತೆ ಇದೆ.

ಇದನ್ನೂ ಓದಿ: Yadgiri News: ಪಾಕ್ ಪರ ಘೋಷಣೆ ಕೂಗಿದ ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 31 ಡಿ.ಸೆ – 20 ಡಿ.ಸೆ
ಮಂಗಳೂರು: 35 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 21 ಡಿ.ಸೆ
ಗದಗ: 36 ಡಿ.ಸೆ – 22 ಡಿ.ಸೆ
ಹೊನ್ನಾವರ: 34 ಡಿ.ಸೆ- 22 ಡಿ.ಸೆ
ಕಲಬುರಗಿ: 36 ಡಿ.ಸೆ – 22 ಡಿ.ಸೆ
ಬೆಳಗಾವಿ: 35 ಡಿ.ಸೆ – 18 ಡಿ.ಸೆ
ಕಾರವಾರ: 36 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather: ಬಿಸಿಲ ಧಗೆಯೊಳಗೆ ಕಾವೇರಿದ ಕರ್ನಾಟಕ; ಇನ್ನೆರಡು ದಿನ ಬಿಸಿಲು ಹೆಚ್ಚಳ

Karnataka Weather: ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಹೇಳಿದೆ.

VISTARANEWS.COM


on

Karnataka Weather Two more days of sunshine
Koo

ಬೆಂಗಳೂರು: ಕರ್ನಾಟಕ ಅಕ್ಷರಶಃ ಕಾವೇರುತ್ತಿದೆ. ಉತ್ತರ, ದಕ್ಷಿಣ ಒಳನಾಡುಗಳು, ಮಲೆನಾಡು, ಕರಾವಳಿ ಭಾಗಗಳು ಬಿಸಿಲಿಗೆ ಕಂಗೆಡುತ್ತಿವೆ. ಎಲ್ಲಿ ನೋಡಿದರೂ ಬಿಸಿಲು, ಧಗೆ, ಸೆಕೆ ಎನ್ನುವ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಹಲವು ಕಡೆ ಗುರುವಾರ ಮತ್ತು ಶುಕ್ರವಾರ ಗರಿಷ್ಠ ತಾಪಮಾನದಲ್ಲಿ (Maximum Temperature) ಸರಿಸುಮಾರು 2 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಳವಾಗಬಹುದು ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನಾ ವರದಿಯಲ್ಲಿ ಉಲ್ಲೇಖಿಸಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ಇನ್ನು ಈ ಭಾಗದ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನ ಸಹ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಏರಿಕೆ ಆಗಲಿದೆ.

ಕರಾವಳಿಯಲ್ಲಿ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಳ

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಹೇಳಿದೆ.

ದಕ್ಷಿಣ ಒಳನಾಡಲ್ಲೂ ಬಿಸಿಲ ಧಗೆ

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಹಾಗೂ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಣವು ಹೆಚ್ಚಳವಾಗಲಿದೆ. ಈ ಭಾಗದ ಕೆಲವು ಕಡೆ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಹೆಚ್ಚಾಗಿರುವ ಸಾಧ್ಯತೆ ಇದೆ.

ಬೆಂಗಳೂರಲ್ಲೂ ಸೆಕೆ

ಬೆಂಗಳೂರು ಭಾಗದ ಸುತ್ತಮುತ್ತ ಭಾಗಶಃ ಮಂಜು ಮುಸುಕಿದ ವಾತಾವರಣವಿರುತ್ತದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರುವ ಸಾಧ್ಯತೆಯಿದೆ. ಇದರಿಂದಾಗಿ ಹಗಲಿರುಳು ಗಾಳಿ ವೇಗವು ಹೆಚ್ಚಾಗಿ ಇರಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: Bagalkot News : ಕೂಲಿ ಕುಟುಂಬದಿಂದ ಬಂದ ಯುವತಿ ಈಗ ಸಿವಿಲ್‌ ನ್ಯಾಯಾಧೀಶೆ!

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 31 ಡಿ.ಸೆ – 20 ಡಿ.ಸೆ
ಮಂಗಳೂರು: 35 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 20 ಡಿ.ಸೆ
ಗದಗ: 36 ಡಿ.ಸೆ – 21 ಡಿ.ಸೆ
ಹೊನ್ನಾವರ: 34 ಡಿ.ಸೆ- 21 ಡಿ.ಸೆ
ಕಲಬುರಗಿ: 36 ಡಿ.ಸೆ – 23 ಡಿ.ಸೆ
ಬೆಳಗಾವಿ: 35 ಡಿ.ಸೆ – 17 ಡಿ.ಸೆ
ಕಾರವಾರ: 36 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಲ್ಲಿ ಗಾಳಿ ವೇಗ ಹೆಚ್ಚಳ; ಉಳಿದೆಡೆ ವಾತಾವರಣ ಹೇಗೆ?

Karnataka Weather Forecast : ಬೆಂಗಳೂರಲ್ಲಿ ಗಾಳಿ ವೇಗ ಹೆಚ್ಚಾಗಿ ಇರಲಿದ್ದು, ಉಳಿದೆಡೆ ಶುಷ್ಕ ವಾತಾವರಣವು ಇರಲಿದೆ.

VISTARANEWS.COM


on

By

Dry Weather
Koo

ಬೆಂಗಳೂರು: ಬೆಂಗಳೂರು ಸೇರಿದಂತೆ ಹಲವೆಡೆ ಘಳಿಗೆಗೊಂದು ವಾತಾವರಣವಿದೆ. ರಾಜ್ಯಾದ್ಯಂತ ಒಣ ಹವೆ (Dry Weather) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಬೆಂಗಳೂರಿನ ಕೆಲವೆಡೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರುವ ಸಾಧ್ಯತೆಯಿದೆ. ಇದರಿಂದಾಗಿ ಹಗಲಿರುಳು ಗಾಳಿ ವೇಗವು ಹೆಚ್ಚಾಗಿ ಇರಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಉತ್ತರ ಒಳನಾಡಲ್ಲಿ ಗರಿಷ್ಠ-ಕನಿಷ್ಠ ತಾಪಮಾನ ಏರಿಕೆ

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ಜತೆಗೆ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಏರಿಕೆ ಆಗಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಹಾಗೂ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಹೆಚ್ಚಾಗಿರುವ ಸಾಧ್ಯತೆ ಇದೆ.

ಇದನ್ನೂ ಓದಿ: Bagalkot News : ಕೂಲಿ ಕುಟುಂಬದಿಂದ ಬಂದ ಯುವತಿ ಈಗ ಸಿವಿಲ್‌ ನ್ಯಾಯಾಧೀಶೆ!

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 32 ಡಿ.ಸೆ – 20 ಡಿ.ಸೆ
ಮಂಗಳೂರು: 35 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 18 ಡಿ.ಸೆ
ಗದಗ: 34 ಡಿ.ಸೆ – 18 ಡಿ.ಸೆ
ಹೊನ್ನಾವರ: 35 ಡಿ.ಸೆ- 21 ಡಿ.ಸೆ
ಕಲಬುರಗಿ: 36 ಡಿ.ಸೆ – 23 ಡಿ.ಸೆ
ಬೆಳಗಾವಿ: 34 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Modi GDP
ಪ್ರಮುಖ ಸುದ್ದಿ38 seconds ago

GDP Growth : ಜಿಡಿಪಿಯ ಭರ್ಜರಿ ಏರಿಕೆಗೆ ಮೋದಿ ಸಂತಸ; ಏನಂದ್ರು ಅವರು?

2nd PU Exam from tomorrow what are the conditions
ಶಿಕ್ಷಣ40 seconds ago

2nd PU Exam: ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯು ಪರೀಕ್ಷೆ; ವಿದ್ಯಾರ್ಥಿಗಳಿಗೆ ಇಲ್ಲಿದೆ ಕಂಡಿಷನ್!

insurance
ಮನಿ-ಗೈಡ್3 mins ago

Money Guide: ಸಾಮಾನ್ಯ ವಿಮೆ v/s ಜೀವ ವಿಮೆ; ಯಾವುದು ಉತ್ತಮ? ನಿಮಗೆ ತಿಳಿದಿರಲೇಬೇಕಾದ ಮಾಹಿತಿ ಇಲ್ಲಿದೆ

Budget session Siddaramaiah
ವಿಧಾನಮಂಡಲ ಅಧಿವೇಶನ14 mins ago

Budget Session : ಬಿಜೆಪಿಯ ಜೈ ಶ್ರೀರಾಮ್‌ VS ಸಿದ್ದರಾಮಯ್ಯರ ಜೈ ಸೀತಾರಾಮ್‌!

Nitasha Kaul
ದೇಶ31 mins ago

Nitasha Kaul : ಬ್ರಿಟನ್​ ಲೇಖಕಿಯನ್ನು ಏರ್​ಪೋರ್ಟ್​​ನಿಂದಲೇ ವಾಪಸ್​ ಕಳಿಸಿದ್ದಕ್ಕೆ ಕಾರಣ ಕೊಟ್ಟ ಕೇಂದ್ರ ಸರ್ಕಾರ

Siddaramaiah plan behind accepting Caste Census Report Sunil Kumar reveals reason
ರಾಜಕೀಯ52 mins ago

‌Caste Census Report: ಜಾತಿ ಗಣತಿ ಸ್ವೀಕಾರದ ಹಿಂದೆ ಸಿದ್ದರಾಮಯ್ಯ ಪ್ಲ್ಯಾನ್‌ ಏನು? ಕಾರಣ ಬಿಚ್ಚಿಟ್ಟಿದ್ದಾರೆ ಸುನಿಲ್‌ ಕುಮಾರ್!

Rowdy sheeter kidnaps cricket bookie
ಕ್ರಿಕೆಟ್1 hour ago

WPL 2024 : ಮಹಿಳಾ ಐಪಿಎಲ್‌ನಲ್ಲಿ ಬೆಟ್ಟಿಂಗ್ ಕಟ್ಟಿದ ಬುಕ್ಕಿಯೇ ಕಿಡ್ನ್ಯಾಪ್‌!

GDP Growth
ಪ್ರಮುಖ ಸುದ್ದಿ1 hour ago

GDP Growth : ನಿರೀಕ್ಷೆಗೂ ಮೀರಿ ಭಾರತದ ಜಿಡಿಪಿ ಬೆಳವಣಿಗೆ; ಕಳೆದ ತ್ರೈಮಾಸಿಕದಲ್ಲಿ ಭರ್ಜರಿ ಪ್ರಗತಿ

film festival
ಸಿನಿಮಾ1 hour ago

Bengaluru Film Festival: 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ

BJP protest demanding action against those who shouted pro Pak slogan
ಉತ್ತರ ಕನ್ನಡ1 hour ago

Uttara Kannada News: ಪಾಕ್‌ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಯಲ್ಲಾಪುರದಲ್ಲಿ ಬಿಜೆಪಿ ಪ್ರತಿಭಟನೆ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for February 28 2024
ಭವಿಷ್ಯ15 hours ago

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ

Rajya Sabha election Pakistan Zindabad slogans raised inside Vidhana Soudha by Nasir Hussain supporters
ರಾಜಕೀಯ2 days ago

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

Ghar Wapsi ST Somashekhar and Shivaram Hebbar to quit BJP
ರಾಜಕೀಯ2 days ago

Ghar Wapsi: ಎಸ್‌.ಟಿ. ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಬಿಜೆಪಿಗೆ ಗುಡ್‌ ಬೈ? ಇಂದೇ ರಾಜೀನಾಮೆ?

Rajyasabha Elections 42 Congress MLAs contacted by JDS candidate says DK Shivakumar
ರಾಜಕೀಯ2 days ago

Rajya sabha Election: ಕಾಂಗ್ರೆಸ್‌ನ 42 ಶಾಸಕರನ್ನು ಸಂಪರ್ಕ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

read your daily horoscope predictions for february 27 2024
ಭವಿಷ್ಯ3 days ago

Dina Bhavishya : ಇಂದು ಆಪ್ತರಿಂದಲೇ ಈ ರಾಶಿಯವರಿಗೆ ಕಂಟಕ!

Crowd mistakes Arabic words as Quran Verses on the kurta and Pak Women mobbed
ವಿದೇಶ3 days ago

Pak Woman: ಕುರ್ತಾ ಮೇಲಿನ ಅರೇಬಿಕ್ ಪದಗಳನ್ನು ತಪ್ಪಾಗಿ ತಿಳಿದು ಮಹಿಳೆ ಮೇಲೆ ಹಲ್ಲೆಗೆ ಯತ್ನ

read your daily horoscope predictions for february 26 2024
ಭವಿಷ್ಯ4 days ago

Dina Bhavishya : ಈ ಮೂರು ರಾಶಿಯವರು ಇಂದು ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯವರು ಆಪ್ತರೊಂದಿಗೆ ಗೌಪ್ಯ ವಿಷಯವನ್ನು ಹೇಳುವಾಗ ಎಚ್ಚರ!

Video Viral Student falls under school bus He escaped with minor injuries
ವೈರಲ್ ನ್ಯೂಸ್5 days ago

Video Viral: ಸ್ಕೂಲ್ ಬಸ್‌ನಡಿ ಬಿದ್ದ ವಿದ್ಯಾರ್ಥಿ; ಪಾರಾಗಿದ್ದೇ ಪವಾಡ!

ಟ್ರೆಂಡಿಂಗ್‌