ಬೆಂಗಳೂರು: ರಾಜ್ಯಾದ್ಯಂತ ಮಂಗಳವಾರ ಒಣಹವೆ (Dry Weather) ಇರಲಿದೆ. ಕೆಲವೆಡೆ ಗರಿಷ್ಠ ಹಾಗೂ ಕನಿಷ್ಠ ತಾಪಮಾನ (Karnataka Weather Forecast) ಹೆಚ್ಚಳವಾಗಲಿದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ಉತ್ತರ ಒಳನಾಡಿನ ಭಾಗಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3.1 ಡಿ.ಸೆ ನಿಂದ 5.0 ಡಿ.ಸೆ ಕನಿಷ್ಠ ತಾಪಮಾನ ಹೆಚ್ಚಳವಾಗಲಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲೂ ಕನಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 3 ಡಿ.ಸೆ ಹೆಚ್ಚು ಇರಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರ, ರಾಮನಗರ ಸೇರಿದಂತೆ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದಲ್ಲಿ ಒಣಹವೆ ಇರಲಿದೆ. ಕನಿಷ್ಠ ತಾಪಮಾನವು ಹೆಚ್ಚಳವಾಗಲಿದೆ.
ಇದನ್ನೂ ಓದಿ: Fraud Case : ಲೀಸ್‌ಗೆ ಫ್ಲಾಟ್ ಪಡೆಯುವ ಮುನ್ನ ಎಚ್ಚರ; ರಾತ್ರೋರಾತ್ರಿ ಬೀದಿಗೆ ಬೀಳ್ತಿರಿ!
ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರದ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್‌ನಿಂದ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಿ ಇರಲಿದೆ. ಹಾವೇರಿ ಮತ್ತು ರಾಯಚೂರಿನ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ನಿಂದ 42 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಲಿದೆ.
ಬೆಂಗಳೂರಲ್ಲಿ ಬೀಸಲಿದೆ ಗಾಳಿ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆಗಳಿರುತ್ತದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಹೆಚ್ಚಿರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 32 ಡಿ.ಸೆ -18 ಡಿ.ಸೆ
ಮಂಗಳೂರು: 35 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 18 ಡಿ.ಸೆ
ಗದಗ: 34 ಡಿ.ಸೆ – 19 ಡಿ.ಸೆ
ಹೊನ್ನಾವರ: 35 ಡಿ.ಸೆ- 21 ಡಿ.ಸೆ
ಕಲಬುರಗಿ: 36 ಡಿ.ಸೆ – 21 ಡಿ.ಸೆ
ಬೆಳಗಾವಿ: 35 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 21 ಡಿ.ಸೆ
ಬೆಂಗಳೂರು ಹಾಗೂ ಮಂಗಳೂರಲ್ಲಿ ಮುಂಜಾನೆ ಸಮಯ ದಟ್ಟ ಮಂಜು ಆವರಿಸುವ ಸಾಧ್ಯತೆ ಇದೆ. ಉಳಿದಂತೆ ಚಿತ್ರದುರ್ಗ, ಗದಗ, ಹೊನ್ನಾವರ ಹಾಗೂ ಕಲಬುರಗಿ, ಬೆಳಗಾವಿ, ಕಾರವಾರದಲ್ಲಿ ಆಕಾಶವು ನಿರ್ಮಲವಾಗಿ ಇರಲಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ