Karnataka Weather : ಮುಂದುವರಿಯಲಿದೆ ಶುಷ್ಕ ವಾತಾವರಣ; ಕನಿಷ್ಠ ತಾಪಮಾನ ಏರಿಕೆ - Vistara News

ಮಳೆ

Karnataka Weather : ಮುಂದುವರಿಯಲಿದೆ ಶುಷ್ಕ ವಾತಾವರಣ; ಕನಿಷ್ಠ ತಾಪಮಾನ ಏರಿಕೆ

ರಾಜ್ಯದಲ್ಲಿ ಶುಷ್ಕ ವಾತಾವರಣವೇ (Dry weather) ಮುಂದುವರಿಯಲಿದ್ದು, ಕೆಲವೆಡೆ ಕನಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

Minimum temperatures likely to be above normal by 2 to 3 DC at a few places over the karnataka
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂದಿನ ಒಂದು ವಾರ ರಾಜ್ಯಾದ್ಯಂತ ಒಣ ಹವೆ (Dry weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (karnataka Weather Forecast) ನೀಡಿದೆ. ಕಳೆದೊಂದು ವಾರದಿಂದ ಇದ್ದ ತಂಪು ವಾತಾವರಣವು ಕ್ರಮೇಣ ಕಡಿಮೆ ಆಗಿದ್ದು, ಉರಿ ಬಿಸಿಲು ಕಿರಿಕಿರಿಯುನ್ನುಂಟು ಮಾಡಲಿದೆ. ಇನ್ನೂ ಹಗಲಿರುಳು ಥಂಡಿ ಗಾಳಿ ಬದಲು, ಬಿಸಿ ಗಾಳಿ ಬೀಸುತ್ತಿದೆ.

ತಾಪಮಾನದ ಮುನ್ಸೂಚನೆ

ಮುಂದಿನ 48 ಗಂಟೆಯಲ್ಲಿ ರಾಜ್ಯದ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದ ಧಗೆಧಗೆ ವಾತಾವರಣ ಇರಲಿದೆ.

ಬೆಂಗಳೂರಲ್ಲಿ ಹೇಗಿರುತ್ತೆ?

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಧಾರವಾಡದಲ್ಲಿ ಕನಿಷ್ಠ, ಕಲಬುರಗಿಯಲ್ಲಿ ಗರಿಷ್ಟ ಉಷ್ಣಾಂಶ ದಾಖಲು

ರಾಜ್ಯಾದ್ಯಂತ ಶನಿವಾರದಂದು ಒಣ ಹವೆ ಇತ್ತು. ಅತೀ ಕಡಿಮೆ ಕನಿಷ್ಠ ಉಷ್ಣಾಂಶವು 16.0 ಡಿ.ಸೆ. ಧಾರವಾಡದಲ್ಲಿ ದಾಖಲಾಗಿತ್ತು. ಗರಿಷ್ಠ ಉಷ್ಣಾಂಶ ಕಲಬುರಗಿಯಲ್ಲಿ 34.7 ಡಿ.ಸೆ ದಾಖಲಾಗಿತ್ತು.

ಇದನ್ನೂ ಓದಿ: Road Accident : ಟ್ರ್ಯಾಕ್ಟರ್‌ ಟೇಲರ್‌ ಪಲ್ಟಿ; ನಾಲ್ವರು ಮಹಿಳೆಯರು ದಾರುಣ ಸಾವು

ಚಳಿಗಾಲದಲ್ಲಿ ನಿದ್ದೆ ಮುಗಿಯುವುದೇ ಇಲ್ಲವೇಕೆ?

ಋತುಮಾನಕ್ಕೆ ತಕ್ಕಂತೆ ನಾವು ನಿದ್ದೆ ಮಾಡುತ್ತೇವೆಯೇ ಅಥವಾ ನಮ್ಮ ದೇಹದ ಆಗತ್ಯಕ್ಕೆ ತಕ್ಕನಾಗಿಯೇ? ಎರಡೂ ಹೌದು ಎನ್ನುತ್ತಾರೆ ವಿಜ್ಞಾನಿಗಳು. ನಮ್ಮ ದೇಹಕ್ಕೆಷ್ಟು ವಿಶ್ರಾಂತಿ ಬೇಕು ಎನ್ನುವುದು ನಿದ್ದೆಗೆ ಒಂದು ಮಾನದಂಡವಾದರೆ, ಋತು ಯಾವುದು ಅನ್ನುವುದನ್ನು ನಮ್ಮ ದೇಹ ಅನುಸರಿಸುತ್ತದೆ. ಗೊಂದಲವಾಯಿತೇ? ಉದಾಹರಣೆಗೆ ಹೇಳುವುದಾದರೆ, ಚಳಿಗಾಲದ ರಾತ್ರಿಗಳು ದೀರ್ಘ; ನಿದ್ದೆ ಇನ್ನೂ ದೀರ್ಘ! ಬೆಳಗಾಗಿದ್ದು ಗೊತ್ತೇ ಆಗುವುದಿಲ್ಲ; ಗೊತ್ತಾದರೂ ಏಳಲು ಮನಸ್ಸಾಗುವುದಿಲ್ಲ. ಚಳಿ ಹೆಚ್ಚಾದಷ್ಟೂ ಹೊದ್ದು ಮಲಗಿದರಾಯ್ತು ಎಂಬ ಭಾವ ತೀವ್ರವಾಗುತ್ತದೆ. ಚಳಿಗಾಲ ಕಳೆದು, ರಾತ್ರಿ ಕಿರಿದಾಗಿ, ಸೆಖೆ ಏರುತ್ತಿದ್ದಂತೆ ನಿದ್ದೆಯೂ ಕಡಿಮೆಯಾಗುತ್ತದೆ. ಹಾಗಾದರೆ, ನಿದ್ದೆಗೂ ಋತುಮಾನಕ್ಕೂ (Sleep In The Winter) ನಿಕಟ ನಂಟಿದೆ ಎಂಬುದು ಸ್ಪಷ್ಟವಲ್ಲವೇ?

Sleeping Tips

ಅಧ್ಯಯನದಿಂದ ಮಾಹಿತಿ

ಚಳಿಗಾಲದಲ್ಲಿ ಹೆಚ್ಚು ನಿದ್ದೆಯನ್ನೇಕೆ ದೇಹ ಬಯಸುತ್ತದೆ ಎಂಬುದನ್ನು ಅಧ್ಯಯನಗಳು ವಿವರಿಸಿವೆ. ಸೂರ್ಯನ ಬೆಳಕು ಕಡಿಮೆಯಾಗುವುದು ಮತ್ತು ಕೆಳಗಿಳಿಯುವ ತಾಪಮಾನ- ಎರಡು ಅಂಶಗಳು ಪ್ರಧಾನವಾಗಿ ಕಾರಣವಾಗುತ್ತವೆ. ಸೂರ್ಯನ ಬೆಳಕಿಗೆ ಮತ್ತು ದೇಹದೊಳಗಿನ ಜೈವಿಕ ಗಡಿಯಾರ ಅಥವಾ ಸರ್ಕಾಡಿಯನ್‌ ರಿದಂಗೆ ನೇರ ಸಂಬಂಧವಿದೆ. ಇದಕ್ಕೆ ತಕ್ಕಂತೆ ನಮ್ಮ ಚಟುವಟಿಕೆಗಳನ್ನು ನಾವು ಹೊಂದಿಸಿಕೊಳ್ಳುವುದು ಜಾಣತನ. ಅದರಲ್ಲೂ ನಮಗೆ ಕನಸುಗಳನ್ನು ನೀಡುವ ಆರ್‌ಇಎಮ್‌ (rapid eye movement) ನಿದ್ದೆಯ ಅವಧಿ ಚಳಿಗಾಲದಲ್ಲಿ ದೀರ್ಘ, ಬೇಸಿಗೆಯಲ್ಲಿ ಕಡಿಮೆಯಂತೆ. ಹಾಗಾಗಿ ಋತುಮಾನಕ್ಕೂ ನಮ್ಮ ನಿದ್ದೆಗೂ ಸ್ಪಷ್ಟವಾದ ನಂಟಿದೆ.

Nothing recharges the body like good quality sleep Sesame Benefits

ನಿದ್ದೆಯ ಅವಧಿ ಅಧಿಕ

ಈ ಅಧ್ಯಯನಕ್ಕಾಗಿ, ನಿದ್ದೆಯ ಸಮಸ್ಯೆಯಿರುವ 188 ಮಂದಿಯನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಆದರೆ ಇವರಾರು ನಿದ್ದೆಗಾಗಿ ಔಷಧಿ ತೆಗೆದುಕೊಳ್ಳದವರಾಗಿದ್ದರು. ಅವರನ್ನು ಎಬ್ಬಿಸಲು ಯಾವುದೇ ಅಲರಾಂಗಳು ಇಲ್ಲದಂಥ, ಪ್ರಯೋಗಶಾಲೆಯಲ್ಲಿ ಅವರೆಲ್ಲರನ್ನೂ ಮಲಗಿಸಿ, ನಿದ್ದೆಯ ಪೂರ್ವಾಪರಗಳನ್ನು ಹಲವಾರು ತಿಂಗಳುಗಳವರೆಗೆ ಗಮನಿಸಲಾಗಿತ್ತು. ಬೇಸಿಗೆಗಿಂತಲೂ ಚಳಿಗಾಲದಲ್ಲಿ ಇವರ ನಿದ್ದೆಯ ಅವಧಿ ಸುಮಾರು ಒಂದು ತಾಸಿನಷ್ಟು ಹೆಚ್ಚಾಗಿತ್ತು. ಜೊತೆಗೆ, ಆರ್‌ಇಎಂ ನಿದ್ದೆಯ ಅವಧಿಯೂ ಅರ್ಧ ತಾಸಿನಷ್ಟು ಅಧಿಕವಾಗಿತ್ತು.
“ಋತುಮಾನದ ಬದಲಾವಣೆಯು ಭೂಮಿಯ ಮೇಲಿನ ಎಲ್ಲಾ ಜೀವಿಗಳ ಮೇಲೆ ಸರ್ವತ್ರವಾಗಿ ಪರಿಣಾಮ ಬೀರುತ್ತದೆ. ಇದು ಸಹಜ. ಆದರೆ ಈ ಪರಿಣಾಮದಿಂದ ನಮ್ಮಲ್ಲಿ ಹೆಚ್ಚಿನ ಬದಲಾವಣೆ ಆಗದಂತೆ ನಾವು ನಿರ್ವಹಿಸಲು ಯತ್ನಿಸುತ್ತೇವೆ” ಎನ್ನುತ್ತಾರೆ ಅಧ್ಯಯನಕಾರರು. ಆದರೆ ಈ ಅಧ್ಯಯನವನ್ನು ನಿದ್ದೆಯ ಸಮಸ್ಯೆಯಿಲ್ಲದ, ಆರೋಗ್ಯವಂತ ಜನರ ಮೇಲೆ ನಡೆಸಿ, ಪರಿಣಾಮ ಒಂದೇ ಎಂಬುದನ್ನು ಖಾತ್ರಿ ಪಡಿಸಿಕೊಳ್ಳುವ ಅಗತ್ಯವಿದೆ.

Better Sleep Health Benefits Of Cold Water Bath

ದಿನ, ರಾತ್ರಿ ಅವಧಿ ಬದಲಾವಣೆ

ಕೆಲವು ಭೌಗೋಳಿಕ ಪ್ರದೇಶಗಳಲ್ಲಿ ಋತುಮಾನದ ಬದಲಾವಣೆಯೊಂದಿಗೆ, ದಿನ-ರಾತ್ರಿಯ ಅವಧಿಯಲ್ಲಿ ತೀವ್ರ ಬದಲಾವಣೆ ಉಂಟಾಗುತ್ತದೆ. ಬೇಸಿಗೆಯಲ್ಲಿ ರಾತ್ರಿ 9ಕ್ಕೆ ಕತ್ತಲಾಗಿ, ಬೆಳಗಿನ ೫ಕ್ಕೇ ಸೂರ್ಯ ಮೂಡಿದರೆ, ಚಳಿಗಾಲದಲ್ಲಿ ಸಿಕ್ಕಾಪಟ್ಟೆ ಹಿಮ ಸುರಿದು, ಸಂಜೆ 4ಕ್ಕೆ ಕತ್ತಲಾಗಿ ಬೆಳಗಿನ 7ಕ್ಕೆ ರವಿ ಬರುವಂಥ ಪ್ರದೇಶಗಳಿವೆ. ಇಂಥ ಸ್ಥಳಗಳಲ್ಲಿ ಋತುಮಾನಕ್ಕೆ ತಕ್ಕಂತೆ ದಿನ-ರಾತ್ರಿಯನ್ನು ಮತ್ತು ನಿದ್ದೆಯನ್ನು ಹೊಂದಾಣಿಕೆ ಮಾಡಿಕೊಳ್ಳುವುದು ಸುಲಭದ್ದಲ್ಲ.

ಇನ್ನೊಂದು ಕಾರಣವೆಂದರೆ, ಚಳಿಗಾಲದಲ್ಲಿ ನಮ್ಮ ದೇಹದ ಚಯಾಪಚಯ ಹೆಚ್ಚುವುದು. ಪರಿಣಾಮವಾಗಿ ನಾವು ತೆಗೆದುಕೊಳ್ಳುವ ಆಹಾರವೂ ಹೆಚ್ಚುತ್ತದೆ. ಇವೆಲ್ಲ ತೀವ್ರಗೊಂಡಂತೆ ದುಡಿದು ದಣಿದ ದೇಹಕ್ಕೆ ನಿದ್ದೆಯೂ ಹೆಚ್ಚು ಬೇಕಾಗುತ್ತದೆ. ಹಲವಾರು ಪ್ರಾಣಿಗಳು ಚಳಿಗಾಲದಲ್ಲಿ ಸಂಪೂರ್ಣ ನಿದ್ದೆಗೆ ಜಾರುವುದು ಅಥವಾ ಹೈಬರ್ನೇಟ್‌ ಮಾಡುವುದು ಇತ್ಯಾದಿ ಭಿನ್ನ ಸ್ಥಿತಿಗಳಿಗೆ ಜಾರುವುದಕ್ಕೂ ಇಂಥದ್ದೇ ಕಾರಣಗಳು ಇರಬಹುದು. ಹೆಚ್ಚು ಆಹಾರ ಲಭ್ಯವಾಗದ ಕಾರಣ, ಚಳಿಗಾಲವಿಡೀ ಬೆಚ್ಚಗೆ ಮಲಗುವುದೇ ಸುಖ ಎಂದು ಪ್ರಾಣಿಗಳಿಗೂ ತಿಳಿಯಬೇಕಾದರೆ, ನಮಗೆ ಹೆಚ್ಚುವರಿ ನಿದ್ದೆ ಬೇಡವೇ?

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading

ಮಳೆ

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Karnataka Rain : ಸತತ ಮಳೆ ಹಿನ್ನೆಲೆಯಲ್ಲಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಶಾಲೆಗಳಿಗೆ ಇಂದು ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ (Karnataka Rain) ನಿರಂತರವಾಗಿ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿ ಮಾರ್ಪಾಡಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಮೌಖಿಕವಾಗಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Continue Reading

ಮಳೆ

Karnataka Rain: ತೊಯ್ದು ತೊಪ್ಪೆಯಾದ ಚಿಕ್ಕಮಗಳೂರು, ಶಿವಮೊಗ್ಗ; ನಾಳೆಗೂ ಭಾರಿ ಮಳೆ ಎಚ್ಚರಿಕೆ

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು: ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶದಲ್ಲೇ ಭಾರಿ (Karnataka Rain) ಮಳೆಯಾಗುತ್ತಿದೆ. ಹಿಂಗಾರು ಮಳೆಗೆ ಪಶ್ಚಿಮಘಟ್ಟಗಳ ತಪ್ಪಲು ಅಲ್ಲೋಲ-ಕಲ್ಲೋಲವಾಗಿದೆ. ಚಿಕ್ಕಮಗಳೂರಿನ ದತ್ತಪೀಠದ ರಸ್ತೆಯಲ್ಲಿ 3 ಅಡಿ ಎತ್ತರದಲ್ಲಿ ನೀರು ಹರಿದಿದೆ. ಎಷ್ಟೇ ಮಳೆ ಬಂದರೂ ಪಶ್ಚಿಮ ಘಟ್ಟಕ್ಕೆ ಲೆಕ್ಕವೇ ಅಲ್ಲ, ಸಾವಿರಾರು ಅಡಿ ಆಳ, ಮುಗಿಲೆತ್ತರದ ಬೆಟ್ಟಗುಡ್ಡಗಳ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಕೆರೆಯಂತೆ ನೀರು ಹರಿಯುತ್ತಿದೆ. ಮಳೆರಾಯನ ಅಬ್ಬರಕ್ಕೆ ಪ್ರವಾಸಿಗರು ತೊಯ್ದು ತೊಪ್ಪೆ ಆಗಿದ್ದಾರೆ. ಮಳೆ ಮಧ್ಯೆ ಸಿಲುಕಿ ಚಿಕ್ಕಮಗಳೂರು ತಾಲ್ಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಸಹವಾಸವೇ ಬೇಡ ಎನ್ನುತ್ತಿದ್ದಾರೆ ಪ್ರವಾಸಿಗರು.

ತರೀಕೆರೆ ತಾಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಗೆ ಹೊಲ-ಗದ್ದೆ, ತೋಟಗಳಿಗೆ ನೀರು ನುಗ್ಗಿದೆ. ಸಣ್ಣಬೋಕಿಕೆರೆ, ಗೊಲ್ಲರಹಳ್ಳಿ ಹೊಲಗಳು ಜಲಾವೃತಗೊಂಡಿದೆ. ಕೋರನಹಳ್ಳಿ, ಚಟ್ಟನಹಳ್ಳಿ, ಶಿವಪುರ ಭಾಗದಲ್ಲಿ ಹಳ್ಳಿ ಹರಿದು ಭಾರೀ ಅನಾಹುತವಾಗಿದೆ. ಗೊಲ್ಲರಹಳ್ಳಿಯಲ್ಲಿ ಹೂವಿನಹೊಲದಲ್ಲಿ ಮಳೆ ‌ನೀರು ನಿಂತಿದೆ.

ಕಾಫಿನಾಡ ಮಹಾಮಳೆಗೆ ಮಲೆನಾಡು ಭಾಗದ ಜನರು ಕಂಗಾಲಾಗಿದ್ದಾರೆ. ಭಾರೀ ಮಳೆಗೆ ಗ್ರಾಮೀಣ ಭಾಗದ ಸೇತುವೆಗಳು ಜಲಾವೃತಗೊಂಡಿದೆ. ಮುತ್ತೋಡಿ ವ್ಯಾಪ್ತಿಯ ಗ್ರಾಮದ ಜನ ಹಳ್ಳ ದಾಟಲು ಪರದಾಡಿದರು. ವೃದ್ಧೆಯನ್ನ ಹಳ್ಳಿಗರು ಅಂಗೈಲಿ ಹೊತ್ತು ಸಾಗಿದ ಘಟನೆ ಚಿಕ್ಕಮಗಳೂರು ತಾಲೂಕಿನ ಮಲಗಾರು ಗ್ರಾಮದಲ್ಲಿ ನಡೆದಿದೆ. ಮಲಗಾರು ಗ್ರಾಮ ಮುತ್ತೋಡಿ ಅರಣ್ಯ ವ್ಯಾಪ್ತಿಯ ಕುಗ್ರಾಮ ಇದಾಗಿದೆ. ನಿನ್ನೆ ಸಂಜೆ ಸುರಿದ ಭಾರೀ ಮಳೆಯಿಂದ ಅಪಾರ ಪ್ರಮಾಣದಲ್ಲಿ ನೀರು ಹರಿದು, ಕಿರು ಸೇತುವೆ ತುಂಬಿ ಹೋಗಿದೆ.

ಇತ್ತ ಕಳೆದ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಿಗೆ‌ ನೀರು ನುಗ್ಗಿದೆ. ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮ ನಗರದ ದೇವರಾಜು ಅರಸು ಬಡಾವಣೆಯ ಮನೆಗಳು ಜಲಾವೃತಗೊಂಡಿದೆ. ರಸ್ತೆ ಮೇಲೆ ನೀರು ಉಕ್ಕಿ ಹರಿಯುತ್ತಿದ್ದು, ಜನರ ಓಡಾಟಕ್ಕೂ ಸಂಕಷ್ಟ ಎದುರಾಗಿದೆ.

5 ದಶಕಗಳ ನಂತರ ಕೋಡಿ ಬಿದ್ದ ಹುಲಿಕೆರೆ ಗ್ರಾಮದ ಕೆರೆ

ಕಳೆದ ಮೂರ್ನಾಲ್ಕು ದಿನದಿಂದ ಸುರಿಯುತ್ತಿರುವ ಮಳೆಗೆ ಐದು ದಶಕಗಳ ನಂತರ ಹುಲಿಕೆರೆ ಗ್ರಾಮದ ಕೆರೆ ಕೋಡಿ ಬಿದ್ದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿರುವ ಹುಲಿಕೆರೆ ನೋಡಲು ಜನಸಾಗರವೇ ಹರಿದುಬಂದಿತ್ತು. ಕಲ್ಯಾಣ ಚಾಲುಕ್ಯರ ಕಾಲಘಟ್ಟದಲ್ಲಿ ಕಟ್ಟಿಸಿದ ಕೆರೆಯು ಹುಲಿಕೆರೆ ಗ್ರಾಮ ಸೇರಿ ಸುತ್ತಮುತ್ತಲಿನ ಹತ್ತಾರು ಹಳ್ಳಿಯ ಜೀವನಾಡಿಯಾಗಿದೆ. ಕೆರೆ ಭರ್ತಿಯಾಗಿ ಕೋಡಿ ಬಿದ್ದಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕೆರೆಗಳು ಭರ್ತಿ

ಬರದ ನಾಡು ಎಂದೇ ಕರೆಯುತ್ತಿದ್ದ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಗೆ ತಾಲೂಕಿನ ಬಹುತೇಕ ಕೆರೆಗಳು ಭರ್ತಿಯಾಗಿದೆ. ಬತ್ತಿ ಹೋಗಿದ್ದ ಬೋರ್ ವೆಲ್‌ನಲ್ಲಿ ನೀರು ಉಕ್ಕಿ ಬರುತ್ತಿದೆ. ಜಗಳೂರು ತಾಲ್ಲೂಕಿನ ಕಾನನಕಟ್ಟೆ, ಅಣಬೂರು ಗ್ರಾಮದಲ್ಲಿ ನೀರು ಉಕ್ಕಿ ಬರುತ್ತಿದೆ. ಅಂತರ್ಜಲ ಹೆಚ್ಚಾಗಿ ಬೋರ್ ವೆಲ್ ಗಳಲ್ಲಿ ನೀರು ಉಕ್ಕಿ ಬರುತ್ತಿದ್ದು, ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

ಮಲೆನಾಡಿನಂತಾದ ಹೊಸಪೇಟೆ ಪಟ್ಟಣ

ವಿಜಯನಗರದ ಹೊಸಪೇಟೆ ಪಟ್ಟಣ ಮಿನಿ ಮಲೆನಾಡಿನಂತಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇಡೀ ಹೊಸಪೇಟೆ ತಾಲೂಕು ಮಂಜಿನಿಂದ ಆವರಿಸಿದೆ. ಐತಿಹಾಸಿಕ ಜೋಳದ ರಾಶಿ ಗುಡ್ಡ ಸೇರಿದಂತೆ ನಾನಾ ಕಡೆ ಮಂಜಿನ ವಾತಾವರಣ ಕ್ಕೆ ಜನರು ಫುಲ್ ಫಿದಾ ಆಗಿದ್ದಾರೆ. ಮಂಜಿನಲ್ಲೇ ಕುಳಿತು ಪ್ರಕೃತಿ ಸೌಂದರ್ಯ ಸವಿಯುತ್ತಿದ್ದಾರೆ.

Continue Reading
Advertisement
Kodava Family Hockey Tournament Website Launched
ಕೊಡಗು1 ತಿಂಗಳು ago

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

Bengaluru News
ಬೆಂಗಳೂರು1 ತಿಂಗಳು ago

Bengaluru News : ಮಾಡಲಿಂಗ್‌ನಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಲು ಹೊರಟ ಹಳ್ಳಿಹೈದ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ

Gadag News Father commits suicide by throwing three children into river
ಗದಗ1 ತಿಂಗಳು ago

Gadag News : ಮೂವರು ಮಕ್ಕಳನ್ನು ನದಿಗೆ ಎಸೆದು, ಆತ್ಮಹತ್ಯೆ ಮಾಡಿಕೊಂಡ ತಂದೆ!

Dina Bhavishya
ಭವಿಷ್ಯ1 ತಿಂಗಳು ago

Dina Bhavishya: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಖಂಡಿತ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ

Bengaluru airport
ಬೆಂಗಳೂರು1 ತಿಂಗಳು ago

Bengaluru Airport : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೈಗರ್‌ ವಿಂಗ್ಸ್‌; 2ನಲ್ಲಿ ಅತಿದೊಡ್ಡ ವರ್ಟಿಕಲ್‌ ಗಾರ್ಡನ್‌ ಅನಾವರಣ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಈ ರಾಶಿಯವರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಸದಾ ಕಲ್ಪನೆಯಲ್ಲಿ ಕನಸುಗಳನ್ನು ಕಾಣುತ್ತಾ ಕಾಲಹರಣ ಮಾಡ್ಬೇಡಿ

dina bhavishya read your daily horoscope predictions for november 4 2024
ಭವಿಷ್ಯ2 ತಿಂಗಳುಗಳು ago

Dina Bhavishya : ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಶುಭ ಸುದ್ದಿ

galipata neetu
ಕಿರುತೆರೆ1 ವರ್ಷ ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ1 ವರ್ಷ ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ1 ವರ್ಷ ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ತಿಂಗಳುಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್4 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ4 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ4 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌