Site icon Vistara News

Karnataka Weather : ಮಲೆನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಬೆಂಗಳೂರಿಗೂ ಅಲರ್ಟ್‌

moderate rains and at isolated to scattered heavy to very heavy rains associated with thunderstorm

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಮಲೆನಾಡಿನಲ್ಲಿ ವ್ಯಾಪಕ ಮಳೆಯಾದರೆ, ಕರಾವಳಿಯಲ್ಲಿ ಸಾಧಾರಣವಾಗಿರಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ಕೆಲವೊಮ್ಮೆ ಮಧ್ಯಮದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಸೇರಿದಂತೆ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲೂ ವ್ಯಾಪಕ ಮಳೆಯಾಗುವ ಸಂಭವವಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲಿ ಭಾರಿ ಮಳೆಯಾಗಲಿದ್ದು, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೆಲವೊಮ್ಮೆ ಗುಡುಗು ಇರಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version