Karnataka weather : ಮತ್ತೆ ಶುರುವಾಗುತ್ತಾ ಮಳೆ ಅಬ್ಬರ? ವಾರಾಂತ್ಯದಲ್ಲಿ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ - Vistara News

ಉತ್ತರ ಕನ್ನಡ

Karnataka weather : ಮತ್ತೆ ಶುರುವಾಗುತ್ತಾ ಮಳೆ ಅಬ್ಬರ? ವಾರಾಂತ್ಯದಲ್ಲಿ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Rain News : ಸಮುದ್ರ ಮಟ್ಟದಲ್ಲಿ ಟ್ರಫ್‌ ಎದ್ದಿದ್ದರೂ, ರಾಜ್ಯಕ್ಕೆ ಮಳೆ ಪ್ರಭಾವ ಕಡಿಮೆ ಇರಲಿದೆ. ಮುಂದಿನ ಒಂದು ವಾರ ರಾಜ್ಯದಲ್ಲಿ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

Karnataka weather Forecast
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ. ಪೂರ್ವ ದಿಕ್ಕಿನಿಂದ ಬೀಸುತ್ತಿರುವ ಗಾಳಿಯಲ್ಲಿ ಟ್ರಫ್‌ವೊಂದು ಎದ್ದಿದೆ. ಇದರ ಪ್ರಭಾವ ಇದ್ದರೂ ರಾಜ್ಯದಲ್ಲಿ ಯಾವುದೇ ಮಳೆಯಾಗುವ ಸಾಧ್ಯತೆ (Rain News) ಇಲ್ಲ. ಬದಲಿಗೆ ಮುಂದಿನ ದಿನಗಳು ಶುಷ್ಕ ವಾತಾವರಣವೇ ಇರಲಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ರಾಜಧಾನಿ ಬೆಂಗಳೂರಲ್ಲಿ ಇನ್ನೆರಡು ದಿನಗಳು ಮೋಡ ಕವಿದ ವಾತಾವರಣ ಇರಲಿದೆ. ಮುಂಜಾನೆ ಸಮಯ ದಟ್ಟ ಮಂಜು ಆವರಿಸಲಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಜು ಬೀಳಲಿದೆ. ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶ 17 ಡಿ.ಸೆ ಇರಲಿದೆ.

ಕಾರವಾರದಲ್ಲಿ ತಾಪಮಾನ ಏರಿಕೆ

ರಾಜ್ಯದಲ್ಲಿ ಶುಕ್ರವಾರದಂದು ಒಣ ಹವೆ ಮೇಲುಗೈ ಸಾಧಿಸಿತ್ತು. ಕನಿಷ್ಠ ಉಷ್ಣಾಂಶವು ವಿಜಯಪುರದಲ್ಲಿ 12.2 ಡಿ.ಸೆ ಹಾಗೂ ಧಾರವಾಡದಲ್ಲಿ 27.2 ಡಿ.ಸೆ ದಾಖಲಾಗಿತ್ತು. ಗರಿಷ್ಠ ಉಷ್ಣಾಂಶವು ಕಾರವಾರದಲ್ಲಿ 34.2 ಡಿ.ಸೆ ದಾಖಲಾಗಿತ್ತು.

ಇದನ್ನೂ ಓದಿ: JSS Hospital : ಅಯೋಧ್ಯಾ ಸಂಭ್ರಮೋತ್ಸವ; ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಫ್ರೀ ಟ್ರೀಟ್ಮೆಂಟ್‌

ಚಳಿಗಾಲದಲ್ಲಿ ದೊರೆಯುವ ಕಿವಿ ಹಣ್ಣನ್ನು ಏಕೆ ತಿನ್ನಬೇಕೆಂದರೆ…

ಮೈಯೆಲ್ಲಾ ರೋಮವಿರುವಂತೆ ಕಾಣುವ, ಕಂದು ಬಣ್ಣದ ಪುಟ್ಟ ಹಣ್ಣು ಕಿವಿ. ಚಳಿಗಾಲದ ಋತುವಿನಲ್ಲಿ ದೊರೆಯುವ ಈ ಹಣ್ಣನ್ನು ಒಳಗೆ ಕತ್ತರಿಸಿದರೆ, ಕಡು ಹಸಿರು ಬಣ್ಣದ ತಿರುಳು ದೊರೆಯುತ್ತದೆ. ಇದರಲ್ಲೇ ಪುಟ್ಟ ಕಪ್ಪುವರ್ಣದ ಬೀಜಗಳನ್ನು ಕಾಣಬಹುದು. ಪೂರ್ಣ ಕಳಿತು ಹಣ್ಣಾದರೆ ಸಕ್ಕರೆಯಂಥ ಸಿಹಿ, ಇಲ್ಲದಿದ್ದರೆ ಹುಚ್ಚು ಹುಳಿ! ಹಾಗಾಗಿ ಕಿವಿ ಹಣ್ಣುಗಳನ್ನು ಚೆನ್ನಾಗಿ ಮಾಗಿಸಿಕೊಂಡು ತಿಂದವರಷ್ಟೇ ಬಲ್ಲರು ಅದರ ಸವಿಯ. ಹೆಚ್ಚಿನವರಿಗೆ ಕಿವಿಯೆಂದರೆ ಹುಳಿ ಹಣ್ಣೆಂದೇ ಮುಖ ಕಿವುಚುವಂತಾಗುತ್ತದೆ. ಚಳಿಗಾಲದಲ್ಲಿ ಈ ಹಣ್ಣನ್ನು ತಿನ್ನಲೇಬೇಕೆನ್ನುವುದಕ್ಕೆ ಕಾರಣ ಇದರಲ್ಲಿರುವ ಸತ್ವಗಳು. ವಿಟಮಿನ್‌ ಸಿ ಭರಪೂರ ಇರುವ ಈ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು ಸಾಂದ್ರವಾಗಿವೆ. ನಾರು ಸಹ ಹೇರಳವಾಗಿದ್ದು ಹೊಟ್ಟೆಯ ಆರೋಗ್ಯವನ್ನು ಚೆನ್ನಾಗಿಡುತ್ತದೆ. ಮಾಗಿದ ಹಣ್ಣಿನ ರುಚಿ ಸಿಹಿಯೇ ಇದ್ದರೂ, ಮಧುಮೇಹಿಗಳಿಗೆ ಪೂರಕವಾದ ಆಹಾರವಿದು. ಡೆಂಗೂ ರೋಗಿಗಳಿಗೆ ನೀಡಲೇಬೇಕಾದ ಆಹಾರವಿದು. ಹಾಗಾದರೆ ಏನಿದರ ವೈಶಿಷ್ಟ್ಯಗಳು (Kiwi Benefits) ಎಂಬುದನ್ನು ತಿಳಿಯೋಣ ಈಗ.

Kiwi Fruits To Eat On Empty Stomach

ವಿಟಮಿನ್‌ ಸಿ ಖಜಾನೆ

ಸಿ ಜೀವಸತ್ವ ಹೇರಳವಾಗಿರುವ ಈ ಹಣ್ಣು ದೇಹದ ಪ್ರತಿರೋಧಕ ಶಕ್ತಿಗೆ ಭೀಮಬಲ ನೀಡುತ್ತದೆ. ಒಂದು ದೊಡ್ಡ ಕಿವಿಹಣ್ಣು ಒಂದಿಡೀ ದಿನಕ್ಕೆ ದೇಹಕ್ಕೆ ಅಗತ್ಯವಾದ ವಿಟಮಿನ್‌ ಸಿ ಪ್ರಮಾಣವನ್ನು ಶರೀರಕ್ಕೆ ಒದಗಿಸುತ್ತದೆ ಎಂದರೆ ಅದಿನ್ನೆಂಥ ಖಜಾನೆಯಾಗಿರಬಹುದು ಇದು ಸಿ ಜೀವಸತ್ವದ್ದು! ಇದಕ್ಕಾಗಿಯೇ ಚಳಿಗಾಲದಲ್ಲಿ ಕಿವಿ ಹಣ್ಣು ಅಗತ್ಯವಾಗಿ ಬೇಕು ಎನ್ನುವುದು. ದೇಹದ ರೋಗ ನಿರೋಧಕ ಶಕ್ತಿಯನ್ನು ಕುಗ್ಗದಂತೆ ಕಾಯ್ದಿರಿಸುತ್ತದೆ ಇದು.

ಉತ್ಕರ್ಷಣ ನಿರೋಧಕಗಳು

ಹಲವು ರೀತಿಯ ಪಾಲಿಫೆನಾಲ್‌ಗಳು ಮತ್ತು ಕೆರೊಟಿನಾಯ್ಡ್‌ಗಳಿರುವ ಈ ಹಣ್ಣು ಶರೀರದಲ್ಲಿ ಮುಕ್ತ ಕಣಗಳ ಹಾವಳಿಯನ್ನು ತಗ್ಗಿಸುತ್ತದೆ. ಇದರಿಂದ ಉರಿಯೂತ-ಜನ್ಯ ಹಲವು ರೋಗಗಳನ್ನು ದೂರ ಇರಿಸಬಹುದು. ಮಾತ್ರವಲ್ಲ, ಕ್ಯಾನ್ಸರ್‌ನಂಥ ಮಾರಕ ರೋಗಗಳ ಭೀತಿ ಕಡಿಮೆಯಾಗುತ್ತದೆ.

weight loss

ತೂಕ ಇಳಿಕೆ

ಹಣ್ಣಿನ ರುಚಿ ಸಿಹಿಯೇ ಆದರೂ, ಇದರಲ್ಲಿ ಅತಿ ಹೆಚ್ಚಿನ ಪಿಷ್ಟವಿಲ್ಲ, ಕೊಬ್ಬೂ ಕಡಿಮೆಯೇ, ಆದರೆ ನಾರು ಹೆಚ್ಚು. ಇವೆಲ್ಲವುಗಳ ಫಲವೆಂದರೆ ತೂಕ ಇಳಿಸುವವರಿಗೆ ಇದು ಸೂಕ್ತ. ತಿಂದಿದ್ದು ಹೆಚ್ಚು ತೃಪ್ತಿ ನೀಡಿ, ಪಚನವಾಗುವುದಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳುವುದರ ಪರಿಣಾಮ, ಹಸಿವನ್ನು ಮುಂದೂಡುತ್ತದೆ. ಹಾಗಾಗಿ ಕಿವಿ ಹಣ್ಣು ತೂಕ ಇಳಿಸುವವರಿಗೆ ಹೇಳಿ ಮಾಡಿಸಿದ್ದು.

ealthy internal organs of human digestive system / highlighted blue organs

ಜೀರ್ಣಕಾರಿ

ಜೀರ್ಣಾಂಗಗಳ ಆರೋಗ್ಯ ವೃದ್ಧಿಯಾಗಬೇಕೆಂದರೆ ಆಹಾರದಲ್ಲಿ ಸೂಕ್ತ ಪ್ರಮಾಣದಲ್ಲಿ ನಾರು ಇರಬೇಕು. ಕಿವಿಯಲ್ಲಿರುವ ಕರಗಬಲ್ಲ ನಾರುಗಳು ದೇಹದಲ್ಲಿ ಜಮೆಯಾಗುವ ಕೊಬ್ಬು ಕಡಿಮೆ ಮಾಡಿದರೆ, ಕರಗದಿರುವಂಥ ನಾರುಗಳು ಜೀರ್ಣಾಂಗವನ್ನು ಶುದ್ಧಗೊಳಿಸುವ ಕೆಲಸ ಮಾಡುತ್ತವೆ. ಇದರಿಂದ ಮಲಬದ್ಧತೆಯನ್ನು ನಿವಾರಿಸಿಕೊಳ್ಳಬಹುದು.

Skin Care Health Benefits Of Hot Water Bath

ಚರ್ಮಕ್ಕೆ ಹೊಳಪು

ಚರ್ಮದ ಹೊಳಪು, ನುಣುಪುಗಳು ಮಾಸಬಾರದೆಂದರೆ ತ್ವಚೆಯಲ್ಲಿ ಅಗತ್ಯ ಪ್ರಮಾಣದ ಕೊಲಾಜಿನ್‌ ಬೇಕು. ಕಿವಿ ಹಣ್ಣಿನಲ್ಲಿರುವ ಸತ್ವಗಳು ಕೊಲಾಜಿನ್‌ ಉತ್ಪತ್ತಿಯನ್ನು ಪ್ರಚೋದಿಸುತ್ತವೆ. ಹಾಗಾಗಿ ನಿಯಮಿತವಾಗಿ ಕಿವಿ ಹಣ್ಣು ಸೇವಿಸುವುದರಿಂದ ತಾರುಣ್ಯಭರಿತ ತ್ವಚೆಯನ್ನು ಹೊಂದುವುದಕ್ಕೆ ಸಾಧ್ಯವಿದೆ.

Heart Health Fish Benefits

ಹೃದಯಕ್ಕೆ ಪೂರಕ

ಇದರಲ್ಲಿರುವ ಪೊಟಾಶಿಯಂ ಸತ್ವಗಳು ರಕ್ತದೊತ್ತಡ ನಿಯಂತ್ರಿಸುವಲ್ಲಿ ಹೆಚ್ಚಿನ ಕೆಲಸ ಮಾಡುತ್ತವೆ. ಜೊತೆಗೆ ರಕ್ತದಲ್ಲಿನ ಪ್ಲೇಟ್‌ಲೆಟ್‌ ಸಂಖ್ಯೆಯನ್ನು ವೃದ್ಧಿಸುವಲ್ಲಿ ಇದರ ಸಾಮರ್ಥ್ಯ ಅಧ್ಯಯನಗಳ ಮೂಲಕ ಸಾಬೀತಾಗಿದೆ. ಇದಲ್ಲದೆ, ಮಧುಮೇಹ ನಿಯಂತ್ರಿಸಿ, ಕೊಲೆಸ್ಟ್ರಾಲ್‌ ಕಡಿಮೆ ಮಾಡುವಲ್ಲೂ ಕಿವಿ ಹಣ್ಣು ಫಲಕಾರಿ ಆಗಿರುವುದರಿಂದ, ಹೃದಯದ ಆರೋಗ್ಯ ಕಾಪಾಡುವಲ್ಲಿ ಕಿವಿ ಹಣ್ಣಿನ ಸೇವನೆ ನೆರವಾಗುತ್ತದೆ.

Sleeping Tips

ಕಣ್ತುಂಬಾ ನಿದ್ದೆ

ಕಿವಿಯಲ್ಲಿ ಸೆರೋಟೋನಿನ್‌ ಅಂಶವಿದ್ದು, ಇದರಿಂದ ಮೂಡ್‌ ಸುಧಾರಿಸುತ್ತದೆ ಮತ್ತು ಕಣ್ತುಂಬಾ ನಿದ್ದೆ ತರಿಸುತ್ತದೆ. ನಿದ್ರಾಹೀನತೆಯ ಸಮಸ್ಯೆ ಇರುವವರು ರಾತ್ರಿಯೂಟದಲ್ಲಿ ಕಿವಿ ಹಣ್ಣನ್ನು ಸೇರಿಸಿಕೊಂಡರೆ, ನಿದ್ದೆ ಗಾಢವೂ, ದೀರ್ಘವೂ ಆಗಬಹುದು ಎನ್ನುತ್ತವೆ ಅಧ್ಯಯನಗಳು.

ಅರ್ಥರೈಟಿಸ್ ಶಮನ

ಮೂಳೆಯ ಆರೋಗ್ಯಕ್ಕೆ ಬೇಕಾದ ವಿಟಮಿನ್‌ ಕೆ ಸತ್ವ ಕಿವಿಯಲ್ಲಿದೆ. ಇದು ಕ್ಯಾಲ್ಶಿಯಂ ಖನಿಜವನ್ನು ಹೀರಿಕೊಳ್ಳುವುದಕ್ಕೆ ದೇಹಕ್ಕೆ ನೆರವು ನೀಡುತ್ತದೆ. ಇದರಿಂದ ಆಸ್ಟಿಯೊ ಆರ್ಥರೈಟಿಸ್‌ನಂಥ ಸಮಸ್ಯೆ ಇರುವವರಿಗೆ ಸಹಾಯವಾಗುವ ಸಾಧ್ಯತೆಯಿದೆ. ಯಾವುದೇ ಸಮಸ್ಯೆ ಇಲ್ಲದ ಆರೋಗ್ಯವಂತರೂ ತಮ್ಮ ಮೂಳೆಗಳನ್ನು ಸಬಲ ಮಾಡಿಕೊಳ್ಳಲು ಇದು ಸಹಾಯ ಮಾಡುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

SSLC Result 2024: ಎಸ್‌ಎಸ್‌ಎಲ್‌ಸಿ ರಿಸಲ್ಟ್‌; ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಕಟಗೊಂಡಿದ್ದು, ಕಳೆದ ವರ್ಷ ಹಿಂದಿದ್ದ ಉಡುಪಿ ಜಿಲ್ಲೆ ಫಿನಿಕ್ಸ್‌ನಂತೆ ಎದ್ದು ಬಂದರೆ, ಯಾದಗಿರಿ ಜಿಲ್ಲೆ ಕೊನೆ ಸ್ಥಾನವನ್ನು ಪಡೆದು ಕುಳಿತಲ್ಲೇ ಕುಳಿತಿದೆ.

VISTARANEWS.COM


on

By

SSLC Exam Result 2024 Announce
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Exam Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49% ರಷ್ಟು ಫಲಿತಾಂಶ ಕುಸಿತವಾಗಿದೆ. ಕಳೆದ ವರ್ಷ ಮೊದಲ ಸ್ಥಾನವನ್ನು ಚಿತ್ರದುರ್ಗ, ಎರಡನೇ ಸ್ಥಾನವನ್ನು ಮಂಡ್ಯ , ಮೂರನೇ ಸ್ಥಾನವನ್ನು ಹಾಸನ ಹಾಗೂ ಕೊನೆ ಸ್ಥಾನವನ್ನು ಯಾದಗಿರಿ ಪಡೆದಿತ್ತು. ಈ ವರ್ಷವೂ ಫಲಿತಾಂಶದಲ್ಲಿ ಯಾದಗಿರಿಯು ಕೊನೆ ಸ್ಥಾನವನ್ನೇ ಗಳಿಸಿದ್ದು, ಶೇಕಡಾವಾರು 50.59ರಷ್ಟು ಫಲಿತಾಂಶ ಬಂದಿದೆ. ಇನ್ನೂ ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ.

ಜಿಲ್ಲೆಗಳ ಶೇಕಡಾವಾರು ಫಲಿತಾಂಶ ಇಂತಿದೆ

1) ಉಡುಪಿ- 94%
2) ದಕ್ಷಿಣ ಕನ್ನಡ-92.12%
3) ಶಿವಮೊಗ್ಗ -88.67%
4) ಕೊಡಗು- 88.67%
5) ಉತ್ತರ ಕನ್ನಡ-86.54%
6) ಹಾಸನ-86.28%
7) ಮೈಸೂರು-85.5%
8) ಶಿರಸಿ-84.64%
9)ಬೆಂಗಳೂರು ಗ್ರಾಮಾಂತರ-83.67%
10) ಚಿಕ್ಕಮಗಳೂರು-83.39%
11) ವಿಜಯಪುರ- 79.82%
12) ಬೆಂಗಳೂರು ದಕ್ಷಿಣ-79%
13) ಬಾಗಲಕೋಟೆ-77.92%
14)ಬೆಂಗಳೂರು ಉತ್ತರ- 77.09%
15) ಹಾವೇರಿ-75.85%
16) ತುಮಕೂರು-75.16%
17)ಗದಗ- 74.76%
18)ಚಿಕ್ಕಬಳ್ಳಾಪುರ- 73.61%
19)ಮಂಡ್ಯ-73.59%
20) ಕೋಲಾರ-73.57%
21)ಚಿತ್ರದುರ್ಗ-72.85%
22) ಧಾರವಾಡ-72.67%
23) ದಾವಣಗೆರೆ- 72.48%
24) ಚಾಮರಾಜನಗರ-71.59%
25) ಚಿಕ್ಕೋಡಿ-69.82%
26) ರಾಮನಗರ-69.53%
27) ವಿಜಯನಗರ-65.61%
28) ಬಳ್ಳಾರಿ-64.99%
29) ಬೆಳಗಾವಿ-64.93%
30) ಮಧುಗಿರಿ-62.44%
31) ರಾಯಚೂರು- 61.2%
32) ಕೊಪ್ಪಳ- 61.16%
33) ಬೀದರ್‌- 57.52%
34) ಕಲಬುರಗಿ- 53.04%
35) ಯಾದಗಿರಿ- 50.59%

ಮಾಧ್ಯಮವಾರು ಫಲಿತಾಂಶ

ಕನ್ನಡ – 69.34%
ಆಂಗ್ಲ – 88.29%
ಉರ್ದು – 63.49%
ಮರಾಠಿ – 69.32%
ತೆಲುಗು – 75.59%

ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ

625ಕ್ಕೆ 625 ಅಂಕವನ್ನು ಒಬ್ಬ ವಿದ್ಯಾರ್ಥಿ ಮಾತ್ರ ಪಡೆದುಕೊಂಡಿದ್ದಾರೆ. 624 ಅಂಕಗಳನ್ನು 7 ಮಂದಿ, 623 ಅಂಕಗಳನ್ನು 14 ಮಂದಿ ಹಾಗೂ 622 ಅಂಕಗಳನ್ನು 21 ಮಂದಿ, 621 ಅಂಕಗಳನ್ನು 44 ಮಂದಿ, 620 ಅಂಕಗಳನ್ನು 64 ಮಂದಿ ಅಂಕಗಳನ್ನು ಪಡೆದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Bheemanna Naik: ಶಿರಸಿ ಶಾಸಕ ಭೀಮಣ್ಣ ನಾಯ್ಕ್‌ ಮೇಲೆ ಜೇನು ದಾಳಿ; ಆಸ್ಪತ್ರೆಗೆ ದಾಖಲು

Bheemanna Naik: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಣೆಗೆ ತೆರಳಿದ್ದಾಗ ಶಾಸಕ ಭೀಮಣ್ಣ ನಾಯ್ಕ್‌ ಸೇರಿ ಹಲವರ ಮೇಲೆ ಜೇನು ನೊಣಗಳು ದಾಳಿ ಮಾಡಿವೆ.

VISTARANEWS.COM


on

Koo

ಕಾರವಾರ: ಗೂಡಿನ ಜೇನು ನೊಣಗಳು ದಾಳಿ ನಡೆಸಿದ್ದರಿಂದ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ್‌ ಅವರು (Bheemanna Naik) ಸೇರಿ ಹಲವರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ನಗರದ ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಣೆಗೆ ತೆರಳಿದ್ದ ವೇಳೆ ಜೇನು ನೋಣಗಳು ದಾಳಿ ನಡೆಸಿವೆ.

ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಣೆಗೆ ನಗರಸಭೆ ಪೌರಾಯುಕ್ತ ಕಾಂತರಾಜ ಜತೆ ಶಾಸಕ ಬುಧವಾರ ತೆರಳಿದ್ದರು. ಈ ವೇಳೆ ಸಮೀಪದಲ್ಲಿದ್ದ ಗೂಡಿನ ಜೇನು ನೊಣಗಳು ದಾಳಿ ನಡೆಸಿದ್ದರಿಂದ ಶಾಸಕ ಭೀಮಣ್ಣ ನಾಯ್ಕ್‌, ಪೌರಾಯುಕ್ತ ಕಾಂತರಾಜ, ಸದಸ್ಯ ಖಾದರ್ ಆನವಟ್ಟಿ ಮತ್ತಿತರರು ಗಾಯಗೊಂಡಿದ್ದಾರೆ. ಟಿಎಸ್‌ಎಸ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ | Prajwal Revanna Case: ಎಚ್‌ಡಿಕೆ ಕಿಂಗ್‌ ಆಫ್‌ ಬ್ಲ್ಯಾಕ್‌ಮೇಲ್‌; ತಿರುಗಿಬಿದ್ದ ಡಿ.ಕೆ. ಶಿವಕುಮಾರ್!

ಜೇನುದಾಳಿಯಿಂದ ಶಾಸಕ ಭೀಮಣ್ಣ ನಾಯ್ಕ್‌ ಅವರು ತೀವ್ರವಾಗಿ ಗಾಯಗೊಂಡಿದ್ದು, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ನಗರಸಭೆ ಸದಸ್ಯ ಪ್ರದೀಪ ಶೆಟ್ಟಿ ಮಾಹಿತಿ ನೀಡಿದ್ದಾರೆ.

Continue Reading

ಮಳೆ

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರಿಸಲಿದ್ದು, ವಿವಿಧ ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಘೋಷಿಸಲಾಗಿದೆ. ಮಳೆ ನಡುವೆಯೂ ಕೆಲವು ಜಿಲ್ಲೆಗಳಿಗೆ ಹೀಟ್‌ ವೇವ್‌ ವಾರ್ನಿಂಗ್‌ ಅನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬಿರುಗಾಳಿ ಜತೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ 40-50 ಕಿ.ಮೀ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆ ಜತೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನೂ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಹೀಟ್‌ ವೇವ್‌ ವಾರ್ನಿಂಗ್‌

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

Lok Sabha Election 2024: ಅಭಿವೃದ್ಧಿ ಕಾರ್ಯಕ್ಕಾಗಿ ನೀತಿ ಸಂಹಿತೆ ಸಡಿಲಿಸಲು ಶಿವರಾಮ ಹೆಬ್ಬಾರ್ ಮನವಿ

Lok Sabha Election 2024: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳವಾರ ಶಾಸಕ ಶಿವರಾಮ ಹೆಬ್ಬಾರ್, ಯಲ್ಲಾಪುರ ತಾಲೂಕಿನ ಇಡಗುಂದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಬೈಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

VISTARANEWS.COM


on

Yallapura MLA Shivaram Hebbar voting in Arabail village
Koo

ಯಲ್ಲಾಪುರ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಮಂಗಳವಾರ ಶಾಸಕ ಶಿವರಾಮ ಹೆಬ್ಬಾರ್ ತಾಲೂಕಿನ ಇಡಗುಂದಿ ಗ್ರಾ.ಪಂ ವ್ಯಾಪ್ತಿಯ ಅರಬೈಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಇದನ್ನೂ ಓದಿ: Guava Leaves Benefits: ಕೇವಲ ಸೀಬೆ ಹಣ್ಣಲ್ಲ, ಎಲೆಯಿಂದಲೂ ಎಷ್ಟೊಂದು ಪ್ರಯೋಜನಗಳು!

ಬಳಿಕ ಮಾತನಾಡಿದ ಅವರು, ರಾಜ್ಯದೆಲ್ಲೆಡೆ ಶಾಂತಿಯುತವಾಗಿ ಮತದಾನ ನಡೆದಿರುವುದು ಸಂತಸದ ಸಂಗತಿಯಾಗಿದೆ. ಜಾತಿ, ಧರ್ಮ, ಭಿನ್ನಾಭಿಪ್ರಾಯಗಳ ಹೊರತಾಗಿ ರಾಜ್ಯದ ಜನತೆ ಸಾಂಘಿಕವಾದ ಚುನಾವಣೆ ನಡೆಯಲು ನಿರ್ಣಯಿಸಿರುವುದು ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಮನವಿ ಮಾಡಬಯಸುವುದೇನೆಂದರೆ, 3 ತಿಂಗಳುಗಳ ಸುದೀರ್ಘ ನೀತಿ ಸಂಹಿತೆ ಜಾರಿಯು ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗಿದೆ. ಕರಾವಳಿ ಮಲೆನಾಡು ಪ್ರದೇಶದಲ್ಲಿ 5 ತಿಂಗಳುಗಳ ಕಾಲ ವ್ಯಾಪಕ ಮಳೆಯಾಗುವುದರಿಂದ ಯಾವುದೇ ಕೆಲಸ ಕಾರ್ಯಗಳನ್ನು ಮಾಡಲಾಗುವುದಿಲ್ಲ. ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲಿ ಇಂದಿಗೆ ಚುನಾವಣೆ ಪೂರ್ಣಗೊಳ್ಳುವುದರಿಂದ, ಈ ಸಂದರ್ಭವನ್ನು ಪರಿಗಣಿಸಿ ನೀತಿ ಸಂಹಿತೆಯನ್ನು ಸಡಿಲಿಸಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಅನುವು ಮಾಡಿಕೊಡಬೇಕಿದೆ ಎಂದರು.

ಇದನ್ನೂ ಓದಿ: Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

ಈ ಸಂದರ್ಭದಲ್ಲಿ ಶಾಸಕರ ಪತ್ನಿ ವನಜಾಕ್ಷಿ ಹೆಬ್ಬಾರ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Continue Reading
Advertisement
sslc result 2024 ankita basappa first rank toppers list
ಪ್ರಮುಖ ಸುದ್ದಿ6 mins ago

SSLC Result 2024: ಶೇ.100 ಅಂಕಗಳೊಂದಿಗೆ ಬಾಗಲಕೋಟೆಯ ಅಂಕಿತಾ ಪ್ರಥಮ; ಎಸ್ಸೆಸ್ಸೆಲ್ಸಿ ಟಾಪರ್ಸ್ ಪಟ್ಟಿ ಇಲ್ಲಿದೆ

SSLC Exam Result 2024 Announce
ಬೆಂಗಳೂರು22 mins ago

SSLC Result 2024: ಎಸ್‌ಎಸ್‌ಎಲ್‌ಸಿ ರಿಸಲ್ಟ್‌; ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

IPL 2024
ಕ್ರೀಡೆ28 mins ago

IPL 2024: 17ನೇ ಆವೃತ್ತಿಯ ಐಪಿಎಲ್​ನಿಂದ ಅಧಿಕೃತವಾಗಿ ಹೊರಬಿದ್ದ 5 ಬಾರಿಯ ಚಾಂಪಿಯನ್​ ಮುಂಬೈ ಇಂಡಿಯನ್ಸ್​

Kerala Governor
ದೇಶ31 mins ago

Kerala Governor: ರಾಮಲಲ್ಲಾನಿಗೆ ಶಿರಬಾಗಿ ನಮಸ್ಕರಿಸಿದ ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌; ವಿಡಿಯೋ ನೋಡಿ

Air India Express
ದೇಶ37 mins ago

Air India Express: 30 ಸಿಬ್ಬಂದಿಯನ್ನು ವಜಾಗೊಳಿಸಿದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌; ಇಂದು 74 ವಿಮಾನಗಳ ಹಾರಾಟ ರದ್ದು

Rashmika Mandanna Signed Salman Khan Sikandar
ಟಾಲಿವುಡ್46 mins ago

Rashmika Mandanna: ಸಲ್ಮಾನ್ ಖಾನ್ ಜತೆ ನ್ಯಾಷನಲ್‌ ಕ್ರಶ್‌ ರಶ್ಮಿಕಾ ರೊಮ್ಯಾನ್ಸ್‌!

Jyothi Rai video Leak miscreants say to subscribe to the youtube channel
ಕಿರುತೆರೆ1 hour ago

Jyothi Rai: ಯುಟ್ಯೂಬ್‌ ಸಬ್‌ಸ್ಕ್ರೈಬ್‌ ಮಾಡಿದ್ರೆ ಜ್ಯೋತಿ ರೈ ವಿಡಿಯೊ ಅಪ್‌ಲೋಡ್‌ ಮಾಡ್ತೀನಿ ಎಂದ ಕಿಡಿಗೇಡಿ!

Viral News
ಕ್ರೀಡೆ1 hour ago

Viral News: ಐಪಿಎಲ್ ಪಂದ್ಯದ ವೇಳೆ ಕೇಜ್ರಿವಾಲ್ ಪರ ಘೋಷಣೆ; 6 ಮಂದಿ ಬಂಧನ

SSLC Exam Result 2024 Announce
ಬೆಂಗಳೂರು1 hour ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Viral video
ವೈರಲ್ ನ್ಯೂಸ್1 hour ago

Viral Video: ಪರ್ಸ್‌ ಎಗರಿಸಿ ಖುಷಿಯಲ್ಲಿದ್ದ ಕಳ್ಳನಿಗೆ ಕಾದಿತ್ತು ಬಿಗ್‌ ಶಾಕ್‌! ವಿಡಿಯೋ ಫುಲ್‌ ವೈರಲ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Exam Result 2024 Announce
ಬೆಂಗಳೂರು1 hour ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ3 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ3 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ3 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ4 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

ಟ್ರೆಂಡಿಂಗ್‌