ಬೆಂಗಳೂರು: ರಾಜ್ಯದಲ್ಲಿ ಮಳೆ ಸಂಪೂರ್ಣವಾಗಿ (Rain news) ಮಾಯವಾಗಿರುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಕಡೆ ಚಳಿಯ ವಾತಾವರಣ ಶುರುವಾಗಿದೆ. ರಾತ್ರಿಯಾಗುತ್ತಿದ್ದಂತೆ ತಣ್ಣನೆಯ ಗಾಳಿಯು ಮೈಸೋಕುತ್ತದೆ. ಮೈ-ಕೈ ನಡುಗಿಸುತ್ತದೆ. ಸ್ವೆಟ್ಟರ್ಗಳನ್ನು ಹಾಕಿಕೊಂಡೇ ಹೊರಗೆ ಬರುವಂತೆ ಮಾಡುತ್ತಿದೆ. ಇನ್ನು ಹಗಲಿನ ವಾತಾವರಣವನ್ನು ಗಮನಿಸುವುದಾದರೆ ಬಿಸಿಲಿನ ಪ್ರಮಾಣ ಹೆಚ್ಚಿರಲಿದೆ. ಆಕಾಶವೂ ಸ್ವಚ್ಛವಾಗಿ ಕಾಣಿಸುತ್ತದೆ. ಇನ್ನೆರಡು ದಿನ (ಡಿ. 21- 22) ಚಳಿಯಿಂದ ಕೂಡಿದ ವಾತಾವರಣ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast) ಉಲ್ಲೇಖಿಸಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಇರಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚು ಸಮಯ ಚಳಿ ಇರಲಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಹಾಗೂ ಮಂಡ್ಯ, ಮೈಸೂರು, ರಾಮನಗರ, ತುಮಕೂರಲ್ಲಿ ಸಹ ಬೆಳಗ್ಗೆ ಬಿಸಿಲು ಇದ್ದು ರಾತ್ರಿ ವೇಳೆ ಚಳಿಯಾಗಲಿದೆ ಎನ್ನಲಾಗಿದೆ.
ಮಲೆನಾಡಿನಲ್ಲಿ ಶುಷ್ಕ ವಾತಾವರಣ
ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನದಲ್ಲಿ ಶುಷ್ಕ ವಾತಾವರಣ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನೂ ಓದಿ: Winter Wedding Fashion: ವೆಡ್ಡಿಂಗ್ ಫ್ಯಾಷನ್ಗೆ ಲಗ್ಗೆ ಇಟ್ಟ ಎಥ್ನಿಕ್ ಲೇಯರ್ ಕೋ ಆರ್ಡ್ ಸೂಟ್ !
ಬೆಂಗಳೂರಲ್ಲಿ ಮುಂಜಾನೆ ಮಂಜು
ಬೆಂಗಳೂರಲ್ಲಿ ಸ್ವಚ್ಛ ವಾತಾವರಣ ಇರಲಿದ್ದು, ರಾತ್ರಿಯಾಗುತ್ತಿದ್ದಂತೆ ತಣ್ಣನೆಯ ಗಾಳಿ ಹೆಚ್ಚಾಗಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಹೀಗಾಗಿ ಚಳಿ ಹೆಚ್ಚಾಗಲಿದೆ. ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರಲಿದ್ದರೆ, ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 26 ಡಿ.ಸೆ -17 ಡಿ.ಸೆ
ಮಂಗಳೂರು: 34 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 16 ಡಿ.ಸೆ
ಗದಗ: 31 ಡಿ.ಸೆ – 18 ಡಿ.ಸೆ
ಹೊನ್ನಾವರ: 35 ಡಿ.ಸೆ- 23 ಡಿ.ಸೆ
ಕಲಬುರಗಿ: 32 ಡಿ.ಸೆ – 19 ಡಿ.ಸೆ
ಬೆಳಗಾವಿ: 29 ಡಿ.ಸೆ – 18 ಡಿ.ಸೆ
ಕಾರವಾರ: 36 ಡಿ.ಸೆ – 24 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ