ಬೆಂಗಳೂರು: ಪೂರ್ವ ಅರಬ್ಬೀ ಸಮುದ್ರದ ಕರಾವಳಿ ಪ್ರದೇಶದಿಂದ ಮಾಲ್ಡಿವ್ಸ್ ದ್ವೀಪದವರೆಗೆ 1.5 ಮತ್ತು 1.8ಕಿ.ಮೀ ಟ್ರಪ್ ಎದ್ದಿದೆ. ಇದರ ಪ್ರಭಾವದಿಂದಾಗಿ ಇಂದು ರಾಜ್ಯಾದ್ಯಂತ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ (Rain news) ಸಾಧ್ಯತೆ ಇದೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Karnataka Weather Forecast) ನಿರೀಕ್ಷೆ ಇದೆ.
ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲೂ ಮಳೆಯು ಅಬ್ಬರಿಸಲಿದೆ.
ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ.
ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ ಮತ್ತು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಆರೆಂಜ್ ಅಲರ್ಟ್
ಇಂದು ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ