ಬೆಂಗಳೂರು: ರಾಜ್ಯಾದ್ಯಂತ ಮಂಗಳವಾರದಂದು ಶುಷ್ಕ ವಾತಾವರಣ (Dry Weather) ಇರಲಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡಿನ ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಒಣಹವೆ ಇರಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ, ತುಮಕೂರಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಧಾರವಾಡ, ಹಾವೇರಿ, ವಿಜಯನಗರ ಮತ್ತು ಬಾಗಲಕೋಟೆಯಲ್ಲಿ ಶುಷ್ಕ ವಾತಾವರಣ ಮೇಲುಗೈ ಸಾಧಿಸಲಿದೆ.
ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾತಾವರಣದಲ್ಲಿ ಆಗಾಗ ಬದಲಾವಣೆ ಇರುತ್ತದೆ. ಒಮ್ಮೊಮ್ಮೆ ಬಿಸಿಲಿನ ವಾತಾವರಣ ಇದ್ದರೆ, ಕೆಲವೊಮ್ಮೆ ಮೋಡ ಕವಿಯಲಿದೆ. ಕೆಲವೇ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಇನ್ನು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗರಿಷ್ಠ ಉಷ್ಣಾಂಶವು 31 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: Chapped Lips: ಈ ಚಳಿಗಾಲದಲ್ಲಿ ತುಟಿ ಬಿರಿಯುತ್ತಿದೆಯೇ? ಇಲ್ಲಿದೆ ಮದ್ದು!
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ -17 ಡಿ.ಸೆ
ಮಂಗಳೂರು: 34 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 16 ಡಿ.ಸೆ
ಗದಗ: 32 ಡಿ.ಸೆ – 16 ಡಿ.ಸೆ
ಹೊನ್ನಾವರ: 35 ಡಿ.ಸೆ- 19 ಡಿ.ಸೆ
ಕಲಬುರಗಿ: 33 ಡಿ.ಸೆ – 19 ಡಿ.ಸೆ
ಬೆಳಗಾವಿ: 31 ಡಿ.ಸೆ – 15 ಡಿ.ಸೆ
ಕಾರವಾರ: 35 ಡಿ.ಸೆ – 19 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ