ಬೆಂಗಳೂರು: ಹೊರಗೆ ಬಂದರೆ ನೆತ್ತಿ ಸುಡುವ ಸೂರ್ಯನ ತಾಪಕ್ಕೆ ಜನರು ಕೈಯಲ್ಲಿ ಛತ್ರಿ ಹಿಡಿದು ಓಡಾಡುವಂತಾಗಿದೆ. ರಾಜ್ಯಾದ್ಯಂತ ಮಂಗಳವಾರ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.
ಕರಾವಳಿಯ ಕೆಲವೆಡೆ ಗರಿಷ್ಠ ತಾಪಮಾನವು ಮಾಮೂಲಿಗಿಂತ ಎರಡು ಪಟ್ಟು ಹೆಚ್ಚಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಹಾಗೂ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದ ಒಂದೆರಡು ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಲ್ಲಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರು ಸುತ್ತಮುತ್ತ ತಾಪಮಾನವು 35ರ ಗಡಿ ದಾಟುತ್ತಿದ್ದು, ಜನರು ಕಂಗಲಾಗಿದ್ದಾರೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 21 ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 34 ಡಿ.ಸೆ – 22 ಡಿ.ಸೆ
ಮಂಗಳೂರು: 35 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 22 ಡಿ.ಸೆ
ಗದಗ: 37 ಡಿ.ಸೆ – 22 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 38 ಡಿ.ಸೆ – 27 ಡಿ.ಸೆ
ಬೆಳಗಾವಿ: 36 ಡಿ.ಸೆ – 20 ಡಿ.ಸೆ
ಕಾರವಾರ: 34 ಡಿ.ಸೆ – 22 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ