Site icon Vistara News

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka Weather Forecast

ಬೆಂಗಳೂರು: ಕರಾವಳಿಯಲ್ಲಿ ವರುಣಾರ್ಭಟ (Rain News) ಮುಂದುವರೆದಿದೆ. ಕಳೆದ ಎರಡು ಮೂರು ದಿನಗಳಿಂದ ಕರಾವಳಿಯಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುತ್ತಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿದ್ದು, ಭಾರೀ ಗಾಳಿ ಹಿನ್ನೆಲೆಯಲ್ಲಿ ದಡಕ್ಕೆ ಆಳೆತ್ತರದ ಅಲೆಗಳು ಅಪ್ಪಳಿಸುತ್ತಿದೆ. ರೆಡ್‌ ಅಲರ್ಟ್‌ ನೀಡಲಾಗಿದ್ದು, ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್ ಬಿದ್ದಿದೆ. ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಮುನ್ಸೂಚನೆ (Karnataka Weather Forecast) ನೀಡಿದೆ.

ಜೂನ್‌ 25ರವರೆಗೆ ಕರಾವಳಿ ಮತ್ತು ದಕ್ಷಿನ ಒಳನಾಡಿನಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳಾದ ಬೀದರ್‌, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ , ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ವಿಜಯನಗರದಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿ ಬೀಸಲಿದೆ.

ರಾಜ್ಯಾದ್ಯಂತ ಮುಂಗಾರು ದುರ್ಬಲವಾಗಿದ್ದರೂ, ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಪಣಂಬೂರು, ಭಾಲ್ಕಿ 5 ಸೆಂ.ಮೀ, ಮಂಗಳೂರು ವಿಮಾನ ನಿಲ್ದಾಣ , ಕೊಟ್ಟಿಗೆಹಾರ ತಲಾ 4 ಸೆಂ.ಮೀ ಮಳೆಯಾಗಿದೆ. ಉಡುಪಿ, ಸುಳ್ಯ, ಬಾದಾಮಿ, ದೇವರಹಿಪ್ಪರಗಿಯಲ್ಲಿ 3 ಸೆಂ.ಮೀ ಮಳೆಯಾಗಿದೆ. ಧರ್ಮಸ್ಥಳ, ಮಂಕಿ, ಪುತ್ತೂರು , ಅಂಕೋಲಾ, ರೋನ್, ಭಾಗಮಂಡಲ, ಆಗುಂಬೆಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಕಾರವಾರ, ಮೂಲ್ಕಿ, ಕುಂದಾಪುರ, ಬೆಳ್ತಂಗಡಿ, ಹೊನ್ನಾವರ, ಕಾರ್ಕಳ, ಉಪ್ಪಿನಂಗಡಿ, ನರಗುಂದ, ನಿಪ್ಪಾಣಿ, ಶಹಪುರ, ಕುಷ್ಟಗಿ, ಲಿಂಗನಮಕ್ಕಿ ಎಚ್‌ಎಂಎಸ್ , ಪೊನ್ನಂಪೇಟೆಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version