Karnataka Weather : ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು; ಉಳಿದೆಡೆ ಗುಡುಗು ಸಹಿತ ಮಳೆ - Vistara News

ಮಳೆ

Karnataka Weather : ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು; ಉಳಿದೆಡೆ ಗುಡುಗು ಸಹಿತ ಮಳೆ

Karnataka Weather Forecast : ಗಂಟೆಗಳ ಕಾಲ ಮಳೆ ಸುರಿದರೂ ವಾತಾವರಣ ಮಾತ್ರ ಕಾದ ಕೆಂಡವಾಗಿಯೇ ಇದೆ. ರಾಜ್ಯಾದ್ಯಂತ ಕೆಲವೆಡೆ ಮಳೆ ಸೂಚನೆ (Rain News) ಇದ್ದರೂ, ಮುಕ್ಕಾಲು ಭಾಗದಲ್ಲಿ ತಾಪಮಾನ ಏರಿಕೆ ಮುಂದುವರಿಯಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ಹಲವೆಡೆ ಗುಡುಗು ಸಹಿತ (Rain News) ಮಳೆಯಾಗಲಿದ್ದು, ಹವಾಮಾನ ಇಲಾಖೆ (Karnataka Weather Forecast) ಯೆಲ್ಲೋ ಅಲರ್ಟ್ (Yellow alert) ಘೋಷಿಸಿದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನೊಂದೆಡೆ ತುಮಕೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ರಾಯಚೂರು,ಕೊಪ್ಪಳ, ಕಲಬುರಗಿ ಹಾಗೂ ಹಾವೇರಿ, ಬೆಳಗಾವಿ, ಬೀದರ್, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗಲಿದೆ. ಹೀಗಾಗಿ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.

ಇನ್ನೂ ರಾಜಧಾನಿ ಬೆಂಗಳೂರಲ್ಲಿ ಮಳೆ ಇದ್ದರೂ ಬಿಸಿಲ ಧಗೆ ಕಡಿಮೆ ಆಗುವುದಿಲ್ಲ. ಹೀಗಾಗಿ ಬೆಂಗಳೂರು ನಗರವು ಸೇರಿ ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ.

ತಾಪಮಾನ ಮುನ್ಸೂಚನೆ

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ರಾತ್ರಿಯಂದು ವಾತಾವರಣ ಬೆಚ್ಚಗೆ ಇರಲಿದ್ದು, ಬಿಸಿಗಾಳಿ ಬೀಸಲಿದೆ. ಶಾಖ ತರಂಗ ಎಚ್ಚರಿಕೆಯನ್ನು ನೀಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಮಂಡ್ಯ, ಹಾಸನ ಮತ್ತು ಮೈಸೂರಿನಲ್ಲಿ ಹೀಟ್‌ ವೇವ್‌ ಇರಲಿದೆ.

ಇದನ್ನೂ ಓದಿ: Physical Abuse : ಮೊಬೈಲ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸೋದರ ಮಾವ

ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

ಪ್ರವಾಸಗಳನ್ನು ಇಷ್ಟಪಡುವ ಮಂದಿಯಲ್ಲಿ ಎರಡು ಬಗೆಯ ಮಂದಿಯಿರುತ್ತಾರೆ. ಒಂದು ಬಗೆಯವರಿಗೆ ಪ್ರವಾಸವನ್ನು ಎಂಜಾಯ್‌ ಮಾಡಿ, ತಮ್ಮ ಪ್ರೀತಿಪಾತ್ರರ ಜೊತೆಗೆ ಸಂತೋಷವಾಗಿ ಕಾಲ ಕಳೆದು, ಐಷಾರಾಮಿ ಹೊಟೇಲುಗಳಲ್ಲಿ ಇದ್ದು, ರಿಲ್ಯಾಕ್ಸ್‌ ಆಗಿ ಸಮಯ ಕಳೆದುಕೊಂಡು ಮಜಾ ಮಾಡಿಕೊಂಡು ಬರುವವರಾದರೆ, ಇನ್ನೊಂದು ವರ್ಗ, ಜನಜಂಗುಳಿಯಿಂದ ದೂರವಿದ್ದು, ಶಾಂತವಾದ ನದೀತೀರದಲ್ಲೋ, ಬೆಟ್ಟದ ತಪ್ಪಲಲ್ಲೋ, ಪರ್ವತದ ಮೇಲಿನ ಒಂದು ಹಳ್ಳಿಯಲ್ಲೋ, ಒಂದಿಷ್ಟು ಸಮಾನ ಮನಸ್ಕರೊಂದಿಗೆ ಚಾರಣ ಮಾಡಿಯೋ ಸಮಯ ಕಳೆಯಲು ಇಷ್ಟ ಪಡುವ ಮಂದಿ. ಈ ಎರಡನೇ ವರ್ಗದ ಪ್ರವಾಸ ಪ್ರಿಯರಿಗೆ ಶಾಂತವಾಗಿ ಸಮಯ ಕಳೆಯಲು ಭಾರತದಲ್ಲಿ ಬೇಕಾದಷ್ಟು ಸ್ಥಳಗಳಿವೆ. ಹಿಮಾಲಯದ ತಪ್ಪಲಿನ ಹಳ್ಳಿಗಳು ತಮ್ಮ ಪ್ರಕೃತಿ ಸೌಂದರ್ಯದಿಂದಲೂ, ಶಾಂತವಾದ ವಾತಾವರಣದಿಂದಲೂ ಇಂತಹ ಪ್ರವಾಸಿಗರನ್ನು ತಮ್ಮತ್ತ ಕೈಬೀಸಿ ಕರೆಯುತ್ತವೆ. ಬನ್ನಿ, ಯಾವೆಲ್ಲ ಮುದ್ದಾದ ಹಳ್ಳಿಗಳಿಗೆ ನೀವು ಈ ಬೇಸಿಗೆಯ ಬಿರುಬಿಸಿಲಿನಲ್ಲೂ ಪ್ರವಾಸ ಮಾಡಿ ತಂಪಾಗಿ, ಹಿತವಾಗಿ ಸಮಯ ಕಳೆಯಬಹುದು (Summer Tour) ಎಂಬುದನ್ನು ನೋಡೋಣ.

Sikkim

ಝುಲುಕ್, ಸಿಕ್ಕಿಂ

ಪೂರ್ವ ಸಿಕ್ಕಿಂನ ಝುಲುಕ್‌ ಎಂಬ ಹಳ್ಳಿ ಭಾರತದ ಅತ್ಯಂತ ಪುರಾತನವಾದ ಸಿಲ್ಕ್‌ ರೂಟ್‌ ಹಾದಿಯಲ್ಲಿ ಸಿಗುವ ಹಳ್ಳಿಗಳಲ್ಲಿ ಒಂದು. ಮೇ ತಿಂಗಳಲ್ಲಿ ಆಗಸವೂ ತಿಳಿಯಾಗಿದ್ದು, ಹಿತವಾದ ಚಳಿಯೂ ಆವರಿಸಿರುವ, ಪ್ರವಾಸಕ್ಕೆ ಅತ್ಯಂತ ಯೋಗ್ಯವಾದ ಸಮಯ. ಸಾಲು ಸಾಲು ಹಿಮಬೆಟ್ಟಗಳಿಂದ ಆವೃತವಾದ ಹಿಮಾಲಯದ ಮನಮೋಹಕ ದೃಶ್ಯಗಳನ್ನು ಈ ಹಳ್ಳಿಯಲ್ಲಿದ್ದುಕೊಂಡು ಆಸ್ವಾದಿಸುತ್ತಾ ಸಮಯ ಕಳೆಯಬಹುದು.

Chitkool, Himachal Pradesh

ಚಿತ್ಕೂಲ್‌, ಹಿಮಾಚಲ ಪ್ರದೇಶ

ಭಾರತ ಚೀನಾ ಗಡಿಯಲ್ಲಿರುವ ಜನರ ವಸತಿಯಿರುವ ಕೊನೆಯ ಹಳ್ಳಿ ಚಿತ್ಕೂಲ್‌. ಕಿನೌರ್‌ ಜಿಲ್ಲೆಯ ಅತ್ಯಂತ ಸುಂದರವಾದ ಹಿಮಾಲಯದ ದೃಶ್ಯಗಳನ್ನು ಕಣ್ತುಂಬಿಕೊಳ್ಳಬಹುದಾದ ಜಾಗವಿದು. ಹಿಮಾಚಲ ಪ್ರದೇಶದ ಸಾಂಪ್ರದಾಯಿಕ ಆಚರಣೆಗಳು, ಅಲ್ಲಿನ ಜನಜೀವನ, ಆಹಾರ ಇತ್ಯಾದಿಗಳೆಲ್ಲವುಗಳ ಪರಿಚಯ ಮಾಡಿಕೊಂಡು, ಅದ್ಭುತ ದೃಶ್ಯಗಳನ್ನೂ ಕಂಡು ಆನಂದಿಸಬಹುದು.

Naggar, Himachal Pradesh

ನಗ್ಗರ್‌, ಹಿಮಾಚಲ ಪ್ರದೇಶ

ಹಳೆಯ ದೇವಸ್ಥಾನಗಳು, ಅರಮನೆಗಳು, ಕಟ್ಟಡಗಳು ಇತ್ಯಾದಿಗಳಿರುವ ನಗ್ಗರ್‌ ಎಂಬ ಹಳ್ಳಿ ಮನಾಲಿಯಂತಹ ಕಿಕ್ಕಿರಿದು ತುಂಬಿರುವ ಪ್ರವಾಸಿಗಳಿಂದ ಮುಕ್ತವಾಗಿದೆ. ಜೊತೆಗೆ ಇಲ್ಲಿಂದ ಕಾಣುವ ಹಿಮಾಲಯದ ಪರ್ವತಶ್ರೇಣಿಗಳ ಸುಂದರ ದೃಶ್ಯ ನೆಮ್ಮದಿಯನ್ನು ಅರಸಿ ಬರುವ ಮಂದಿಗೆ ಹೇಳಿ ಮಾಡಿಸಿದ್ದು.

Pelling, Sikkim

ಪೆಲ್ಲಿಂಗ್‌, ಸಿಕ್ಕಿಂ

ಕಾಂಚನಜುಂಗಾದ ಅದ್ಭುತ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪೆಲ್ಲಿಂಗ್‌ ಎಂಬ ಸಿಕ್ಕಿಂನ ಪುಟ್ಟ ಊರು ಒಳ್ಳೆಯ ತಾಣ. ಶಾಂತಿಯುತವಾದ ಜಾಗವನ್ನರಸಿ ಬರುವ ಮಂದಿಗೆ ಪೆಲ್ಲಿಂಗ್‌ ಬಹಳ ಇಷ್ಟವಾಗಬಹುದು.

Malana, Himachal Pradesh

ಮಲಾನಾ, ಹಿಮಾಚಲ ಪ್ರದೇಶ

ಮಲಾನಾ ಎಂಬ ಪುಟ್ಟ ಹಳ್ಳಿ ಹಿಮಾಚಲ ಪ್ರದೇಶದ ಕಸೋಲ್‌ ಸಮೀಪದಲ್ಲಿರುವ ಹಳ್ಳಿ. ಇದು ತನ್ನ ವಿಶಿಷ್ಟ ಸಂಸೃತಿ ಹಾಗೂ ಆಚರಣೆಯ ವಿಶೇಷತೆಗಳನ್ನು ಹೊಂದಿರುವ ಸುಂದರ ತಾಣ. ಪಾರ್ವತಿ ಕಣಿವೆಯ ಮನಮೋಹಕ ಹಿಮಾಲಯದ ಸೌಂದರ್ಯವನ್ನು ಇದು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ.

Zero, Arunachal Pradesh

ಝೀರೋ, ಅರುಣಾಚಲ ಪ್ರದೇಶ

ಅತ್ಯದ್ಭುತ ಪ್ರಕೃತಿ ಸೌಂದರ್ಯ, ಭತ್ತದ ಗದ್ದೆಗಳು, ಹಳೆಯ ಮರದ ಮನೆಗಳು ಇತ್ಯಾದಿಗಳಿಂದ ಮನಮೋಹಕವಾಗಿ ಕಾಣುವ ಝೀರೋ ಎಂಬ ಅರುಣಾಚಲ ಪ್ರದೇಶದ ಹಳ್ಳಿ ಪರಿಸರ ಪ್ರಿಯರು ಖಂಡಿತ ಇಷ್ಟಪಡಬಹುದಾದ ಹಾಗಿದೆ.

Mawlynnong, Meghalaya

ಮಾವ್ಲಿನಾಂಗ್‌, ಮೇಘಾಲಯ

ಪೂರ್ವ ಖಾಸಿ ಬೆಟ್ಟ ಪ್ರದೇಶಗಳಲ್ಲಿರುವ ಮೇಘಾಲಯದ ಈ ಪುಟ್ಟ ಹಳ್ಳಿಯ ಅಪರೂಪದ ಸಂಸ್ಕೃತಿ, ಶಿಸ್ತುಬದ್ಧ ಜೀವನ, ಸ್ವಚ್ಛತೆ ಎಲ್ಲವನ್ನೂ ನೋಡಲೇಬೇಕು. ನಗರದ ಮಂದಿ ಖಂಡಿತವಾಗಿಯೂ ಈ ಹಳ್ಳಿಯ ಜನರಿಂದ ಕಲಿಯಬೇಕಾದ್ದು ಬಹಳಷ್ಟಿದೆ. ಬೇರಿನಿಂದ ಮಾಡಲ್ಪಟ್ಟ ಸೇತುವೆಗಳು ಇಲ್ಲಿನ ವಿಶೇಷತೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವಾರಾಂತ್ಯಕ್ಕೆ ಗುಡುಗು ಸಹಿತ ಭಾರಿ ಮಳೆ ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ಮೇ 25ರಂದು ಗುಡುಗು ಸಹಿತ ಭಾರಿ (Rain News) ಮಳೆಯಾಗಲಿದ್ದು, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ (Rain News) ಇದೆ. ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಹಾವೇರಿ, ವಿಜಯನಗರ, ಬಳ್ಳಾರಿ, ಕೊಪ್ಪಳ, ಗದಗ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮಲೆನಾಡಿನ ಹಾಸನ ಮತ್ತು ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗಲಿದೆ.

ಇದನ್ನೂ ಓದಿ: Excise revenue: ಇದು ಎಣ್ಣೆ ಮಹಿಮೆ! ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಬೆಂಗಳೂರಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ಸಾಂಕ್ರಾಮಿಕ ರೋಗಗಳ ಜಾಗೃತಿ ಮೂಡಿಸಲು ಯಲ್ಲಾಪುರ ತಹಸೀಲ್ದಾರ್ ಸೂಚನೆ

Uttara Kannada News: ಮಳೆಗಾಲ ಪ್ರಾರಂಭವಾಗುತ್ತಿದ್ದು, ಕಲುಷಿತ ನೀರಿನಿಂದ ಹರಡುವ ಸಾಂಕ್ರಾಮಿಕ ರೋಗಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಯಲ್ಲಾಪುರ ತಹಸೀಲ್ದಾರ್ ತನುಜಾ ಟಿ. ಸವದತ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

VISTARANEWS.COM


on

Yallapur Tehsildar Tanuja T savadatti instructed to create awareness about infectious diseases
Koo

ಯಲ್ಲಾಪುರ: ಮಳೆಗಾಲ ಪ್ರಾರಂಭವಾಗುತ್ತಿದ್ದು, ಕಲುಷಿತ ನೀರಿನಿಂದ ಹರಡುವ ಸಾಂಕ್ರಾಮಿಕ ರೋಗಗಳ (infectious diseases) ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಹಸೀಲ್ದಾರ್ ತನುಜಾ ಟಿ ಸವದತ್ತಿ (Uttara Kannada News) ಹೇಳಿದರು.

ಶುಕ್ರವಾರ ಮಿನಿ ವಿಧಾನಸೌಧದಲ್ಲಿ ಸಾಂಕ್ರಾಮಿಕ ಕಾಯಿಲೆಗಳ ನಿಯಂತ್ರಣ ಕುರಿತು ಇಲಾಖೆಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶುದ್ಧ ಕುಡಿಯುವ ನೀರು ಮತ್ತು ನೈರ್ಮಲ್ಯ ನಿರ್ವಹಣೆ ತುರ್ತು ಅವಶ್ಯಕತೆಯಾಗಿದೆ. ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗಳನ್ನು ಬ್ಲೀಚಿಂಗ್ ಪೌಂಡರ್ ಬಳಸಿ ಸ್ವಚ್ಛಗೊಳಿಸುವುದು, ಕುಡಿಯುವ ನೀರು ಕಲುಷಿತವಾಗದಂತೆ ಪೂರೈಕೆ ವ್ಯವಸ್ಥೆಯಲ್ಲಿ ಸೋರುವಿಕೆಗಳನ್ನು ಗುರುತಿಸಿ ತಕ್ಷಣ ದುರಸ್ತಿಗೊಳಿಸಬೇಕು. ಡೆಂಗ್ಯೂ, ಚಿಕುನ್‌ಗುನ್ಯ, ಮಲೇರಿಯಾ, ಆನೆಕಾಲುರೋಗ, ಮೆದುಳು ಜ್ವರಗಳ ಬಗ್ಗೆ ಕ್ಷೇತ್ರ ಮಟ್ಟದಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಇದನ್ನೂ ಓದಿ: Indian 2: ಜು.12ಕ್ಕೆ ಕಮಲ್ ಹಾಸನ್ ಅಭಿನಯದ ‘ಇಂಡಿಯನ್ 2’ ಚಿತ್ರ ರಿಲೀಸ್‌

ತಾಲೂಕು ಆರೋಗ್ಯಾಧಿಕಾರಿ ಡಾ. ನರೇಂದ್ರ ಪವಾರ ಮಾತನಾಡಿ, ಕಲುಷಿತ ನೀರಿನಿಂದ ವಾಂತಿ, ಭೇದಿ, ಅತಿಸಾರ ಭೇದಿ, ಕಾಲರಾ, ಕರುಳು ಬೇನೆ, ಕಾಮಾಲೆ ರೋಗಗಳು ಕಾಣಿಸಿಕೊಳ್ಳುವ ಸಂಭವ ಇರುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಕಾಯಿಸಿ ಆರಿಸಿದ ನೀರನ್ನೇ ಕುಡಿಯುವುದು ಸೂಕ್ತ. ಇಲಾಖಾ ಸಿಬ್ಬಂದಿಗಳು ಮನೆ ಭೇಟಿ ನೀಡಿದಾಗ ಜ್ವರ ಮತ್ತು ಇತರೆ ಕಾಯಿಲೆಗಳಿದ್ದರೆ ಸರಿಯಾಗಿ ಮಾಹಿತಿ ನೀಡಬೇಕು ಎಂದ ಅವರು, ಓ.ಆರ್.ಎಸ್. ತಯಾರಿಸಿ ಬಳಸುವ ವಿಧಾನ, ಸೊಳ್ಳೆ ನಿಯಂತ್ರಣ, ವೈಯಕ್ತಿಕ ಸ್ವಚ್ಛತೆ, ಮನೆಯ ಸುತ್ತಮುತ್ತ ಶುಚಿತ್ವ ಕಾಪಾಡಿಕೊಳ್ಳುವ ಕುರಿತು ಸಾರ್ವಜನಿಕರು ಜಾಗೃತಿ ವಹಿಸಬೇಕು ಎಂದರು.

ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಎಲ್ಲ ಇಲಾಖೆಗಳ ಸಹಕಾರ ಮತ್ತು ಸಮನ್ವಯತೆ ಬಹಳ ಮುಖ್ಯವಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕ್ಷಿಪ್ರ ಪ್ರತಿಕ್ರಿಯಾ ತಂಡ ರಚಿಸಲಾಗಿದ್ದು ಯಾವುದೇ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಯಿಲೆಗಳು ಕಂಡು ಬಂದರೆ ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ನಡೆದ ಲಸಿಕಾ ಕಾರ್ಯಪಡೆಯ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಆರ್‌.ಸಿ.ಎಚ್.‌ ಅಧಿಕಾರಿ ಡಾ. ನಟರಾಜ್‌ ಕೆ., ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಲಸಿಕೆಯಿಂದ ತಡೆಗಟ್ಟಬಹುದಾದ ರೋಗಗಳಲ್ಲಿ ದಡಾರ ಕೂಡ ಒಂದಾಗಿದ್ದು, ದಡಾರ ನಿರ್ಮೂಲನೆಗೆ ಗುರಿ ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Washing Machine Cleaning Tips: ವಾಷಿಂಗ್ ಮೆಷಿನ್ ಹೆಚ್ಚು ಬಾಳಿಕೆ ಬರಬೇಕೆ? ಈ ರೀತಿ ಸ್ವಚ್ಛಗೊಳಿಸಿ

ಸಭೆಯಲ್ಲಿ ಬಿಪಿಎಂ ಎಸ್‌.ಎಸ್‌. ಪಾಟೀಲ್‌ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ ತಾಳಿಕೋಟೆ ಸ್ವಾಗತಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್‌.ಟಿ. ಭಟ್ಟ ವಂದಿಸಿದರು.

Continue Reading

ಮಳೆ

Karnataka Weather : ಕೈಯಲ್ಲಿ ಛತ್ರಿ ಹಿಡಿದು ಬಸ್ ಡ್ರೈವಿಂಗ್; ಮಳೆಗೆ ಕುಸಿದು ಬಿದ್ದ ಮಾಳಿಗೆ ಮನೆ

Karnataka Weather Forecast : ಮಳೆ ಅವಾಂತರವು ಮುಂದುವರಿದಿದೆ. ನಿರಂತರ ಮಳೆಗೆ (Rain News) ಕೆಎಸ್‌ಆರ್‌ಟಿಸಿ ಬಸ್ಸಿನೊಳಗೆ ನೀರು ಸೋರುತ್ತಿರುವ ಕಾರಣಕ್ಕೆ ಚಾಲಕನೊಬ್ಬ ಕೈಯಲ್ಲಿ ಛತ್ರಿ ಹಿಡಿದು ಚಲಾಯಿಸಿದ್ದಾರೆ. ಇತ್ತ ವ್ಯಾಪಕ ಮಳೆಗೆ ಮಾಳಿಗೆ ಮನೆ ಕುಸಿದಿದ್ದು, ಮನೆಯಲ್ಲಿದ್ದ ಮಕ್ಕಳಿಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

VISTARANEWS.COM


on

By

Karnataka Weather Forecast
Koo

ಧಾರವಾಡ/ದಾವಣಗೆರೆ: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಮಳೆ (Rain News) ಬಂದರು ಕಷ್ಟ ಬಾರದೆ ಇದ್ದರೂ ನಷ್ಟ ಎನ್ನುವಂತಾಗಿದೆ. ಮಳೆಯಿಂದಾಗಿ (karnataka Weather Forecast) ಅವಾಂತರವೇ ಸೃಷ್ಟಿಯಾಗಿದ್ದು, ಸಾವು-ನೋವು ಸಂಭವಿಸಿದೆ. ಧಾರವಾಡದಲ್ಲಿ ಭಾರಿ ಮಳೆಗೆ ಸಾರಿಗೆ ಬಸ್‌ನಲ್ಲಿ ನೀರು ಸೋರುತ್ತಿದ್ದ ಕಾರಣಕ್ಕೆ, ಚಾಲಕರೊಬ್ಬರು ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಬಸ್ ಡ್ರೈವಿಂಗ್ ಮಾಡಿದ್ದಾರೆ.

ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಗೆ ಗ್ರಾಮಕ್ಕೆ ಸಂಚರಿಸುವ ಸಾರಿಗೆ ಬಸ್‌ ಇದಾಗಿದ್ದು, ಭಾರಿ ಮಳೆಗೆ ಎಲ್ಲ ಕಡೆಯು ನೀರು ಸೋರಿದೆ. ಮಳೆಯಿಂದ ರಕ್ಷಣೆ ಪಡೆಯುವ ಸಲುವಾಗಿ ಚಾಲಕ ಛತ್ರಿ ಹಿಡಿದುಕೊಂಡು ಬಸ್‌ ಅನ್ನು ಚಾಲನೆ ಮಾಡಿದ್ದಾರೆ. ಈ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ಚಾಲಕ ಛತ್ರಿ ಹಿಡಿದ ದೃಶ್ಯವನ್ನು ನಿರ್ವಾಹಕಿ ವಿಡಿಯೊ ಮಾಡಿದ್ದಾರೆ ಎನ್ನಲಾಗಿದೆ.

karnataka Weather Forecast

ದಾವಣಗೆರೆಯಲ್ಲಿ ಕುಸಿದು ಬಿದ್ದ ಮಾಳಿಗೆ ಮನೆ

ಭಾರಿ ಮಳೆಗೆ ಮಾಳಿಗೆ ಮನೆಯೊಂದು ಕುಸಿದು ಬಿದ್ದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ ಸುರಿದ ಮಳೆಯಿಂದ ಮಾಳಿಗೆ ಮನೆ ಕುಸಿದಿದೆ. ಕುಟುಂಬಸ್ಥರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಚ್ಚವ್ವನಹಳ್ಳಿ ಗ್ರಾಮದ ಸನಾವುಲ್ಲಾ ಎಂಬುವರಿಗೆ ಸೇರಿದ ಮಾಳಿಗೆ ಮನೆಯಲ್ಲಿ ಮಕ್ಕಳು ಪಾರಾಗಿದ್ದು, ಸನಾವುಲ್ಲಾ ಅವರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ಚಿಕಿತ್ಸೆಗಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: Karnataka Rain : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ; ಗಾಳಿ-ಮಳೆಗೆ ಮರ ಮುರಿದು ಬಿದ್ದು ಜಾನುವಾರು ಸಾವು

ಹಾಸನದಲ್ಲಿ ಮಳೆ ಗಾಳಿಗೆ ರಸ್ತೆಗೆ ಬಿದ್ದ ಮರ

ಹಾಸನ ನಗರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದೆ. ಸತತ ಒಂದು ಗಂಟೆಗಳ ಕಾಲ ಸುರಿದ ಗಾಳಿ ಮಳೆಗೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇದರಿಂದಾಗಿ ಒಂದು ಕಾರು ಜಖಂ ಆಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಹಾಸನ ನಗರದ ಹೌಸಿಂಗ್ ಬೋರ್ಡ್‌ ಬಡಾವಣೆಯಲ್ಲಿ ಈ ಘಟೆನೆ ನಡೆದಿದೆ. ಇತ್ತ ನಗರದ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿತ್ತು. ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಯಿಂದಾಗಿ ಹಾಸನ ನಗರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ಚಿಕ್ಕಬಳ್ಳಾಪುರದಲ್ಲಿ ಧರೆಗುರುಳಿದ 50 ವರ್ಷದ ಅರಳಿ ಮರ

ಬಿರುಗಾಳಿ ಸಹಿತ‌ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗುರುಳಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅರಳಿಕಟ್ಟೆಯಲ್ಲಿದ್ದ 50 ವರ್ಷಗಳಿಗೂ ಹಳೆಯ ಅರಳಿ ಮರ ಉರುಳಿ ಬಿದ್ದಿದೆ. ಅದೃಷ್ಟವಶಾತ್‌ ಆ ಸಮಯದಲ್ಲಿ ಯಾರು ಇಲ್ಲದ ಕಾರಣಕ್ಕೆ ಅಪಾಯವೊಂದು ತಪ್ಪಿದೆ. ಇಶಾ ಫೌಂಡೇಶನ್ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಬಿರುಗಾಳಿಗೆ ಜಾಹೀರಾತು ಫಲಕಗಳು ನೆಲಕ್ಕೆ ಬಿದ್ದಿವೆ. ಚಿಕನ್ ಹಾಗೂ ಚಾಟ್ಸ್ ಅಂಗಡಿ ಮೇಲೆ ಫಲಕ ಬಿದ್ದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ; ಗಾಳಿ-ಮಳೆಗೆ ಮರ ಮುರಿದು ಬಿದ್ದು ಜಾನುವಾರು ಸಾವು

Karnataka Rain : ಉಡುಪಿಯಲ್ಲಿ ಸಿಡಿಲಾಘಾತಕ್ಕೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಹಲವೆಡೆ ಭಾರಿ ಮಳೆ-ಗಾಳಿಯಿಂದಾಗಿ ಮರಗಳು ಧರೆಗುರುಳುತ್ತಿವೆ. ಪರಿಣಾಮ ಅನಾಹುತಗಳು ಸಂಭವಿಸುತ್ತಿವೆ. ಮರದ ಬೃಹತ್‌ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಜಾನುವಾರವೊಂದು ಮೃತಪಟ್ಟಿದೆ. ಕೆಲವೆಡೆ ಮನೆಯ ಶೆಡ್‌ಗಳು ಹಾರಿ ಹೋಗಿವೆ.

VISTARANEWS.COM


on

By

Karnataka Rain
Koo

ಉಡುಪಿ/ಬೆಳಗಾವಿ: ರಾಜ್ಯಾದ್ಯಂತ ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದ್ದು, ಸಾವು- ನೋವು (Karnataka Rain) ಸಂಭವಿಸುತ್ತಿದೆ. ಉಡುಪಿಯಲ್ಲಿ ಸಿಡಿಲಾಘಾತಕ್ಕೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಉಡುಪಿಯ ಶಿರ್ವ ಪಂಚಾಯತ್ ವ್ಯಾಪ್ತಿಯ ಮಾಣಿಬೆಟ್ಟು ಬಳಿ ಘಟನೆ ನಡೆದಿದೆ. ಶಿರ್ವ ಮಾಣೆಬೆಟ್ಟು ನಿವಾಸಿ ರಕ್ಷಿತ್ ಪೂಜಾರಿ ಮೃತ ದುರ್ದೈವಿ.

ರಕ್ಷಿತ್‌ ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿಯಾಗಿದ್ದ. ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದಾಗ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ರಕ್ಷಿತ್‌ನನ್ನು ಕೂಡಲೇ ಕುಟುಂಬಸ್ಥರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಗೆ ಮೃತಪಟ್ಟಿದ್ದಾನೆ.

ಬೆಳಗಾವಿಯಲ್ಲಿ ಮರದಡಿ ನಿಂತಿದ್ದ ಆಕಳು ಸಾವು

ಬೆಳಗಾವಿಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಗಾಳಿಯೊಂದಿಗೆ ಭಾರಿ‌ ಮಳೆಯಾಗಿದೆ. ಮಳೆಗೆ ಬೃಹತ್ ಗಾತ್ರದ ಮರ ಧರೆಗುರುಳಿದೆ. ಗುರುವಾರ ಸಂಜೆ ಸುರಿದ ಮಳೆಯಿಂದ ಮನೆ ಮುಂದಿದ್ದ ಮರ ಬಿದ್ದಿದೆ. ಮರದ ಕೆಳಗೆ ಕಟ್ಟಿದ್ದ ಆಕಳು ಮೇಲೆ ಬೃಹತ್‌ ಗಾತ್ರದ ಕೊಂಬೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದೆ. ರೈತ ಶಂಕರ್ ರೊಡ್ಡಣ್ಣವರ್ ಎಂಬುವವರಿಗೆ ಸೇರಿದ ಆಕಳು ಮೃತಪಟ್ಟಿದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಳೆಗೆ ಮನೆ ಬಿದ್ದು ಬೀದಿಗೆ ಬಂದ ಕುಟುಂಬ

ಕಳೆದ ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಎಲ್ಲವನ್ನೂ ಕಳೆದುಕೊಂಡು ಕುಟುಂಬವೊಂದು ಬೀದಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ಭಾರಿ ಮಳೆಗೆ ಲಕ್ಷ್ಮೀ ಮಾದರ್ ಎಂಬುವವರ ಮನೆಯ ಚಾವಣಿ ಹಾರಿ ಹೋಗಿದೆ. ಲಕ್ಷ್ಮಿ ಅವರ ಕೈ ಮೇಲೂ ಚಾವಣಿ ಬಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಎಲ್ಲ ಸಾಮಾಗ್ರಿಗಳಿಗೂ ಹಾನಿಯಾಗಿವೆ. ಸರ್ಕಾರದಿಂದ ಸೂಕ್ತ ಪರಿಹಾರಕ್ಕೆ ಲಕ್ಷ್ಮೀ ಮನವಿ ಮಾಡಿದ್ದಾರೆ. ಇನ್ನೂ ಭಾರಿ ಬಿರುಗಾಳಿಗೆ 5ಕ್ಕೂ ಹೆಚ್ಚು ಶೆಡ್‌ಗಳ ಚಾವಣಿ, 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಮನೆಗಳಿಗೆ ಹಾನಿ ಹಿನ್ನೆಲೆ ಇಬ್ಬರಿಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಾಗಲಕೋಟೆಯಲ್ಲಿ ನೆಲಕ್ಕುರುಳಿದ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌

ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಬಾಗಲಕೋಟೆಯ ತುಳಸಿಗೇರಿ ಗ್ರಾಮದಲ್ಲಿ ಬಿರುಗಾಳಿಗೆ ಮರ ಮುರಿದು ಬಿದ್ದು, ಚಾವಣಿಗೆ ಹಾರಿಹೋಗಿದೆ. ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ನೆಲಕ್ಕುರಳಿದೆ. ನೋಡ ನೋಡುತ್ತಿದ್ದಂತೆ ಶೆಡ್‌ನ ಚಾವಣಿ ಶಿಟ್ ಗಾಳಿಯಲ್ಲಿ ಹಾರಾಡಿದ್ದವು. ಕಾಯಿ ಅಂಗಡಿಗಳ ಮೇಲೆ ಮರದ ಕೊಂಬೆ ಮುರಿದು ಬಿದ್ದ ಹಾನಿಯಾಗಿತ್ತು.

ಇದನ್ನೂ ಓದಿ: Karnataka Weather : ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!‌

ಕುಸಿದು ಬಿದ್ದ ಕಳವಾಡಿ ಈಶ್ವರ ಮಾರಿಕಾಂಬಾ ದೇವಳದ ಅನ್ನಛತ್ರ

ಭಾರಿ ಗಾಳಿ ಮಳೆಗೆ ದೇವಳದ ಅನ್ನಛತ್ರ ಕುಸಿದು ಭಾರಿ ಅನಾಹುತ ತಪ್ಪಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಳವಾಡಿ ಈಶ್ವರ ಮಾರಿಕಾಂಬಾ ದೇವಳದ ಅನ್ನಛತ್ರದಲ್ಲಿ ಘಟನೆ ನಡೆದಿದೆ. ಕೊಲ್ಲೂರು ರಸ್ತೆಯಲ್ಲಿ ಮರ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ವಿದ್ಯುತ್ ತಂತಿಯ ಮೇಲೆ ಮರ ಬಿದ್ದು, ತಡರಾತ್ರಿಯವರಗೂ ಹಲವೆಡೆ ವಿದ್ಯುತ್ ವ್ಯತ್ಯಯವಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದರು.

ಚಿಕ್ಕಮಗಳೂರಲ್ಲಿ ಮರ ಬಿದ್ದು ಐವರು ಕೂದಲೆಳೆ ಅಂತರದಲ್ಲಿ ಪಾರು

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಬಿರುಗಾಳಿ ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಇದೇ ವೇಳೆ ಮನೆಯಲ್ಲಿದ್ದ ಐವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಬಾಳೆಹೊಳೆ ಕಗ್ಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮಲಗಿದ್ದಾಗ ಮಂಚದ ಮೇಲೆಯೇ ಬೃಹತ್ ಗಾತ್ರದ ಕೊಂಬೆ ಬಿದ್ದಿದೆ. ಮನೆಯಲ್ಲಿದ್ದ ಕುಟುಂಬಸ್ಥರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಮನೆಯೊಳಗೆ ಸಿಲುಕಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮನೆ ಸಂಪೂರ್ಣ ಜಖಂಗೊಂಡಿದ್ದು, ಪಿಠೋಪಕರಣಗಳಿಗೆ ಹಾನಿಯಾಗಿದೆ. ಮನೆಯಲ್ಲಿ ಸಂಗ್ರಹಿಸಿದ್ದ ಆಹಾರ ಪದಾರ್ಥಗಳು ಮಣ್ಣು ಪಾಲಾಗಿದೆ. ಬೆಳಗಿನ ಜಾವ ನಾಲ್ಕು ಗಂಟೆಗೆ ಈ ಅವಘಡ ಸಂಭವಿಸಿದೆ. ಬೃಹತ್ ಗಾತ್ರದ ಮರ ಬಿದ್ದರೂ ಐವರು ಉಳಿದಿದ್ದೆ ಪವಾಡ ಎಂದಿದ್ದಾರೆ.

ಮಳೆ ಅನಾಹುತಕ್ಕೆ ಶುಂಠಿ ಬೆಳೆ ನಾಶ

ಮೈಸೂರಿನಲ್ಲಿ ಮಳೆ ಅನಾಹುತ ಮುಂದುವರಿದಿದೆ. ಸರಗೂರು ತಾಲೂಕಿನ ಬಾಡಿಗೆ ಗ್ರಾಮದಲ್ಲಿ ರೈತ ಜವರಯ್ಯ ಹಾಗೂ ಪುಟ್ಟತಾಯಮ್ಮ ಅವರಿಗೆ ಸೇರಿದ ಶುಂಠಿ ಬೆಳೆ ನಾಶವಾಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಜಮೀನಿನಲ್ಲಿ ಮಳೆ ನೀರು ನಿಂತಿದ್ದರಿಂದ ಪುಟ್ಟತಾಯಮ್ಮ ಕಣ್ಣೀರಿಟ್ಟು, ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ರಾಯಚೂರಲ್ಲಿ ಸುರಿದ ಒಂದೇ ಮಳೆಗೆ ಜಮೀನು ಜಲಾವೃತ

ರಾಯಚೂರು ತಾಲೂಕಿನ ಕೆರೆಬೂದೂರು ಗ್ರಾಮದ ಬಳಿ ಒಂದೇ ಮಳೆಗೆ ಜಮೀನು ಜಲಾವೃತಗೊಂಡಿದೆ. ಮಳೆಯಿಂದಾಗಿ ನೂರಾರು ಎಕರೆ ಜಮೀನು ಜಲಾವೃತಗೊಂಡಿದ್ದರಿಂದ ಬಿತ್ತನೆಗೆ ತಯಾರಿ ನಡೆಸಿದ್ದ ರೈತರಿಗೆ ಭಾರೀ‌ ನಿರಾಸೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Egg Benefits
ಆರೋಗ್ಯ12 mins ago

Egg Benefits: ನೀವು ಮೊಟ್ಟೆ ಪ್ರಿಯರೆ? ಹಾಗಾದರೆ ಮೊಟ್ಟೆ ತಿನ್ನಬಹುದು ಎಂಬುದೂ ಅರಿವಿರಲಿ!

karnataka Weather Forecast
ಮಳೆ12 mins ago

Karnataka Weather : ವಾರಾಂತ್ಯಕ್ಕೆ ಗುಡುಗು ಸಹಿತ ಭಾರಿ ಮಳೆ ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

World Thyroid Day
ಆರೋಗ್ಯ1 hour ago

World Thyroid Day: ಇಂದು ವಿಶ್ವ ಥೈರಾಯ್ಡ್‌ ದಿನ; ‘ಗಂಟಲ ಚಿಟ್ಟೆ’ಯ ಬಗ್ಗೆ ಈ ಸಂಗತಿ ನಿಮಗೆ ಗೊತ್ತೆ?

Dina bhavishya
ಭವಿಷ್ಯ2 hours ago

Dina Bhavishya : ಕುಟುಂಬದ ಆಪ್ತರಿಂದ ಈ ರಾಶಿಯವರಿಗೆ ಸಿಗಲಿದೆ ಗುಡ್‌ ನ್ಯೂಸ್‌

Narendra Modi
ದೇಶ7 hours ago

Narendra Modi: ನನ್ನನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ; ಮಮತಾ ಬ್ಯಾನರ್ಜಿಗೆ ಮೋದಿ ಚಾಟಿ

ಕರ್ನಾಟಕ7 hours ago

Driving Bus With Umbrella: ಛತ್ರಿ ಹಿಡಿದು ಬಸ್ ಚಾಲನೆ; ಮೋಜಿಗಾಗಿ ವಿಡಿಯೊ ಮಾಡಿದ ಡ್ರೈವರ್‌, ಕಂಡಕ್ಟರ್‌ ಸಸ್ಪೆಂಡ್‌!

Vistara editorial
ಬೆಂಗಳೂರು7 hours ago

ವಿಸ್ತಾರ ಸಂಪಾದಕೀಯ: ಕಸ ವಿಲೇವಾರಿಗೆ ಹೊಸ ಸಂಸ್ಥೆ, ಜಾರಿಕೊಳ್ಳುವ ನೆಪ ಆಗದಿರಲಿ

SRH vs RR
ಕ್ರೀಡೆ7 hours ago

SRH vs RR: ಹೈದರಾಬಾದ್​ಗೆ ಗೆಲುವಿನ ‘ಸನ್​ರೈಸ್’; ಫೈನಲ್​ನಲ್ಲಿ ಕೆಕೆಆರ್ ವಿರುದ್ಧ ಕಣಕ್ಕೆ​

Electric Shock
ಕ್ರೈಂ8 hours ago

Electric Shock: ಲಿಂಗಸುಗೂರಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

Prajwal Revanna Case
ಕರ್ನಾಟಕ8 hours ago

Prajwal Revanna Case: ರಾಜ್ಯಕ್ಕೆ ಬಂದು ಕಾನೂನು ಗೌರವಿಸಿ; ಪ್ರಜ್ವಲ್‌ಗೆ ವಿಸ್ತಾರ ನ್ಯೂಸ್‌ ಬಹಿರಂಗ ಪತ್ರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌