Site icon Vistara News

Karnataka Weather : ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ!

Rain forecast for the state again

ಬೆಂಗಳೂರು: ಬೆಂಗಳೂರು ಸೇರಿದಂತೆ ಹಲವೆಡೆ ದಿನಕ್ಕೊಂದು ವಾತಾವರಣವು ಜನರನ್ನು ಹೈರಾಣಾಗಿಸಿದೆ. ಒಮ್ಮೆ ಚಳಿ ಇದ್ದರೆ ಮತ್ತೊಮ್ಮೆ ಬಿಸಿಲು ಆವರಿಸುತ್ತೆ. ಸದ್ಯ ಚಳಿಯು ದೂರಾಗುವ ಮುನ್ನವೇ ಬಿಸಿಲು ಸುಡುತ್ತಿದೆ. ಇದರ ನಡುವೆ ತಜ್ಞರಿಂದ ಮತ್ತೆ ಮಳೆ ಸೂಚನೆ ಬಂದಿದೆ. ಮುಂದಿನ 48 ಗಂಟೆಯೊಳಗೆ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಆದರೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ಜತೆಗೆ ಬಿಸಿಲ ಧಗೆಯು ಹೆಚ್ಚಾಗಿರಲಿದೆ.

ಮಳೆ ನಡುವೆಯೂ ತಾಪಮಾನದ ಮುನ್ಸೂಚನೆ

ಮಳೆ ಸೂಚನೆ ಇದ್ದರೂ ತಾಪಮಾನದ ಎಚ್ಚರಿಕೆಯನ್ನು ತಜ್ಞರು ನೀಡಿದ್ದಾರೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ.

ಬೆಂಗಳೂರಲ್ಲಿ ಮಂಜು ಮುಸುಕು

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಆದರೆ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Davanagere News : ಕುತ್ತಿಗೆಗೆ ಬಿಗಿದ ಜೋಕಾಲಿ ಹಗ್ಗ; 4ನೇ ಕ್ಲಾಸ್‌ ಹುಡುಗ ದುರ್ಮರಣ

ಈ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ

ರಾಜ್ಯದಲ್ಲಿ ಶುಕ್ರವಾರದಂದು ಒಣ ಹವೆ ಇತ್ತು. ಅತೀ ಕಡಿಮೆ ಕನಿಷ್ಠ ಉಷ್ಣಾಂಶ 14.4 ಡಿ.ಸೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿತ್ತು. ಹಾಸನದಲ್ಲಿ ಸರಾಸರಿ ಕನಿಷ್ಠ ಉಷ್ಣಾಂಶ 15.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಯಚೂರು ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 36.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ಇನ್ನೂ ಚಿಕ್ಕಮಗಳೂರು, ಬೆಳಗಾವಿ, ಹಾಸನದಲ್ಲಿ ಕನಿಷ್ಠ ಉಷ್ಣಾಂಶ 10.6 ಡಿಗ್ರಿ ಸೆಲ್ಸಿಯಸ್ ನಿಂದ 13 ಡಿಗ್ರಿ ಸೆಲ್ಸಿಯಸ್ ವರೆಗೂ ತಲುಪಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ವಿಜಯಪುರ, ಶಿವಮೊಗ್ಗ, ಮೈಸೂರು, ಕೊಪ್ಪಳ ಹಾಗೂ ರಾಮನಗರ, ದಾವಣಗೆರೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಉಡುಪಿ, ಬೆಂಗಳೂರು ನಗರ, ತುಮಕೂರು, ಯಾದಗಿರಿ, ಕೋಲಾರ ಸೇರಿದಂತೆ ರಾಯಚೂರು ಮತ್ತು ಕಲಬುರಗಿಯಲ್ಲಿ 36 ಡಿಗ್ರಿ ಸೆಲ್ಸಿಯಸ್ ನಿಂದ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version