Site icon Vistara News

Karnataka Weather : ಮುಂದಿನ 3 ದಿನ ಮಳೆ ಸಾಧ್ಯತೆ; ಬೆಂಗಳೂರಲ್ಲಿ ಕವಿದ ಮೋಡ

Kodagu rain

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಭಾನುವಾರ ರಾತ್ರಿಯಿಡಿ ಸುರಿದ ಜಿಟಿಜಿಟಿ ಮಳೆಯಿಂದಾಗಿ (Karnataka Weather) ಬಚ್ಚಲು ಮನೆಯಂತಾಗಿತ್ತು. ಬೆಳಗ್ಗೆ 10 ಗಂಟೆಯಾದರೂ ಸೂರ್ಯನ ದರ್ಶನ ಇರಲಿಲ್ಲ. ನಗರದ ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಡಿದ ಮಳೆಯು ಸೋಮವಾರ ಬೆಳಗ್ಗೆವರೆಗೂ (Rain News) ಜಿನುಗುತ್ತಿತ್ತು. ವಿಧಾನಸೌಧ, ಕಾರ್ಪೋರೇಷನ್, ವಸಂತನಗರ, ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ಶೇಷಾದ್ರಿಪುರಂ ಸೇರಿ ಹಲವೆಡೆ ಜಿಟಿಜಿಟಿ ಮಳೆ (Karnataka Weather Forecast) ಸುರಿದಿದೆ. ಮುಂಜಾನೆ ಮಳೆಯಿಂದಾಗಿ ಕೆಲಸಕ್ಕೆ ತೆರಳುವ ದ್ವಿಚಕ್ರ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿತ್ತು.

ಮುಂದಿನ ಮೂರು ದಿನಗಳು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಐದಾರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ. ಮುಂದಿನ 48 ಗಂಟೆಯೊಳಗೆ ದಕ್ಷಿಣ ಒಳನಾಡಿನ ಕೊಡಗು, ಮಂಡ್ಯ, ಹಾಸನ, ಚಾಮರಾಜನಗರದ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Bear attack: ಖಾನಾಪುರದಲ್ಲಿ ಕರಡಿ ದಾಳಿಗೆ ರೈತ ಬಲಿ, ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಂಧಲೆ

ಗರಿಷ್ಠ ಉಷ್ಣಾಂಶ ಏರಿಕೆ ಸಾಧ್ಯತೆ

ದಕ್ಷಿಣ ಒಳನಾಡಲ್ಲಿ ಮಳೆ ಮುನ್ಸೂಚನೆ ಇದ್ದರೆ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ತಾಪಮಾನ ಏರಿಕೆ ಆಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಒಳನಾಡಿನ ವಿಜಯಪುರ, ಗದಗ, ರಾಯಚೂರಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ಚಿತ್ರದುರ್ಗದಲ್ಲೂ ತಾಪಮಾನ ಏರಿಕೆ ಆಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡದಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಗೂ ಕರಾವಳಿಯ ದಕ್ಷಿಣ ಕನ್ನಡದ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1-2 ಡಿಗ್ರಿಗಳಷ್ಟು ಹೆಚ್ಚಾಗಿರುತ್ತದೆ. ಉತ್ತರ ಒಳನಾಡಿನ ಬೀದರ್‌, ವಿಜಯಪುರದ ಬಾಗಲಕೋಟೆ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-4 ಡಿಗ್ರಿ ಕಡಿಮೆ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ – 21 ಡಿ.ಸೆ
ಮಂಗಳೂರು: 31 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 21 ಡಿ.ಸೆ
ಗದಗ: 32 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 25 ಡಿ.ಸೆ
ಕಲಬುರಗಿ: 35 ಡಿ.ಸೆ – 22 ಡಿ.ಸೆ
ಬೆಳಗಾವಿ: 30 ಡಿ.ಸೆ – 20 ಡಿ.ಸೆ
ಕಾರವಾರ: 33 ಡಿ.ಸೆ – 25 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version