ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿಯ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಬಹಳಷ್ಟು ಸಾಧ್ಯತೆ ಇದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ. ಮುಂದಿನ 48 ಗಂಟೆಯಲ್ಲಿ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಭಾರಿ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಒಣ ಹವೆ (Karnataka Weather Forecast) ಇರಲಿದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ತುಮಕೂರಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹಾವೇರಿ, ವಿಜಯನಗರ, ಧಾರವಾಡ, ಗದಗ, ಬಳ್ಳಾರಿ ಮತ್ತು ಕೊಪ್ಪಳದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಬಾಗಲಕೋಟೆ ಮತ್ತು ರಾಯಚೂರಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಪ್ರದೇಶಗಳಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.
ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Vistara Kannada Sambhrama : ವಿಸ್ತಾರ ಕನ್ನಡ ಸಂಭ್ರಮ; ಮಹಾವೈಭವಕ್ಕೆ ಇನ್ನು ಎರಡೇ ದಿನ
ತಾಪಮಾನ ಎಚ್ಚರಿಕೆ
ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿ ಹಾಗು ದಕ್ಷಿಣ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಜತೆಗೆ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.
ಗುಡುಗು ಮುನ್ನೆಚ್ಚರಿಕೆ
ನ.2ರಂದು ಕರಾವಳಿ ಹಾಗು ದಕ್ಷಿಣ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ಸಮಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಕರಾವಳಿಯ ಹಲವು ಕಡೆಗಳಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಗೋಕರ್ಣ, ಸಿದ್ದಾಪುರ 3 ಸೆಂ.ಮೀ, ಕುಮಟಾ, ಗೇರುಸೊಪ್ಪ ಯಲ್ಲಾಪುರ, ಹಳಿಯಾಳ, ಸುಳ್ಯ, ಧಾರವಾಡ, ಲಿಂಗನಮಕ್ಕಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಹುಬ್ಬಳ್ಳಿ, ಲೋಂಡಾ, ಕಮ್ಮರಡಿ, ಕೊಪ್ಪ, ತ್ಯಾಗರ್ತಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಕಡಿಮೆ ಉಷ್ಣಾಂಶ 16.5 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 30 ಡಿ.ಸೆ – 19 ಡಿ.ಸೆ
ಮಂಗಳೂರು: 31 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 22 ಡಿ.ಸೆ
ಗದಗ: 32 ಡಿ.ಸೆ – 20 ಡಿ.ಸೆ
ಹೊನ್ನಾವರ: 33 ಡಿ.ಸೆ- 22 ಡಿ.ಸೆ
ಕಲಬುರಗಿ: 33 ಡಿ.ಸೆ – 22 ಡಿ.ಸೆ
ಬೆಳಗಾವಿ: 30 ಡಿ.ಸೆ – 19 ಡಿ.ಸೆ
ಕಾರವಾರ: 35 ಡಿ.ಸೆ – 25 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ