Site icon Vistara News

Karnataka Weather : ವೀಕೆಂಡ್‌ ಪ್ರಿಯರೇ ಎಚ್ಚರ; ಭಾನುವಾರ ಸುರಿಯಲಿದೆ ಮಳೆ ಧಾರಾಕಾರ

Karnataka Weather Forecast

ಬೆಂಗಳೂರು: ರಾಜ್ಯಾದ್ಯಂತ ಜೂನ್‌ 26ರವರೆಗೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಭಾನುವಾರದಂದು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಕೆಲವು ಸ್ಥಳದಲ್ಲಿ ಗುಡುಗು ಸಹಿತ ಭಾರಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿಗೆ ಲಘು ಮಳೆ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕನಿಷ್ಟ ತಾಪಮಾನ 21 ಹಾಗೂ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ:

ಮಳೆ ಬಂದರೆ ಸವಾರರಿಗೆ ಆತಂಕ

ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಮಳೆ ಬಂದರೆ ಸಾಕು ಸವಾರರು ಭಯದಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಣಗಿದ ಮರಗಳು ಬೀಳುವ ಆತಂಕದಲ್ಲಿ ಜನರು ಜೀವವನ್ನು ಕೈಯಲ್ಲಿ ಹಿಡಿದು ಓಡಾಡುತ್ತಿದ್ದಾರೆ.

ಗಾಳಿ ಮಳೆಯಿಂದಾಗಿ ಆನೇಕ ಕಡೆ ಮರಗಳು ಧರೆಗುರುಳಿದ್ದವು. ಸಾಕಷ್ಟು ಕಡೆ ಅನಾಹುತಗಳು ಸಂಭವಿಸಿದ್ದರೂ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿಲ್ಲ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಒಣಗಿದ ಮರಗಳು ಅನಾಹುತಕ್ಕೆ ದಾರಿ ಮಾಡಿಕೊಡುತ್ತಿವೆ. ಹೆಬ್ಬಗೋಡಿ ನಗರಸಭೆ ಮತ್ತು ಬೊಮ್ಮಸಂದ್ರ ಕೈಗಾರಿಕಾ ಸಂಘಕ್ಕೆ ಒಳಪಡುವ ಈ ರಸ್ತೆಯಲ್ಲಿ ಎಂಟಿಆರ್‌, ಸಾಯಿ ವಿಶ್ರಾಂ ಹೋಟೆಲ್ ಮತ್ತು ಡೆಲ್ಟಾ ಕಂಪನಿ ಸೇರಿದಂತೆ ಹಲವು ಪ್ರತಿಷ್ಠಿತ ಕಂಪನಿಗಳಿವೆ.

ನಿತ್ಯ ಸಾವಿರಾರು ಸಂಖ್ಯೆಯ ಕಾರ್ಮಿಕರು ಇದೇ ರಸ್ತೆಯಲ್ಲಿ ಸಂಚರಿಸುತ್ತಾರೆ. ರಸ್ತೆಯುದ್ದಕ್ಕೂ ಒಣಗಿದ ಮರಗಳು ಮತ್ತು ಕೊಂಬೆಗಳು ಬೀಳುವ ಆತಂಕದಿಂದಾಗಿ ವಾಹನ ಸವಾರರು, ಪಾದಚಾರಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಕಳದೆರಡು ವರ್ಷಗಳ ಹಿಂದೆ ರಸ್ತೆಯಲ್ಲಿ ಮರ ಬಿದ್ದು ವ್ಯಕ್ತಿಯೊಬ್ಬ ಗಂಭೀರ ಗಾಯಗೊಂಡಿದ್ದರು. ಇಷ್ಟಾದರೂ ತಲೆಕೇಡಿಸಿಕೊಳ್ಳದ ಅಧಿಕಾರಿಗಳು, ಒಣಗಿದ ಮರಗಳನ್ನು ತೆರವು ಮಾಡದೆ ನಿರ್ಲಕ್ಷ್ಯ ವಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version