ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು (RainNews) ಸಾಮಾನ್ಯವಾಗಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.
ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.
ಯೆಲ್ಲೋ ಅಲರ್ಟ್
ಕರಾವಳಿಯ ಉಡುಪಿ, ಉತ್ತರ ಕನ್ನಡ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.