ಬೆಂಗಳೂರು: ಭಾನುವಾರ ರಾಜ್ಯಾದ್ಯಂತ ಕೆಲವೆಡೆ ಮಳೆಯ ಸಿಂಚನವಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯೊಂದಿಗೆ (Rain News) ಗುಡುಗು ಸಾಥ್ ನೀಡಲಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.
ಜೂನ್ 16ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಸ್ಥಳದಲ್ಲಿ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಆದರೆ ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.
ಇದನ್ನೂ ಓದಿ: Bhandara Fair : ಲೋಕಾಪುರದ ಭಂಡಾರ ಜಾತ್ರೆಗೆ ಅದ್ಧೂರಿ ಚಾಲನೆ; ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ
ಮತ್ತೊಂದು ವಾರ ಮಳೆ ಎಚ್ಚರಿಕೆ ಕೊಟ್ಟ ತಜ್ಞರು
ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ತಜ್ಞರು ಕೊಟ್ಟಿದ್ದಾರೆ. ಮೊದಲ ಮೂರು ದಿನ ಅಂದರೆ ಜೂ. 17, 18, 19 ರಂದು ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಹಗುರದಿಂದ ಕೂಡಿರಲಿದೆ.
ಬಳಿಕ ಜೂನ್ 20 ಮತ್ತು 21ರಂದು ಕರಾವಳಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದೆಡೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.
ಜಲಾಶಯಗಳ ನೀರಿನ ಮಟ್ಟ ಹೀಗಿದೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ