ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ಕರುಣೆ (karnataka weather Forecast) ತೋರಿದ್ದಾನೆ. ಈ ವಾರ ಪೂರ್ತಿ ಅಂದರೆ ಮಾ.22, 23, 24ರಂದು ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ (Rain Alert) ಸಾಧ್ಯತೆ ಇದೆ.
ದಕ್ಷಿಣ ಒಳನಾಡಲ್ಲಿ ಚದುರಿದಂತೆ ಹಾಗೂ ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಮಧ್ಯಮ ಮಳೆಯಾಗಲಿದೆ. ಮಳೆ ನಡುವೆಯೂ ಗರಿಷ್ಠ ತಾಪಮಾನದ ಏರಿಕೆ ಆಗಲಿದೆ. ಇದರಿಂದಾಗಿ ವಾತಾವರಣ ತಂಪಾಗಿರುವುದಕ್ಕಿಂತ ಬಿಸಿಲ ಧಗೆ ಹೆಚ್ಚಾಗಲಿದೆ.
ಮಂಡ್ಯ-ಮೈಸೂರಲ್ಲಿ ಧಾರಾಕಾರ ಮಳೆ
ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯದಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಹಾಗೂ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.
ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರವಾದ ಮಳೆಯಾಗುವ ಸೂಚನೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಹಗುರದಿಂದ ಮಳೆ ಹಾಗೂ ಉತ್ತರ ಕನ್ನಡದಲ್ಲಿ ಭಾಗಶಃ ಮೋಡ ಕವಿದ ವಾತಾವರಣದೊಂದಿಗೆ ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ
ಉತ್ತರ ಒಳನಾಡಿನ ಹಾವೇರಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಮಳೆ ಇರಲಿದೆ. ಬೆಳಗಾವಿ, ಧಾರವಾಡ, ಗದಗ ಮತ್ತು ವಿಜಯನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಕೆಲವೊಮ್ಮೆ ಸಾಧಾರಣ ಮಳೆಯಾಗಹುದು. ಉಳಿದಂತೆ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.
ಇದನ್ನೂ ಓದಿ: Shivamogga News: ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವ
ಬೆಂಗಳೂರಲ್ಲಿ ಒಣಹವೆ
ಬೆಂಗಳೂರಿಗೆ ಯಾವುದೇ ಮಳೆ ಸೂಚನೆ ಇಲ್ಲ. ಬದಲಿಗೆ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಚುರುಕು ಮುಟ್ಟಿಸಲಿದೆ ಬಿಸಿಲು
ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ ಗರಿಷ್ಠ ಉಷ್ಣಾಂಶ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿ ಇರಲಿದೆ. ಇದರಿಂದಾಗಿ ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಮೈಸೂರು, ಮಂಡ್ಯದಲ್ಲಿ ತಾಪ ಚುರುಕು ಮುಟ್ಟಿಸಲಿದೆ. ಉತ್ತರ ಒಳನಾಡಿನ ಕೊಪ್ಪಳದಲ್ಲಿ ಸಾಮಾನ್ಯಕ್ಕಿಂತ ಗರಿಷ್ಠ ಉಷ್ಣಾಂಶ 2 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 34 ಡಿ.ಸೆ – 21 ಡಿ.ಸೆ
ಮಂಗಳೂರು: 34 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 36 ಡಿ.ಸೆ – 23 ಡಿ.ಸೆ
ಗದಗ: 37 ಡಿ.ಸೆ – 22 ಡಿ.ಸೆ
ಹೊನ್ನಾವರ: 34 ಡಿ.ಸೆ- 22 ಡಿ.ಸೆ
ಕಲಬುರಗಿ: 38 ಡಿ.ಸೆ – 25 ಡಿ.ಸೆ
ಬೆಳಗಾವಿ: 36 ಡಿ.ಸೆ – 21 ಡಿ.ಸೆ
ಕಾರವಾರ: 34 ಡಿ.ಸೆ – 22 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ