ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣವು ಮೇಲುಗೈ (Dry Weather) ಸಾಧಿಸಲಿದೆ. ಹಲವೆಡೆ ಗರಿಷ್ಠ ಹಾಗೂ ಕನಿಷ್ಠ ತಾಪಮಾನವು ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.
ವಾಡಿಕೆ ಪ್ರಕಾರ ಶಿವರಾತ್ರಿ ಮುಗಿದ ಮೇಲೆ ಬಿಸಿಲಿನ ತೀವ್ರತೆ ಹೆಚ್ಚಾಗುತ್ತದೆ. ಅಲ್ಲಿವರೆಗೂ ಚಳಿಯೇ ಜನರನ್ನು ನಡುಗಿಸುತ್ತದೆ. ಆದರೆ ಈ ಬಾರಿ ಎಲ್ಲವೂ ಉಲ್ಟಾಪಲ್ಟಾ ಆಗಿದೆ. ಚಳಿಗಾಲ ಕಳೆಯುವ ಮುನ್ನವೇ ಬಿಸಿಲು ಹೆಚ್ಚಾಗಿದೆ. ಚಳಿಗಾಲ ಕೈಕೊಟ್ಟಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2ರಿಂದ 4 ಡಿಗ್ರಿ ಸೆಲ್ಸಿಯಸ್ ಇಳಿಕೆ ಆಗಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರ, ರಾಮನಗರ ಸೇರಿದಂತೆ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದಲ್ಲಿ ಶುಷ್ಕ ವಾತಾವರಣ ಇರಲಿದೆ. ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಇಳಿಕೆಯಾದರೆ, ಬಹುತೇಕ ಕಡೆಗಳಲ್ಲಿ ಸಾಮಾನ್ಯಕ್ಕಿಂತ 5 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ 2-3 ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡುಗು, ಹಾಸನದಲ್ಲಿ ಬಿಸಿಲ ಝಳ ಹೆಚ್ಚಿರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 32 ಡಿ.ಸೆ -20 ಡಿ.ಸೆ
ಮಂಗಳೂರು: 34 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 19 ಡಿ.ಸೆ
ಗದಗ: 34 ಡಿ.ಸೆ – 19 ಡಿ.ಸೆ
ಹೊನ್ನಾವರ: 34 ಡಿ.ಸೆ- 21 ಡಿ.ಸೆ
ಕಲಬುರಗಿ: 36 ಡಿ.ಸೆ – 22 ಡಿ.ಸೆ
ಬೆಳಗಾವಿ: 35 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 21 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ