ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain news) ಸಾಧ್ಯತೆಯಿದೆ. ಒಳನಾಡಿನಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ರಭಸವಾಗಿ ಗಾಳಿ ಬೀಸಲಿದ್ದು, ಭಾರೀ ಮಳೆ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ.
ಇದನ್ನೂ ಓದಿ: UGCET 2024 : ವೈದ್ಯಕೀಯ, ಇಂಜಿನಿಯರಿಂಗ್ ಕೋರ್ಸುಗಳ ಅಣುಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ
ಮಲೆನಾಡಿನಲ್ಲಿ ಅಬ್ಬರಿಸಲಿದೆ ಮಳೆ
ಮಲೆನಾಡಿನ ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಸಾಧಾರಣ ಮಳೆ ಜತೆಗೆ ವ್ಯಾಪಕ ಮಳೆಯಾಗಲಿದೆ.
ನಿಮ್ಮ ಆಸೆ-ಆಕಾಂಕ್ಷೆಗಳು ಇಂದು ಯಶಸ್ಸನ್ನು ತಂದುಕೊಡಲಿವೆ
ಬೆಂಗಳೂರಿನಲ್ಲಿ ಹಗುರ ಮಳೆ
ಬೆಂಗಳೂರಿನಲ್ಲಿ ಆಗಾಗ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಆದರೆ ನಿರಂತರ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ