ಬೆಂಗಳೂರು: ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಜತೆಗೆ ವಿವಿಧೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡಿನ ಮೈಸೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ.
ಉತ್ತರ ಒಳನಾಡಿನ ಬೆಳಗಾವಿ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಹಾಗೂ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: IPL Betting: ಸಾಲಗಾರರ ಕಾಟ; ಹೆಂಡತಿ-ಮಕ್ಕಳಿಗೆ ವಿಷವಿಕ್ಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ
ತಾಪಮಾನದ ಮುನ್ಸೂಚನೆ
ಏಪ್ರಿಲ್ 19 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 2 ದಿನಗಳಲ್ಲಿ ಗರಿಷ್ಟ ಉಷ್ಣಾಂಶದಲ್ಲಿ ಹೆಚ್ಚಿನ ಬಡಲಾವಣೆ ಇರುವುದಿಲ್ಲ. ನಂತರದ 3 ದಿನಗಳವರೆಗೆ ಕ್ರಮೇಣ 2-3 ಡಿ.ಸೆ ಏರಿಕೆಯಾಗುತ್ತದೆ.
ಗುಡುಗು ಮುನ್ನೆಚ್ಚರಿಕೆ
ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಜತೆಗೆ ಮೇಲ್ಮೈ ಮಾರುತಗಳು ಬಲವಾದ ಮತ್ತು ರಭಸದಿಂದ ಕೂಡಿರುವ ಸಾಧ್ಯತೆಯಿದೆ.
ಮುಂದಿನ 48 ಗಂಟೆಯಲ್ಲಿ ಭಾಗಶಃ ಮೋಡ ಕವಿದ ಆಕಾಶವಿರುತ್ತದೆ. ಸಂಜೆ/ರಾತ್ರಿ ಸಮಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಗರಿಷ್ಠ ಉಷ್ಣಾಂಶ 37 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ