Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ - Vistara News

ಮಳೆ

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Karnataka Weather Forecast : ಶಿವಮೊಗ್ಗ ಹಾಗೂ ಹಾಸನ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ (Heavy rain alert) ಮಾಡಲಾಗಿದೆ.

VISTARANEWS.COM


on

karnataka Weather Forecast
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಶಿವಮೊಗ್ಗ/ಕಾರವಾರ: ರಾಜ್ಯಾದ್ಯಂತ ಮಳೆಯು (Heavy rain alert) ಅಬ್ಬರಿಸುತ್ತಿದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ (Holiday For schools) ಮಾಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಿಗೆ ರೆಡ್‌ ಅಲರ್ಟ್‌ (Karnataka Weather Forecast) ಘೋಷಣೆ ಮಾಡಲಾಗಿದೆ. ಹೀಗಾಗಿ ಜು.16ಕ್ಕೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗದ ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ. ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ರಜೆ ಘೋಷಣೆ ಮಾಡಿದ್ದಾರೆ. ಇತ್ತ ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಮಂಗಳವಾರ ರಜೆ ಘೋಷಣೆ ಮಾಡಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆಯಲ್ಲೂ ನಿರಂತರ ಮಳೆಯಾಗುತ್ತಿದ್ದು, ಸಕಲೇಶಪುರ, ಆಲೂರು, ಬೇಲೂರು, ಹಾಸನ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಅನುಮತಿ ಪಡೆದು, ರಜೆ ಘೋಷಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಾಂಡು ಆದೇಶ ಹೊರಡಿಸಿದ್ದಾರೆ. ಸರ್ಕಾರಿ,‌ ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಜುಲೈ 20 ರಂದು ಸರಿದೂಗಿಸುಂತೆ ಆದೇಶಿಸಿದ್ದಾರೆ.

ಎಮರ್ಜೆನ್ಸಿ ಆಪರೇಷನ್ ಸೆಂಟರ್ ತೆರೆದ ಜಿಲ್ಲಾಡಳಿತ

ಉತ್ತರಕನ್ನಡ ಜಿಲ್ಲೆಗೆ ಮುಂದಿನ‌ 3 ದಿನ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ತುರ್ತು ಪರಿಸ್ಥಿತಿ ನಿರ್ವಹಣೆಗೆ ಡಿಸ್ಟ್ರಿಕ್ಟ್ ಎಮರ್ಜೆನ್ಸಿ ಆಪರೇಷನ್ ಸೆಂಟರ್ ತೆರೆದಿದೆ. ಈ ಕುರಿತು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ ಮಾಹಿತಿ ನೀಡಿದ್ದಾರೆ. ಡಿಸಿ ಕಚೇರಿಯನ್ನೇ ಕಂಟ್ರೋಲ್ ರೂಮ್‌ ಆಗಿ ಎಮರ್ಜೆನ್ಸಿ ಆಪರೇಷನ್ ಸೆಂಟರ್ ಆಗಿ ಮಾರ್ಪಾಡು ಮಾಡಲಾಗಿದೆ.

ವಿಪತ್ತು ನಿರ್ವಹಣೆ, ಪೊಲೀಸ್, ಅರಣ್ಯ, ಅಗ್ನಿಶಾಮಕ, ಹೆಸ್ಕಾಂ ಇಲಾಖೆಯಿಂದ ಒಬ್ಬೊಬ್ಬ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ತುರ್ತು ಸಂದರ್ಭದಲ್ಲಿ ಎಲ್ಲಾ ಇಲಾಖೆಯೊಂದಿಗೆ ಸಂಪರ್ಕ ಸಾಧಿಸಲು ಎಮರ್ಜೆನ್ಸಿ ಆಪರೇಷನ್ ಸೆಂಟರ್ ಮಾಡಲಾಗಿದೆ. ಎಲ್ಲೇ ಸಹಾಯ ಅಗತ್ಯವಿದ್ದರೂ ತುರ್ತು ಸ್ಪಂದನೆಗೆ ಕ್ರಮವಹಿಸಲಾಗುತ್ತದೆ. ಎಲ್ಲಾ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗೂ ಕೇಂದ್ರಸ್ಥಾನ ಬಿಡದಂತೆ ಸೂಚನೆ ನೀಡಲಾಗಿದೆ. ನೆರೆ ಪರಿಸ್ಥಿತಿಯ ಸ್ಥಳಗಳಲ್ಲಿ ಕಾಳಜಿ ಕೇಂದ್ರ ಸ್ಥಾಪನೆಗೆ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಲಾಗಿದ್ದು ಜತೆಗೆ ಮನೆ, ಬೆಳೆ ಹಾನಿ ಕುರಿತಾಗಿಯೂ ಶೀಘ್ರದಲ್ಲಿ ಪರಿಶೀಲಿಸಿ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.

ಇನ್ನೂ ನೌಕಾನೆಲೆ ಕಾಂಪೌಂಡ್‌ನಿಂದ ಕಾರವಾರದ ಚೆಂಡಿಯಾ ಭಾಗದಲ್ಲಿ ನೆರೆ ಪರಿಸ್ಥಿತಿ ನಿರ್ಮಾಣ ವಿಚಾರವಾಗಿಯೂ ಭೇಟಿ ನೀಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಪರಿಶೀಲಿಸಿದರು. ನೌಕಾನೆಲೆಯ ಎರಡು ಕಡೆ ಕಾಮಗಾರಿ ಪ್ರದೇಶದಲ್ಲಿ ನೀರು ಹರಿದುಹೋಗಲು ಅಡ್ಡಿಯಾಗಿದೆ. ನೀರು ಹರಿದುಹೋಗಲು ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದರು.

ಇದನ್ನೂ ಓದಿ: Karnataka Rain : ಚಿಕ್ಕಮಗಳೂರಲ್ಲಿ ಮಳೆಗೆ ಕರೆಂಟ್‌ ಕಟ್‌; ಕೊಡಗು, ದಾವಣಗೆರೆಯ‌ಲ್ಲೂ ಅವಾಂತರ

ಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಗಾಳಿ-ಮಳೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಬೈಕ್ ಸವಾರ ಪಾರಾಗಿದ್ದಾರೆ. ಕೊಪ್ಪ ತಾಲೂಕಿನ ಹೆಗ್ಗಾರು ಕುಡಿಗೆ ಸಮೀಪ ಘಟನೆ ನಡೆದಿದೆ. ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಇದಾಗಿದ್ದು, ಎರಡು ಗಂಟೆಗೂ ಹೆಚ್ಚು ಸಮಯ ಮರ ತೆರವುಗೊಳಿಸಲು ಹರಸಾಹಸ ಪಡೆಬೇಕಾಯಿತು.
ಶೃಂಗೇರಿಯಿಂದ ಹೊರನಾಡಿಗೆ ಹೋಗುವ ಪ್ರವಾಸಿಗರು, ಸ್ಥಳೀಯರು ಪರದಾಟ ಅನುಭವಿಸಿದರು. ಅರಣ್ಯ ಸಿಬ್ಬಂದಿ, ಸ್ಥಳೀಯ ಮೆಸ್ಕಾಂ ಸಿಬ್ಬಂದಿಯಿಂದ ತೆರವು ಕಾರ್ಯಾಚರಣೆ ನಡೆಸಲಾಯಿತು. ಇತ್ತ ಭಾರಿ ಗಾಳಿ ಮಳೆಗೆ ಮಲೆನಾಡಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಡಿತ್ತು.

ಪ್ರವಾಸಿಗರ ಹುಚ್ಚಾಟಕ್ಕೆ ಸ್ಥಳೀಯರು ಬೇಸರ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಹೊಸಳ್ಳಿ ಬೆಟ್ಟದಲ್ಲಿ ಪ್ರವಾಸಿಗರು ಹುಚ್ಚಾಟ ಮೆರೆದಿದ್ದಾರೆ. ಹಸಿರಿನಿಂದ ಕಂಗೊಳಿಸುತ್ತಿರುವ ಬೆಟ್ಟದ ಮೇಲೆ ವಾಹನಗಳ ಪ್ರವೇಶ ನಿಷೇಧವಿದ್ದರೂ ಮನಬಂದಂತೆ ವಾಹನಗಳನ್ನು ಚಲಾಯಿಸಿದ್ದಾರೆ. ಅಕ್ರಮವಾಗಿ ಪ್ರವೇಶ ಮಾಡಿರುವ ಕೆಲ ಯುವಕರು, ಹಸಿರು ಹುಲ್ಲಿನ ಮೇಲೆ ಡರ್ಟ್ ರೈಡ್ ಮಾಡಿ ಕೆಸರು ಗದ್ದೆಯಂತೆ ಮಾಡಿದ್ದಾರೆ. ಹೊಸಳ್ಳಿ ಬೆಟ್ಟ ಹಾಳು ಮಾಡಿರುವವರ ವಿರುದ್ಧ ಸ್ಥಳೀಯರು ಹಾಗೂ ಪರಿಸರವಾದಿಗಳು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ತುಂಗಭದ್ರ ಡ್ಯಾಂ ಹಿನ್ನಿರಿನಲ್ಲಿ ಪ್ರವಾಸಿಗರ ಹುಚ್ಚಾಟ

ವಿಜಯನಗರ ಜಿಲ್ಲೆಯ ಹೊಸಪೇಟೆ ಬಳಿ ಇರುವ ತುಂಗಾಭದ್ರ ಡ್ಯಾಂ ಹಿನ್ನಿರಿಗೆ ಪ್ರವಾಸಿಗರು ಆಗಮಿಸುತ್ತಿದ್ದಾರೆ. ನೀರಿನ ಅಲೆಗಳ ಜತೆ ಫೋಟೊ ಕ್ಲಿಕ್ಕಿಸಿಕೊಳ್ಳುವ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರೇಮಿಗಳು , ಕಾಲೇಜು ವಿಧ್ಯಾರ್ಥಿಗಳು ಡ್ಯಾಂ ಹಿನ್ನಿರಿಗೆ ಇಳಿದು ಹುಚ್ಚಾಟ ಮೆರೆದಿದ್ದಾರೆ. ನೀರಿನ ಅಲೆಗಳ ಜತೆ ಎಂಜಾಯ್ ಮಾಡಲು ಹೋಗಿ ತಮ್ಮ ಪ್ರಾಣಕ್ಕೆ ಸಂಚಕಾರ ತಂದುಕೊಳ್ಳುತ್ತಿದ್ದಾರೆ.

ಕುಡಿದು ಸಮುದ್ರಕ್ಕೆ ಇಳಿದ ಯುವಕರು

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕುಡ್ಲೇ ಬೀಚ್‌ನಲ್ಲಿ ಮದ್ಯಪಾನ ಮಾಡಿ ಅಪಾಯ ಲೆಕ್ಕಿಸದೇ ಪ್ರವಾಸಿಗರು ಈಜಲು ಸಮುದ್ರಕ್ಕೆ ಇಳಿದ ಘಟನೆ ನಡೆದಿದೆ. ಸಮುದ್ರದಲ್ಲಿ 40-50 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ. ಅಷ್ಟಾದರೂ ಸೂಚನೆಗಳನ್ನು ನಿರ್ಲಕ್ಷ್ಯಿಸಿ ಕಡಲಿಗೆ ಇಳಿಯುತ್ತಿದ್ದಾರೆ.

ಜೋಗ್‌ಫಾಲ್ಸ್‌ಗೆ ಹರಿದು ಬಂದ ಜನಸಾಗರ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ನಿನ್ನೆ ಭಾನುವಾರ ಒಂದೇ ದಿನ 50 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದಾರೆ. ಶರಾವತಿ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗಿದ್ದು, ಜೋಗ ಜಲಪಾತದ ರಾಜ, ರಾಣಿ, ರೋರರ್, ರಾಕೇಟ್ ಕವಲುಗಳು ಧುಮ್ಮಿಕ್ಕಿ ಹರಿಯುತ್ತಿದೆ. ಜೋಗ ಜಲಪಾತದ ನಯನ ಮನೋಹರ ದೃಶ್ಯ ಪ್ರವಾಸಿಗರು ಕಣ್ತುಂಬಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading

ಮಳೆ

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Karnataka Rain : ಸತತ ಮಳೆ ಹಿನ್ನೆಲೆಯಲ್ಲಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಶಾಲೆಗಳಿಗೆ ಇಂದು ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

Karnataka Rain

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ (Karnataka Rain) ನಿರಂತರವಾಗಿ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿ ಮಾರ್ಪಾಡಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಮೌಖಿಕವಾಗಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Continue Reading
Advertisement
Latest16 hours ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest16 hours ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ17 hours ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest17 hours ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest19 hours ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest22 hours ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest2 days ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

ಅವಿಭಾಗೀಕೃತ2 days ago

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

ಪ್ರಮುಖ ಸುದ್ದಿ2 days ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ2 days ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌