ಬೆಂಗಳೂರು: ದಿನದಿಂದ ದಿನಕ್ಕೆ ಸುಡು ಬಿಸಿಲು ಹೆಚ್ಚಾಗುತ್ತಿದ್ದು, ಜನರನ್ನು ಕಂಗೆಡಿಸುತ್ತಿದೆ. ಮಾರ್ಚ್ ತಿಂಗಳ ಆರಂಭದಲ್ಲೇ ತೀವ್ರ ಸ್ವರೂಪವಾಗಿದ್ದು, ಜನರಿಗೆ ಬೇವರಿಸುತ್ತಿದೆ. ರಾಜ್ಯಾದ್ಯಂತ ಶುಷ್ಕ ವಾತಾವರಣವೇ (Dry weather) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.
ರಾಜ್ಯದಲ್ಲಿ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಬಿಸಿಲ ತೀವ್ರತೆ ಇರಲಿದೆ.
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಬಿಸಿಲಿನ ಧಗೆ ಹೆಚ್ಚಾಗಿ ಇರಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಸೇರಿದಂತೆ ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 33 ಡಿ.ಸೆ – 19 ಡಿ.ಸೆ
ಮಂಗಳೂರು: 35 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 34 ಡಿ.ಸೆ – 20 ಡಿ.ಸೆ
ಗದಗ: 35 ಡಿ.ಸೆ – 21 ಡಿ.ಸೆ
ಹೊನ್ನಾವರ: 35 ಡಿ.ಸೆ- 22 ಡಿ.ಸೆ
ಕಲಬುರಗಿ: 36 ಡಿ.ಸೆ – 23 ಡಿ.ಸೆ
ಬೆಳಗಾವಿ: 34 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 23 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ