ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ (ಗುರುವಾರ ಮತ್ತು ಶುಕ್ರವಾರ) ರಾಜ್ಯದಲ್ಲಿ ತಾಪಮಾನ ಏರಿಕೆ ಗತಿಯಲ್ಲೇ ಇರಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್‌ವರೆಗೆ ಉಷ್ಣಾಂಶದಲ್ಲಿ ಹೆಚ್ಚಳವಾಗಲಿದೆ. ಅದೇ ಉತ್ತರ ಒಳನಾಡಿನ ಕೆಲವು ಕಡೆ 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನದಲ್ಲಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast) ಉಲ್ಲೇಖಿಸಿದೆ.
ಮುಂದಿನ 48 ಗಂಟೆಯಲ್ಲಿ ಬೆಂಗಳೂರು ನಗರದ ಸುತ್ತಮುತ್ತ ಬೆಳಗ್ಗೆ ಹೊತ್ತಿಗೆ ಸ್ವಚ್ಛ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಆವರಿಸಲಿದೆ. ಮಧ್ಯಾಹ್ನದ ವೇಳೆ ಬಿಸಿಲ ತಾಪ ಹೆಚ್ಚಿರಲಿದೆ. ಆದರೆ, ಸೆಕೆಯ ವಾತಾವರಣ ಇರಲಿದ್ದು, ಜನರು ತಂಪಿನ ವಾತಾವರಣಕ್ಕಾಗಿ ಎದುರು ನೋಡುತ್ತಿದ್ದಾರೆ.
ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರದ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗಲಿದೆ. ಇನ್ನೂ ರಾಯಚೂರು, ಗದಗ, ಶಿವಮೊಗ್ಗ, ಯಾದಗಿರಿ ಹಾಗೂ ತುಮಕೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕಮಗಳೂರು, ಧಾರವಾಡ, ಬಳ್ಳಾರಿ, ಕಲಬುರಗಿ ಮತ್ತು ಉತ್ತರ ಕನ್ನಡದಲ್ಲಿ ಗರಿಷ್ಠ ತಾಪಮಾನವು 38 ಡಿಗ್ರಿ ಸೆಲ್ಸಿಯಸ್ ತಲುಪಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 33 ಡಿ.ಸೆ -17 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 21 ಡಿ.ಸೆ
ಗದಗ: 36 ಡಿ.ಸೆ – 20 ಡಿ.ಸೆ
ಹೊನ್ನಾವರ: 34 ಡಿ.ಸೆ- 19 ಡಿ.ಸೆ
ಕಲಬುರಗಿ: 37 ಡಿ.ಸೆ – 23 ಡಿ.ಸೆ
ಬೆಳಗಾವಿ: 35 ಡಿ.ಸೆ – 17 ಡಿ.ಸೆ
ಕಾರವಾರ: 36 ಡಿ.ಸೆ – 21 ಡಿ.ಸೆ
ಇದನ್ನೂ ಓದಿ: Benefits of Vitamin C: ಬೇಸಿಗೆಯಲ್ಲಿ ತಂಪಾಗಿರಲು ಬೇಕು ವಿಟಮಿನ್ ಸಿ
ಬೆಂಗಳೂರು ನಗರದಲ್ಲಿ ಬೆಳಗ್ಗೆ ವೇಳೆ ಬಿಸಿಲು ಇರಲಿದ್ದು, ಮಧ್ಯಾಹ್ನದ ಹೊತ್ತಿಗೆ ಬಿಸಿಲಿನ ಧಗೆ ಹೆಚ್ಚಾಗಲಿದೆ. ಈಗಿನ ತಾಪಮಾನದ ಪ್ರಕಾರ ಗರಿಷ್ಠ ಉಷ್ಣಾಂಶವು 33 ಡಿಗ್ರಿ ಸೆಲ್ಸಿಯಸ್ ಆಗಿದೆ. ಅಂದರೆ ದಿನೇ ದಿನೆ ಉಷ್ಣಾಂಶದಲ್ಲಿ ಹೆಚ್ಚಳವಾಗುತ್ತಿರುವುದು ಸೆಕೆಯ ವಾತಾವರಣವನ್ನು ಹೆಚ್ಚು ಮಾಡಿದೆ. ಇನ್ನು ಉಳಿದಂತೆ ಮಂಗಳೂರು, ಚಿತ್ರದುರ್ಗ ಹಾಗೂ ಗದಗ, ಹೊನ್ನಾವರ, ಕಲಬುರಗಿ, ಬೆಳಗಾವಿ, ಕಾರವಾರದಲ್ಲಿ ಸರಾಸರಿ ತಾಪಮಾನಕ್ಕಿಂತ ಉಷ್ಣಾಂಶವು ಹೆಚ್ಚಾಗುತ್ತಲೇ ಬರುತ್ತಿದೆ.