Karnataka Weather : ಬೆಂಗಳೂರು ಸೇರಿ ಹಲವೆಡೆ ತಾಪಮಾನ ದುಪ್ಪಟ್ಟು - Vistara News

ಮಳೆ

Karnataka Weather : ಬೆಂಗಳೂರು ಸೇರಿ ಹಲವೆಡೆ ತಾಪಮಾನ ದುಪ್ಪಟ್ಟು

Karnataka Weather Forecast : ಬಿಸಿಲ ಝಳಕ್ಕೆ ಜನರು ಹೈರಾಣಾಗಿದ್ದಾರೆ. ವಾತಾವರಣದಲ್ಲಿ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ ಏರಿಳಿತ (Dry weather) ಉಂಟಾಗಲಿದೆ.

VISTARANEWS.COM


on

Temperature doubles in bengaluru and other parts of the state
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾನುವಾರವೂ ಒಣ ಹವೆಯೇ (Karnataka Weather Forecast) ಮುಂದುವರಿದಿದೆ. ಮುಂಬರುವ ವಾರವೂ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Dry weather) ನೀಡಿದೆ.

ಮುಂದಿನ 48 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರ, ರಾಮನಗರ ಸೇರಿದಂತೆ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದಲ್ಲೂ ಶುಷ್ಕ ವಾತಾವರಣ ಇರಲಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಹಲವು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ.

ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದಾಗಿ ಬಿಸಿಲಿನ ತೀವ್ರತೆ ಜತೆಗೆ ಧಗೆ ವಾತಾವರಣ ಇರಲಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Ayushman Bharat : ಮೋದಿ ಗ್ಯಾರಂಟಿಯ ಆಯುಷ್ಮಾನ್ ಭಾರತ್​ ಕಾರ್ಡ್​ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 33 ಡಿ.ಸೆ -18 ಡಿ.ಸೆ
ಮಂಗಳೂರು: 34 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 34 ಡಿ.ಸೆ – 19 ಡಿ.ಸೆ
ಗದಗ: 35 ಡಿ.ಸೆ – 18 ಡಿ.ಸೆ
ಹೊನ್ನಾವರ: 34 ಡಿ.ಸೆ- 20 ಡಿ.ಸೆ
ಕಲಬುರಗಿ: 36 ಡಿ.ಸೆ – 23 ಡಿ.ಸೆ
ಬೆಳಗಾವಿ: 34 ಡಿ.ಸೆ – 18 ಡಿ.ಸೆ
ಕಾರವಾರ: 34 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Karnataka Rain : ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯು (Rain Effect) ಅವಾಂತವರವೇ ಸೃಷ್ಟಿಸಿದೆ. ಕಾರವಾರ ಸಮೀಪ ಮಳೆಗೆ ಮನೆಗಳಿಗೆ ಹಾವುಗಳು (snake) ನುಗ್ಗುತ್ತಿವೆ. ಮತ್ತೊಂದು ಕಡೆ ಹೊನ್ನಾವಾರ-ಬೆಂಗಳೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಗಳು ಮುಂದುವರಿದಿದೆ.

VISTARANEWS.COM


on

By

karnataka rain
Koo

ಕಾರವಾರ/ಉಡುಪಿ: ಕರ್ನಾಟಕ ಕರಾವಳಿ ಭಾಗದಲ್ಲಿ ಮಳೆಯು (Karnataka Rain) ಅಬ್ಬರಿಸುತ್ತಿದೆ. ಮಳೆಯಿಂದಾಗಿ ಕಾಡಿನಿಂದ ಮನೆಗಳತ್ತ ಹಾವುಗಳು ಬರುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡ ಎಂಬಾಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿತ್ತು. ಸುಮಾರು 12 ಅಡಿ ಉದ್ದದ ಹೆಬ್ಬಾವು ಕಂಡು ಸ್ಥಳೀಯರು ಆತಂಕಕ್ಕೊಳಗಾಗಿದ್ದರು.

ಅರಣ್ಯ ಪ್ರದೇಶದ ಸಮೀಪದಲ್ಲಿ ಇದ್ದು, ಮಳೆ ನೀರಿನಲ್ಲಿ ಹರಿದು ಬಂದು ಮನೆಯ ಮೇಲೆ ಹೆಬ್ಬಾವು ಸೇರಿಕೊಂಡಿದೆ. ಬಳಿಕ ಸ್ಥಳಕ್ಕಾಗಮಿಸಿದ ಉರಗ ಪ್ರೇಮಿ ಗೋಪಾಲ್ ಸುಮಾರು ಒಂದು ಗಂಟೆ ಕಾಲ‌ ಕಾರ್ಯಾಚರಣೆ ನಡೆಸಿ ಹಾವು ಹಿಡಿದು ರಕ್ಷಣೆ ಮಾಡಿದ್ದಾರೆ.

ಭಾರಿ ಮಳೆ-ಗಾಳಿಗೆ ಕುಸಿದು ಬಿದ್ದ ಮನೆ

ಇತ್ತ ಭಾರೀ ಗಾಳಿ ಮಳೆಗೆ ಮನೆಯೊಂದು ಭಾಗಶಃ ಕುಸಿದು ಬಿದ್ದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ದೊಡ್ನಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಳೆದೊಂದು ವಾರದಿಂದ ಶಿರಸಿ ಭಾಗದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈ ಅವಘಡ ಸಂಭವಿಸಿದೆ. ಸಂತೋಷ ಜೋಗಿ ಎಂಬುವವರ ಮನೆಯ ಮಣ್ಣಿನ ಗೋಡೆ ನೆನೆದು ಭಾಗಶಃ ಕುಸಿದು ಬಿದ್ದಿದೆ. ಪರಿಹಾರಕ್ಕಾಗಿ ಸರ್ಕಾರಕ್ಕೆ ಅಂಗಲಾಚಿದ್ದಾರೆ. ಸ್ಥಳಕ್ಕೆ ಪಿಡಿಓ ಪ್ರೀತಿ ಶೆಟ್ಟಿ, ಶಾನುಭೋಗ ಸುಕನ್ಯಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರಾವಳಿಯಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಭಟ್ಕಳ ತಾಲೂಕುಗಳಲ್ಲಿ ವರುಣಾರ್ಭಟ ಜೋರಾಗಿದೆ. ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಳೆ ಹೆಚ್ಚಾದರೆ ಕಾರವಾರದ ಕದ್ರಾ ಜಲಾಶಯದಿಂದ ನೀರು ಹೊರ ಬರಲಿದೆ. ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಕದ್ರಾ ಜಲಾಶಯದಲ್ಲಿ ಸುರಕ್ಷಿತ ಮಟ್ಟ ಕಾಯ್ದುಕೊಳ್ಳಲು ಒಳಹರಿವು ಆಧರಿಸಿ ನೀರು ಬಿಡುಗಡೆಗೆ ನಿರ್ಧರಿಸಲಾಗಿದೆ.

ಇದನ್ನೂ ಓದಿ: Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

ಬೆಳಗಾವಿಯ ಸಪ್ತನದಿಗಳಿಗೆ ಜೀವ ಕಳೆ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರದಿಂದಾಗಿ ಬೆಳಗಾವಿಯ ಸಪ್ತನದಿಗಳಿಗೆ ಜೀವ ಕಳೆ ಬಂದಿದೆ. ಘಟಪ್ರಭಾ ನದಿಗೆ ಒಳಹರಿವು ಹೆಚ್ಚಳದಿಂದಾಗಿ ಐತಿಹಾಸಿಕ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭತ ಸೃಷ್ಟಿಯಾಗಿದೆ. ಭಾರತದ ನಯಾಗಾರ ಫಾಲ್ಸ್ ಎಂದೇ‌ ಖ್ಯಾತವಾಗಿರುವ ಗೋಕಾಕ್ ಜಲಪಾತ, 180 ಅಡಿ ಮೇಲಿಂದ ಧುಮ್ಮಿಕ್ಕುವ ನೀರು, ಜಲಪಾತದ ರಮಣೀಯ ದೃಶ್ಯಕ್ಕೆ ಪ್ರವಾಸಿಗರು ಫಿದಾ ಆಗಿದ್ದಾರೆ. ಇನ್ನೂ ಸೆಲ್ಫಿ, ಜಲಪಾತದ ಫೋಟೊ ತೆಗೆಯಲು ಜಲಪಾತದ ತುದಿಗೆ ಹೋಗಿ ಪ್ರವಾಸಿಗರು ಹುಚ್ಚಾಟದ ಕಾರಣಕ್ಕೆ ನಿಗಾ ಇಡಲು ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿ ‌ನಿಯೋಜನೆ ಮಾಡಲಾಗಿದೆ.

ತುಂಬಿ ಹರಿದ ವಾರಾಹಿ ಮತ್ತು ಕುಬ್ಬಾ ನದಿ

ಪಶ್ಚಿಮಘಟ್ಟದ ತಪ್ಪಲಲ್ಲಿ ಸುರಿದ ಭಾರೀ ಮಳೆ ಎಫೆಕ್ಟ್‌ನಿಂದಾಗಿ ಉಡುಪಿಯ ವಾರಾಹಿ ಮತ್ತು ಕುಬ್ಬಾ ನದಿ ತುಂಬಿ ಹರಿದಿದೆ. ನದಿ ತಟ ಕಂಡ್ಲೂರಿನಲ್ಲಿ ಲಂಗರು ಹಾಕಿದ್ದ ಆರು ನಾಡದೋಣಿಗಳು ನೀರುಪಾಲಾಗಿವೆ. ಹೊಳೆಯ ರಭಸಕ್ಕೆ ಎಲ್ಲಾ ನಾಡದೋಣಿಗಳು ಕೊಚ್ಚಿ ಹೋಗಿವೆ. ಮೀನುಗಾರರು ಕಳೆದ ಎರಡು ದಿನಗಳಿಂದ ಹುಡುಕಾಡುತ್ತಿದ್ದಾರೆ.

ಉಡುಪಿಯ ಈ ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ ಜಿಲ್ಲೆಯಲ್ಲಿ ಮೂರನೇ ದಿನಕ್ಕೆ ಮುಂದುವರಿದ ಭಾರಿ ಮಳೆಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಮೂರು ತಾಲೂಕುಗಳ ಶಾಲಾ- ಕಾಲೇಜು ರಜೆ ನೀಡಲಾಗಿದೆ. ಬೈಂದೂರು ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕು ಶಾಲಾ-ಕಾಲೇಜು ಶುಕ್ರವಾರ ರಜೆ ನೀಡಲಾಗಿತ್ತು.

ಬೈಂದೂರು ತಾಲೂಕು, ಮರವಂತೆ ಬೀಚಿನಲ್ಲಿ ಭಾರಿ ಗಾತ್ರದ ಅಲೆಗಳು ಅಪ್ಪಳಿಸುತ್ತಿದೆ. ಹೀಗಾಗಿ ಮಳೆಗಾಲ ಮುಗಿಯುವವರೆಗೂ ಮುನ್ನೆಚ್ಚರಿಕೆ ಕ್ರಮವಾಗಿ ಬೀಚ್ ಬಂದ್ ಮಾಡಲಾಗಿದೆ. ಸೌಪರ್ಣಿಕ ನದಿ ಅರಬ್ಬಿ ಸಮುದ್ರ ಮಧ್ಯೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸುಮಾರು ಒಂದುವರೆ ಕಿಲೋಮೀಟರ್ ಉದ್ದವಿದ್ದು, ಯಾವುದೇ ತಡೆ ಬೇಲಿ ಇಲ್ಲ. ಈ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ತೆರಳುವ ಬಹುತೇಕರು ಕಡಲಿಗೆ ಇಳಿಯುವ ಸಾಧ್ಯತೆ ಇದೆ. ಮುಂಜಾಗ್ರತೆ ಕ್ರಮವಾಗಿ ಜಿಲ್ಲಾಡಳಿತ ಬೀಚ್ ಕಾವಲು ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ: Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

ಇಳಿಮುಖವಾದ ನೆರೆ

ಉಡುಪಿಯ ಬೈಂದೂರು ತಾಲೂಕು ನಾವುಂದದಲ್ಲಿ ನೆರೆ ಸಂಪೂರ್ಣ ಇಳಿಮುಖವಾಗಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಸೌಪರ್ಣಿಕಾ ನದಿ ಉಕ್ಕಿ ಹರಿದಿತ್ತು. ಇದರಿಂದಾಗಿ 150 ಎಕರೆ ಮುಳುಗಡೆಯಾಗಿ ಕೃಷಿ ಭೂಮಿಯಲ್ಲಿ ಬೆಳೆದ ಭತ್ತ ನಾಶವಾಗಿತ್ತು. ಸದ್ಯ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ನೆರೆ ಸಂಪೂರ್ಣ ಇಳಿಮುಖವಾಗಿದೆ. ಒಮ್ಮೆ ಭತ್ತದ ನಾಟಿ ಮುಗಿಸಿದ್ದ ರೈತರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಮಳೆ ನಿಂತಿರುವುದರಿಂದ ಬಡಾಕೆರೆ ಕೃಷಿಕರು ಮತ್ತೆ ಬತ್ತದ ನಾಟಿ ಮಾಡುತ್ತಿದ್ದಾರೆ.

ಗುಡ್ಡ ಕುಸಿತ; ಮಣ್ಣು ತೆರವು ಕಾರ್ಯಾಚರಣೆ ಆರಂಭ

ಉತ್ತರಕನ್ನಡ ಜಿಲ್ಲೆಯ ಕಾರವಾರದ ಹೊನ್ನಾವರ-ಬೆಂಗಳೂರು ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿದಿದೆ. ಹೊನ್ನಾವರದ ವರ್ನಕೇರಿ ಬಳಿ ನಿನ್ನೆ ಗುರುವಾರ ಮರ ಸಹಿತ ಗುಡ್ಡ ಕುಸಿದಿತ್ತು. ಇದರಿಂದಾಗಿ ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ, ಬೆಂಗಳೂರು ಮಾರ್ಗದ ಸಂಚಾರಕ್ಕೆ ಅಡ್ಡಿಯಾಗಿದ್ದರಿಂದ ಏಕಮುಖ ಸಂಚಾರಕ್ಕೆ ಜಿಲ್ಲಾಡಳಿತ ವ್ಯವಸ್ಥೆ ಕಲ್ಪಿಸಿತ್ತು.

ಇಂದು ಶುಕ್ರವಾರ ಕಲ್ಲುಬಂಡೆ ಸಹಿತ ಕುಸಿತ ಗುಡ್ಡ ರಸ್ತೆಗೆ ಬಿದ್ದಿದೆ. ಹೀಗಾಗಿ ಹಿಟಾಚಿ ಮೂಲಕ ಗುಡ್ಡದ ಮಣ್ಣು ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಮಣ್ಣು ತೆಗೆದರೂ ಮತ್ತೆ ಗುಡ್ಡ ಕುಸಿಯುತ್ತಿದ್ದು, ಹೊನ್ನಾವರ -ಬೆಂಗಳೂರು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಅವೈಜ್ಞಾನಿಕ ಕಾಮಗಾರಿಯಿಂದ ಮನೆಗಳು ಜಲಾವೃತ

ಉತ್ತರಕನ್ನಡ ಜಿಲ್ಲೆಯ ಕಾರವಾರದ ಅರಗಾದಲ್ಲಿ ಹಲವು ಮನೆಗಳು ಜಲಾವೃತಗೊಂಡಿದೆ. ನೌಕಾನೆಲೆ ಕಾಂಪೌಂಡ್‌, ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ನೀರು ಹರಿದುಹೋಗದೇ ಜಲಾವೃತಗೊಂಡಿದೆ. ಸಮುದ್ರಕ್ಕೆ ನೀರು ಸರಾಗವಾಗಿ ಹರಿದುಹೋಗದ ಪರಿಣಾಮ ಅರಗಾ ಗ್ರಾಮದ ನಿವಾಸಿಗಳು ಆತಂಕಗೊಂಡಿದ್ದಾರೆ. ಮಹಿಳೆಯರು, ಮಕ್ಕಳನ್ನು ಇಟ್ಟುಕೊಂಡು ಆತಂಕದಲ್ಲೇ ಕಾಲಕಳೆಯುವ ಪರಿಸ್ಥಿತಿ ಎದುರಾಗಿದೆ. ಮಳೆ ಹೆಚ್ಚಾದಲ್ಲಿ ಮನೆಗಳಿಗೆ ನೀರು ನುಗ್ಗುವ ಆತಂಕ ಇದೆ. ಪ್ರತಿವರ್ಷ ಮಳೆಗಾಲದಲ್ಲಿ ನೆರೆ ಪರಿಸ್ಥಿತಿಯನ್ನು ಅರಗಾ ಗ್ರಾಮಸ್ಥರು ಎದುರಿಸುತ್ತಿದ್ದಾರೆ. ನೀರು ಹರಿದುಹೋಗಲು ಸೂಕ್ತ ವ್ಯವಸ್ಥೆ ಇಲ್ಲದೇ ಅವ್ಯವಸ್ಥೆ ನಿರ್ಮಾಣವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

Karnataka Weather Forecast : ರಾಜ್ಯಾದ್ಯಂತ ಕಳೆದೊಂದು ವಾರದಿಂದ ಮಳೆಯು (Rain news) ಅಬ್ಬರಿಸುತ್ತಿದ್ದು, ಏಳು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಬೆಂಗಳೂರಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

VISTARANEWS.COM


on

By

karnataka Weather Forecast Rain
Koo

ಬೆಂಗಳೂರು: ಜು.5ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದ್ದು, ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ನಿರೀಕ್ಷೆಯಿದೆ. ಇನ್ನೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಮಧ್ಯಮ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಕೂಡಿದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇತ್ತ ಉತ್ತರ ಒಳನಾಡಿನದಲ್ಲಿ ಸಾಕಷ್ಟು ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಆದರೆ ಬೀದರ್, ಕಲಬುರಗಿ, ಬೆಳಗಾವಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ರಾಜಧಾನಿ ಬೆಂಗಳೂರಿನಲ್ಲಿಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಸಹಿತ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರಿಕೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Drowned In Water: ಕಾಲು ಸಂಕ ದಾಟುವಾಗ ನೀರಲ್ಲಿ ಕೊಚ್ಚಿ ಹೋದ ಮಹಿಳೆ!

Drowned In Water: ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಕಾಲು ಸಂಕ ದಾಟಲು ಹೋದಾಗ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ಹೊಸನಗರದಲ್ಲಿ ಗುರುವಾರ ಜರುಗಿದೆ. ಹೊಸನಗರ ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ.

VISTARANEWS.COM


on

Drowned In Water A woman died while crossing the kalu sanka
Koo

ಹೊಸನಗರ: ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಕಾಲು ಸಂಕ ದಾಟಲು ಹೋದಾಗ ಕೊಚ್ಚಿಕೊಂಡು (Drowned In Water) ಹೋಗಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ.

ಇದನ್ನೂ ಓದಿ: Uttara Kannada News: ಉ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ

ಮೃತ ಮಹಿಳೆ ಶಶಿಕಲಾ ಬೆಳಗ್ಗೆ ಅಗೆ ಹಾಕಲು ನೋಡಿಕೊಂಡು ಬರಲು ಜಮೀನಿಗೆ ಹೋಗಿದ್ದು ವಾಪಾಸು ಬಂದಿರಲಿಲ್ಲ. ಕೆಲಹೊತ್ತು ಬಿಟ್ಟು ಮನೆಯವರು ಹುಡುಕಲು ಹೋದ ಸಂದರ್ಭದಲ್ಲಿ ಜಮೀನಿನ ಹತ್ತಿರದ ಸಂಕದಿಂದ ಒಂದು ಕಿಮೀ ದೂರದ ದುಮುಕದ ಗದ್ಧೆ ಕಾಲು ಸೇತುವೆ ಹತ್ತಿರ ಹಳ್ಳದಲ್ಲಿ ಮೃತದೇಹವೊಂದು ಮರಕ್ಕೆ ಸಿಕ್ಕಿ ಹಾಕಿರುವುದು ಕಂಡು ಬಂದಿದೆ. ಪರಿಶೀಲಿಸಿದಾಗ ಮೃತ ಶಶಿಕಲಾರ ಮೃತದೇಹ ಎಂದು ಗೊತ್ತಾಗಿದೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

ಉಡುಪಿ: ಕರಾವಳಿಯಲ್ಲಿ ಭಾರಿ ಮಳೆಗೆ (Karnataka Weather) ಮೊದಲ (Rain News) ಬಲಿಯಾಗಿದೆ. ಉಡುಪಿಯ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.

ಇದನ್ನೂ ಓದಿ: Viral Video: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ; ಜೀವ ಉಳಿಸಿದ ಹುಡುಗ

ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Continue Reading

ಉತ್ತರ ಕನ್ನಡ

Uttara Kannada News: ಉ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ

Uttara Kannada News: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶದಲ್ಲಿರುವವರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಲ್ಲಿನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿ, ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು, ಜಿಲ್ಲೆಯಲ್ಲಿ ಇನ್ನೂ 3 ರಿಂದ 4 ದಿನಗಳು ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಗೆ ರಾಜ್ಯ ಸರ್ಕಾರದಿಂದ 2 ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ಕಳುಹಿಸುವಂತೆ ಸೂಚಿಸಲಾಗಿದೆ ಎಂದು ಡಿಸಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.

VISTARANEWS.COM


on

Heavy rain in Uttara Kannada district district NDRF team for rescue says DC Gangubai Manakar
Koo

ಕಾರವಾರ: ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶದಲ್ಲಿರುವವರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಲ್ಲಿನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿ, ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು, ಜಿಲ್ಲೆಯಲ್ಲಿ ಇನ್ನೂ 3 ರಿಂದ 4 ದಿನಗಳು ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಗೆ ರಾಜ್ಯ ಸರ್ಕಾರದಿಂದ 2 ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ಕಳುಹಿಸುವಂತೆ ಕೋರಿದ್ದು, ಈಗಾಗಲೇ ಈ ತಂಡಗಳು ಬೆಂಗಳೂರಿನಿಂದ ಹೊರಟ್ಟಿದ್ದು ಶುಕ್ರವಾರ ಈ ತಂಡಗಳು ಜಿಲ್ಲೆಗೆ (Uttara Kannada News) ಆಗಮಿಸಲಿವೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.

ಈ ಎನ್.ಡಿ.ಆರ್.ಎಫ್‌. ನ ಪ್ರತಿ ತಂಡದಲ್ಲಿ ತಲಾ 25 ಮಂದಿ ರಕ್ಷಣಾ ಸಿಬ್ಬಂದಿಗಳಿರಲಿದ್ದು, ಯಾವುದೇ ರೀತಿಯ ತುರ್ತು ಕಾರ್ಯಚರಣೆಯನ್ನು ಕೈಗೊಳ್ಳಲು ಅಗತ್ಯವಿರುವ ಎಲ್ಲಾ ಅಗತ್ಯ ರಕ್ಷಣಾ ಸಾಧನಗಳೊಂದಿಗೆ ಬರುವ ಈ ತಂಡವನ್ನು ಕಾರವಾರ, ಕುಮಟಾ ಮತ್ತು ಅಂಕೋಲಾ ಭಾಗದಲ್ಲಿ ನಿಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ಹೊನ್ನಾವರ, ಕುಮಟಾ ಮತ್ತು ಅಂಕೋಲಾ ತಾಲೂಕು ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದು, ಅವರಿಗೆ ಸಮೀಪದ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ. ಜಿಲ್ಲೆಯಲ್ಲಿ ಹೊನ್ನಾವರದಲ್ಲಿ 4, ಕುಮಟಾದಲ್ಲಿ 2 ಮತ್ತು ಅಂಕೋಲಾದಲ್ಲಿ 1 ಸೇರಿದಂತೆ ಒಟ್ಟು 7 ಕಾಳಜಿ ಕೆಂದ್ರಗಳನ್ನು ತೆರೆದಿದ್ದು ಈ ಕೇಂದ್ರಗಳಲ್ಲಿ 230ಕ್ಕೂ ಅಧಿಕ ಮಂದಿಗೆ ಆಶ್ರಯ ನೀಡಲಾಗಿದೆ. ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಪಟ್ಟ ತಾಲೂಕುಗಳ ತಹಸೀಲ್ದಾರ್‌ಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಹೆಸರು ಶೀಘ್ರದಲ್ಲೇ ಬದಲಾವಣೆ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳಿವು

ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ಊಟದ ವ್ಯವಸ್ಥೆ ಮತ್ತು ರಾತ್ರಿ ತಂಗಲು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದ್ದು, ವೈದ್ಯರ ತಂಡದಿಂದ ಆರೋಗ್ಯ ಪರಿಶೀಲನೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯವನ್ನು ಒದಗಿಸಲಾಗಿದೆ. ವ್ಯಾಪಕ ಮಳೆಯಾಗುತ್ತಿರುವ ಪ್ರದೇಶಗಳು ಸೇರಿದಂತೆ ಜಿಲ್ಲೆಯಾದ್ಯಂತ ಕಂದಾಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು 24*7 ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಅಗತ್ಯ ನೆರವು ಒದಗಿಸುವಂತೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಅಘನಾಶಿನಿ ಮತ್ತು ಶರಾವತಿ ನದಿಗಳು ತುಂಬಿ ಹರಿಯುತ್ತಿದ್ದು ಈ ಭಾಗದಲ್ಲಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಿದ್ದು, ಈ ಪ್ರದೇಶಗಳ ಮೇಲೆ ನಿರಂತರ ನಿಗಾ ವಹಿಸಲಾಗಿದೆ. ಕಾಳಿ ನದಿಯಲ್ಲಿನ ಅಪ್ಪರ್ ಕಾನೇರಿ ಅಣೆಕಟ್ಟೆಯಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಈಗಾಗಲೇ ಸೂಚಿಸಲಾಗಿದೆ.

ಇದನ್ನೂ ಓದಿ: Hassan News: ಆಲೂರಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್‌ಬುಕ್‌, ಬ್ಯಾಗ್‌ ವಿತರಣೆ

ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮಾನವ ಜೀವ ಹಾನಿಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಜಾನುವಾರು ಪ್ರಾಣ ಹಾನಿ ತಡೆಗೂ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು, ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಉಚಿತ ತುರ್ತು ಸಹಾಯವಾಣಿ ಸಂಖ್ಯೆ 1077ಗೆ ಹಾಗೂ ಮೊಬೈಲ್ ಸಂಖ್ಯೆ 94835 11015 ಕರೆ, ಮೆಸೇಜ್, ವಾಟ್ಸಾಪ್ ಸಂದೇಶ ಮತ್ತು ವಾಟ್ಸಾಪ್ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.

Continue Reading
Advertisement
Puri Jagannath Yatra
ಧಾರ್ಮಿಕ1 min ago

Puri Jagannath Yatra: ಜುಲೈ 7ರಂದು ಪುರಿ ಜಗನ್ನಾಥ ರಥಯಾತ್ರೆ; ಇದಕ್ಕಿದೆ ಪೌರಾಣಿಕ ಹಿನ್ನೆಲೆ

SCSP TSP Scheme
ಕರ್ನಾಟಕ8 mins ago

SCSP TSP Scheme: ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ಶೇ.100 ಖರ್ಚು ಮಾಡದಿದ್ರೆ ಕಠಿಣ ಕ್ರಮ; ಸಿಎಂ ವಾರ್ನಿಂಗ್‌

Viral Video
ವೈರಲ್ ನ್ಯೂಸ್22 mins ago

Viral Video: ವೇದಿಕೆಯಲ್ಲೇ ಎಲ್ಲರೆದುರು ಟಾಪ್‌ ಎತ್ತಿ ಸ್ತನ ಪ್ರದರ್ಶಿಸಿದ ಸಚಿವೆ- ವಿಡಿಯೋ ಭಾರೀ ವೈರಲ್‌

karnataka rain
ಮಳೆ25 mins ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Ayodhya Ram Mandir
ದೇಶ28 mins ago

Ayodhya Ram Mandir: ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ಹೊಸ ಸಮವಸ್ತ್ರ; ನಿಯಮದಲ್ಲಿ ಬದಲಾವಣೆ: ಕಾರಣವೇನು?

Latest33 mins ago

Self Harming: ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

Valmiki Corporation Scam
ಪ್ರಮುಖ ಸುದ್ದಿ37 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣದಲ್ಲಿ ಮುಂದುವರಿದ ಮಾಜಿ ಸಚಿವರ ಪಿಎಸ್‌ ವಿಚಾರಣೆ; ನಾಗೇಂದ್ರಗೆ ಢವಢವ!

Team India's Victory Parade
ಕ್ರಿಕೆಟ್38 mins ago

Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

Viral News
Latest42 mins ago

Viral News: ಕಾಮ ದಾಹ ತಣಿಸಿಕೊಳ್ಳಲು ವಿದ್ಯಾರ್ಥಿಗಳನ್ನೇ ಬಳಸಿಕೊಂಡ ಶಿಕ್ಷಕಿಗೆ ಶಿಕ್ಷೆ

Dengue Fever
ಕರ್ನಾಟಕ57 mins ago

Dengue Fever: ಡೆಂಗ್ಯೂ ಆತಂಕ; ರಾಜಧಾನಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದರೆ ಬೀಳಲಿದೆ ಭಾರಿ ದಂಡ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ25 mins ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ2 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು3 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು3 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ8 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ20 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ21 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ23 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ1 day ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಟ್ರೆಂಡಿಂಗ್‌