ಬೆಂಗಳೂರು: ರಾಜ್ಯದಲ್ಲಿ ಈಗ ಬಿಸಿಲಿನದ್ದೇ ಕಾರುಬಾರು. ಬಿಸಿಲು ಜೋರಾಗಿದೆ, ಸೆಕೆ ಹೆಚ್ಚಾಗಿದೆ. ಬೆಳಗ್ಗೆ ಹೊತ್ತು ಹೊರಗೆ ಕಾಲಿಟ್ಟರೆ ನೆತ್ತಿ ಸುಡುತ್ತಿದೆ. ಅಷ್ಟರ ಮಟ್ಟಿಗೆ ಬೇಸಿಗೆಯ ಪ್ರಭಾವ ಇದೆ. ಕಲಬುರಗಿಯಲ್ಲಿ ಬುಧವಾರ 37.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ರಾಜ್ಯದಲ್ಲಿಯೇ ಅತಿ ಹೆಚ್ಚು ತಾಪಮಾನ ಇದಾಗಿದೆ. ಚಾಮರಾಜನಗರದಲ್ಲಿ ಅತಿ ಕಡಿಮೆ 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ ಎರಡು ದಿನಗಳಲ್ಲಿ (ಗುರುವಾರ ಮತ್ತು ಶುಕ್ರವಾರ) ಕರಾವಳಿ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather) ಉಲ್ಲೇಖಿಸಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು ಸೇರಿದಂತೆ ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉಷ್ಣಾಂಶ ಹೆಚ್ಚಾಗಲಿದೆ. ರಾತ್ರಿ ವೇಳೆಯೂ ಇಲ್ಲಿ ಸೆಕೆಯ ಪ್ರಮಾಣ ತೀವ್ರವಾಗಿರಲಿದೆ ಎಂದು ಅಂದಾಜಿಸಲಾಗಿದೆ.
ಕಲಬುರಗಿಯಲ್ಲಿ ಹೆಚ್ಚಿನ ತಾಪಮಾನ
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿ.ಸೆ ಏರಿಕೆ ಆಗಲಿದೆ. ಇದರ ಅನುಸಾರ ಕಲಬುರಗಿಯಲ್ಲಿ 37ರಿಂದ 38 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗಲಿದೆ ಎಂದು ಅಂದಾಜಿಸಲಾಗಿದೆ.
ಇಲ್ಲಿ ಕನಿಷ್ಠ ತಾಪಮಾನದಲ್ಲಿ ಭಾರಿ ಏರಿಕೆ?
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಸೇರಿದಂತೆ ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ.
ಇದನ್ನೂ ಓದಿ: Homemade Protein Smoothie: ಬೇಸಿಗೆಗೆ ಬೇಕು ತಂಪಾದ ಪ್ರೊಟೀನ್ ಸ್ಮೂದಿಗಳು
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 34 ಡಿ.ಸೆ – 20 ಡಿ.ಸೆ
ಮಂಗಳೂರು: 33 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 21 ಡಿ.ಸೆ
ಗದಗ: 37 ಡಿ.ಸೆ – 21 ಡಿ.ಸೆ
ಹೊನ್ನಾವರ: 32 ಡಿ.ಸೆ- 22 ಡಿ.ಸೆ
ಕಲಬುರಗಿ: 37 ಡಿ.ಸೆ – 23 ಡಿ.ಸೆ
ಬೆಳಗಾವಿ: 34 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ