Karnataka weather : ರಾಜ್ಯದಲ್ಲಿ ಹೇಗಿರಲಿದೆ ಬಿಸಿಲಿನ ಪ್ರಕೋಪ - Vistara News

ಮಳೆ

Karnataka weather : ರಾಜ್ಯದಲ್ಲಿ ಹೇಗಿರಲಿದೆ ಬಿಸಿಲಿನ ಪ್ರಕೋಪ

Dry Weather : ರಾಜ್ಯಾದ್ಯಂತ ಇಂದು ಶುಷ್ಕ ವಾತಾವರಣವೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

Temperature rise in coastal and interior Karnataka
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶುಕ್ರವಾರದಂದು ರಾಜ್ಯದಲ್ಲಿ ಬಿಸಿಲಿನ ಪ್ರಕೋಪ ಹೆಚ್ಚಾಗಿ ಇರಲಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಲ್ಲಿ ಕ್ರಮೇಣ ಚಳಿಯು ಕಡಿಮೆ ಆಗಿದ್ದು, ಶುಷ್ಕ ವಾತಾವರಣ (dry weather) ಮೇಲುಗೈ ಸಾಧಿಸಲಿದೆ.

ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಏರಿಕೆ

ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ. ಮಾತ್ರವಲ್ಲದೇ ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವೆಡೆ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಿರುವ ಸಾಧ್ಯತೆ ಇದೆ. ಇದರಿಂದಾಗಿ ಬಿಸಿಲ ಧಗೆ ಹೆಚ್ಚಾಗಿರಲಿದೆ. ಇನ್ನೂ ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಯಥಾಸ್ಥಿತಿ ಇರಲಿದೆ.

ಇನ್ನೂ ಬೆಂಗಳೂರು ನಗರದಲ್ಲಿ ಮುಂಜಾನೆ ಮಂಜು ಇದ್ದರೂ, ನಂತರ ಆಕಾಶವು ನಿರ್ಮಲವಾಗಿರಲಿದೆ. ಕೆಲವು ಕಡೆಗಳಲ್ಲಿ ಬೆಳಗ್ಗೆ ಹಾಗೂ ರಾತ್ರಿಯಂದು ತಂಪು ಗಾಳಿಯು ಬೀಸಲಿದೆ. ಇದರ ಹೊರತಾಗಿಯೂ ಬಿಸಿಲ ಝಳ ಮುಂದುವರಿಯಲಿದೆ. ಗರಿಷ್ಠ ಉಷ್ಣಾಂಶ 31 ಹಾಗೂ ಕನಿಷ್ಠ ಉಷ್ಣಾಂಶ 17 ಡಿ.ಸೆ ಇರಲಿದೆ.

ಇದನ್ನೂ ಓದಿ: Reels Tragedy : ʻಕರಿಮಣಿ ಮಾಲೀಕ ನೀನಲ್ಲʼ ಎಂದಳು ಪತ್ನಿ; ಬೇಸರದಿಂದ ಪತಿ ಆತ್ಮಹತ್ಯೆ

ಬರುತ್ತಿರುವ ಬೇಸಿಗೆಯಲ್ಲಿ ನಿಮ್ಮ ಆರೋಗ್ಯ ಕಾಳಜಿ ಹೀಗಿರಲಿ

ಬದಲಾಗುತ್ತಿರುವ ವಾತಾವರಣಕ್ಕೆ ಸರಿಯಾಗಿ ವ್ಯತ್ಯಾಸವಾಗುವ ನಮ್ಮ ಜೀರ್ಣಾಂಗಗಳ ಸೂಕ್ಷ್ಮಾಣುಗಳಿಂದಾಗಿ ಕೆಲವೊಮ್ಮೆ ಹೊಟ್ಟೆ ಹಾಳಾಗುವುದಿದೆ. ಅಜೀರ್ಣ, ಆಸಿಡಿಟಿ, ಹೊಟ್ಟೆ ಉಬ್ಬರ, ಇವುಗಳಿಂದಾಗಿ ಮೂಡ್‌ ಬದಲಾವಣೆ ಮುಂತಾದವು ಎದುರಾದರೆ- ಅಸಹಜವೇನಲ್ಲ. ಇವುಗಳನ್ನು ಸರಿ ಮಾಡಿಕೊಳ್ಳುವುದಕ್ಕೂ (Season Transition) ಉಪಾಯಗಳಿವೆ. ಚಳಿ ಮತ್ತು ಶುಷ್ಕ ದಿನಗಳು ಮರೆಯಾಗುತ್ತಿವೆ. ರಥಸಪ್ತಮಿ ಮುಗಿದ ಮೇಲೆ ಬಿಸಿಲಿನ ತಾಪ ಏರತೊಡಗುತ್ತದೆ. ಈವರೆಗೆ ಚಳಿಯ ದಿನಗಳಿಗೆ ಹೊಂದಿಕೊಂಡಿದ್ದ ದೇಹ ಈಗ ಸೆಕೆಗೆ ಹೊಂದಿಕೊಳ್ಳಬೇಕು. ಆದರೆ ಚಳಿಯಲ್ಲಿ ಬೇಕಾಗುವ ವಸ್ತ್ರಗಳ ಬದಲಿಗೆ ಬೇಸಿಗೆಯ ವಸ್ತ್ರಗಳನ್ನು ಹೊಂದಿಸಿಕೊಳ್ಳುವ ಬಗ್ಗೆಯೆ ನಾವು ಯೋಚಿಸುವುದು. ಅಷ್ಟೇ ಆದರೆ ಸಾಲದಲ್ಲ. ನಮ್ಮ ಕರುಳಿನಲ್ಲಿರುವ ಕೋಟಿಗಟ್ಟಲೆ ಸಂಖ್ಯೆಯ ಒಳ್ಳೆಯ ಬ್ಯಾಕ್ಟೀರಿಯಗಳಲ್ಲೂ (gut microbiome) ಬದಲಾವಣೆಗಳು ಆಗುತ್ತಿರುತ್ತವೆ.

Summer sun is the best source of vitamin D.

ಇವುಗಳಿಗಿದೆ ಉಪಾಯ

ಬದಲಾಗುತ್ತಿರುವ ವಾತಾವರಣಕ್ಕೆ ಸರಿಯಾಗಿ ವ್ಯತ್ಯಾಸವಾಗುವ ನಮ್ಮ ಜೀರ್ಣಾಂಗಗಳ ಸೂಕ್ಷ್ಮಾಣುಗಳಿಂದಾಗಿ ಕೆಲವೊಮ್ಮೆ ಹೊಟ್ಟೆ ಹಾಳಾಗುವುದಿದೆ. ಅಜೀರ್ಣ, ಆಸಿಡಿಟಿ, ಹೊಟ್ಟೆ ಉಬ್ಬರ, ಇವುಗಳಿಂದಾಗಿ ಮೂಡ್‌ ಬದಲಾವಣೆ ಮುಂತಾದವು ಎದುರಾದರೆ- ಅಸಹಜವೇನಲ್ಲ. ಇವುಗಳನ್ನು ಸರಿ ಮಾಡಿಕೊಳ್ಳುವುದಕ್ಕೂ ಉಪಾಯಗಳಿವೆ. ನಮ್ಮ ಆಹಾರ ಮತ್ತು ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಂಡರೆ ಈ ಸಂಕ್ರಮಣದ ಕಾಲದಲ್ಲಿ ಆರೋಗ್ಯ ಹಾಳಾಗದಂತೆ ಕಾಪಾಡಿಕೊಳ್ಳಬಹುದು.

Spicy foods Foods You Should Avoid Consuming With Milk

ಖಾರ ಪದಾರ್ಥ ಅಗತ್ಯವಿಲ್ಲ

ಚಳಿಗಾಲದಲ್ಲಿ ಹೆಚ್ಚಾಗಿ ಸೇವಿಸುತ್ತಿದ್ದ ಮಸಾಲೆ, ಖಾರದ ಆಹಾರಗಳು ಈಗ ಅಗತ್ಯವಿಲ್ಲ. ಅತಿ ಬಿಸಿಯಾದ, ಉಷ್ಣ ಹೆಚ್ಚಿಸುವಂಥ, ಕೊಬ್ಬು ಹೆಚ್ಚಿರುವ ಆಹಾರಗಳು ಬೇಸಿಗೆಯಲ್ಲಿ ಆರೋಗ್ಯ ಹಾಳುಗೆಡವುತ್ತವೆ. ಕರಿದ ತಿಂಡಿಗಳನ್ನೂ ಇದೇ ಸಾಲಿಗೆ ಸೇರಿಸಬಹುದು. ಈಗ ರಸಭರಿತ, ತಂಪಾದ, ಗಿಡ ಮೂಲಿಕೆಗಳು ಸೇರಿದಂಥ, ದೇಹದ ಉಷ್ಣತೆ ತಗ್ಗಿಸುವಂಥ ಆಹಾರಗಳು ಹಿತ ನೀಡುತ್ತವೆ. ಹಾಗೆಂದು ತಣ್ಣಗಿನ ಐಸ್‌ಕ್ರೀಮ್‌, ಫ್ರಿಜ್‌ನಲ್ಲಿರುವ ಸೋಡಾ, ಫ್ರೂಟ್‌ಜ್ಯೂಸ್‌ಗಳನ್ನು ಗಂಟಲಿಗೆ ಬಗ್ಗಿಸಿದಿರೊ, ಆರೋಗ್ಯ ಮಗುಚೀತು, ಜೋಕೆ!

Sip dont gulp Rules of Drinking Water for a Healthier You

ನೀರು ಹೆಚ್ಚಿಸಿ

ಚಳಿಗಾಲದಲ್ಲಿ ಹೆಚ್ಚು ಬಾಯಾರಿಕೆ ಆಗುವುದಿಲ್ಲ ಎಂಬ ನೆವವೊಡ್ಡಿ ನೀರು ಕುಡಿಯುವ ಪ್ರಮಾಣವನ್ನು ಕಡಿಮೆ ಮಾಡಿದ್ದರೆ, ಇದೀಗ ಅದನ್ನು ಹೆಚ್ಚಿಸಿಕೊಳ್ಳುವ ಸಮಯ. ಜೀರ್ಣಾಂಗಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದಕ್ಕೆ ನೀರಿನ ಪ್ರಮಾಣ ಸಾಕಷ್ಟು ದೊರೆಯಬೇಕಾದ್ದು ಅಗತ್ಯ. ಕರುಳಿನಲ್ಲಿ ಸತ್ವಗಳನ್ನು ಹೀರಿಕೊಳ್ಳುವ ಲೋಳೆಯ ಪದರಗಳಿಗೆ ಹದವಾಗಿ ದ್ರವಾಹಾರಗಳು ಬೇಕು. ಅದರಲ್ಲೂ ಉಷ್ಣತೆ ಹೆಚ್ಚಾಗಿ ಬೆವರಲಾರಂಭಿಸಿದರೆ, ನೀರಿನ ಪ್ರಮಾಣ ಹೆಚ್ಚಿಸಿದಷ್ಟೂ ಸಾಕಾಗುವುದಿಲ್ಲ. ಹಾಗಾಗಿ ಸೌತೆಕಾಯಿ, ಕಲ್ಲಂಗಡಿ, ಕಿತ್ತಳೆಯಂಥ ರಸಭರಿತ ಆಹಾರಗಳ ಪ್ರಮಾಣ ಹೆಚ್ಚಿಸಬಹುದು.

ಪ್ರೊಬಯಾಟಿಕ್‌

ಇದರಲ್ಲಿರುವ ಸತ್ವಗಳ ನಮ್ಮ ಜೀರ್ಣಾಂಗಗಳಿಗೆ ಅಮೃತವಿದ್ದಂತೆ. ಇದರ ಬ್ಯಾಕ್ಟೀರಿಯಗಳು ಕರುಳಿಗೆ ಅಗತ್ಯವಾದ ಒಳ್ಳೆಯ ಸೂಕ್ಷ್ಮಾಣುಗಳ ಪೂರಕೆಯಲ್ಲಿ ಗಣನೀಯ ಪಾತ್ರ ವಹಿಸುತ್ತವೆ. ಹಾಗಾಗಿ ಹುದುಗು ಬಂದಂಥ ಆಹಾರಗಳಲ್ಲಿ ಹೆಚ್ಚಿನ ಪ್ರೊಬಯಾಟಿಕ್‌ ಸತ್ವಗಳಿದ್ದು, ದೇಹಕ್ಕೆ ಪೂರಕವಾಗಿ ಕೆಲಸ ಮಾಡುತ್ತವೆ. ಮೊಸರು, ಮಜ್ಜಿಗೆ, ಗ್ರೀಕ್‌ ಯೋಗರ್ಟ್‌ಗಳು. ಕಿಮ್ಚಿ ಮುಂತಾದವು ಎಲ್ಲಾ ಕಾಲಕ್ಕೂ ನಮಗೆ ಅಗತ್ಯ.

Side Effects Of Fiber

ನಾರು

ನೀರಿನಷ್ಟೇ ನಾರು ಸಹ ಮುಖ್ಯ. ಆಹಾರದಲ್ಲಿ ನಾರು ಹೆಚ್ಚಿದಂತೆ ಕರುಳಿನ ಸೂಕ್ಷ್ಮಾಣುಗಳ ಸಮತೋಲನ ಸಾಧಿಸುವಲ್ಲಿ ಸುಲಭವಾಗುತ್ತದೆ. ಕರಗದಿರುವಂಥ ನಾರುಗಳು ಜೀರ್ಣಾಂಗಗಳ ಆರೋಗ್ಯ ಸುಧಾರಿಸಿ, ಮಲಬದ್ಧತೆ ನಿವಾರಿಸುತ್ತವೆ. ಹಾಗಾಗಿ ಋತು ಬದಲಾಗುವ ಸಮಯದಲ್ಲಿ ನಾರುಭರಿತ ಆಹಾರ ಅಗತ್ಯವಾಗಿ ಬೇಕು. ಬೇಸಿಗೆಯಲ್ಲಿ ದೊರೆಯುವ ಹಣ್ಣು-ತರಕಾರಿಗಳು, ಇಡಿ ಧಾನ್ಯಗಳು, ಮೊಳಕೆ ಕಾಳುಗಳು ಮುಂತಾದವು ದೇಹದ ಸ್ವಾಸ್ಥ್ಯ ಕಾಪಾಡುವಲ್ಲಿ ನೆರವಾಗುತ್ತವೆ.

ತಿನ್ನುವುದೆಷ್ಟು?

ಸಹಜವಾಗಿ ದೇಹದ ಚಯಾಪಚಯ ಚಳಿಗಾಲದಷ್ಟು ಹೆಚ್ಚು ಬೇಸಿಗೆಯಲ್ಲಿ ಇರುವುದಿಲ್ಲ. ಹಾಗಾಗಿ ತಿನ್ನುವ ಪ್ರಮಾಣವನ್ನು ಮೊದಲಿನಷ್ಟೇ ಇರಿಸಿಕೊಂಡರೆ ಈಗ ಕಷ್ಟವಾಗಬಹುದು. ಯಾವುದು ಬೇಕು ಎನ್ನುವುದರ ಜೊತೆಗೆ ಎಷ್ಟು ಬೇಕು ಎನ್ನುವುದರತ್ತಲೂ ಗಮನ ಅಗತ್ಯ. ಒಂದಿಷ್ಟು ಹೊಟ್ಟೆಗೆ ಹಾಕಿದರಾಯಿತು ಎನ್ನುವ ಬದಲು, ತಿನ್ನುವ ಆಹಾರದ ರುಚಿ, ಘಮ ಇತ್ಯಾದಿಗಳ ಬಗ್ಗೆ ಲಕ್ಷ್ಯ ಕೊಡಿ. ತಿಂದ ಆಹಾರ ರುಚಿಸಿದರೆ, ದೇಹಕ್ಕೆ ಹೀರಿಕೊಳ್ಳುವುದು ಸುಲಭ.

Improved Digestion Tea Benefits

ನಿಯಮಿತವಾಗಿರಲಿ

ನಮ್ಮ ಜೀರ್ಣಾಂಗಗಳು ಸಂತೃಪ್ತವಾಗಿ ಇರಬೇಕೆಂದರೆ ನಿಯಮಿತವಾದ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳುವುದು ಅಗತ್ಯ. ಒಂದು ಊಟ ಅಥವಾ ತಿಂಡಿಯಿಂದ ಇನ್ನೊಂದಕ್ಕೆ ಕನಿಷ್ಟ 3-4 ತಾಸುಗಳ ಅಂತರ ಇರಲಿ. ರಾತ್ರಿಯ ನಿದ್ದೆಯನ್ನೂ ನಿಯಮಿತವಾಗಿ ಇರಿಸಿಕೊಳ್ಳುವುದು ಮುಖ್ಯ. ಈ ಎಲ್ಲ ಅಭ್ಯಾಸಗಳಿಂದ ನಮ್ಮ ಜೀರ್ಣಾಂಗಗಳ ಆರೋಗ್ಯವನ್ನು ಹೆಚ್ಚಿಸಿಕೊಳ್ಳಬಹುದು. ಇದರಿಂದ ಯಾವುದೇ ಋತು ಬದಲಾವಣೆಗೂ ನಮ್ಮ ಸ್ವಾಸ್ಥ್ಯ ಬದಲಾಗದಂತೆ ಕಾಪಾಡಿಕೊಳ್ಳಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

Karnataka Weather Forecast : ರಾಜ್ಯಾದ್ಯಂತ ಕಳೆದೊಂದು ವಾರದಿಂದ ಮಳೆಯು (Rain news) ಅಬ್ಬರಿಸುತ್ತಿದ್ದು, ಏಳು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಬೆಂಗಳೂರಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

VISTARANEWS.COM


on

By

karnataka Weather Forecast Rain
Koo

ಬೆಂಗಳೂರು: ಜು.5ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದ್ದು, ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ನಿರೀಕ್ಷೆಯಿದೆ. ಇನ್ನೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಮಧ್ಯಮ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಕೂಡಿದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇತ್ತ ಉತ್ತರ ಒಳನಾಡಿನದಲ್ಲಿ ಸಾಕಷ್ಟು ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಆದರೆ ಬೀದರ್, ಕಲಬುರಗಿ, ಬೆಳಗಾವಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ರಾಜಧಾನಿ ಬೆಂಗಳೂರಿನಲ್ಲಿಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಸಹಿತ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರಿಕೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Drowned In Water: ಕಾಲು ಸಂಕ ದಾಟುವಾಗ ನೀರಲ್ಲಿ ಕೊಚ್ಚಿ ಹೋದ ಮಹಿಳೆ!

Drowned In Water: ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಕಾಲು ಸಂಕ ದಾಟಲು ಹೋದಾಗ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ಹೊಸನಗರದಲ್ಲಿ ಗುರುವಾರ ಜರುಗಿದೆ. ಹೊಸನಗರ ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ.

VISTARANEWS.COM


on

Drowned In Water A woman died while crossing the kalu sanka
Koo

ಹೊಸನಗರ: ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಕಾಲು ಸಂಕ ದಾಟಲು ಹೋದಾಗ ಕೊಚ್ಚಿಕೊಂಡು (Drowned In Water) ಹೋಗಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ.

ಇದನ್ನೂ ಓದಿ: Uttara Kannada News: ಉ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ

ಮೃತ ಮಹಿಳೆ ಶಶಿಕಲಾ ಬೆಳಗ್ಗೆ ಅಗೆ ಹಾಕಲು ನೋಡಿಕೊಂಡು ಬರಲು ಜಮೀನಿಗೆ ಹೋಗಿದ್ದು ವಾಪಾಸು ಬಂದಿರಲಿಲ್ಲ. ಕೆಲಹೊತ್ತು ಬಿಟ್ಟು ಮನೆಯವರು ಹುಡುಕಲು ಹೋದ ಸಂದರ್ಭದಲ್ಲಿ ಜಮೀನಿನ ಹತ್ತಿರದ ಸಂಕದಿಂದ ಒಂದು ಕಿಮೀ ದೂರದ ದುಮುಕದ ಗದ್ಧೆ ಕಾಲು ಸೇತುವೆ ಹತ್ತಿರ ಹಳ್ಳದಲ್ಲಿ ಮೃತದೇಹವೊಂದು ಮರಕ್ಕೆ ಸಿಕ್ಕಿ ಹಾಕಿರುವುದು ಕಂಡು ಬಂದಿದೆ. ಪರಿಶೀಲಿಸಿದಾಗ ಮೃತ ಶಶಿಕಲಾರ ಮೃತದೇಹ ಎಂದು ಗೊತ್ತಾಗಿದೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

ಉಡುಪಿ: ಕರಾವಳಿಯಲ್ಲಿ ಭಾರಿ ಮಳೆಗೆ (Karnataka Weather) ಮೊದಲ (Rain News) ಬಲಿಯಾಗಿದೆ. ಉಡುಪಿಯ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.

ಇದನ್ನೂ ಓದಿ: Viral Video: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ; ಜೀವ ಉಳಿಸಿದ ಹುಡುಗ

ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Continue Reading

ಉತ್ತರ ಕನ್ನಡ

Uttara Kannada News: ಉ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ

Uttara Kannada News: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶದಲ್ಲಿರುವವರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಲ್ಲಿನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿ, ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು, ಜಿಲ್ಲೆಯಲ್ಲಿ ಇನ್ನೂ 3 ರಿಂದ 4 ದಿನಗಳು ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಗೆ ರಾಜ್ಯ ಸರ್ಕಾರದಿಂದ 2 ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ಕಳುಹಿಸುವಂತೆ ಸೂಚಿಸಲಾಗಿದೆ ಎಂದು ಡಿಸಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.

VISTARANEWS.COM


on

Heavy rain in Uttara Kannada district district NDRF team for rescue says DC Gangubai Manakar
Koo

ಕಾರವಾರ: ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶದಲ್ಲಿರುವವರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಲ್ಲಿನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿ, ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು, ಜಿಲ್ಲೆಯಲ್ಲಿ ಇನ್ನೂ 3 ರಿಂದ 4 ದಿನಗಳು ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಗೆ ರಾಜ್ಯ ಸರ್ಕಾರದಿಂದ 2 ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ಕಳುಹಿಸುವಂತೆ ಕೋರಿದ್ದು, ಈಗಾಗಲೇ ಈ ತಂಡಗಳು ಬೆಂಗಳೂರಿನಿಂದ ಹೊರಟ್ಟಿದ್ದು ಶುಕ್ರವಾರ ಈ ತಂಡಗಳು ಜಿಲ್ಲೆಗೆ (Uttara Kannada News) ಆಗಮಿಸಲಿವೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.

ಈ ಎನ್.ಡಿ.ಆರ್.ಎಫ್‌. ನ ಪ್ರತಿ ತಂಡದಲ್ಲಿ ತಲಾ 25 ಮಂದಿ ರಕ್ಷಣಾ ಸಿಬ್ಬಂದಿಗಳಿರಲಿದ್ದು, ಯಾವುದೇ ರೀತಿಯ ತುರ್ತು ಕಾರ್ಯಚರಣೆಯನ್ನು ಕೈಗೊಳ್ಳಲು ಅಗತ್ಯವಿರುವ ಎಲ್ಲಾ ಅಗತ್ಯ ರಕ್ಷಣಾ ಸಾಧನಗಳೊಂದಿಗೆ ಬರುವ ಈ ತಂಡವನ್ನು ಕಾರವಾರ, ಕುಮಟಾ ಮತ್ತು ಅಂಕೋಲಾ ಭಾಗದಲ್ಲಿ ನಿಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ಹೊನ್ನಾವರ, ಕುಮಟಾ ಮತ್ತು ಅಂಕೋಲಾ ತಾಲೂಕು ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದು, ಅವರಿಗೆ ಸಮೀಪದ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ. ಜಿಲ್ಲೆಯಲ್ಲಿ ಹೊನ್ನಾವರದಲ್ಲಿ 4, ಕುಮಟಾದಲ್ಲಿ 2 ಮತ್ತು ಅಂಕೋಲಾದಲ್ಲಿ 1 ಸೇರಿದಂತೆ ಒಟ್ಟು 7 ಕಾಳಜಿ ಕೆಂದ್ರಗಳನ್ನು ತೆರೆದಿದ್ದು ಈ ಕೇಂದ್ರಗಳಲ್ಲಿ 230ಕ್ಕೂ ಅಧಿಕ ಮಂದಿಗೆ ಆಶ್ರಯ ನೀಡಲಾಗಿದೆ. ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಪಟ್ಟ ತಾಲೂಕುಗಳ ತಹಸೀಲ್ದಾರ್‌ಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಹೆಸರು ಶೀಘ್ರದಲ್ಲೇ ಬದಲಾವಣೆ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳಿವು

ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ಊಟದ ವ್ಯವಸ್ಥೆ ಮತ್ತು ರಾತ್ರಿ ತಂಗಲು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದ್ದು, ವೈದ್ಯರ ತಂಡದಿಂದ ಆರೋಗ್ಯ ಪರಿಶೀಲನೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯವನ್ನು ಒದಗಿಸಲಾಗಿದೆ. ವ್ಯಾಪಕ ಮಳೆಯಾಗುತ್ತಿರುವ ಪ್ರದೇಶಗಳು ಸೇರಿದಂತೆ ಜಿಲ್ಲೆಯಾದ್ಯಂತ ಕಂದಾಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು 24*7 ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಅಗತ್ಯ ನೆರವು ಒದಗಿಸುವಂತೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಅಘನಾಶಿನಿ ಮತ್ತು ಶರಾವತಿ ನದಿಗಳು ತುಂಬಿ ಹರಿಯುತ್ತಿದ್ದು ಈ ಭಾಗದಲ್ಲಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಿದ್ದು, ಈ ಪ್ರದೇಶಗಳ ಮೇಲೆ ನಿರಂತರ ನಿಗಾ ವಹಿಸಲಾಗಿದೆ. ಕಾಳಿ ನದಿಯಲ್ಲಿನ ಅಪ್ಪರ್ ಕಾನೇರಿ ಅಣೆಕಟ್ಟೆಯಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಈಗಾಗಲೇ ಸೂಚಿಸಲಾಗಿದೆ.

ಇದನ್ನೂ ಓದಿ: Hassan News: ಆಲೂರಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್‌ಬುಕ್‌, ಬ್ಯಾಗ್‌ ವಿತರಣೆ

ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮಾನವ ಜೀವ ಹಾನಿಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಜಾನುವಾರು ಪ್ರಾಣ ಹಾನಿ ತಡೆಗೂ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು, ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಉಚಿತ ತುರ್ತು ಸಹಾಯವಾಣಿ ಸಂಖ್ಯೆ 1077ಗೆ ಹಾಗೂ ಮೊಬೈಲ್ ಸಂಖ್ಯೆ 94835 11015 ಕರೆ, ಮೆಸೇಜ್, ವಾಟ್ಸಾಪ್ ಸಂದೇಶ ಮತ್ತು ವಾಟ್ಸಾಪ್ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.

Continue Reading

ಮಳೆ

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

Karnataka Weather Forecast: ಭಾರಿ ಮಳೆಗೆ (Rain News) ಗುಡ್ಡ ಕುಸಿದಿದೆ. ಪರಿಣಾಮ ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಈ ಮೂಲಕ ಕರಾವಳಿಯಲ್ಲಿ ಮಳೆಗೆ ಮೊದಲ ಬಲಿಯಾಗಿದೆ.

VISTARANEWS.COM


on

By

karnataka Weather Forecast
Koo

ಉಡುಪಿ: ಕರಾವಳಿಯಲ್ಲಿ ಭಾರಿ ಮಳೆಗೆ (Karnataka Weather) ಮೊದಲ (Rain News) ಬಲಿಯಾಗಿದೆ. ಉಡುಪಿಯ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.

ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಆಗುಂಬೆಯಲ್ಲಿ 25 ಸೆಂ.ಮೀ ಮಳೆ ದಾಖಲು

ನೈರುತ್ಯ ಮಾನ್ಸೂನ್ ಕರಾವಳಿಯಲ್ಲಿ ಸಕ್ರಿಯವಾಗಿದ್ದರೆ, ಒಳಭಾಗದಲ್ಲಿ ಸಾಮಾನ್ಯವಾಗಿತ್ತು. ಆಗುಂಬೆ (ಶಿವಮೊಗ್ಗ ಜಿಲ್ಲೆ) 25, ಗೇರ್ಸೊಪ್ಪ (ಉತ್ತರ ಕನ್ನಡ ಜಿಲ್ಲೆ) 24, ಸಿದ್ದಾಪುರ (ಉಡುಪಿ ಜಿಲ್ಲೆ) 23, ಕಮ್ಮರಡಿ (ಚಿಕ್ಕಮಗಳೂರು) 20 ಸೆಂ.ಮೀ ಮಳೆಯಾಗಿತ್ತು. ಲಿಂಗನಮಕ್ಕಿ (ಶಿವಮೊಗ್ಗ ಜಿಲ್ಲೆ) 19, ಕದ್ರಾ (ಉತ್ತರ ಕನ್ನಡ ಜಿಲ್ಲೆ) 15, ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ) 15, ಶೃಂಗೇರಿ (ಜಿಲ್ಲೆ ಚಿಕ್ಕಮಗಳೂರು) 15, ಕುಂದಾಪುರ (ಉಡುಪಿ ಜಿಲ್ಲೆ) 13, ಮಂಕಿ (ಉತ್ತರ ಕನ್ನಡ ಜಿಲ್ಲೆ) 12 ಸೆಂ.ಮೀ ಮಳೆಯಾಗಿತ್ತು.

ಇದನ್ನೂ ಓದಿ: Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

ಚಾರ್ಮಾಡಿ ಹೆದ್ದಾರಿ ತಡೆಗೋಡೆಗಳಲ್ಲಿ ಬಿರುಕು

ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿದ್ದು, ಚಾರ್ಮಾಡಿ ಹೆದ್ದಾರಿಯ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಲ್ಲಲ್ಲಿ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿದೆ. ಹೊಸ ಕಾಮಗಾರಿ ನಡೆದ ಸ್ಥಳದಲ್ಲೇ ಬಿರುಕು ಕಾಣಿಸಿಕೊಂಡಿದೆ. ಮಳೆ ಹಾಗೂ ಮಂಜಿನ ನಡುವೆ ರಸ್ತೆ ಬಿರುಕು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ರಸ್ತೆಗೆ ಕೋಟ್ಯಂತರ ರೂಪಾಯಿ ವ್ಯಯಿಸಿದರೂ ಪ್ರಯೋಜನವಾಗಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇತ್ತ ರಾತ್ರಿಯಿಡೀ ಸುರಿದ ಮಳೆಗೆ ಸೇತುವೆ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಾಳೆ ಗದ್ದೆ ಬಿಳ್ಳೂರು ಗ್ರಾಮದಲ್ಲಿ ಬಿಳ್ಳೂರು- ಮುಲ್ಲರ ಹಳ್ಳಿ ಸೇರಿ ಹಲವು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲೆ ನೀರು ನದಿಯಂತೆ ಉಕ್ಕಿ ಹರಿಯುತ್ತಿದೆ. ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಗ್ರಾಮಸ್ಥರು ಪರದಾಟ ಅನುಭವಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.

ಶೃಂಗೇರಿಯ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಶೃಂಗೇರಿ ಶಾರದಾಂಭೆ ತಟದಲ್ಲಿ ತುಂಗಾ ನದಿ ದೊಡ್ಡ ಪ್ರಮಾಣದಲ್ಲಿ ಹರಿಯುತ್ತಿದೆ. ತುಂಗಾ ನದಿ ಇಕ್ಕೆಲಗಳ ತೋಟಗಳು ಜಲಾವೃತ‌ವಾಗುವ ಸಾಧ್ಯತೆ ಇದೆ. ಇತ್ತ ಅಪಾಯದ ಮಟ್ಟ ಮೀರಿದ ಭದ್ರಾ ನದಿಯಿಂದಾಗಿ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಹಂತ ತಲುಪಿದೆ.

ಹೆಬ್ಬಾಳೆ ಸೇತುವೆಯ ಮೇಲ್ಪದರಕ್ಕೆ ಭದ್ರಾ ನೀರು ಅಪ್ಪಳಿಸುತ್ತಿದೆ. ಸೇತುವೆ ಮುಳುಗಡೆಯಾದರೆ ಹತ್ತಾರು ಹಳ್ಳಿಗಳ ಸಂಪರ್ಕ ಬಂದ್ ಆಗಲಿದೆ. ಕಳಸ-ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವೂ ಬಂದ್ ಆಗಲಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಪ್ರವಾಸಿಗರು ಹಾಗೂ ಸ್ಥಳೀಯರ ಓಡಾಟಕ್ಕೆ ತಡೆಹಿಡಿಯಲಾಗಿದೆ. ಯಾವುದೇ ಕ್ಷಣದಲ್ಲಾದರೂ ಸೇತುವೆ ಮೇಲೆ ನೀರು ಉಕ್ಕುವ ಸಾಧ್ಯತೆ ಇದೆ. ಹೀಗಾಗಿ ಸ್ಥಳದಲ್ಲಿಯೇ ಕಳಸ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Actor Darshan very simple person Yamuna Srinidhi
ಸ್ಯಾಂಡಲ್ ವುಡ್9 mins ago

Actor Darshan: ದರ್ಶನ್‌ ಅತ್ಯಂತ ಸರಳ, ದೇವತಾ ಮನುಷ್ಯ; ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದ ಖ್ಯಾತ ನಟಿ!  

Job Alert
ಉದ್ಯೋಗ16 mins ago

Job Alert: ಇಂಡಿಯನ್‌ ಹೈವೇ ಮ್ಯಾನೇಜ್‌ಮೆಂಟ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಇಂದೇ ಅಪ್ಲೈ ಮಾಡಿ

UK Election
ವಿದೇಶ23 mins ago

UK Election: ಬ್ರಿಟನ್‌ನಲ್ಲಿ ಲೇಬರ್‌ ಪಾರ್ಟಿಗೆ ಗದ್ದುಗೆ ಖಚಿತ- ಪ್ರಧಾನಿ ಪಟ್ಟಕೇರಲಿರುವ ಕೀರ್‌ ಸ್ಟಾರ್ಮರ್‌ ಹಿನ್ನೆಲೆ ಏನು?

IAS Transfer
ಪ್ರಮುಖ ಸುದ್ದಿ23 mins ago

IAS Transfer: ಮೈಸೂರು ಜಿಲ್ಲಾಧಿಕಾರಿ ಸೇರಿದಂತೆ 21 ಐಎಎಸ್‌ ಅಧಿಕಾರಿಗಳ ವರ್ಗಾವಣೆ, ಯಾರ್ಯಾರು ಎಲ್ಲಿಗೆ?

viral video
ಕ್ರೀಡೆ38 mins ago

Viral Video: ಜನಸಂದಣಿ ಮಧ್ಯೆಯೂ ಆ್ಯಂಬುಲೆನ್ಸ್​ಗೆ ದಾರಿ ಮಾಡಿಕೊಟ್ಟ ಟೀಮ್‌ ಇಂಡಿಯಾ ಅಭಿಮಾನಿಗಳು

Bajaj Freedom 125
ಆಟೋಮೊಬೈಲ್40 mins ago

Bajaj Freedom 125: ವಿಶ್ವದ ಮೊದಲ ಸಿಎನ್‌ಜಿ ಬೈಕ್‌ ಬಜಾಜ್‌ ಫ್ರೀಡಂ 125 ಇಂದು ಬಿಡುಗಡೆ

Sumalatha Ambareesh Talks About Darshan Fans And Renukaswamy Case
ಸ್ಯಾಂಡಲ್ ವುಡ್55 mins ago

Actor Darshan: ದರ್ಶನ್‌ ಕೇಸ್‌ ಬಗ್ಗೆ ಮಾತನಾಡದೇ ಇರೋದಕ್ಕೆ ಕಾರಣ ತಿಳಿಸಿದ ಸಮಲತಾ; ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದೇನು?

Team India
ಕ್ರೀಡೆ1 hour ago

Team India: ವಾಂಖೆಡೆ ಸ್ಟೇಡಿಯಂನಲ್ಲಿ ವಂದೇ ಮಾತರಂ ಹಾಡಿದ ಟೀಮ್​ ಇಂಡಿಯಾ; ವಿಡಿಯೊ ಹಂಚಿಕೊಂಡ ಎ.ಆರ್. ರೆಹಮಾನ್

Vastu Tips
ಧಾರ್ಮಿಕ1 hour ago

Vastu Tips: ಮನೆಯೊಳಗೆ ಎಲ್ಲೆಂದರಲ್ಲಿ ಕನ್ನಡಿ ಇಟ್ಟು ಕುಟುಂಬದ ನೆಮ್ಮದಿ ಹಾಳು ಮಾಡಬೇಡಿ!

assault case anekal
ಕ್ರೈಂ1 hour ago

Assault Case: ʼಏಯ್‌ ಹೋಗೋʼ ಅಂದಿದ್ದಕ್ಕೆ ವಿಕಲ ಚೇತನನನ್ನು ಕೊಚ್ಚಿ ಹಾಕಿದರು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast Rain
ಮಳೆ4 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ16 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ17 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ18 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ20 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ21 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ22 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ23 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ3 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ4 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌