ಬೆಂಗಳೂರು: ರಾಜ್ಯದಲ್ಲಿ ಶುಷ್ಕ ವಾತಾವರಣವೇ ಮೇಲುಗೈ ಸಾಧಿಸಲಿದೆ. ಒಂದೆರಡು ಕಡೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ಇದರಿಂದಾಗಿ ಬಿಸಿಲ ಧಗೆ (karnataka weather Forecast) ಹೆಚ್ಚಿರಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಹಾಗೂ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದ ಒಂದೆರಡು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 4 ಡಿ.ಸೆ ಇಳಿಕೆ ಆಗಲಿದೆ. ಇದರಿಂದಾಗಿ ರಾತ್ರಿ ಹೊತ್ತು ಕೆಲವೆಡೆ ಚಳಿ ಆವರಿಸಲಿದೆ.
ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಕನಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2 ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿರಲಿದೆ.
ಇದನ್ನೂ ಓದಿ: Forced Conversion : ಆಪರೇಶನ್ ಮತಾಂತರ; ನರ್ಸ್‌ಗಳಿಂದ ಹಿಂದೂಗಳ ಬ್ರೈನ್ ವಾಶ್
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 32 ಡಿ.ಸೆ -21 ಡಿ.ಸೆ
ಮಂಗಳೂರು: 35 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 19 ಡಿ.ಸೆ
ಗದಗ: 34 ಡಿ.ಸೆ – 19 ಡಿ.ಸೆ
ಹೊನ್ನಾವರ: 34 ಡಿ.ಸೆ- 20 ಡಿ.ಸೆ
ಕಲಬುರಗಿ: 36 ಡಿ.ಸೆ – 21 ಡಿ.ಸೆ
ಬೆಳಗಾವಿ: 35 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 20 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ