Site icon Vistara News

Karnataka Weather : ಮಳೆಯಾಟ ಬಂದ್‌; ಇನ್ನೆರಡು ದಿನ ಕರ್ನಾಟಕ ಸಿಕ್ಕಾಪಟ್ಟೆ Hot

Dry weather Sunny Hot

ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರಲಿದೆ. ಮಲೆನಾಡು ಮತ್ತು ಕರಾವಳಿಯ ಪ್ರತ್ಯೇಕ ಕಡೆಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ (Rain News) ಮಳೆಯಾಗಲಿದೆ. ಉಳಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಮಲೆನಾಡಿನ ಕೊಡಗು ಹಾಗೂ ಚಿಕ್ಕಮಗಳೂರಲ್ಲಿ ಅತಿ ಸಣ್ಣ ಮಳೆ ಬೀಳಬಹುದು. ಉಳಿದಂತೆ ಹಾಸನ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯ ಪ್ರತ್ಯೇಕ ಕಡೆಗಳಲ್ಲಿ ಮಾತ್ರ ಹಗುರ ಮಳೆಯಾಗಬಹುದು. ಉತ್ತರ ಕನ್ನಡದಲ್ಲಿ ಬಿಸಿಲು ಝಳಪೀಸಲಿದೆ.

ಬೆಂಗಳೂರು ನಗರದಲ್ಲೂ ಯಾವುದೇ ಮಳೆ ಮುನ್ಸೂಚನೆಯಿಲ್ಲ. ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Bengaluru Air pollution : ಬೆಂಗಳೂರಿಗರ ಉಸಿರು ಸೇರುತ್ತಿರುವ ವಿಷ ಗಾಳಿ!

ಅ.23ರಂದು ರಾಜ್ಯಾದ್ಯಂತ ಒಣಹವೆ ಇತ್ತು. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 37.5 ಡಿ.ಸೆ ಹಾಗೂ ಕಡಿಮೆ ಉಷ್ಣಾಂಶ 14.4 ಡಿ.ಸೆ. ಚಿಕ್ಕನಹಳ್ಳಿಯಲ್ಲಿ ದಾಖಲಾಗಿತ್ತು.

ಈ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಳ

ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ವಿಜಯಪುರ ಸೇರಿದಂತೆ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು, ಬಳ್ಳಾರಿ, ವಿಜಯನಗರದ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version