Karnataka Weather: ಈ ಜಿಲ್ಲೆಗಳಲ್ಲಿ ಇರಲಿದೆ ಭಾರಿ ಚಳಿ; ಬೆಂಗಳೂರಲ್ಲಿ ಹೇಗಿದೆ ವಾತಾವರಣ? - Vistara News

ಮಳೆ

Karnataka Weather: ಈ ಜಿಲ್ಲೆಗಳಲ್ಲಿ ಇರಲಿದೆ ಭಾರಿ ಚಳಿ; ಬೆಂಗಳೂರಲ್ಲಿ ಹೇಗಿದೆ ವಾತಾವರಣ?

Karnataka Weather: ಬೆಂಗಳೂರು ಸೇರಿ ಮಲೆನಾಡಿನ ಭಾಗದಲ್ಲಿ ರಾತ್ರಿ ವೇಳೆ ಚಳಿ ಹೆಚ್ಚಾಗಲಿದ್ದು, ಶನಿವಾರ ಮುಂಜಾನೆ ಮಂಜು ಮುಸುಕಿನ ವಾತಾವರಣ ಇರುತ್ತದೆ. ಅಂದರೆ, ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಯಲ್ಲಿ ಈ ವಾತಾವರಣ ಇರಲಿದೆ.

VISTARANEWS.COM


on

Cold weather in Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಶುಕ್ರವಾರ ಶುಷ್ಕ ವಾತಾವರಣವು (Dry Weather) ಮುಂದುವರಿದಿದೆ. ರಾತ್ರಿ ವೇಳೆಗೆ ಚಳಿಗಾಳಿ ಬೀಸಲಿದೆ. ಆದರೆ, ಬೆಳಗ್ಗೆ ಹಾಗೂ ಮಧ್ಯಾಹ್ನದ ವೇಳೆ ಬಿಸಿಲಿನ ವಾತಾವರಣ ಹೆಚ್ಚಿತ್ತು. ಆದರೆ, ಉತ್ತರ ಒಳನಾಡಿನ ಕೆಲವೆಡೆ ಕನಿಷ್ಠ ಉಷ್ಣಾಂಶ ಇಳಿಕೆ ಕಂಡಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಹೆಚ್ಚಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast) ತಿಳಿಸಿದೆ.

ಇನ್ನು ಬೆಂಗಳೂರು ಸೇರಿ ಮಲೆನಾಡಿನ ಭಾಗದಲ್ಲಿ ರಾತ್ರಿ ವೇಳೆ ಚಳಿ ಹೆಚ್ಚಾಗಲಿದ್ದು, ಶನಿವಾರ ಮುಂಜಾನೆ ಮಂಜು ಮುಸುಕಿನ ವಾತಾವರಣ ಇರುತ್ತದೆ. ಅಂದರೆ, ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಯಲ್ಲಿ ಈ ವಾತಾವರಣ ಇರಲಿದೆ. ಹಾಗಂತ ಮಧ್ಯಾಹ್ನದ ವೇಳೆ ಬಿಸಿಲು ಇದ್ದೇ ಇರುತ್ತದೆ.

ಕರಾವಳಿ ದಕ್ಷಿಣ ಒಳನಾಡಲ್ಲಿ ಹೇಗೆ?

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರಿಯಲಿದ್ದು, ಅಲ್ಲಲ್ಲಿ ಕನಿಷ್ಠ ಉಷ್ಣಾಂಶ ಏರಿಕೆ ಆಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರ, ರಾಮನಗರ ಸೇರಿದಂತೆ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದಲ್ಲಿ ಒಣಹವೆ ಇರಲಿದೆ. ಕೆಲವೊಮ್ಮೆ ಈ ಜಿಲ್ಲೆಗಳ ಪ್ರತ್ಯೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಒಳನಾಡಲ್ಲಿ ಚಳಿ ಹೆಚ್ಚು

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ವಾತಾವರಣ ಶುಷ್ಕತೆಯಿಂದ ಕೂಡಿದ್ದರೂ, ಹೆಚ್ಚಿನ ಪ್ರಮಾಣದ ಚಳಿ ಇರಲಿದೆ. ಹೀಗಾಗಿ ರಾತ್ರಿ ಅಥವಾ ಮುಂಜಾನೆ ಹೊರಗೆ ಹೋಗುವವರು ಮೈ ಬೆಚ್ಚಗೆ ಇಡುವ ಉಡುಪುಗಳನ್ನು ಧರಿಸಿ ಹೋದರೆ ಆರೋಗ್ಯಕ್ಕೆ ಒಳ್ಳೆಯದು ಎಂಬ ಸಲಹೆಗಳು ವ್ಯಕ್ತವಾಗಿವೆ.

ಇದನ್ನೂ ಓದಿ: Tele ICU: ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಟೆಲಿ ಐಸಿಯು: ದಿನೇಶ್ ಗುಂಡೂರಾವ್

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 31 ಡಿ.ಸೆ -19 ಡಿ.ಸೆ
ಮಂಗಳೂರು: 33 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 16 ಡಿ.ಸೆ
ಗದಗ: 32 ಡಿ.ಸೆ – 16 ಡಿ.ಸೆ
ಹೊನ್ನಾವರ: 34 ಡಿ.ಸೆ- 19 ಡಿ.ಸೆ
ಕಲಬುರಗಿ: 33 ಡಿ.ಸೆ – 20 ಡಿ.ಸೆ
ಬೆಳಗಾವಿ: 31 ಡಿ.ಸೆ – 11 ಡಿ.ಸೆ
ಕಾರವಾರ: 34 ಡಿ.ಸೆ – 19 ಡಿ.ಸೆ

ಇದನ್ನೂ ಓದಿ: HD Kumaraswamy: ಎಚ್‌ಡಿಕೆ ಕೇಸರಿ ಶಾಲು ಧರಿಸಿದ್ದು ತಪ್ಪು ಎಂದ ದೇವೇಗೌಡ; ಗೌಡರ ಸ್ಥಿತಿ ನೋಡಿದರೆ ಭಯವಾಗುತ್ತೆ ಎಂದ ಡಿಕೆಶಿ

ಎಲ್ಲೆಲ್ಲಿ ಕನಿಷ್ಠ ತಾಪಮಾನ ಭಾರಿ ಇಳಿಕೆ?

ಬೆಳಗಾವಿ, ಚಿತ್ರದುರ್ಗ, ಗದಗಿನಲ್ಲಿ ಅತಿ ಕಡಿಮೆ ತಾಪಮಾನ ದಾಖಲಾಗಿದ್ದು, ಚಳಿಯ ಪ್ರಮಾಣ ಹೆಚ್ಚಿದೆ. ಇಲ್ಲಿಗೆ ಹೋಲಿಕೆ ಮಾಡಿದರೆ ಬೆಂಗಳೂರು, ಮಂಗಳೂರು, ಕಲಬುರಗಿ, ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಹೊನ್ನಾವರಗಳಲ್ಲಿ ಅಲ್ಪ ಪ್ರಮಾಣದಲ್ಲಿ ಚಳಿ ಕಡಿಮೆ ಇರಲಿದೆ. ಆದರೆ, ಬಹುತೇಕ ಕಡೆ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನಾ ವರದಿಯಲ್ಲಿ ಹೇಳಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain : ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದ್ದು, ರೆಡ್‌ ಹಾಗೂ ಆರೆಂಜ್‌, ಯೆಲ್ಲೋ ಅಲರ್ಟ್‌ ಘೋಷಣೆ (Karnataka Weather Forecast) ಮಾಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆಯಾಗುವ (Heavy rain alert) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಕರ್ನಾಟಕ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾದರೆ, ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣದೊಂದಿಗೆ ಭಾರಿ ಮಳೆಯಾಗುವ (Karnataka Rain) ನಿರೀಕ್ಷೆಯಿದೆ.

ಉಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಸುತ್ತಮುತ್ತ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ದಾವಣಗೆರೆ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಸೇರಿದಂತೆ ವಿಜಯನಗರದಲ್ಲಿ ಮಧ್ಯಮ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೀದರ್‌ನಲ್ಲಿ ವ್ಯಾಪಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ ಮತ್ತು ವಿಜಯಪುರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಚದುರಿದಂತೆ ಮಳೆಯ ಸಿಂಚನವಾಗಲಿದೆ. ಕಲಬುರಗಿ, ಹಾವೇರಿ, ಗದಗ, ಕೊಪ್ಪಳ, ಯಾದಗಿರಿ, ಬಾಗಲಕೋಟೆಯಲ್ಲೂ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯು ಅಬ್ಬರಿಸಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಬೆಂಗಳೂರಲ್ಲಿ ಗಾಳಿ ಜತೆಗೆ ಮಳೆಯ ಸಿಂಚನ

ರಾಜಧಾನಿ ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗವು ನಿರಂತರವಾಗಿ ಇರಲಿದ್ದು, 30-40 ಕಿ.ಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿಗ್ರಿ ಸೆಲಿಯಸ್‌ ಇರಲಿದೆ.

ಕರಾವಳಿ-ಮಲೆನಾಡಿಗೆ ರೆಡ್‌ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಬೆಳಗಾವಿಯಲ್ಲೂ ಮಳೆಯು ಅಬ್ಬರಿಸಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಜತೆಗೆ ಬೀದರ್, ಗದಗ, ಕೊಪ್ಪಳ ಸೇರಿ ರಾಯಚೂರು, ಬಳ್ಳಾರಿ, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

Karnataka Rain : ಮುಂಗಾರು ಮಳೆ ಅಬ್ಬರ ಜೋರಾಗಿದೆ. ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಗೆ ಸ್ಕೂಲ್‌ ಬಸ್‌ವೊಂದು ತೇಲಿ ಹೋದರೆ, ಕೊಡಗಿನಲ್ಲಿ ಮನೆಗಳ ಗೋಡೆಗಳು ಕುಸಿದು ಬಿದ್ದಿವೆ. ಇತ್ತ ಕಾರವಾರದಲ್ಲಿ ಜಲಾವೃತಗೊಂಡ ರಸ್ತೆಯಿಂದಾಗಿ ಅನಾರೋಗ್ಯ ಪೀಡಿತ ವೃದ್ಧೆಯನ್ನು ಸ್ಥಳಾಂತರ ಮಾಡಲು ಕಷ್ಟಪಡುವಂತಾಯಿತು.

VISTARANEWS.COM


on

By

Karnataka Rain
Koo

ಕೊಡಗು/ಮಹಾರಾಷ್ಟ್ರ: ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರದಲ್ಲೂ ರಣ ಮಳೆ (Karnataka Rain) ಮುಂದುವರಿದಿದೆ. ಮಹಾರಾಷ್ಟ್ರದ ಭಿವಂಡಿ ಬಳಿಯ ಕಲ್ಯಾಣ್ ರೈಲು ನಿಲ್ದಾಣದ ಬಳಿ ರಣಮಳೆಗೆ ಸಿಲುಕಿದ ಶಾಲಾ ಬಸ್‌ವೊಂದು ನೀರಲ್ಲಿ ತೇಲಿ ಹೋಗಿತ್ತು. ಅದೃಷ್ಟವಶಾತ್‌ ಬಸ್ಸಿನಲ್ಲಿ ಯಾರು ಇಲ್ಲದೇ ಇರುವುದರಿಂದ ಅನಾಹುತವು ತಪ್ಪಿತ್ತು.

ಇನ್ನೂ ರಸ್ತೆಯಲ್ಲಿ ಮೊಳಕಾಲುದ್ದ ನೀರು ನಿಂತ ಪರಿಣಾಮ ವಾಹನ ಸವಾರರು ಹರಸಾಹಸ ಪಟ್ಟರು. ಕುಂದಿಲಿಕಾ ನದಿ ನೀರ ಆರ್ಭಟದಿಂದ ರಾಯಘಡ ರಸ್ತೆ ಜಲಾವೃತವಾಗುವ ಭೀತಿ ಎದುರಾಗಿದೆ. ಕಳೆದ 24 ಗಂಟೆಯಿಂದ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂಬೈ ಜನ ‌ಜೀವನ ಅಸ್ತವ್ಯಸ್ತವಾಗಿದೆ.

Karnataka rain

ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಕೊಡಗಿನಲ್ಲಿ ಪುನರ್ವಸು ಮಳೆಯ ಆರ್ಭಟ ಜೋರಾಗಿದೆ. ಕೊಡಗಿನ ಸೋಮವಾರಪೇಟೆ ಹಾಗೂ ಮಡಿಕೇರಿ ತಾಲ್ಲೂಕಿನಾದ್ಯಂತ ಭಾರಿ ಗಾಳಿ ಮಳೆಯಾಗುತ್ತಿದೆ. ಸೋಮವಾರಪೇಟೆ ತಾಲೂಕಿನ ಹಲವೆಡೆ ಮನೆಗಳ ಗೋಡೆ ಕುಸಿದಿದೆ. ಅತ್ತೂರು ಗ್ರಾಮದ ಅಚ್ಚಯ್ಯ ಹಾಗೂ ಜನಾರ್ಧನ, ಶನಿವಾರಸಂತೆಯ ಗೌಡಳ್ಳಿ ನಿವಾಸಿ ರಮೇಶ್, ಮಡಿಕೇರಿ ತಾಲೂಕಿನ ಮೇಕೇರಿ ನಿವಾಸಿ ಆಯಿಶಾ ಎಂಬುವವರ ಮನೆಯ ಗೋಡೆ ಕುಸಿದಿದೆ. ವಿಷಯ ತಿಳಿಯುತ್ತಿದ್ದಂತೆ ಮನೆ ಹಾನಿಯಾದ ಸ್ಥಳಗಳಿಗೆ ತಹಸೀಲ್ದಾರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Karnataka Rain

ಇದನ್ನೂ ಓದಿ: Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

ಜಲಾವೃತಗೊಂಡ ರಸ್ತೆಯಲ್ಲಿ ರೋಗಿ ಸ್ಥಳಾಂತರಕ್ಕೆ ಸಂಕಷ್ಟ

ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಕಾರವಾರದ ಚೆಂಡಿಯಾ ಐಸ್ ಫ್ಯಾಕ್ಟರಿ ಸಮೀಪ ಭಾರೀ ಪ್ರಮಾಣದಲ್ಲಿ ಮಳೆ ಸುರಿದ ಪರಿಣಾಮ ರಸ್ತೆ, ಮನೆಗಳು ಜಲಾವೃತಗೊಂಡಿತ್ತು. ಅಸ್ತಮಾ ಖಾಯಿಲೆಯಿಂದ ಬಳಲುತ್ತಿರುವ ವೃದ್ಧೆ ಸ್ವಾತಿ ರತ್ನಾಕರ ನಾಯ್ಕ(67) ಅವರನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಲು ತೊಂದರೆಯುನ್ನುಂಟಾಯಿತು. ರಸ್ತೆ ಜಲಾವೃತವಾದ ಪರಿಣಾಮ ವಾಹನದ ಮೂಲಕ ರೋಗಿ ಸ್ಥಳಾಂತರಕ್ಕೆ ಕಷ್ಟವಾಯಿತು.

ನಿನ್ನೆವರೆಗೂ ಕಡಿಮೆ ಇದ್ದ ನೀರಿನ ಪ್ರಮಾಣ ರಾತ್ರಿ ಬೆಳಗಾಗುವುದರೊಳಗೆ ತಗ್ಗು ಪ್ರದೇಶದಲ್ಲಿ ನೀರು ನಿಂತು ನೆರೆ ಪರಿಸ್ಥಿತಿ ನಿರ್ಮಾಣವಾಗಿತ್ತು. ನೌಕಾನೆಲೆ ಕಂಪೌಂಡ್ ಅವ್ಯವಸ್ಥೆಯೇ ಇದಕ್ಕೆಲ್ಲ ಕಾರಣ ಎಂದು ಸ್ಥಳೀಯರು ಹಿಡಿಶಾಪ ಹಾಕಿದ್ದರು. ಮಳೆಯ ನೀರು ಸಮುದ್ರಕ್ಕೆ ಹರಿದುಹೋಗಲಾರದೇ ಮನೆಗಳು ಜಲಾವೃತಗೊಂಡಿದ್ದವು. ಸ್ಥಳಕ್ಕೆ ಗ್ರಾಮ ಪಂಚಾಯತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ನಾಳೆಯೂ ಅಬ್ಬರಿಸಲಿದೆ ಮಳೆ

ಮುಂದಿನ 24 ಗಂಟೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ. ಇನ್ನೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಗಾಳಿಯ ವೇಗವು ಜೋರಾಗಿ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ. ಜತೆಗೆ ಗದಗ, ಕೊಪ್ಪಳ, ಬಾಗಲಕೋಟೆ, ಧಾರವಾಡ, ಹಾಸನ, ದಾವಣಗೆರೆ, ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

Karnataka Rain : ಭಾನುವಾರ ಕೊಡಗಿನಲ್ಲಿ ಗಾಳಿ ಸಹಿತ ಸುರಿಯುತ್ತಿರುವ ಮಳೆಯು ನಾನಾ ಅವಾಂತರವನ್ನೇ ಸೃಷ್ಟಿಸಿದೆ. ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದ ಗಬ್ಬದ ಹಸು ವಿಲವಿಲ ಒದ್ದಾಡಿ ಮೃತಪಟ್ಟಿದೆ. ಕಾರವಾರದಲ್ಲಿ ನೆರೆ ಸೃಷ್ಟಿಯಾಗಿದ್ದು, ಜನರನ್ನು ಬೋಟ್‌ ಮೂಲಕ ರಕ್ಷಣೆ ಮಾಡಲಾಗಿದೆ.

VISTARANEWS.COM


on

By

karnataka Rain
Koo

ಕೊಡಗು/ಕಾರವಾರ: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿ (Karnataka Rain) ಹೋಗಿದ್ದಾರೆ. ಭಾನುವಾರ ಹಲವೆಡೆ ಗಾಳಿ ಸಹಿತ ಭಾರಿ ಮಳೆಗೆ ಮರಗಳು ಧರೆಗುರುಳಿದ್ದು, ಅವಾಂತರವೇ (Rain Effect) ಸೃಷ್ಟಿಯಾಗಿದೆ. ಅದರಲ್ಲೂ ಕೊಡಗಿನಲ್ಲಿ ಸಾವು-ನೋವು ಸಂಭವಿಸಿದೆ. ಕೊಡಗಿನ ಸೋಮವಾರಪೇಟೆ ಸಮೀಪದ ಚೌಡ್ಲು ಗ್ರಾಮದಲ್ಲಿ ಭಾರಿ ಗಾಳಿಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಅದನ್ನು ತುಳಿದ ಮೂರು ತಿಂಗಳ‌ ಗಬ್ಬದ ಹಸು ವಿದ್ಯುತ್ ಪ್ರವಹಿಸಿ ಮೃತಪಟ್ಟಿದೆ. ಗ್ರಾಮದ ಸುರೇಶ್ ಎಂಬುವವರಿಗೆ ಸೇರಿದ ಗಬ್ಬದ ಹಸು ಕಳೆದುಕೊಂಡು ಕಂಗಲಾಗಿದ್ದಾರೆ.

ಕೊಡಗಿನಲ್ಲಿ ವರುಣಾರ್ಭಟ ಮುಂದುವರೆದಿದ್ದು, ಭಾರಿ ಗಾಳಿಗೆ ಬೃಹತ್‌ ಮರ ಹಾಗೂ ಲೈಟ್ ಕಂಬಗಳು ನೆಲಕ್ಕುರುಳಿವೆ. ಮಡಿಕೇರಿ ಎಫ್‌ಎಂಸಿ (FMC) ಕಾಲೇಜು ಸಮೀಪದಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದೆ. ಮಡಿಕೇರಿಯಿಂದ ಗಾಳಿಬೀಡು ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಚೆಸ್ಕಾಂ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ತೆರವು ಮಾಡಿದ್ದಾರೆ.

ಇತ್ತ ಕೊಡಗಿನ ಸೋಮವಾರಪೇಟೆ ಸಮೀಪದ ಆಯತಾನ ರೆಸಾರ್ಟ್‌ನಲ್ಲಿ ಮರದ ಕೊಂಬೆ ಬಿದ್ದು ಆರು ಕಾರುಗಳಿಗೆ ಹಾನಿಯಾಗಿದೆ. ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ಪ್ರವಾಸಿಗರ ಕಾರು ಹಾಗೂ ಟ್ಯಾಕ್ಸಿಗಳಿಗೆ ಮರದ ಕೊಂಬೆ ಬಿದ್ದಿದೆ. ಜಿಲ್ಲೆಯಾದ್ಯಂತ ನಿನ್ನೆ ಶನಿವಾರದಿಂದಲ್ಲೂ ಮಳೆಯೊಂದಿಗೆ ಭಾರಿ ಗಾಳಿ ಬೀಸುತ್ತಿದೆ. ಭಾರಿ ಗಾಳಿಗೆ ಗುಡ್ಡಗಾಡಿನ ಜನತೆ ಆತಂಕಗೊಂಡಿದ್ದಾರೆ.

ಇದನ್ನೂ ಓದಿ: Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

ನೆರೆಯಲ್ಲಿ ಸಿಲುಕಿಕೊಂಡವರ ರಕ್ಷಣೆ

ಉತ್ತರ ಕನ್ನಡದ ಕಾರವಾರ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಿಂದಾಗಿ ನೆರೆ ಪರಿಸ್ಥಿತಿ ಉಂಟಾಗಿದೆ. ನೆರೆಯಲ್ಲಿ ಸಿಲುಕಿಕೊಂಡವರಿಗೆ ಬೋಟ್ ಮೂಲಕ ರಕ್ಷಣೆ ಮಾಡಲಾಗಿದೆ. ಚೆಂಡಿಯಾ ಗ್ರಾಮ ವ್ಯಾಪ್ತಿಯ ಇಡೂರುಸಕಲಭಾಗ್‌ದಲ್ಲಿ ನೆರೆ ಸೃಷ್ಟಿಯಾಗಿದೆ. ಚೆಂಡಿಯಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಮೀನುಗಳಿಗೆ ಹೋಗುವ ರಸ್ತೆ ಜಲಾವೃತಗೊಂಡಿದ್ದು, ಸಂಕಷ್ಟದಲ್ಲಿದ್ದ 5 ಕುಟುಂಬಗಳನ್ನು ಬೋಟ್ ಮೂಲಕ ರಕ್ಷಿಸಿದ್ದಾರೆ.

ರಾತ್ರಿಯಿಡೀ ಸುರಿದ ಮಳೆಯ ಪ್ರಮಾಣ ಗೊತ್ತಾಗದೇ ಮನೆಯಲ್ಲೇ ಉಳಿದಿದ್ದರು. ಕಳೆದ 4 ದಿನಗಳ ಹಿಂದೆ ಸುರಿದ ಮಳೆಯಲ್ಲಿ ಮನೆಯವರೆಗೆ ಮಾತ್ರ ನೀರು ಬಂದಿತ್ತು. ಆದರೆ ಇಂದು ನಿರೀಕ್ಷೆಗೂ ಮೀರಿ ನೀರು ಬಂದು ಪ್ರವಾಹದಲ್ಲಿ ಸಿಲುಕಿಕೊಂಡಿದ್ದರು. ರಸ್ತೆ ಹಾಗೂ ಜಮೀನುಗಳು ಸಂಪೂರ್ಣ ಜಲಾವೃತವಾಗಿತ್ತು. ರಸ್ತೆ ಯಾವುದು ಎಂದು ಗೊತ್ತಾಗದೇ ಮನೆಯಲ್ಲೇ ಕಾಲ ಕಳೆಯುತ್ತಿದ್ದರು. ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರೇ ಬೋಟ್ ಮೂಲಕ ರಕ್ಷಣೆ ಮಾಡಿದ್ದಾರೆ. ನೆರೆ ಪೀಡಿತ ನಿವಾಸಿಗಳು ಸುರಕ್ಷಿತ ಪ್ರದೇಶಗಳಿಗೆ ಮರಳಿದ್ದಾರೆ.

ಯಾದಗಿರಿಯಲ್ಲೂ ಅಬ್ಬರದ ಮಳೆ

ಯಾದಗಿರಿಯಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾನುವಾರ ಒಂದು ಗಂಟೆಗೂ ಹೆಚ್ಚು ಸಮಯ ಮಳೆಯಾಗಿದೆ. ಒಂದು ಕಡೆ ಮಳೆ ಆರ್ಭಟವಾದರೆ ಮತ್ತೊಂದೆಡೆ ಯುವಕರು ಮಳೆಯಲ್ಲಿಯೇ ಕ್ರಿಕೆಟ್ ಆಡಿ ಖುಷಿ ಪಟ್ಟರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

Karnataka Rain : ಭಾರಿ ಮಳೆಯಿಂದಾಗಿ (Heavy Rain) ಕಪಿಲಾ ನದಿ (Kapila River) ತೀರದಲ್ಲೀಗ ಪ್ರವಾಹ ಭೀತಿ ಎದುರಾಗಿದೆ. ಜತೆಗೆ ಹಾರಂಗಿ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದ್ದು, ನದಿ ಪಾತ್ರದ ಜನರಿಗೆ ಅಲರ್ಟ್ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Rain
Koo

ಮೈಸೂರು/ಕೊಡಗು: ಕಪಿಲಾ ನದಿ (Kapila River) ತೀರದಲ್ಲೀಗ ಪ್ರವಾಹದ ಭೀತಿ ಎದುರಾಗಿದೆ. ಕಬಿನಿ ಜಲಾನಯನ ಪ್ರದೇಶದಲ್ಲಿ ಭರ್ಜರಿ (Karnataka Rain) ಮಳೆಯಾಗುತ್ತಿದ್ದು, ವಾಡಿಕೆಗಿಂತ ಕಬಿನಿ ಜಲಾಶಯವು ಬಹುಬೇಗ ಭರ್ತಿಯಾಗಿದೆ. ಮೈಸೂರಿನ ಎಚ್.ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದಿಂದ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದೆ.

ಕೇರಳದ ವೈನಾಡಿನಲ್ಲೂ ಉತ್ತಮ ಮಳೆಯಾದ ಪರಿಣಾಮ ಒಳಹರಿವಿನಲ್ಲಿ ಗಣನೀಯ ಏರಿಕೆಯಾಗಿದೆ. ಹೀಗಾಗಿ ಸುಮಾರು 20ಸಾವಿರಕ್ಕೂ ಕ್ಯುಸೆಕ್ ನೀರು ನದಿಗೆ ಬಿಡುಗಡೆ ಮಾಡಲಿದ್ದಾರೆ. ಹೀಗಾಗಿ ಧ್ವನಿ ವರ್ಧಕಗಳ ಮೂಲಕ ನದಿ ಪಾತ್ರದ ಜನರಿಗೆ ಎಚ್ಚರಿಕೆಯ ಸಂದೇಶವನ್ನು ರವಾನೆ ಮಾಡಲಾಗುತ್ತಿದೆ.

ಹುಲ್ಲಹಳ್ಳಿ ಗ್ರಾ.ಪಂ ಕಾರ್ಯಾಲಯ ವತಿಯಿಂದ ಪ್ರಚಾರ ಕಾರ್ಯ ನಡೆಯುತ್ತಿದೆ. ಗ್ರಾ.ಪಂ. ಸಿಬ್ಬಂದಿ ನದಿ ಪಾತ್ರದಲ್ಲಿರುವ ಗ್ರಾಮಗಳ ಜನರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ನದಿ ತೀರಕ್ಕೆ ಹೋಗದಂತೆ, ಜನ ಜಾನುವಾರುಗಳ ಸುರಕ್ಷಿತವಾಗಿಸಲು ಸೂಚನೆ ನೀಡಲಾಗಿದೆ. ಕಪಿಲಾ ನದಿ ಪ್ರವಾಹಕ್ಕೆ ಸಿಲುಕುವ ನಂಜನಗೂಡು ತಾಲೂಕಿನ ಹೆಜ್ಜಿಗೆ, ಬೊಕ್ಕಹಳ್ಳಿ, ಸುತ್ತೂರು, ಹೊಸಕೋಟೆ ಗ್ರಾಮಗಳಿಗೆ ಟಾಂಟಾಂ ಮೂಲಕವೂ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.

ಇದನ್ನೂ ಓದಿ: Rain News: ಭಾರಿ ಮಳೆಯಿಂದ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ

ಕೊಡಗಿನಲ್ಲೂ ಉಕ್ಕಿ ಹರಿಯುತ್ತಿರುವ ಹಳ್ಳ-ಕೊಳ್ಳಗಳು

ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ತೀವ್ರಗೊಂಡಿದೆ. ಮಳೆಯಿಂದ ನದಿ,‌ ತೊರೆ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದೆ. ಹಾರಂಗಿ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ. ಒಳಹರಿವಿನ ಪ್ರಮಾಣ 9600 ಕ್ಯೂಸೆಕ್ಸ್‌ಗೆ ಏರಿಕೆ ಹಿನ್ನೆಲೆ ಜಲಾಶಯದಿಂದ ನದಿಗೆ ನೀರು ಹರಿಸಲು ಕಾವೇರಿ ನೀರಾವರಿ ನಿಗಮ ಮುಂದಾಗಿದೆ. ಹೀಗಾಗಿ ಹಾರಂಗಿ ಹಾಗೂ ಕಾವೇರಿ ಜಲಾನಯನ ಪ್ರದೇಶದ ಜನರಿಗೆ ಮುನ್ನೆಚ್ಚರಿಕೆ ಮುನ್ಸೂಚನೆ ನೀಡಲಾಗಿದೆ. ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸುವ ಹಿನ್ನೆಲೆಯಲ್ಲಿ ನದಿ ಪಾತ್ರಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ ಮಾಹಿತಿ ನೀಡಿದ್ದಾರೆ.

ಕಾರವಾರದಲ್ಲಿ ನೆರೆ ಪರಿಸ್ಥಿತಿ

ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಮಳೆಯಿಂದಾಗಿ ಕಾರವಾರ ತಾಲೂಕಿ‌ನ ಚೆಂಡಿಯಾ ಗ್ರಾಮದ ವ್ಯಾಪ್ತಿಯಲ್ಲಿ ನೆರೆ ಪರಿಸ್ಥಿತಿ ಉಂಟಾಗಿದೆ. ಶನಿವಾರ ತಡರಾತ್ರಿಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ನೆರೆ ಪರಿಸ್ಥಿತಿ ಇದೆ. ಚೆಂಡಿಯಾ, ಪೋಸ್ಟ್ ಚೆಂಡಿಯಾ, ಇಳಸೂರು ಭಾಗದಲ್ಲಿ ಮನೆಗಳು, ರಸ್ತೆಗಳು ಜಲಾವೃತಗೊಂಡಿದೆ.

ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಗ್ರಾಮದ ಸಂಪರ್ಕ ರಸ್ತೆಯು ಮುಳುಗಡೆಯಾಗಿದೆ. ಕಳೆದ 4 ದಿನದ ಹಿಂದೆ ಇದೇ ರೀತಿ ಜಲಾವೃತವಾಗಿ ನಿವಾಸಿಗಳು ಸಮಸ್ಯೆ ಅನುಭವಿಸಿದ್ದರು, ಇದೀಗ ಕಾರವಾರ ತಾಲ್ಲೂಕಿನಾದ್ಯಂತ ಮಳೆ ಹೆಚ್ಚಾದ ಪರಿಣಾಮ ಮನೆಗಳಿಗೆ ನೀರು‌ ನುಗ್ಗುತ್ತಿದೆ.

ಚಿಕ್ಕಮಗಳೂರಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯ ಬಾಡಿಗೆ ಜೀಪ್ ಚಾಲಕರ ದರ್ಪ

ಪೊಲೀಸರ ಖಡಕ್ ಎಚ್ಚರಿಕೆ ನಡುವೆಯೂ ಚಿಕ್ಕಮಗಳೂರಲ್ಲಿ ಪುಂಡರ ಪುಂಡಾಟ ನಿಂತಿಲ್ಲ. ಪ್ರವಾಸಿಗರ ಮೇಲೆ ಸ್ಥಳೀಯ ಬಾಡಿಗೆ ಜೀಪ್ ಚಾಲಕರು ದರ್ಪ ತೋರುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಕುಡಿದು ವಾಹನ ಚಲಾಯಿಸಿದ್ದಲ್ಲದೇ ಬೆಂಗಳೂರಿನಿಂದ ಬಂದ ಪ್ರವಾಸಿಗರ ಕಾರಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಪ್ರವಾಸಿಗರ ಕಾರು ಜಖಂಗೊಂಡಿದೆ. ಈ ಬಗ್ಗೆ ಪ್ರಶ್ನಿಸಿದ್ದರೆ ಅಶ್ಲೀಲ, ಅವಾಚ್ಯ ಶಬ್ಧಗಳಿಂದ ಕೆಲ ಜೀಪು ಚಾಲಕರು ನಿಂದಿಸುತ್ತಿದ್ದಾರೆ. ನಾವು ಲೋಕಲ್ ಏನು ಮಾಡೋಕೆ ಆಗೋಲ್ಲ ಹೋಗು ಎಂದು ಆವಾಜ್ ಹಾಕ್ತಾರೆ ಎಂದು ಸ್ಥಳೀಯ ಜೀಪು ಚಾಲಕರ ವರ್ತನೆಗೆ ಪ್ರವಾಸಿಗರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Talguppa Honnavar Railway Line
ಉತ್ತರ ಕನ್ನಡ3 mins ago

Talguppa Honnavar Railway Line: ಹೊನ್ನಾವರ-ತಾಳಗುಪ್ಪ ರೈಲ್ವೆ ಮಾರ್ಗ; ಮಂಕಿಯ ಬಿಜೆಪಿ ಮುಖಂಡರಿಂದ ಸಂಸದ ಕಾಗೇರಿಯವರಿಗೆ ಮನವಿ

road accident chitradurga news
ಕ್ರೈಂ24 mins ago

Road Accident: ನಿದ್ರೆ ಮಂಪರಿನಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ, ಇಬ್ಬರು ಸಾವು

Shikakai For Hair
ಆರೋಗ್ಯ34 mins ago

Shikakai For Hair: ಕೂದಲಿನ ಪೋಷಣೆಗೆ ಶ್ಯಾಂಪು ಒಳ್ಳೆಯದೋ ಸೀಗೆಕಾಯಿ ಒಳ್ಳೆಯದೋ?

Terrorist Attack
ಪ್ರಮುಖ ಸುದ್ದಿ57 mins ago

Terrorist Attack: ಕಾಶ್ಮೀರದಲ್ಲಿ ಮೂವರು ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದ ಸೇನೆ

karnataka weather Forecast
ಮಳೆ1 hour ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Noodles Side Effect
ಆರೋಗ್ಯ2 hours ago

Noodles Side Effect: ಇನ್‌ಸ್ಟಂಟ್‌ ನೂಡಲ್‌‌ಗಳನ್ನು ಸೇವಿಸಿದರೆ ನಮ್ಮ ಆರೋಗ್ಯದ ಮೇಲಾಗುವ ಪರಿಣಾಮಗಳೇನು?

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳದಿರಿ

NSUI
ದೇಶ8 hours ago

NSUI: ದೆಹಲಿ ವಿವಿಯಲ್ಲಿ ಗಲಾಟೆ ಮಾಡಿ, ರಾಮನ ಮೂರ್ತಿ ಒಡೆದ ಕಾಂಗ್ರೆಸ್‌ ವಿದ್ಯಾರ್ಥಿ ಘಟಕದ ಸದಸ್ಯರು; ಭಾರಿ ವಿವಾದ!

Yashasvi Jaiswal
ಕ್ರಿಕೆಟ್8 hours ago

Yashasvi Jaiswal : ಇನಿಂಗ್ಸ್​​ನ ಮೊದಲ ಎಸೆತಕ್ಕ 13 ರನ್​, ವಿನೂತನ ದಾಖಲೆ ಬರೆದ ಯಶಸ್ವಿ ಜೈಸ್ವಾಲ್​

MUDA Scam
ಕರ್ನಾಟಕ8 hours ago

MUDA Scam: ಮುಡಾ ಕೇಸ್ ತನಿಖೆಗೆ ಏಕಸದಸ್ಯ ಆಯೋಗ ರಚಿಸಿದ ರಾಜ್ಯ ಸರ್ಕಾರ; ಅಧಿವೇಶನಕ್ಕೂ ಮುನ್ನವೇ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಯತ್ನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 hour ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ14 hours ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ15 hours ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ19 hours ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ20 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ2 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ2 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

karnataka Rain Effect
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Chikkamagaluru News Police detained youths for consuming liquor at tourist spot in Chikmagaluru
ಮಳೆ6 days ago

Chikkamagaluru News : ಚಿಕ್ಕಮಗಳೂರು ಚಳಿಗೆ ನಶೆ ಏರಿಸಿಕೊಳ್ಳುತ್ತಿದ್ದವರ ಕಿಕ್ಕಿಳಿಸಿದ ಬಣಕಲ್ ಪಿಎಸ್ಐ ರೇಣುಕಾ

ಟ್ರೆಂಡಿಂಗ್‌