Karnataka Weather : ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ; ಉಳಿದೆಡೆ ಹೇಗಿರಲಿದೆ? - Vistara News

ಮಳೆ

Karnataka Weather : ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ; ಉಳಿದೆಡೆ ಹೇಗಿರಲಿದೆ?

Karnataka weather Forecast : ನೈರುತ್ಯ ಮುಂಗಾರು ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಮಲೆನಾಡು-ಕರಾವಳಿ ಸುತ್ತಮುತ್ತ ತಗ್ಗಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ (Rain news) ಸಾಧ್ಯತೆ ಇದ್ದು, ಉತ್ತರ ಕನ್ನಡಕ್ಕೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

karnataka weather forecast
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣ ಮಳೆಯಾದರೆ, ಮಲೆನಾಡಿನಲ್ಲಿ ಚದುರಿದಂತೆ ವ್ಯಾಪಕ ಸ್ಥಳಗಳಲ್ಲಿ (Rain News) ಮಳೆಯಾಗಲಿದೆ. ಉತ್ತರ ಒಳನಾಡಿನ ಮಧ್ಯಮ ಮಳೆ ಹಾಗೂ ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಭಾಗದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಮತ್ತು 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ. ಗಾಳಿ ವೇಗವು ಹೆಚ್ಚಲಿದೆ.

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Kali Bridge Collapse: ಕಾಳಿ ನದಿಗೆ ಕಟ್ಟಿದ ಸೇತುವೆ ಕುಸಿತ, ಟ್ರಕ್‌ ಬಿದ್ದು ಚಾಲಕನಿಗೆ ಗಾಯ

Kali Bridge Collapse: ಮಳೆ ಹಾಗೂ ನೀರಿನ ರಭಸ ಹೆಚ್ಚಾಗಿ ಸೇತುವೆ ಕುಸಿದು ಕೆಳಗೆ ಬಿದ್ದಿದ್ದು, ಅದರ ಮೇಲಿದ್ದ ಟ್ರಕ್‌ ಕೆಳಗೆ ಬಿದ್ದು ಚಾಲಕನಿಗೆ ಗಾಯವಾಗಿದೆ. ಚಾಲಕನನ್ನು ಅಗ್ನಿಶಾಮಕ‌ ಹಾಗೂ ಪೊಲೀಸ್ ಸಿಬ್ಬಂದಿ ರಕ್ಷಿಸಿದ್ದಾರೆ. ಲಾರಿ ಚಾಲಕ ಕೇರಳ ಮೂಲದ ರಾಧಾಕೃಷ್ಣ ನಾಳಾ ಸ್ವಾಮಿ(37) ರಕ್ಷಣೆಗೊಳಗಾದವರು. ಟ್ರಕ್‌ ಸಂಪೂರ್ಣ ನೀರಿನಲ್ಲಿ ಮುಳುಗಿದೆ.

VISTARANEWS.COM


on

kali river bridge collapse
Koo

ಕಾರವಾರ: ಕಾಳಿ ನದಿಗೆ (Kali River) ಅಡ್ಡಲಾಗಿ ಕಟ್ಟಿದ್ದ ಹಳೆಯ ಸೇತುವೆ (Kali Bridge Collapse) ಕುಸಿದುಬಿದ್ದಿದ್ದು, ಅದರ ಮೇಲೆ ಚಲಿಸುತ್ತಿದ್ದ ಟ್ರಕ್‌ ಕೆಳಗೆ ಬಿದ್ದು ಚಾಲಕನಿಗೆ (truck driver injury) ಗಾಯವಾಗಿದೆ. ಹೊಸ ಸೇತುವೆಯಲ್ಲಿ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಿದ್ದುದರಿಂದ ಭಾರಿ ಅನಾಹುತ ಆಗಿಲ್ಲ.

ಉತ್ತರಕನ್ನಡ ಜಿಲ್ಲೆಯ (Uttara kannada news) ಕಾರವಾರ ನಗರದ ಕೋಡಿಭಾಗ್‌ನಲ್ಲಿರುವ ಈ ಸೇತುವೆಯನ್ನು ಕಾರವಾರ- ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಿರ್ಮಿಸಲಾಗಿದೆ. ಇದು ಸುಮಾರು 60 ವರ್ಷ ಹಳೆಯದಾದ ಸೇತುವೆ. ಇತ್ತೀಚೆಗೆ ನಿರ್ಮಿಸಲಾದ ಹೊಸ ಸೇತುವೆಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದ್ದು, ಹಳೆಯ ಸೇತುವೆಯನ್ನು ಅಪಾಯಕಾರಿ ಎಂದು ಪರಿಗಣಿಸಲಾಗಿತ್ತು.

ಮಳೆ ಹಾಗೂ ನೀರಿನ ರಭಸ ಹೆಚ್ಚಾಗಿ ಸೇತುವೆ ಕುಸಿದು ಕೆಳಗೆ ಬಿದ್ದಿದ್ದು, ಅದರ ಮೇಲಿದ್ದ ಟ್ರಕ್‌ ಕೆಳಗೆ ಬಿದ್ದು ಚಾಲಕನಿಗೆ ಗಾಯವಾಗಿದೆ. ಚಾಲಕನನ್ನು ಅಗ್ನಿಶಾಮಕ‌ ಹಾಗೂ ಪೊಲೀಸ್ ಸಿಬ್ಬಂದಿ ರಕ್ಷಿಸಿದ್ದಾರೆ. ಲಾರಿ ಚಾಲಕ ಕೇರಳ ಮೂಲದ ರಾಧಾಕೃಷ್ಣ ನಾಳಾ ಸ್ವಾಮಿ(37) ರಕ್ಷಣೆಗೊಳಗಾದವರು. ಟ್ರಕ್‌ ಸಂಪೂರ್ಣ ನೀರಿನಲ್ಲಿ ಮುಳುಗಿದೆ.

ವಿಷಯ ತಿಳಿದ ಕೂಡಲೇ ಎಚ್ಚೆತ್ತ ಉತ್ತರಕನ್ನಡ ಎಸ್.ಪಿ ನಾರಾಯಣ್, ಎಎಸ್‌ಪಿ ಜಯಕುಮಾರ ಹಾಗೂ ಡಿಎಸ್‌ಪಿ ಗಿರೀಶ್ ಸೇರಿದಂತೆ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿದೆ. ಲಾರಿ ಚಾಲಕನನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಪೊಲೀಸರಿಂದ ಮಾಹಿತಿ ಸಿಗುತ್ತಿದ್ದಂತೆ ಡಿಸಿ ಲಕ್ಷ್ಮಿಪ್ರಿಯಾ ಮಧ್ಯರಾತ್ರಿ ಸ್ಥಳಕ್ಕೆ ಧಾವಿಸಿದ್ದು, ಮಾಹಿತಿ ಪಡೆದರು.

ಅವೈಜ್ಞಾನಿಕ ಕಾಮಗಾರಿಯಿಂದ ಕಳೆದ 15 ದಿನಗಳ ಹಿಂದಷ್ಟೆ ಶಿರೂರು ಗುಡ್ಡ ಕುಸಿತ ಆಗಿತ್ತು. ಈಗ ಹಳೆಯ ಸೇತುವೆ ಬಿದ್ದಿರುವ ಹಿನ್ನೆಲೆಯಲ್ಲಿ, ಐಆರ್‌ಬಿಯಿಂದ ನಿರ್ಮಾಣ ಮಾಡಿರುವ ಹೊಸ ಸೇತುವೆಯ ಗುಣಮಟ್ಟ ಪರೀಕ್ಷೆ ಮಾಡಲು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಈಗ ಕುಸಿದ ಸೇತುವೆಯ ಪಕ್ಕದಲ್ಲಿರುವ ಹೊಸ ಸೇತುವೆಯ ಗುಣಮಟ್ಟ ಪರೀಕ್ಷೆ ಮಾಡಲು, ಸೇತುವ ಗುಣಮಟ್ಟದ ಬಗ್ಗೆ 12 ಗಂಟೆಯೊಳಗೆ ವರದಿ ಸಲ್ಲಿಸುವಂತೆ IRB ಹಾಗೂ NHAIಗೆ ಡಿಸಿ ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ. ಸೇತುವೆ ಗುಣಮಟ್ಟದ ವರದಿ ಬರುವವರೆಗೂ ಸಂಚಾರ ನಿಷೇಧಿಸಲಾಗಿದ್ದು, ಸದ್ಯ ಕಾರವಾರದಿಂದ ಗೋವಾ ಕಡೆ ಹೋಗುವ ಸಂಚಾರ ಬಂದ್ ಆಗಿದೆ.

ಉತ್ತರಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಭಾನುವಾರ ಕಾರವಾರದ ಸುರಂಗ ಮಾರ್ಗದಲ್ಲಿ ಕಲ್ಲು ಕುಸಿದಿತ್ತು. ರಾಷ್ಟ್ರೀಯ ಹೆದ್ದಾರಿ 66ರ ಸುರಂಗ ಮಾರ್ಗದಲ್ಲಿ ಬಿಣಗಾದಿಂದ ಕಾರವಾರಕ್ಕೆ ಆಗಮಿಸುವ ಸುರಂಗದ ಎದುರು ಭಾರಿ ಪ್ರಮಾಣದ ಕಲ್ಲು, ಮಣ್ಣು ಕುಸಿದಿತ್ತು. ಅದೃಷ್ಟವಶಾತ್ ವಾಹನ ಸವಾರರು ಪಾರಾಗಿದ್ದರು. ಸ್ಥಳಕ್ಕೆ ಬಂದ ಕಾರವಾರ ಟ್ರಾಫಿಕ್ ಪೊಲೀಸರು ಐಆರ್‌ಬಿ ಕಾರ್ಮಿಕರಿಂದ ಹೆದ್ದಾರಿಯಲ್ಲಿ ಬಿದ್ದ ಕಲ್ಲು ಮಣ್ಣು ತೆರವು ಮಾಡಿಸಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಬಿಣಗಾ ಕಾರವಾರ ಟನೆಲ್ ಬಂದ್ ಮಾಡಿಸಿದ್ದರಲ್ಲದೆ, ಬಿಣಗಾದಿಂದ ಬೈತಕೋಲ್ ಮಾರ್ಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು.

ಇದನ್ನೂ ಓದಿ: Konkan Railway: ಕಾರವಾರ – ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರ ಆ. 8ರವರೆಗೆ ರದ್ದು

Continue Reading

ಮಳೆ

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

Karnataka Weather Forecast : ಸುಳಿಗಾಳಿ ಎಫೆಕ್ಟ್‌ನಿಂದಾಗಿ ರಭಸವಾಗಿ ಬೀಸುವ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಮಧ್ಯೆ ಮತ್ತೆ ಮಳೆ ಅವಾಂತರಗಳು ಮುಂದುವರಿದಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು/ಬೆಳಗಾವಿ: ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಸೃಷ್ಟಿಯಾದ ಹಿನ್ನೆಲೆಯಲ್ಲಿ ಆಗಸ್ಟ್ 9 ರವರೆಗೆ ರಾಜ್ಯಾದ್ಯಂತ ಭಾರಿ ಮಳೆಯಾಗುವ (Karnataka Weather Forecast) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಿನ್ನೆ ಸೋಮವಾರ ಸುರಿದ ಮಳೆಗೆ (Heavy Rain) ಹಲವೆಡೆ ಅಸ್ತವ್ಯಸ್ತವಾಗಿದೆ. ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ಕಿತ್ತೂರು ತಾಲೂಕಿನ ನಿಂಗಾಪುರ ಗ್ರಾಮಕ್ಕೆ ಹೊಂದಿಕೊಂಡಿರೋ ಹುಲಿಕೆರೆ ಹಿನ್ನೀರಿನಲ್ಲಿ ವಿದ್ಯಾರ್ಥಿಗಳು ಪರದಾಟ ಅನುಭವಿಸುತ್ತಿದ್ದಾರೆ. ಚೂರು ಆಯ ತಪ್ಪಿದರೂ ಸಹ ಮಕ್ಕಳು ಕೆರೆಯ ಪಾಲಾಗುವ ಭೀತಿ ಇದೆ.

ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ಕೆರೆ, ಹಳ್ಳ-ಕೊಳ್ಳ, ನದಿಗಳು ತುಂಬಿ ಹರಿಯುತ್ತಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ನಿಂಗಾಪುರ ಗ್ರಾಮದಲ್ಲಿ ಮಕ್ಕಳು ಕಲಿಕೆಗಾಗಿ ಜೀವ ಪಣಕ್ಕಿಟ್ಟು ಕೆರೆ ದಾಟುವಂತಾಗಿದೆ. ಕೆರೆ ಹಿನ್ನೀರು ದಾಟಿ ಶಾಲೆಗೆ ಹೋಗಲು ವಿದ್ಯಾರ್ಥಿಗಳು ಗಾಳಿ ತುಂಬಿದ ಟ್ಯೂಬೆಗಳೇ ಗತಿಯಾಗಿದೆ. ಪೋಷಕರು ಗಾಳಿ ತುಂಬಿದ ಟ್ಯೂಬ್‌ಗೆ ಹಗ್ಗ ಕಟ್ಟಿ ಎಳೆದು ಮಕ್ಕಳ ದಾಟಿಸುತ್ತಿದ್ದಾರೆ. ಚೂರು ಆಯ ತಪ್ಪಿದರೂ ಸಹ ಮಕ್ಕಳು ಕೆರೆಯ ಪಾಲಾಗುವ ಭೀತಿ ಇದೆ. ಸೇತುವೆ ನಿರ್ಮಾಣ ಮಾಡಿ ಕೊಡಿ ಎಂದು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.

ಹೋಟೆಲ್‌ ನುಗ್ಗಿದ ನೀರು

ಮಳೆಯ ಅಬ್ಬರಕ್ಕೆ ಹೋಟೆಲ್ ಅಂಗಡಿಗಳಿಗೆ ನೀರು ನುಗ್ಗಿದೆ. ರಾತ್ರಿ ಮಳೆ ನೀರು ನುಗ್ಗಿದ್ದರಿಂದ ಹೋಟೆಲ್ ಮಾಲೀಕರು ಪರದಾಡಬೇಕಾಯಿತು. ದೊಡ್ಡಬಳ್ಳಾಪುರದ ರೈಲ್ವೆ ಸ್ಟೇಷನ್ ಬಳಿ ಇರುವ ಅಂಗಡಿಗಳಿಗೆ ನೀರು ನುಗ್ಗಿ ಹಾನಿಯುಂಟಾಗಿದೆ. ಚರಂಡಿಗಳು ಬಂದ್ ಮಾಡಿರುವ ಕಾರಣ ಈ ರೀತಿಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮುಚ್ಚಿರುವ ಚರಂಡಿಗಳನ್ನು ತೆರವುಗೊಳಿಸುವಂತೆ ನಗರ ಸಭೆ ಅಧಿಕಾರಿಗಳಿಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮಳೆ ತಗ್ಗಿದ್ದರೂ ಮುಂದುವರಿದ ಪ್ರವಾಹ ಸ್ಥಿತಿ

ಮಹಾರಾಷ್ಟ್ರದಲ್ಲಿ ಮಳೆ ಕಡಿಮೆಯಾದರೂ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಪ್ರವಾಹ ಸ್ಥಿತಿ ಮುಂದುವರಿದಿದೆ. ಮಳೆ ಪ್ರಮಾಣ ಕಡಿಮೆಯಾದರೂ ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಹರಿದು ಬರುತ್ತಿದೆ. ಪರಿಣಾಮ ಕೃಷ್ಣಾ ನದಿ ತೀರದ ಜಮೀನುಗಳು ಸ‌ಂಪೂರ್ಣ ಜಲಾವೃತಗೊಂಡಿದೆ. ಕಾಗವಾಡ ತಾಲೂಕಿನ ಜುಗೂಳ ಹಾಗೂ ಮಹಾರಾಷ್ಟ್ರದ ಖಿದ್ರಾಪೂರ ಗ್ರಾಮದ ಕೆಲ ಪ್ರದೇಶಗಳ ಜಲಾವೃತ ಯಥಾಸ್ಥಿತಿ ಇದೆ. ಚಿಕ್ಕೋಡಿ ಉಪ ವಿಭಾಗದ 22 ಗ್ರಾಮಗಳ ನದಿ ತೀರದಲ್ಲಿ ಪ್ರವಾಹ ಸ್ಥಿತಿ ಮುಂದುವರಿದಿದೆ. ಮಳೆ ಪ್ರಮಾಣ ಹೆಚ್ಚಾದರೇ ನದಿ ತೀರ ಬಿಟ್ಟು ಗ್ರಾಮಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ.

ವಿಜಯಪುರದಲ್ಲಿ ಉಮರಾಣಿ- ಲವಗಿ ಹಳೆಯ ಬ್ಯಾರೇಜ್ ಮುಳುಗಡೆ

ಮಹಾರಾಷ್ಟ್ರದಲ್ಲಿ ಭಾರೀ ಮಳೆಗೆ ಉಜನಿ ಹಾಗೂ ವೀರ್ ಜಲಾಶಯಗಳಿಂದ ಭೀಮಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದರಿಂದಾಗಿ ಭೀಮಾನದಿ ತುಂಬಿ ಹರಿಯುತ್ತಿದೆ. ಪರಿಣಾಮ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಭೀಮಾ ನದಿಗೆ ಅಡ್ಡಲಾಗಿರುವ ಉಮರಾಣಿ- ಲವಗಿ ಹಳೆಯ ಬ್ಯಾರೇಜ್ ಮುಳುಗಡೆಯಾಗಿದೆ. ಚಡಚಣ, ಇಂಡಿ, ಆಲಮೇಲ ಸಿಂದಗಿ ತಾಲೂಕುಗಳಲ್ಲಿ ಪ್ರವಾಹದ ಭೀತಿ ಇದೆ.

ಧಾರಾಕಾರ ಮಳೆಗೆ ಆಸ್ಪತ್ರೆಗೆ ನುಗ್ಗಿದ ನೀರು

ತುಮಕೂರಿನ ಗುಬ್ಬಿ ಪಟ್ಟಣದಲ್ಲಿ ಧಾರಾಕಾರವಾಗಿ ಸುರಿದ ಮಳೆಗೆ ಗುಬ್ಬಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ನೀರು ನುಗ್ಗಿದೆ. ರೋಗಿಗಳಿದ್ದ ಕೊಠಡಿ ಸಂಪೂರ್ಣ ಜಲಾವೃತಗೊಂಡಿತ್ತು. ನೀರು ನುಗ್ಗಿದ ಪರಿಣಾಮ ರೋಗಿಗಳು ಪರದಾಡಬೇಕಾಯಿತು. ಕೆಳಗೆ ನೀರು ಮಯವಾದ ಕಾರಣಕ್ಕೆ ಮಧ್ಯರಾತ್ರಿಯೇ ರೋಗಿಗಳನ್ನು ಮೊದಲ ಹಾಗೂ ಎರಡನೇ ಮಹಡಿಯಲ್ಲಿರುವ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ.

ತುಮಕೂರಿನಲ್ಲಿ ಧರೆಗುರುಳಿದ ಮರ

ತುಮಕೂರು ಜಿಲ್ಲೆಯಲ್ಲಿ ರಭಸವಾಗಿ ಸುರಿದ ಮಳೆಗೆ ವಿವಿಧೆಡೆ ಅವಾಂತರವೇ ಸೃಷ್ಟಿಯಾಗಿತ್ತು. ಮರವೊಂದು ರಸ್ತೆಗೆ ಉರುಳಿ ಬಿದ್ದಿತ್ತು. ಇತ್ತ ಬೈಕ್‌ ಸವಾರ ಕೂದಲೆಳೆ ಅಂತರದಿಂದ ಪಾರಾಗಿದ್ದರು. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕ್ಯಾಮೇನಹಳ್ಳಿ ಬಳಿ ಘಟನೆ ನಡೆದಿದೆ. ಮರ ಬಿದ್ದ ಕಾರಣ ಬೈಕ್‌ನ ಹೆಡ್‌ಲೈಟ್ ಪುಡಿ ಪುಡಿಯಾಗಿತ್ತು.

ನದಿ ನೀರು ಇಳಿಕೆ ಆಯಿತು; ಮೊಸಳೆಗಳ ಕಾಟ ಶುರುವಾಯಿತು

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹುಣ್ಣರಗಿ ಗ್ರಾಮದಲ್ಲಿ ವೇದಗಂಗಾ ನದಿ‌ ನೀರಲ್ಲಿ ಇಳಿಕೆ ಆಗುತ್ತಿದ್ದಂತೆ ಮೊಸಳೆಗಳ ಕಾಟ ಹೆಚ್ಚಾಗುತ್ತಿದೆ. ನಾಲ್ಕೈದು ಮೊಸಳೆಗಳು ಗ್ರಾಮದ ಹೊರ ವಲಯದಲ್ಲಿ ಪತ್ತೆಯಾಗಿವೆ. ಮೊಸಳೆ ಮರಿಗಳು ಗ್ರಾಮಕ್ಕೆ ನುಗ್ಗಿದ್ದು, ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರು ಜತೆಗೆ ಉತ್ತರ ಕನ್ನಡ ಜಿಲ್ಲೆಗೆ ಇಂದು ಭಾರಿ ಮಳೆ ಮುನ್ಸೂಚನೆ

Karnataka Weather Forecast : ಮಂಗಳವಾರವೂ ಬೆಂಗಳೂರಿಗೆ ಮಳೆ ಮುನ್ಸೂಚನೆ (Heavy Rain Alert) ಇದ್ದು, ಉತ್ತರ ಕನ್ನಡಕ್ಕೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರ ನೀಡಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆ.6ರಂದು ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು (Rain News), 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಹವಾಮಾನ ಇಲಾಖೆಯು (Karnataka Weather Forecast) ಯೆಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಿದೆ.

ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಲಘು ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಕೋಲಾರದಲ್ಲಿ ಭಾರಿ ಮಳೆ

ದಕ್ಷಿಣ ಒಳನಾಡಿನ ಕೋಲಾರ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ತುಮಕೂರು ಹಾಗೂ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ದಾವಣಗೆರೆ, ವಿಜಯನಗರ ಸೇರಿದಂತೆ ಚಿಕ್ಕಬಳ್ಳಾಪುರದ ಸುತ್ತಮುತ್ತ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಶಿವಮೊಗ್ಗದಲ್ಲೂ ವ್ಯಾಪಕ ಮಳೆ ಅಬ್ಬರ

ಮಲೆನಾಡು ಭಾಗದಲ್ಲಿ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ಕರಾವಳಿಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲೂ ಗಾಳಿ ಸಹಿತ ಮಳೆ ಸಾಧ್ಯತೆ

ರಾಜಧಾನಿ ಬೆಂಗಳೂರಿನಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Road Accident : ಶಾಲಾ ಶಿಕ್ಷಕನ ಬಲಿ ಪಡೆದ ಸ್ಕೂಲ್‌ ವ್ಯಾನ್‌; ಒಂಟಿ ಸಲಗ ದಾಳಿಗೆ ವೃದ್ಧೆ ಸಾವು

ಮಳೆ ಬಂದರೆ ಚಿತ್ರದುರ್ಗದಲ್ಲಿ ಗುಡ್ಡ ಕುಸಿತ ಭೀತಿ

ಕೋಟೆ ನಾಡು ಚಿತ್ರದುರ್ಗದಲ್ಲಿ ಗುಡ್ಡ ಕುಸಿತದ ಭೀತಿ ಶುರುವಾಗಿದೆ. ಚಿತ್ರದುರ್ಗದ ಸುತ್ತ ಮುತ್ತಲಿನ ಗುಡ್ಡ ಕಡಿದು ಲೇಔಟ್ ನಿರ್ಮಾಣ ಮಾಡಲಾಗಿದೆ. ಇದರಿಂದಾಗಿ ನಗರದ ಐಯುಡಿಪಿ ಲೇಔಟ್, ಟೀಚರ್ಸ್ ಕಾಲೋನಿ, ಧವಳಗಿರಿಯ ಬಡಾವಣೆ ಸೇರಿ ಹಲವೆಡೆ ಗುಡ್ಡ ಕಡಿತ ಉಂಟಾಗಿದೆ. ಹಣದಾಸೆಗೆ ನಗರಸಭೆ ಅಧಿಕಾರಿಗಳು ಪ್ರಕೃತಿಯ ನಾಶ ಮಾಡುತ್ತಿದ್ದಾರೆ. ಅಪಾಯದ ಮಟ್ಟಕ್ಕೆ ಗುಡ್ಡ ಕಡಿಯುತ್ತಿರುವುದಕ್ಕೆ ಸ್ಥಳೀಯರು ಕಿಡಿಕಾರಿದ್ದಾರೆ. ಮಳೆ ಬಂದ ಸಮಯದಲ್ಲಿ ಗುಡ್ಡದಲ್ಲಿ ಮಣ್ಣಿನ ಸವೆತ ಉಂಟಾಗುತ್ತಿದೆ. ಹೀಗೆ ಆದರೆ ಕೇರಳದ ರೀತಿಯಲ್ಲಿ ನಮಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎಂದು ಕಂಗಲಾದರು.

ಭೀಮಾನದಿ ತೀರದಲ್ಲಿ ಪ್ರವಾಹ ಭೀತಿ

ಭೀಮಾನದಿಗೆ ಭಾರಿ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಪ್ರವಾಹದ ಭೀತಿ ಎದುರಾಗಿದೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್‌ನಿಂದ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಗೆ ಭೀಮಾನದಿಗೆ ಒಳಹರಿವು ಹೆಚ್ಚಳ ಗೊಂಡಿದೆ. ಭೀಮಾನದಿ ಅಬ್ಬರಕ್ಕೆ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

CM Siddaramaiah: ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ತಕ್ಷಣ ಪರಿಹಾರ; ಸಿದ್ದರಾಮಯ್ಯ ಸೂಚನೆ

CM Siddaramaiah: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ ಭಾಗಶಃ ಹಾನಿಗೀಡಾದ ಮನೆಗಳಿಗೆ 6500 ರೂ. ಪರಿಹಾರವನ್ನು ನೀಡಬೇಕಾಗಿದೆ. ಆದರೆ ರಾಜ್ಯ ಸರ್ಕಾರ 50 ಸಾವಿರ ರೂ. ಪರಿಹಾರ ನೀಡುತ್ತಿದೆ. ಮಳೆಯಿಂದ ಹಾನಿಗೀಡಾದವರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ 43,500 ರೂ. ಹೆಚ್ಚುವರಿಯಾಗಿ ರಾಜ್ಯ ಸರ್ಕಾರ ನೀಡುತ್ತಿದೆ. ಈ ಹಿಂದೆ ಪರಿಹಾರದ ವಿಷಯದಲ್ಲಿ ವಿವಿಧ ಮಾನದಂಡಗಳನ್ನು ಅನುಸರಿಸಲಾಗುತ್ತಿತ್ತು. ಈಗ ಏಕರೂಪದಲ್ಲಿ ಪರಿಹಾರ ನೀಡಲಾಗುತ್ತಿದೆ. ಈಗಾಗಲೇ 17 ಜನರಿಗೆ ಪರಿಹಾರ ಒದಗಿಸಲಾಗಿದ್ದು, ಮನೆ ಹಾನಿಗೀಡಾದ ಎಲ್ಲರಿಗೂ ಆದಷ್ಟು ಬೇಗನೆ ಪರಿಹಾರ ಒದಗಿಸಲಿದ್ದೇವೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

VISTARANEWS.COM


on

CM Siddaramaiah instructs to provide immediate relief to those affected by heavy rains
Koo

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಬೆಳಗಾವಿ ಜಿಲ್ಲೆಯ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಸೋಮವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜೂನ್‌ನಿಂದ ಇದುವರೆಗೆ 565 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.62ರಷ್ಟು ಹೆಚ್ಚು ಮಳೆಯಾಗಿದೆ. ಅತಿವೃಷ್ಟಿಯಿಂದ 6 ಮಂದಿ ಸಾವಿಗೀಡಾಗಿದ್ದು, ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ಒದಗಿಸಲಾಗಿದೆ. 12 ಜಾನುವಾರುಗಳು ಸಾವನ್ನಪ್ಪಿದ್ದು, ಪರಿಹಾರ ಒದಗಿಸಲಾಗಿದೆ. ಸಾವಿಗೀಡಾದ ಒಂದು ಜಾನುವಾರಿಗೆ 37,500 ರೂಪಾಯಿ ಪರಿಹಾರ ನೀಡಲಾಗುತ್ತಿದೆ.

ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ 48 ಮನೆಗಳು ಪೂರ್ಣ ಹಾನಿಗೀಡಾಗಿದ್ದು, 950 ಮನೆಗಳಿಗೆ ಭಾಗಶಃ ಹಾನಿಯಾಗಿವೆ. ಈ ಹಿಂದೆ ಅತಿವೃಷ್ಟಿ ಸಂದರ್ಭದಲ್ಲಿ ಮನೆ ಹಾನಿಗೆ ನೀಡಲಾದ ಪರಿಹಾರ ದುರುಪಯೋಗವಾದ ಬಗ್ಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಈ ಬಾರಿ ದುರುಪಯೋಗ ತಪ್ಪಿಸಲು ಪೂರ್ಣ ಮನೆ ಹಾನಿಗೀಡಾದವರಿಗೆ ರೂ. 1.20 ಲಕ್ಷ ನಗದು ಪರಿಹಾರ ನೀಡಲಾಗುತ್ತಿದ್ದು, ಇದರೊಂದಿಗೆ ಮನೆಯನ್ನು ಸಹ ನಿರ್ಮಿಸಿ ಕೊಡಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: Paris Olympics 2024 : ನೀರಜ್ ಚೋಪ್ರಾ ಜಾವೆಲಿನ್ ಎಸೆತ ಸೇರಿದಂತೆ ಆ.6ರಂದು ಪ್ಯಾರಿಸ್​ ಒಲಿಂಪಿಕ್ಸ್​​ನಲ್ಲಿ ಭಾರತೀಯ ಸ್ಪರ್ಧಿಗಳು ಇವರು…

ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ ಭಾಗಶ: ಹಾನಿಗೀಡಾದ ಮನೆಗಳಿಗೆ 6500 ರೂ. ಪರಿಹಾರವನ್ನು ನೀಡಬೇಕಾಗಿದೆ. ಆದರೆ ರಾಜ್ಯ ಸರ್ಕಾರ 50 ಸಾವಿರ ರೂ. ಪರಿಹಾರ ನೀಡುತ್ತಿದೆ. ಮಳೆಯಿಂದ ಹಾನಿಗೀಡಾದವರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ 43,500 ರೂ. ಹೆಚ್ಚುವರಿಯಾಗಿ ರಾಜ್ಯ ಸರ್ಕಾರ ನೀಡುತ್ತಿದೆ. ಈ ಹಿಂದೆ ಪರಿಹಾರದ ವಿಷಯದಲ್ಲಿ ವಿವಿಧ ಮಾನದಂಡಗಳನ್ನು ಅನುಸರಿಸಲಾಗುತ್ತಿತ್ತು. ಈಗ ಏಕರೂಪದಲ್ಲಿ ಪರಿಹಾರ ನೀಡಲಾಗುತ್ತಿದೆ. ಈಗಾಗಲೇ 17 ಜನರಿಗೆ ಪರಿಹಾರ ಒದಗಿಸಲಾಗಿದ್ದು, ಮನೆ ಹಾನಿಗೀಡಾದ ಎಲ್ಲರಿಗೂ ಆದಷ್ಟು ಬೇಗನೆ ಪರಿಹಾರ ಒದಗಿಸಲಿದ್ದೇವೆ ಎಂದರು.

ಜಿಲ್ಲೆಯಲ್ಲಿ 41706 ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಬೆಳೆಗಳಿಗೆ ಹಾನಿ, 372 ಹೆಕ್ಟೇರ್‌ ತೋಟಗಾರಿಕಾ ಬೆಳೆ ಗಳಿಗೆ ಹಾನಿ ಸಂಭವಿಸಿದೆ. ಬೆಳೆ ಹಾನಿ ಬಗ್ಗೆ ಸಮರ್ಪಕವಾಗಿ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಸೂಚಿಸಲಾಗಿದೆ. ಮಳೆಯಿಂದಾಗಿ 2962 ವಿದ್ಯುತ್‌ ಕಂಬಗಳು ಹಾನಿಗೀಡಾಗಿದ್ದು, ಆದಷ್ಟು ಬೇಗನೆ ವಿದ್ಯುತ್‌ ಕಂಬಗಳು ಮತ್ತು ಪರಿವರ್ತಕಗಳನ್ನು ಸರಿಪಡಿಸಲು ಇಲಾಖೆಗೆ ಸೂಚನೆ ನೀಡಲಾಗಿದೆ.

ಮಳೆಯಿಂದ ಹಾನಿಗೀಡಾಗಿರುವ ರಸ್ತೆಗಳು, ಸೇತುವೆಗಳ ದುರಸ್ತಿಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮಳೆಯಿಂದಾಗಿ ಮುಳುಗಡೆಯಾಗುವ ಸಣ್ಣ ಸೇತುವೆಗಳನ್ನು ಎತ್ತರಿಸುವ ಬಗ್ಗೆ ತಾಂತ್ರಿಕ ವರದಿಯನ್ನು ಪಡೆಯಲಾಗುವುದು ಎಂದರು.

ಇದನ್ನೂ ಓದಿ: KAS Prelims Exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ; ಆಗಸ್ಟ್‌ 27ಕ್ಕೆ ನಿಗದಿ

ನೆರೆ ಪರಿಹಾರ ಕಾರ್ಯಗಳಿಗೆ ಅನುದಾನ ಕೊರತೆಯಿರುವುದಿಲ್ಲ. ತುರ್ತು ಪರಿಹಾರ ಕಾರ್ಯಗಳಿಗೆ ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿ 48 ಕೋಟಿ ರೂ. ಅನುದಾನ ಲಭ್ಯವಿದ್ದು, ತಹಸೀಲ್ದಾರ್‌ ಖಾತೆಗಳಲ್ಲೂ ಅನುದಾನ ಲಭ್ಯವಿದೆ. ಅಗತ್ಯ ಬಿದ್ದರೆ ಇನ್ನಷ್ಟು ಪರಿಹಾರವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನೆರೆ ಹಾವಳಿಗೆ ತುತ್ತಾಗುವ ಗ್ರಾಮಗಳ ಸ್ಥಳಾಂತರ ಕುರಿತು ಸೂಕ್ತ ತೀರ್ಮಾನ

ಕೃಷ್ಣಾ ನದಿಯಲ್ಲಿ ಪ್ರವಾಹದಿಂದಾಗಿ ಪ್ರತಿ ಬಾರಿ ನೆರೆ ಹಾವಳಿಗೆ ತುತ್ತಾಗುವ ಗ್ರಾಮಗಳ ಜನರನ್ನು ಶಾಶ್ವತವಾಗಿ ಬೇರೆ ಕಡೆಗೆ ಸ್ಥಳಾಂತರಿಸುವ ಬೇಡಿಕೆ ಕುರಿತು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ಕಾಗವಾಡ ತಾಲೂಕಿನ ಜೂಗಳ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಕೃಷ್ಣಾ ನದಿಯಲ್ಲಿ ಪ್ರವಾಹದಿಂದಾಗಿ ಕೆಲವು ಗ್ರಾಮಗಳು ನಿರಂತರವಾಗಿ ಸಮಸ್ಯೆ ಎದುರಿಸುತ್ತಿವೆ. ಶಹಾಪುರ, ಗಂಗಾವತಿ ಮತ್ತು ಜೂಗಳ ಗ್ರಾಮಗಳು ಪ್ರತಿ ಮಳೆಗಾಲದಲ್ಲಿ ಪ್ರವಾಹಕ್ಕೆ ತುತ್ತಾಗುತ್ತಿವೆ. ಈ ಗ್ರಾಮಗಳಲ್ಲಿ ಸುಮಾರು 3 ಸಾವಿರದಷ್ಟು ಕುಟುಂಬಗಳಿದ್ದು, ಇವರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿದೆ. ಈ ಗ್ರಾಮಗಳನ್ನು ಶಾಶ್ವತವಾಗಿ ಸ್ಥಳಾಂತರಗೊಳಿಸುವ ಬಗ್ಗೆ ಒತ್ತಾಯವಿದೆ. ಆದರೆ ಒಮ್ಮೆ ಸ್ಥಳಾಂತರಗೊಂಡ ಬಳಿಕ ಮತ್ತೆ ಅಲ್ಲಿಗೆ ಬಂದು ನೆಲೆಸಬಾರದು. ಈ ಕುರಿತು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳೊಂದಿಗೆ ಚರ್ಚಿಸಲು ಆದಷ್ಟು ಬೇಗನೆ ಸಭೆ ಕರೆಯಲಾಗುವುದು ಎಂದು ಸಿಎಂ ಹೇಳಿದರು.

ಈ ಭಾಗದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಹಲವಾರು ಮಂದಿ ಸಂಕಷ್ಟ ಎದುರಿಸುತ್ತಿರುವುದನ್ನು ಗಮನಿಸಲಾಗಿದೆ. ಸಂಕಷ್ಟದಲ್ಲಿರುವವರಿಗೆ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲಿದೆ. ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇದನ್ನೂ ಓದಿ: Beetroot Side Effects: ಬೀಟ್‌ರೂಟ್‌ ಎಲ್ಲರಿಗೂ ಒಳ್ಳೆಯದಲ್ಲ! ಯಾರು ಇದನ್ನು ತಿನ್ನಬಾರದು ಗೊತ್ತೇ?

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಇತರರು ಉಪಸ್ಥಿತರಿದ್ದರು.

Continue Reading
Advertisement
Murder case
ಕ್ರೈಂ50 seconds ago

Murder Case: ಪತ್ನಿಯನ್ನು ಕೊಂದು ಪರಾರಿಯಾದ, ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದು ಸತ್ತ!

Health Tips
ಆರೋಗ್ಯ16 mins ago

Health Tips: ರಾತ್ರಿ ಪದೇಪದೆ ಬಾಯಾರಿಕೆ‌ ಆಗುತ್ತದೆಯೆ? ಇದು ಗಂಭೀರ ಆರೋಗ್ಯ ಸಮಸ್ಯೆಯ ಲಕ್ಷಣವಾಗಿರಬಹುದು

Bigg Boss Tamil 8 Kamal Haasan Bids Farewell As Host
ಕಿರುತೆರೆ27 mins ago

Bigg Boss Tamil 8: ಬಿಗ್​ ಬಾಸ್​ ಸೀಸನ್ 8​ರ ಹೋಸ್ಟ್​ ನಾನಲ್ಲ ಎಂದ ಕಮಲ್‌ ಹಾಸನ್‌; ಕಾರಣ ಬಿಚ್ಚಿಟ್ಟ ನಟ!

belagavi factory fire tragedy
ಬೆಳಗಾವಿ47 mins ago

Factory Fire Tragedy: ಟೇಪ್‌ ನಿರ್ಮಾಣ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ; ಹತ್ತಾರು ಜೀವಹಾನಿ ಆತಂಕ

Independence Day 2024
ದೇಶ51 mins ago

Independence Day 2024: ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಕೇಳಲೇಬೇಕಾದ ಟಾಪ್‌ 10 ದೇಶಭಕ್ತಿ ಗೀತೆಗಳಿವು

Vinesh Phogat
ಕ್ರೀಡೆ58 mins ago

Vinesh Phogat: ಚಾಂಪಿಯನ್ಸ್‌ ಫೀಲ್ಡಿನಲ್ಲೇ ಉತ್ತರ ಕೊಡುತ್ತಾರೆ; ಒಲಿಂಪಿಕ್ಸ್‌ ಫೈನಲ್‌ ಪ್ರವೇಶಿಸಿದ ವಿನೇಶ್ ಫೋಗಟ್‌ಗೆ ರಾಹುಲ್‌ ಗಾಂಧಿ ವಿಷ್‌

kali river bridge collapse
ಪ್ರಮುಖ ಸುದ್ದಿ1 hour ago

Kali Bridge Collapse: ಕಾಳಿ ನದಿಗೆ ಕಟ್ಟಿದ ಸೇತುವೆ ಕುಸಿತ, ಟ್ರಕ್‌ ಬಿದ್ದು ಚಾಲಕನಿಗೆ ಗಾಯ

Shravan 2024
ಪ್ರಮುಖ ಸುದ್ದಿ1 hour ago

Shravan 2024: ಶ್ರಾವಣ ಶುಕ್ರವಾರದ ವಿಶೇಷವೇನು? ಅಂದು ಏನು ಮಾಡಬೇಕು? ಏನು ಮಾಡಬಾರದು?

muhammad yunus bangladesh unrest
ಪ್ರಮುಖ ಸುದ್ದಿ2 hours ago

Bangladesh Unrest: ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ನೇಮಕ

chia seeds
ಆರೋಗ್ಯ2 hours ago

Chia seeds: ಚಿಯಾ ಬೀಜಗಳನ್ನು ಸೇವಿಸುತ್ತಿದ್ದೀರಾ? ಹಾಗಾದರೆ, ಈ ಎಚ್ಚರಿಕೆ ನಿಮ್ಮಲ್ಲಿರಲಿ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು15 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ16 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌