ಬೆಂಗಳೂರು: ವಾರಾಂತ್ಯದಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ, ಧಾರವಾಡದಲ್ಲೂ ವರುಣನ ಸಿಂಚನವಾಗಲಿದೆ.
ಇದನ್ನೂ ಓದಿ: Instagram Reel: ಪ್ರಾಣಕ್ಕೇ ಕುತ್ತು ತಂದ ಇನ್‌ಸ್ಟಾಗ್ರಾಮ್ ರೀಲ್ಸ್; ಸಾಹಸ ಪ್ರದರ್ಶಿಸಲು ಹೋಗಿ 21 ವರ್ಷದ ಯುವಕ ಸಾವು
ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಕರಾವಳಿಯ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.
ಇನ್ನೂ ಮಳೆಯಿಲ್ಲದೇ ಕಂಗೆಟ್ಟಿರುವ ರಾಜಧಾನಿ ಬೆಂಗಳೂರಿಗೂ ವ್ಯಾಪಕವಾದ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಸಮಯದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಉಷ್ಣಾಂಶ 37 ಹಾಗೂ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಗುಡುಗು ಮುನ್ಸೂಚನೆ
ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ