ಬೆಂಗಳೂರು: ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ (Rain News) ಇದೆ. ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (karnataka Weather Forecast) ನೀಡಿದೆ.
ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಹಾವೇರಿ, ವಿಜಯನಗರ, ಬಳ್ಳಾರಿ, ಕೊಪ್ಪಳ, ಗದಗ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮಲೆನಾಡಿನ ಹಾಸನ ಮತ್ತು ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗಲಿದೆ.
ಇದನ್ನೂ ಓದಿ: Excise revenue: ಇದು ಎಣ್ಣೆ ಮಹಿಮೆ! ಟಾರ್ಗೆಟ್ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್ ಹೆಚ್ಚು ವರಮಾನ
ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಬೆಂಗಳೂರಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಯೆಲ್ಲೋ ಅಲರ್ಟ್
ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ