Site icon Vistara News

Karnataka Weather : ಬೆಂಗಳೂರು ಬಿಟ್ಟು ಉಳಿದೆಲ್ಲ ಕಡೆಗಳಲ್ಲಿ ಮಳೆ ಅಬ್ಬರ

Karnataka Weather Forecast.. Girl Holding Umbrella and walking in road

ಬೆಂಗಳೂರು: ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ (Rain Alert) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (karnataka weather Forecast) ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಒಳನಾಡಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯದಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಹಗುರವಾದ ಮಳೆ ಬೀಳಬಹುದು. ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರವಾದ ಮಳೆಯಾಗುವ (Rain Alert) ಸೂಚನೆ ಇದೆ.

ಉತ್ತರ ಒಳನಾಡಿನ ಹಾವೇರಿ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಗದಗ ಮತ್ತು ವಿಜಯನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಕೆಲವೊಮ್ಮೆ ಸಾಧಾರಣ ಮಳೆಯಾಗಹುದು. ಉಳಿದಂತೆ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾದರೆ, ಉತ್ತರ ಕನ್ನಡದಲ್ಲಿ ಭಾಗಶಃ ಮೋಡ ಕವಿದ ವಾತಾವರಣದೊಂದಿಗೆ ಕೆಲವೆಡೆ ಗುಡುಗು ಸಹಿತ (Rain News) ಮಳೆಯಾಗಲಿದೆ.

ಇದನ್ನೂ ಓದಿ: Attiguppe Metro Incident : ಗೆಳೆಯರ ಜತೆಗೆ ಬಂದು ಮೆಟ್ರೋ ಹಳಿಗೆ ಹಾರಿದ್ದೇಕೆ ನ್ಯಾಷನಲ್ ಲಾ ಸ್ಕೂಲ್‌ನ ವಿದ್ಯಾರ್ಥಿ?

ಬೆಂಗಳೂರಿಗಿಲ್ಲ ಮಳೆ ತಂಟೆ

ಬೆಂಗಳೂರಿಗೆ ಯಾವುದೇ ಮಳೆ ಸೂಚನೆ (No Rain Alert For Bengaluru) ಇಲ್ಲ. ಬದಲಿಗೆ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ತಾಪಮಾನ ಏರಿಕೆ

ಮಳೆ ಮುನ್ಸೂಚನೆ ನಡುವೆಯೂ ತಾಪಮಾನ ಏರಿಕೆ ಆಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ ಗರಿಷ್ಠ ಉಷ್ಣಾಂಶ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿ ಇರಲಿದೆ. ಉತ್ತರ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ ಗರಿಷ್ಠ ಉಷ್ಣಾಂಶ 2 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉತ್ತರ ಒಳನಾಡಿನ ಕೊಪ್ಪಳ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಮೈಸೂರು, ಮಂಡ್ಯ ತಾಪಮಾನದ ಬಿಸಿ ಇರಲಿದೆ.

ಇನ್ನೂ ರಾಜ್ಯಾದ್ಯಂತ ಬುಧವಾರದಂದು ಒಣಹವೆ ಇತ್ತು. ಗರಿಷ್ಠ ಉಷ್ಣಾಂಶ ಕೊಪ್ಪಳದಲ್ಲಿ 38.6 ಡಿ.ಸೆ ಹಾಗೂ ಕನಿಷ್ಠ ಉಷ್ಣಾಂಶ ಬೀದರ್‌ನಲ್ಲಿ 19.4 ಡಿ.ಸೆ ದಾಖಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version