ಬೆಂಗಳೂರು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.
ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವೇ ಇರಲಿದೆ. ಕೆಲವು ಕಡೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸಾಧ್ಯತೆ ಇದೆ. ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದ್ದು, ಇಬ್ಬನಿ ಬೀಳಲಿದೆ. ಗರಿಷ್ಠ ಉಷ್ಣಾಂಶ 27 ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಗುಡುಗು ಮುನ್ನೆಚ್ಚರಿಕೆ
ಮುಂದಿನ 48 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಮಳೆಯಾಗಲಿದೆ. ಜತೆಗೆ ಕೆಲವೊಂದು ಕಡೆಗಳಲ್ಲಿ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಹಾಗೂ ವಿಜಯನಗರದಲ್ಲಿ ಮಳೆ ಸಾಧ್ಯತೆ ಇದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಭಾಗದಲ್ಲಿ ಮಳೆಯಾಗಲಿದೆ.
ಕರಾವಳಿ, ದಕ್ಷಿಣ ಒಳನಾಡಲ್ಲಿ ಅಬ್ಬರಿಸಿರುವ ಮಳೆ
ರಾಜ್ಯದಲ್ಲಿ ಗುರುವಾರದಂದು ಕರಾವಳಿಯ ಹಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಪಣಂಬೂರು (ದಕ್ಷಿಣ ಕನ್ನಡ ಜಿಲ್ಲೆ) 4 ಸೆಂ.ಮೀ, ಮಂಗಳೂರು ವಿಮಾನ ನಿಲ್ದಾಣ (ದಕ್ಷಿಣ ಕನ್ನಡ ಜಿಲ್ಲೆ) ಕಳಸ, ಕೊಟ್ಟಿಗೆಹಾರ (ಎರಡೂ ಚಿಕ್ಕಮಗಳೂರು ಜಿಲ್ಲೆ) ತಲಾ 3 ಸೆಂ.ಮೀ ಮಳೆಯಾಗಿದೆ.
ಭಾಗಮಂಡಲ ಮತ್ತು ಹಾರಂಗಿ (ಎರಡೂ ಕೊಡಗು ಜಿಲ್ಲೆ), ಬೇಲೂರು (ಹಾಸನ ಜಿಲ್ಲೆ) ಮಂಗಳೂರು, ಧರ್ಮಸ್ಥಳ ಮಣಿ (ಎಲ್ಲ ದಕ್ಷಿಣ ಕನ್ನಡ ಜಿಲ್ಲೆ) ಮೂಡಿಗೆರೆ ಕೆವಿಕೆ (ಚಿಕ್ಕಮಗಳೂರು ಜಿಲ್ಲೆ) ತಲಾ 2 ಸೆಂ.ಮೀ, ಸುಳ್ಯ, ಉಪ್ಪಿನಂಗಡಿ (ಎರಡೂ ದಕ್ಷಿಣ ಕನ್ನಡ ಜಿಲ್ಲೆ) ಸೋಮವಾರಪೇಟೆ, ಕುಶಾಲನಗರ, ಪೊನ್ನಂಪೇಟೆ, ಮೂರ್ನಾಡು (ಎಲ್ಲಾ ಕೊಡಗು ಜಿಲ್ಲೆ), ಚಿಕ್ಕಮಗಳೂರು, ಬಾಳೆಹೊನ್ನುರು, ಜಯಪುರ (ಎಲ್ಲಾ ಚಿಕ್ಕಮಗಳೂರು ಜಿಲ್ಲೆ) ಸಕಲೇಶಪುರ, ಕೊಣನೂರು (ಎರಡೂ ಹಾಸನ ಜಿಲ್ಲೆ) ಬಂಡೀಪುರ (ಚಾಮರಾಜನಗರ ಜಿಲ್ಲೆ) ಬೆಳ್ಳೂರು (ಮಂಡ್ಯ ಜಿಲ್ಲೆ), ಕೊನೇಹಳ್ಳಿ ಕೆವಿಕೆ (ತುಮಕೂರು ಜಿಲ್ಲೆ) ತಲಾ1 ಸೆಂ.ಮೀ ಮಳೆಯಾಗಿದೆ. ಕನಿಷ್ಠ ಉಷಾಂಶವು ವಿಜಯಪುರದಲ್ಲಿ 15.6 ಡಿ.ಸೆ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.