Site icon Vistara News

Karnataka Weather : ಕರಾವಳಿ, ಮಲೆನಾಡಿಗೆ ಗುಡುಗು ಸಹಿತ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

karnataka weather Forecast

ಬೆಂಗಳೂರು: ಕರ್ನಾಟಕ ಕರಾವಳಿ ಹಾಗೂ ಮಲೆನಾಡಿನಲ್ಲಿ ವ್ಯಾಪಕವಾದ ಮಧ್ಯಮದಿಂದ ಭಾರಿ ಮಳೆಯಾಗುವ (Rain News) ನಿರೀಕ್ಷೆಯಿದೆ. ಪ್ರತ್ಯೇಕದಿಂದ ಚದುರಿದ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಇನ್ನೂ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿಯೊಂದಿಗೆ (Heavy Rain) ಮಳೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನ ಬೆಳಗಾವಿ ಮತ್ತು ಗದಗದಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಮಲೆನಾಡಿನ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಸಾಧಾರಣದಿಂದ ಶುರುವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ರಾಜಧಾನಿ ಬೆಂಗಳೂರಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಸುಮಾರು 31 ಮತ್ತು 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

9 ಜಿಲ್ಲೆಗಳಿಗೆ ಹೈ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗುವುದರ ಜತೆಗೆ ಗಾಳಿ ವೇಗವು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಕೊಡಗು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ ಮತ್ತು ಮೈಸೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ . ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಮೀನುಗಾರಿಕೆ ತೆರಳದಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Health Tips: ನಮ್ಮ ದೇಹಕ್ಕೆ ಪ್ರೊಟೀನ್‌ ಪುಷ್ಟಿ ನೀಡಲು ಯಾವ ಮೊಳಕೆ ಕಾಳುಗಳು ಸೂಕ್ತ?

ಮುದ್ದು ಶ್ವಾನಗಳಿಗೂ ಬಂತು ಮಾನ್ಸೂನ್‌ ಫ್ಯಾಷನ್‌!

ಮುದ್ದು ಶ್ವಾನಗಳಿಗೂ ಬಂತು ಮಾನ್ಸೂನ್‌ ಫ್ಯಾಷನ್‌! (Dogs Monsoon Fashion) ಅರರೆ., ಇದೇನಿದು ಶ್ವಾನಗಳಿಗೂ ಮಳೆಗಾಲದ ಫ್ಯಾಷನ್‌ ಎಂದು ಹುಬ್ಬೇರಿಸಬಹುದು. ಹೌದು, ಇದೀಗ ಶ್ವಾನಗಳ ಮಾನ್ಸೂನ್‌ ಡ್ರೆಸ್‌ ಹಾಗೂ ರೈನ್‌ಕೋಟ್‌, ಮತ್ತಿತರೇ ಆಕ್ಸೆಸರೀಸ್‌ ಪೆಟ್‌ ಲೋಕದಲ್ಲಿ ಕಾಲಿಟ್ಟಿವೆ. ಆಯಾ ಜಾತಿಯ ಮುದ್ದು ಶ್ವಾನಗಳಿಗೆ ಹೊಂದುವಂತಹ, ನಾನಾ ವೆರೈಟಿ ಮಾನ್ಸೂನ್‌ ಡ್ರೆಸ್‌ಗಳು ಹಾಗೂ ವಾಟರ್‌ಪ್ರೂಫ್‌ ರೈನ್‌ಕೋಟ್‌ಗಳು ನಾಯಿಮರಿಗಳನ್ನು ಅಲಂಕರಿಸುತ್ತಿವೆ.

ಮುದ್ದು ಶ್ವಾನಗಳಿಗೂ ಮಾನ್ಸೂನ್‌ ಫ್ಯಾಷನ್‌

“ಇಂದು ಕಾಲ ಬದಲಾಗಿದೆ. ಮನೆಯಲ್ಲಿ ಮುದ್ದು ಶ್ವಾನಗಳಿಗೂ ಮಕ್ಕಳ ಸ್ಥಾನ ಮಾನ ದೊರಕಿದೆ. ಪ್ರತಿಯೊಬ್ಬರು ಅವರು ಸಾಕಿದ ನಾಯಿಮರಿಗಳನ್ನು ಯಾವ ಮಟ್ಟಿಗೆ ಇಷ್ಟ ಪಡುತ್ತಾರೆಂದರೇ, ಅವಕ್ಕೆ ಇತ್ತೀಚೆಗೆ ನಾನಾ ಬಗೆಯಲ್ಲಿ ಸ್ಟೈಲಿಂಗ್‌ ಕೂಡ ಮಾಡುತ್ತಾರೆ. ಇನ್ನು, ಹಿರಿಯರು ಕಿರಿಯರೆನ್ನದೇ ಎಲ್ಲರೂ ವಾಕಿಂಗ್‌ ಹಾಗೂ ಜಾಕಿಂಗ್‌ ಸಮಯದಲ್ಲೂ ಶ್ವಾನಗಳನ್ನು ಜೊತೆಯಲ್ಲಿಯೇ ಕರೆದೊಯ್ಯುತ್ತಾರೆ. ಇದಕ್ಕೆ ಪೂರಕ ಎಂಬಂತೆ, ಪೆಟ್‌ ಲೋಕದಲ್ಲೂ ನಾನಾ ಬಗೆಯ ಆಕ್ಸೆಸರೀಸ್‌ಗಳು ಹಾಗೂ ಉಡುಗೆಗಳು ಬಂದಿವೆ. ಆಯಾ ಸೀಸನ್‌ಗೆ ಮ್ಯಾಚ್‌ ಆಗುವಂತೆ ದೊರಕುತ್ತಿವೆ. ಅವುಗಳಲ್ಲಿ ಇದೀಗ ಮಾನ್ಸೂನ್‌ ಸೀಸನ್‌ಗೆ ಹೊಂದುವಂತಹ ಫ್ಯಾಷನ್‌ ಉಡುಗೆ ಹಾಗೂ ರೈನ್‌ಕೋಟ್‌ಗಳು ಬಿಡುಗಡೆಗೊಂಡಿವೆ” ಎನ್ನುತ್ತಾರೆ ಪೆಟ್‌ ಸ್ಪಾನ ಸ್ಟೈಲಿಂಗ್‌ ಎಕ್ಸ್‌ಫರ್ಟ್ ಜಾಕಿ. ಅವರ ಪ್ರಕಾರ, ಶ್ವಾನಗಳು ಇದೀಗ ಸ್ಟೈಲಿಶ್‌ ಆಗಿ ಕಾಣಿಸಲು ಈ ಆಕ್ಸೆಸರೀಸ್‌ಗಳು ಸಹಕರಿಸುತ್ತಿವೆಯಂತೆ.

ಮಾನ್ಸೂನ್‌ಗೆ ಮ್ಯಾಚಿಂಗ್‌

ಶ್ವಾನಗಳಿಗೆ ಬಂದಿರುವ ಕಲರ್‌ಫುಲ್‌ ಉಡುಗೆ ಹಾಗೂ ರೈನ್‌ಕೋಟ್‌ ಮತ್ತು ಅವುಗಳ ಕಾಲಿನ ಪಾದಗಳಿಗೆ ಹಾಕಬಹುದಾದ ಪೆಟ್‌ ವೆಲ್ಲೈಸ್‌, ರೈನ್‌ ಬೂಟ್ಸ್ ಹಾಗೂ ಟವೆಲ್‌ ಮತ್ತು ವೈಪ್ಸ್ ಈ ಸೀಸನ್‌ನಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿವೆ.

ಕಲರ್‌ಫುಲ್‌ ಡಾಗ್ಗಿ ರೈನ್‌ ಕೋಟ್ಸ್

ಪಿರಿ ಪಿರಿ ಸಣ್ಣ ಮಳೆಯಲ್ಲೂ ಡಾಗ್ಗಿಯಿಲ್ಲದೇ ವಾಕ್‌ ಮಾಡಲಾಗುವುದಿಲ್ಲ ಎನ್ನುವ ಶ್ವಾನಗಳ ಪೋಷಕರು, ಈ ಮಾನ್ಸೂನ್‌ ಡಾಗ್‌ ರೈನ್‌ಕೋಟ್ಸ್‌ಗಳ ಖರೀದಿ ಮಾಡತೊಡಗಿದ್ದಾರೆ. ಬೇಡಿಕೆ ಹೆಚ್ಚಾದಂತೆ, ಸಿಂಥಟಿಕ್‌, ಪಾಲಿಸ್ಟರ್‌ ಸೇರಿದಂತೆ ವಾಟರ್‌ ಪ್ರೂಫ್‌ ಫ್ಯಾಬ್ರಿಕ್‌ನಲ್ಲಿ ಇವು ನಾನಾ ಡಿಸೈನ್‌ನಲ್ಲಿ ಆಗಮಿಸಿವೆ.

ಪೆಟ್ಸ್ ರೈನ್‌ ಬೂಟ್ಸ್

ನಾಯಿ ಮರಿಗಳಿಗೆ ರಸ್ತೆಯ ಹಾಗೂ ನೆಲದ ಕೊಚ್ಚೆ, ಕೆಸರು ಹತ್ತದಂತೆ ಕಾಪಾಡಬಹುದಾದ ಪುಟ್ಟ ಪುಟ್ಟ ರೈನ್‌ ಬೂಟ್ಸ್‌ಗಳು ಕೂಡ ನಾನಾ ವಿನ್ಯಾಸದಲ್ಲಿ ಪೆಟ್‌ ಶಾಪ್‌ಗಳಿಗೆ ಬಂದಿವೆ. ಇನ್ನು, ಡಾಗ್‌ ಟವೆಲ್ಸ್ ಹಾಗೂ ವೈಪ್ಸ್ ಸೇರಿದಂತೆ, ಬೋ ಹಾಗೂ ಬೆಲ್ಟ್‌ಗಳು ಕೂಡ ಪೆಟ್‌ ಶಾಪ್‌ಗಳಿಗೆ ಲಗ್ಗೆ ಇಟ್ಟಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version