Site icon Vistara News

Karnataka Weather : ವಾರಪೂರ್ತಿ ಬಿಸಿಲು ಇರಲಿದೆ, ಭಾರಿ ಮಳೆಯೂ ಬರಲಿದೆ!

Heavy rain with hot weather

ಬೆಂಗಳೂರು: ನೈರುತ್ಯ ಮುಂಗಾರು ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಮಾನ್ಯವಾಗಿದ್ದು, ಉತ್ತರ ಒಳನಾಡಲ್ಲಿ ದುರ್ಬಲಗೊಂಡಿದೆ. ಅಕ್ಟೋಬರ್‌ 18ರಂದು ಕೊಡಗು ಹಾಗೂ ಮೈಸೂರಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್‌ (Karnataka Weather Forecast ) ನೀಡಿದೆ.

ಜತೆಗೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಭರ್ಜರಿ ಮಳೆಯಾಗಲಿದ್ದು, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರದಲ್ಲೂ ಪ್ರತ್ಯೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ, ರಾಮನಗರ ಮತ್ತು ತುಮಕೂರಲ್ಲಿ ಲಘುವಾಗಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ ಮತ್ತು ದಾವಣಗೆರೆಯಲ್ಲಿ ಚದುರಿದಂತೆ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರದಲ್ಲಿ ಒಣಹವೆ ಇರಲಿದೆ.

ಇದನ್ನೂ ಓದಿ:Cracker Tragedy : ಅತ್ತಿಬೆಲೆ ಪಟಾಕಿ ದುರಂತ ಬಲಿ ಸಂಖ್ಯೆ 17ಕ್ಕೇರಿಕೆ, ಅಂಗಡಿ ಕಾರ್ಮಿಕನ ದಾರುಣ ಮರಣ

ಇಲ್ಲೆಲ್ಲ ಒಣಹವೆ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿಜಯನಗರ, ವಿಜಯಪುರ, ಕೊಪ್ಪಳ, ಗದಗ, ಬಾಗಲಕೋಟೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣ ಹವೆ ಇರಲಿದೆ.

ಗರಿಷ್ಠ ಉಷ್ಣಾಂಶ ಏರಿಕೆ

ಮಳೆ ನಡುವೆಯೂ ಕೆಲವೆಡೆ ಗರಿಷ್ಠ ಉಷ್ಣಾಂಶ ಏರಿಕೆ ಆಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಚಿತ್ರದುರ್ಗ, ಹಾಸನ, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಮೈಸೂರು ತುಮಕೂರಿನ ಒಂದೆರಡು ಕಡೆಗಳಲ್ಲಿ 1- 2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 20 ಡಿ.ಸೆ
ಗದಗ: 32 ಡಿ.ಸೆ – 21 ಡಿ.ಸೆ
ಹೊನ್ನಾವರ: 32 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 23 ಡಿ.ಸೆ
ಬೆಳಗಾವಿ: 31 ಡಿ.ಸೆ – 20 ಡಿ.ಸೆ
ಕಾರವಾರ: 34 ಡಿ.ಸೆ – 24 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version