ಬೆಂಗಳೂರು: ಮಂಗಳವಾರದಂದು ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆಯಾಗುವ (Heavy rain Alert) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಇನ್ನೂ ಮಲೆನಾಡು ಸುತ್ತಮುತ್ತ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಒಳನಾಡಿನದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ.
ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ.
ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಲ್ಲಿ ಗಾಳಿ ಜತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಈ ಜಿಲ್ಲೆಗಳಿಗೆ ಮುಂದುವರಿದ ಎಚ್ಚರಿಕೆ
ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: Karnataka Rain : ಚಿಕ್ಕಮಗಳೂರಲ್ಲಿ ಮಳೆಗೆ ಕರೆಂಟ್ ಕಟ್; ಕೊಡಗು, ದಾವಣಗೆರೆಯಲ್ಲೂ ಅವಾಂತರ
ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯಾದ್ಯಂತ ಮಳೆಯು (Heavy rain alert) ಅಬ್ಬರಿಸುತ್ತಿದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ಮಂಗಳವಾರವೂ ರಜೆ ಘೋಷಣೆ (Holiday For schools) ಮಾಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಿಗೆ ರೆಡ್ ಅಲರ್ಟ್ (Karnataka Weather Forecast) ಘೋಷಣೆ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜು.16ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಶಿವಮೊಗ್ಗದ ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ. ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ರಜೆ ಘೋಷಣೆ ಮಾಡಿದ್ದಾರೆ. ಇತ್ತ ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಮಂಗಳವಾರ ರಜೆ ಘೋಷಣೆ ಮಾಡಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ.
ಹಾಸನ ಜಿಲ್ಲೆಯಲ್ಲೂ ನಿರಂತರ ಮಳೆಯಾಗುತ್ತಿದ್ದು, ಸಕಲೇಶಪುರ, ಆಲೂರು, ಬೇಲೂರು, ಹಾಸನ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಅನುಮತಿ ಪಡೆದು, ರಜೆ ಘೋಷಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಾಂಡು ಆದೇಶ ಹೊರಡಿಸಿದ್ದಾರೆ. ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಜುಲೈ 20 ರಂದು ಸರಿದೂಗಿಸುಂತೆ ಆದೇಶಿಸಿದ್ದಾರೆ.
ಕೊಡಗಿನಲ್ಲಿ ಮುಂದುವರೆದ ಭಾರಿ ಗಾಳಿ ಮಳೆ ಹಿನ್ನೆಲೆಯಲ್ಲಿ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಾದ್ಯಂತ ಮಂಗಳವಾರ ಒಂದು ದಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ