ಬೆಂಗಳೂರು: ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶದ ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಲಿದೆ.
ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದ್ದರೆ, ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಕೂಡಿರಲಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ 31 ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಭಾರೀ ಮಳೆಗೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಗಾಳಿಯು ಗಂಟೆಗೆ 40-50 ಕಿ.ಮೀ ಇರಲಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ