Site icon Vistara News

Karnataka Weather : ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಮಳೆ ಜತೆಗೆ ರಭಸವಾಗಿ ಬೀಸಲಿದೆ ಗಾಳಿ

karnataka weather Forecast

ಬೆಂಗಳೂರು: ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನ ಹಲವೆಡೆ ಚದುರಿದಂತೆ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕರವಾಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಕಲಬುರಗಿ, ವಿಜಯಪುರ, ಧಾರವಾಡ, ಬಾಗಲಕೋಟೆ, ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಬೆಂಗಳೂರಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಯೆಲ್ಲೋ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Murder case : ಹಿರಿಯ ಸ್ವಾಮೀಜಿ ಕೊಂದ‌ ಆರೋಪಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು

ಕರಾವಳಿಯಲ್ಲಿ ವ್ಯಾಪಕ (Rain News) ಮಳೆಯಾಗುತ್ತಿದ್ದು, ಅವಾಂತರಗಳು ಮುಂದುವರಿದಿದೆ. ಉತ್ತರ ಕನ್ನಡದ ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಬಿಣಗಾ ಸುರಂಗದಲ್ಲಿ ಮತ್ತೆ ಗುಡ್ಡ ಕುಸಿತ ಭೀತಿ ಎದುರಾಗಿದೆ. ಟನಲ್ ಎದುರು ಗುಡ್ಡದಿಂದ ಬಂಡೆಗಲ್ಲುಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಭಾರೀ ಮಳೆಗೆ (Karnataka weather Forecast) ಟನಲ್ ಮೇಲ್ಭಾಗದ ಮಣ್ಣು ಸಡಿಲಗೊಂಡಿದ್ದು, ಬಂಡೆಗಲ್ಲು ಬೀಳುತ್ತಿವೆ.

ಐಆರ್‌ಬಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲೂ ಗುಡ್ಡ ಕುಸಿತ ಭೀತಿ ಎದುರಾಗಿದೆ. ವಾಹನ ಸವಾರರು ಆತಂಕದಲ್ಲೇ ಹೆದ್ದಾರಿಯಲ್ಲಿ ಸಾಗುವಂತಾಗಿದೆ. ಕಳೆದ 10 ವರ್ಷಗಳಿಂದ ಕಾರವಾರದಿಂದ ಭಟ್ಕಳವರೆಗೂ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಪೂರ್ಣಗೊಂಡಿಲ್ಲ. ಹೆದ್ದಾರಿ ಅಗಲೀಕರಣ ನಡೆಸುತ್ತಿರುವ ಐಆರ್‌ಬಿ ಕಂಪೆನಿ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version