Site icon Vistara News

Karnataka Weather : ಕರಾವಳಿ ಸೇರಿ ಉತ್ತರ ಒಳನಾಡಿನ ಈ ಭಾಗದಲ್ಲಿ ಭರ್ಜರಿ ಮಳೆ; ಯೆಲ್ಲೊ ಅಲರ್ಟ್‌ ಘೋಷಣೆ

karnataka weather Forecast

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನದಲ್ಲಿ ಸಾಧಾರಣವಾಗಿರಲಿದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸುಚನೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಪ್ರದೇಶದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗಾಳಿ ಸಹಿತ ಭಾರಿ ಮಳೆ

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಬೀಸಲಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಭಾರಿ ಮಳೆಯಲ್ಲಿ ಎತ್ತಿನ ಬಂಡಿ ಸಮೇತ ನದಿಯಲ್ಲಿ ಕೊಚ್ಚಿಕೊಂಡು ಹೋದ ರೈತ

ಕಲಬುರಗಿ‌ ಜಿಲ್ಲೆಯಾದ್ಯಂತ ವರುಣನ‌ ಆರ್ಭಟ ಜೋರಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಇರಗಪಳ್ಳಿ ಬಳಿಯ ಭೋಗಾವತಿ ನದಿಯಲ್ಲಿ ಎತ್ತಿನ ಬಂಡಿ ಸಮೇತ ರೈತ ಕೊಚ್ಚಿಕೊಂಡು ಹೋಗಿದ್ದಾರೆ. ನದಿಯಿಂದ ನೀರು ತರಲು ಹೋಗಿದ್ದ ರೈತ ಅಮೃತ್ ನೀರಿನ‌ ರಭಸಕ್ಕೆ ಕೊಚ್ಚಿ‌ಹೋಗುತ್ತಿದ್ದ ವೇಳೆ ಡ್ರಮ್ ಮೂಲಕ ಹೊರ ಬಂದಿದ್ದಾರೆ. ಅದೃಷ್ಟವಶಾತ್ ರೈತ ಅಮೃತ್ ಬಚಾವ್ ಆದರೆ, ಎರಡು ಎತ್ತುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version