ಬೆಂಗಳೂರು: ಭಾನುವಾರ ಕರಾವಳಿ ಕರ್ನಾಟಕ ಮತ್ತು ಮಲೆನಾಡು ಸುತ್ತಮುತ್ತ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ (Heavy Rain) ಪ್ರತ್ಯೇಕವಾಗಿ ಭಾರೀ ಮಳೆಯಾಗಲಿದೆ. ದಕ್ಷಿಣದಲ್ಲಿ ಚದುರಿದ ಅತಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.
ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಕೋಲಾರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಕೊಪ್ಪಳ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಅತಿ ಹೆಚ್ಚು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದ ಜಿಲ್ಲೆಗಳ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಲಘು ಮಳೆ
ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿ.ಸೆ ಇರಲಿದೆ.
ಈ ಜಿಲ್ಲೆಗಳಲ್ಲಿ ಭಾರಿ ಮಳೆ
ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿ ವೇಗವು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ