ಬೆಂಗಳೂರು: ಆಗಸ್ಟ್ 10ರಂದು ಕರ್ನಾಟಕದ ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಮೈಸೂರು-ಮಂಡ್ಯದಲ್ಲೂ ಭಾರಿ ಮಳೆ
ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು ಮತ್ತು ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಸುರಿಯಲಿದೆ.
ಇದನ್ನೂ ಓದಿ: Theft Case : ಬೆಂಗಳೂರಿನಲ್ಲಿ ಪ್ರೇಯಸಿಗಾಗಿ ಕಳ್ಳತನಕ್ಕೆ ಇಳಿದ ಪ್ರಿಯತಮ! ಮದುವೆಯಾಗಲು ಹೊರಟವರು ಜೈಲುಪಾಲು
ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಮಧ್ಯಮ ಮಳೆಯಾಗಲಿದೆ.
ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ ಜಿಲ್ಲೆಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು, ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣವಾಗಿರಲಿದೆ.
ಬೆಂಗಳೂರಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28ºC ಮತ್ತು 21ºC ಇರಲಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ