ಚಿಕ್ಕಮಗಳೂರು/ಬೆಂಗಳೂರು: ಮಲೆನಾಡಿನ ಭಾಗದಲ್ಲಿ ಒಂದು ಗಂಟೆಯಿಂದ ನಿರಂತರ ಮಳೆ (Rain news) ಸುರಿಯುತ್ತಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಜಯಪುರ, ಬಸರೀಕಟ್ಟೆ ಸೀಗೋಡು, ಹೆರೂರು ಗ್ರಾಮಗಳ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ. ಕಾಫಿ ಹೂ ಬಿಡುವ ಸಮಯಕ್ಕೆ ಸುರಿದ ಮಳೆಯಿಂದಾಗಿ ಮಲೆನಾಡಿನ ಕೃಷಿಕರಲ್ಲಿ ಸಂತಸ ಹೆಚ್ಚಾಗಿದೆ.
ಶನಿವಾರ ರಾತ್ರಿಯೂ ಚಿಕ್ಕಮಗಳೂರು, ಕೊಡಗು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚಿನೊಂದಿಗೆ ಬಿರುಗಾಳಿ ಸಹಿತ ಮಳೆಯಾಗುವ (Rain alert) ಬಹಳಷ್ಟು (Karnataka Weather Forecast) ಸಾಧ್ಯತೆ ಇದೆ. ಕೆಲವೊಮ್ಮೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.
ಮಾ.24ರಂದು ರಾಜ್ಯಾದ್ಯಂತ ಹಗುರವಾದ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ((Karnataka Weather Forecast)) ನೀಡಿದೆ. ಮುಂದಿನ 48 ಗಂಟೆಯಲ್ಲಿ ಕರಾವಳು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯದಲಿದೆ.
ಇದನ್ನೂ ಓದಿ: Murder Case : ಜೋಡಿ ಕೊಲೆ; ಪರಪುರುಷನ ಮೋಹಿಸಿದ ತಾಯಿಯನ್ನು ಕೊಚ್ಚಿ ಕೊಂದ ಮಗ
ಕರಾವಳಿಯಲ್ಲಿ ಗುಡುಗು ಮುನ್ನೆಚ್ಚರಿಕೆ
ಮುಂದಿನ 24 ಗಂಟೆಯಲ್ಲಿ ಕರಾವಳಿಯ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ.
ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ
ರಾಜಧಾನಿ ಬೆಂಗಳೂರಲ್ಲಿ ಶುಷ್ಕ ವಾತಾವರಣವೇ ಇದ್ದರೂ, ಹಲವೆಡೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 21 ಡಿ.ಸೆ ಇರಲಿದೆ. ಕೆಲವೊಮ್ಮೆ ರಾತ್ರಿ ಸಮಯ ಗಾಳಿ ಬೀಸಬಹುದು.
ಪಣಂಬೂರಲ್ಲಿ 7 ಸೆಂ.ಮೀ ಮಳೆ ದಾಖಲು
ರಾಜ್ಯಾದ್ಯಂತ ಶುಕ್ರವಾರದಂದು ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ದಕ್ಷಿಣ ಕನ್ನಡದ ಪಣಂಬೂರಲ್ಲಿ 7 ಸೆಂ.ಮೀ ಮಳೆ ಸುರಿದಿದೆ. ಮಳೆ ನಡುವೆಯೂ ಉತ್ತರಒಳನಾಡಲ್ಲಿ ಬಿಸಿಲ ತಾಪ ಹೆಚ್ಚಾಗಿತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 38.8 ಹಾಗೂ ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ 20.1 ಡಿ.ಸೆ ಇತ್ತು
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮಾಡಿ