Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ - Vistara News

ಮಳೆ

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Uttara Kannada Landslide: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಆರು ಮಂದಿ ಮೃತಪಟ್ಟಿದ್ದು, ಇನ್ನೂ ನಾಲ್ವರು ಕಣ್ಮರೆಯಾಗಿದ್ದಾರೆ ಎನ್ನಲಾಗಿದೆ. ಇದರೊಟ್ಟಿಗೆ ಅವಘಡ ನಡೆದ ಸ್ಥಳಕ್ಕೆ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಭೇಟಿ ನೀಡಿದೆ.

VISTARANEWS.COM


on

Uttara Kannada Landslide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಉತ್ತರ ಕನ್ನಡದ ಅಂಕೋಲಾ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ (Uttara Kannada Landslide) ಇದುವರೆಗೆ ಶಿರೂರು ಮೂಲದ ಒಂದೇ ಕುಟುಂಬದ ನಾಲ್ವರು, ಇಬ್ಬರು ಚಾಲಕರು ಸೇರಿ 6 ಮಂದಿ ಮೃತದೇಹ ಪತ್ತೆಯಾಗಿದೆ. ಮೊದಲ ದಿನ ಶಾಂತಿ ಲಕ್ಷ್ಮಣ ನಾಯ್ಕ(36) ಎಂಬುವವರ ಶವ ಪತ್ತೆಯಾಗಿತ್ತು. 2ನೇ ದಿನ ಲಕ್ಷ್ಮಣ ನಾಯ್ಕ (47), ರೋಶನ್ ಲಕ್ಷಣ ನಾಯ್ಕ(11) ಹಾಗೂ ತಮಿಳುನಾಡು ಮೂಲದ ಟ್ಯಾಂಕರ್ ಚಾಲಕ ಚಿಣ್ಣನ್‌ (55) ಎಂಬುವವರ ಮೃತದೇಹ ಪತ್ತೆಯಾಗಿದೆ.

ಗುರುವಾರ ಅವಂತಿಕಾ ಲಕ್ಷ್ಮಣ ನಾಯ್ಕ(5), ಲಾರಿ ಚಾಲಕ ಮುರುಗನ್ ಶವ ಸಿಕ್ಕಿದೆ. ಮೊದಲ ನಾಲ್ಕು ಮೃತದೇಹ ಗೋಕರ್ಣದ ದುಬ್ಬನಶಶಿ ಕಡಲತೀರದಲ್ಲಿ ಪತ್ತೆಯಾದರೆ, ಅವಂತಿಕಾ ಮೃತದೇಹ ಕುಮಟಾ ತಾಲ್ಲೂಕಿನ ಗಂಗೆಕೊಳ್ಳ ಭಾಗದಲ್ಲಿ, ಚಾಲಕ ಮುರುಗನ್ ಅಂಕೋಲಾ ತಾಲ್ಲೂಕಿನ ಮಂಜಗುಣಿ ಬಳಿ‌ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದೆ. ಜಿಲ್ಲಾಧಿಕಾರಿ ಹೇಳುವ ಪ್ರಕಾರ ನಾಲ್ಕು ಮಂದಿ ಮಿಸ್ಸಿಂಗ್ ದೂರು ಬಂದಿದೆ. ಹೀಗಾಗಿ ಒಟ್ಟು ಸಾವಿನ ಸಂಖ್ಯೆ 10ಕ್ಕೆ ಏರುವ ಸಾಧ್ಯತೆಯೂ ಇದೆ.

ಪರಿಹಾರದ ಆದೇಶ ಪತ್ರ ವಿತರಣೆ

ಗುಡ್ಡ ಕುಸಿತದಲ್ಲಿ ಮೃತಪಟ್ಟ ಟ್ಯಾಂಕರ್ ಚಾಲಕನ ಕುಟುಂಬಸ್ಥರಿಗೆ ಪರಿಹಾರದ ಆದೇಶ ಪತ್ರವನ್ನು ಉತ್ತರಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ‌.ಕೆ ವಿತರಿಸಿದರು. ಮೃತ ಚಾಲಕನ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರದ ಆದೇಶ ಹಸ್ತಾಂತರ ಮಾಡಲಾಗಿದೆ. ಜುಲೈ 15 ರಂದು ಶಿರೂರು ಬಳಿ ಗುಡ್ಡ ಕುಸಿದ ಅವಘಡದಲ್ಲಿ ಕಣ್ಮರೆಯಾಗಿದ್ದ ಚಿಣ್ಣನ್ ಮರುದಿನ ಲಕ್ಷಣ ನಾಯ್ಕ ಮೃತದೇಹದೊಂದಿಗೆ ಪತ್ತೆಯಾಗಿತ್ತು. ತಮಿಳುನಾಡಿನ ನಾಮಕ್ಕಲ್ ಮೂಲದ ಗ್ಯಾಸ್ ಟ್ಯಾಂಕರ್ ಚಾಲಕ ಚಿಣ್ಣನ್, ಮಂಗಳೂರಿನಿಂದ ಗೋವಾಕ್ಕೆ ಗ್ಯಾಸ್ ಟ್ಯಾಂಕರ್ ಕೊಂಡೊಯ್ಯುತ್ತಿದ್ದಾಗ ಗುಡ್ಡ ಕುಸಿದಿತ್ತು.

ಸ್ಥಳಕ್ಕಾಗಮಿಸಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ

ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಿಂದ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ತಂಡ ಭೇಟಿ ನೀಡಿದೆ. ಗುಡ್ಡ ಕುಸಿತ ಸ್ಥಳದಲ್ಲಿ ಕಲ್ಲು, ಮಣ್ಣು ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಜಿಲ್ಲೆಯಲ್ಲಿ ಸರ್ವೆ ನಡೆಸಿ ಭೂಕುಸಿತ ಅಪಾಯವಿರುವ ಸ್ಥಳಗಳನ್ನು ಗುರುತಿಸಿತ್ತು. ಜಿಲ್ಲೆಯ ಸುಮಾರು 436 ಕಡೆ ಭೂಕುಸಿತ ಉಂಟಾಗುವ ಎಚ್ಚರಿಕೆಯನ್ನು ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ನೀಡಿತ್ತು. ಇದೀಗ ಎನ್‌ಎಚ್‌ಎಐ (NHAI) ಅಧಿಕಾರಿಗಳೊಂದಿಗೆ ಗುಡ್ಡ ಕುಸಿತ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Rain : ಹಾಸನದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿತ; ಬೆಳಗಾವಿಯಲ್ಲಿ ರಸ್ತೆಗೆ ಉರುಳಿದ ಬೃಹತ್‌ ಬಂಡೆಗಲ್ಲು

ಮಣ್ಣು ತೆರೆಯುವಾಗ ಮತ್ತೆ ಬರ್ಗಿ ಬಳಿ ಗುಡ್ಡ ಕುಸಿತ

ಉತ್ತರ ಕನ್ನಡದ ಕುಮಟಾದ ಬರ್ಗಿ ಬಳಿ ಮಣ್ಣು ತೆರವುಗೊಳಿಸುವಾಗಲೇ ಮತ್ತೆ ಗುಡ್ಡ ಕುಸಿದಿದೆ. ರಾಷ್ಟ್ರೀಯ ಹೆದ್ದಾರಿ 66ರ ಬರ್ಗಿ ಗ್ರಾಮದ ಗುಡ್ಡ ಕುಸಿಯುವ ದೃಶ್ಯ ಬರ್ಗಿ ಗ್ರಾಮದ ನಿವಾಸಿಯೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಐಆರ್‌ಬಿ ಸಿಬ್ಬಂದಿ ಜೆಸಿಬಿಯಿಂದ ಮಣ್ಣು ತೆಗೆಯುತ್ತಿದ್ದಂತೆ ಮತ್ತೆ ಗುಡ್ಡ ಕುಸಿದಿದ್ದು, ಕೂಡಲೇ ಸಿಬ್ಬಂದಿ ಜೆಸಿಬಿ ಹಿಂದಕ್ಕೆ ತೆಗೆದುಕೊಂಡಿದ್ದಾರೆ. ಹೆದ್ದಾರಿ ಪಕ್ಕದ ಗುಡ್ಡಗಳು ಅಪಾಯಕಾರಿಯಾಗಿ ಪರಿಣಮಿಸಿದ್ದು, ಹೆದ್ದಾರಿ ಅಗಲೀಕರಣಕ್ಕೆ ಅವೈಜ್ಞಾನಿಕ ರೀತಿಯಲ್ಲಿ ಗುಡ್ಡ ಕೊರೆದಿದ್ದೇ ಕುಸಿತಕ್ಕೆ ಕಾರಣ ಎನ್ನಲಾಗಿದೆ.

ದೇವರಬಾವಿಯಲ್ಲೂ ಗುಡ್ಡ ಕುಸಿತ ಭೀತಿ

ಇನ್ನೂ ಶಿರೂರು ಗುಡ್ಡ ಕುಸಿತ ಬೆನ್ನಲ್ಲೇ ಜಿಲ್ಲೆಯ ಹಲವೆಡೆ ಗುಡ್ಡ ಕುಸಿತದ ಆತಂಕ ಹೆಚ್ಚಾಗಿದೆ. ಕುಮಟಾ ತಾಲೂಕಿನ ಗೋಕರ್ಣದ ದೇವರಬಾವಿಯಲ್ಲಿ ಗುಡ್ಡ ಕುಸಿತದ ಭೀತಿ ಇದ್ದು, ಸುಮಾರು 200 ಮೀ ವ್ಯಾಪ್ತಿಯಲ್ಲಿ ಬಿರುಕು ಬಿಟ್ಟಿದೆ. ಗುಡ್ಡ ಇಬ್ಬಾಗವಾಗಿ ಧರೆಗುರುಳುವ ಆತಂಕ ಇದೆ.ಇತ್ತ ಗುಡ್ಡದ ಕೆಳಭಾಗದಲ್ಲಿ 10ಕ್ಕೂ‌ ಹೆಚ್ಚು ಮನೆಗಳಿವೆ. ವ್ಯಾಪಕ ಮಳೆ ಹಾಗೂ ಶಿರೂರು ಗುಡ್ಡ ಕುಸಿದ ಘಟನೆಯಿಂದ ಹೆದರಿ ನಿವಾಸಿಗಳು ಮನೆ ಖಾಲಿ ಮಾಡಿದ್ದಾರೆ. ಸುಮಾರು 50 ಅಡಿ ಅಗಲ ಹಾಗೂ 200 ಅಡಿ ಉದ್ದದಲ್ಲಿ ಬಿರುಕು ಬಿಟ್ಟಿದ್ದು, ಯಾವುದೇ ಕ್ಷಣದಲ್ಲಾದರೂ ಗುಡ್ಡ ಕುಸಿಯುವ ಭೀತಿ ಇದೆ.

ವರದಾ ನದಿ ಪಾತ್ರದಲ್ಲಿ ನೆರೆ ಪರಿಸ್ಥಿತಿ

ಘಟ್ಟದ ಮೇಲಿನ‌ ತಾಲೂಕುಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಉತ್ತರ ಕನ್ನಡದ ಶಿರಸಿ ತಾಲೂಕಿನ ಬನವಾಸಿಯಲ್ಲಿ ವರದಾ ನದಿ ಮೈದುಂಬಿ ಹರಿಯುತ್ತಿದೆ. ವರದಾ ನದಿ ಪಾತ್ರದಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಅಡಿಕೆ, ಅನಾನಸ್, ಶುಂಠಿ ಹಾಗೂ ಭತ್ತದ ಗದ್ದೆಗಳಿಗೆ ನೀರು ನುಗ್ಗಿದೆ. ಬನವಾಸಿ ಭಾಗದ ಮೊಗವಳ್ಳಿ, ಅಜ್ಜರಣಿ ಮತ್ತು ಗುಣಿ, ಭಾಶಿ, ಯಡೂರಬೈಲ್ ಗ್ರಾಮಗಳಿಗೆ ಪ್ರವಾಹ ಭೀತಿ ಇದೆ. ಶಿರಸಿ, ಸಿದ್ದಾಪುರ, ಯಲ್ಲಾಪುರ ತಾಲೂಕುಗಳಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ನದಿಗಳು ತುಂಬಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶಗಳಿಗೆ ನೆರೆ ಭೀತಿ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading

ಮಳೆ

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Karnataka Rain : ಸತತ ಮಳೆ ಹಿನ್ನೆಲೆಯಲ್ಲಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಶಾಲೆಗಳಿಗೆ ಇಂದು ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

Karnataka Rain

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ (Karnataka Rain) ನಿರಂತರವಾಗಿ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿ ಮಾರ್ಪಾಡಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಮೌಖಿಕವಾಗಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Continue Reading
Advertisement
Latest5 hours ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest5 hours ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ5 hours ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest6 hours ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest8 hours ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest10 hours ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest1 day ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

ಅವಿಭಾಗೀಕೃತ1 day ago

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

ಪ್ರಮುಖ ಸುದ್ದಿ1 day ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ1 day ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌