ಬೆಂಗಳೂರು: ಕರಾವಳಿ ಭಾಗದಲ್ಲಿ ಮುಂದಿನ 48 ಘಂಟೆಗಳು ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ ವೇಳೆ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕರ್ನಾಟಕದ ಉತ್ತರ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40-50 ಕಿ.ಮೀ. ತಲುಪುವ ಸಾಧ್ಯತೆಯಿದ್ದು, ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ. ಮಂಗಳೂರಿನಿಂದ ಕಾರವಾರದವರೆಗಿನ ಕರಾವಳಿ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳ ಮುನ್ಸೂಚನೆ ಇದೆ ಎಂದು ಇಲಾಖೆ ವರದಿ ನೀಡಿದೆ.
ಬೆಂಗಳೂರು ಸುತ್ತಲೂ ಮಳೆ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಭಾರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಯಿದೆ ಎಂದು ವರದಿ ನೀಡಿದೆ.
ಇದನ್ನೂ ಓದಿ: ಲಾಭ ಗಳಿಕೆಯಷ್ಟೇ ಅಲ್ಲ, ಹವಾಮಾನ ವೈಪರೀತ್ಯದ ನಷ್ಟ ತಗ್ಗಿಸುವ ಕೆಲಸವೂ ಆಗಬೇಕು: ಉದ್ಯಮಿಗಳಿಗೆ ರಿಕಿ ಕೇಜ್ ಕಿವಿಮಾತು