ಬೆಂಗಳೂರು: ಐದು ದಿನಗಳು ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯ ಹಲವು ಕಡೆ (Rain News) ಮಳೆಯಾಗಲಿದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ (Weather report) ಮಳೆಯಾಗಲಿದೆ.
ಉತ್ತರ ಒಳನಾಡಿನ ಜಿಲ್ಲೆಯಾದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಸೇರಿದಂತೆ ಕಲಬುರಗಿ, ಕೊಪ್ಪಳ, ರಾಯಚೂರಿನಲ್ಲಿ ಕೆಲವು ಕಡೆ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಈ ಮೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಬೆಂಗಳೂರಲ್ಲಿ ಥಂಡಿ ಜತೆಗೆ ಜಿಟಿ ಜಿಟಿ ಮಳೆ
ದಕ್ಷಿಣ ಒಳನಾಡಿ ಜಿಲ್ಲೆಯಾದ ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು , ವಿಜಯನಗರದಲ್ಲಿ ಲಘು ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಮುಂದಿನ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Ceiling collapse : ಅಂಗನವಾಡಿ ಚಾವಣಿ ಕುಸಿದು 10 ತಿಂಗಳ ಮಗುವಿಗೆ ಗಾಯ, ನೋವಿನಲ್ಲೂ ನಗುವ ಪುಟಾಣಿ ನೋಡಿ!
ರಾಜ್ಯದಲ್ಲಿ ಗುರುವಾರದಂದು ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಟಿ.ನರಸೀಪುರದಲ್ಲಿ 5 ಸೆಂ.ಮೀ ಹಾಗೂ ಬಳ್ಳಾರಿಯಲ್ಲಿ 3 ಸೆಂ.ಮೀ ಮಳೆಯಾಗಿದೆ. ಉಪ್ಪಿನಂಗಡಿ, ಕೋಟ, ಕೆಂಭಾವಿ, ಕುರ್ಡಿ, ಕೊಟ್ಟಿಗೆಹಾರ ಹಾಗೂ ಕೆ.ಆರ್.ಸಾಗರ , ಕುರುಗೋಡು, ಕೂಡ್ಲಿಗಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಸುಳ್ಯ, ಕದ್ರಾ, ಯಲ್ಲಾಪುರ, ಬೈಲಹೊಂಗಲ, ಅಣ್ಣಿಗೇರಿ, ಗದಗ್ , ಕಕ್ಕೇರಿ, ಹಾಸನ, ಕೊಳ್ಳೇಗಾಲ, ಮಳವಳ್ಳಿ , ಹೊಸಪೇಟೆ, ಹಡಗಲಿ, ಮಂಡ್ಯ ಕೆವಿಕೆ ತಲಾ 1 ಸೆಂ.ಮೀ ಮಳೆಯಾಗಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 34 ಡಿ.ಸೆ – 23 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 22 ಡಿ.ಸೆ
ಬೆಳಗಾವಿ: 28 ಡಿ.ಸೆ – 20 ಡಿ.ಸೆ
ಕಾರವಾರ: 32 ಡಿ.ಸೆ – 25 ಡಿ.ಸೆ
ಮಂಗಳೂರು: 29 ಡಿ.ಸೆ – 24 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 30 ಡಿ.ಸೆ – 20 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ