Site icon Vistara News

Weather Report : ರಾಜ್ಯದ ಹಲವೆಡೆ ಇಂದು ಚಿಟಪಟ ಮಳೆಗೆ ಗುಡುಗು, ಮಿಂಚು ಸಾಥ್

Girl in umbrala

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್‌ ತಿಂಗಳಲ್ಲಿ ಬಿರುಸಿನ ಮಳೆಯಾಗುವ (Rain News) ನಿರೀಕ್ಷೆ ಇತ್ತು. ಆದರೆ ಈಗ ವರುಣ ತೆಪ್ಪಗಾಗಿದ್ದಾನೆ. ಆಗಸ್ಟ್‌ 24ರಂದು ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಅತಿ ಸಾಧಾರಣ ಮಳೆಯಾಗುವ (Weather report) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು, ಗುಡುಗು ಸಾಥ್‌ ನೀಡಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಯಾದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದೆ. ಉಳಿದ ಭಾಗಗಳಲ್ಲಿ ಮಳೆ ಮರೆಯಾಗಿದೆ. ಉತ್ತರ ಒಳನಾಡಿ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿಒಣಹವೆ ಇರಲಿದೆ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆಯಾದರೆ, ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಬೆಂಗಳೂರಲ್ಲಿ ಚಿಟಪಟ ಮಳೆಯಷ್ಟೇ

ಬೆಂಗಳೂರು ವ್ಯಾಪ್ತಿಯಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಮೋಡ ಕವಿದ ವಾತಾವರಣ ಇದ್ದರೂ ಜತೆಗೆ ಬಿಸಿ ಗಾಳಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 31 ಡಿ.ಸೆ – 22 ಡಿ.ಸೆ
ಮಂಗಳೂರು: 30 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಗದಗ: 32 ಡಿ.ಸೆ – 20 ಡಿ.ಸೆ
ಹೊನ್ನಾವರ: 30 ಡಿ.ಸೆ- 25 ಡಿ.ಸೆ
ಕಲಬುರಗಿ: 35 ಡಿ.ಸೆ – 24 ಡಿ.ಸೆ
ಬೆಳಗಾವಿ: 29 ಡಿ.ಸೆ – 20 ಡಿ.ಸೆ
ಕಾರವಾರ: 32 ಡಿ.ಸೆ – 25 ಡಿ.ಸೆ

ಆಗಸ್ಟ್‌ 24ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0426.28479111788
ಆಲಮಟ್ಟಿ ಜಲಾಶಯ
(Almatti Dam)
519.6122.8302037
ಮಲಪ್ರಭಾ ಜಲಾಶಯ (Malaprabha Dam)633.8023.01194194
ಘಟಪ್ರಭಾ ಜಲಾಶಯ
(Ghataprabha Dam)
662.9142.7711934360
ತುಂಗಾಭದ್ರಾ ಜಲಾಶಯ (Tungabhadra Dam)497.7182.63160610770
ಭದ್ರಾ ಜಲಾಶಯ (Bhadra Dam)657.7348.7123952881
ನಾರಾಯಣಪುರ ಜಲಾಶಯ (Narayanpur Dam)492.25(ಮೀಟರ್) 491.84(ಮೀಟರ್) 50,00040,260
ಹಾರಂಗಿ
(Harangi Dam)
871.388.3013801700
ಲಿಂಗನಮಕ್ಕಿ (Linganamakki Dam) 554.4473.3131307865
ಹೇಮಾವತಿ
(Hemavathi Dam)
890.5827.9817235750
ಜಲಾಶಯಗಳ ನೀರಿನ ಮಟ್ಟ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version