Site icon Vistara News

Weather report : 22 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ

Boy running in Rain

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು (Southwest monsoon) ಸಕ್ರಿಯಗೊಂಡಿದೆ. ಮುಂದಿನ ಐದು ದಿನಗಳು ಭರ್ಜರಿ ಮಳೆಯಾಗುವ (Rain news) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡು ಹಾಗೂ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಸಹಿತ ಗುಡುಗು ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಸುರಿಯಲಿದೆ ಧಾರಾಕಾರ ಮಳೆ

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮುಂಜಾನೆ ಹೊತ್ತು ಬಿಸಿಲು ಇದ್ದರೆ, ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆಗೆ ಚಿಟಪಟ ಎಂದು ಹಿಡಿದುಕೊಳ್ಳುವ ಮಳೆಗೆ ಗುಡುಗು, ಮಿಂಚು ಜತೆಯಾಗಿ ಇರಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ

ದಕ್ಷಿಣ ಒಳನಾಡಿನ ಜಿಲ್ಲೆಯಾದ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರ ಮಳೆಯಾಗುವ ಸೂಚನೆ ನೀಡಲಾಗಿದೆ.

ಮಲೆನಾಡು, ಕರಾವಳಿಯಲ್ಲಿ ಮಳೆ ಸಿಂಚನ

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಂದು ಭಾಗದಲ್ಲಿ ವಿಪರೀತ ಮಳೆಯಾಗಬಹುದು. ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಚದುರಿದಂತಿದ್ದು, ಬಳ್ಳಾರಿ, ವಿಜಯನಗರ, ವಿಜಯಪುರ, ಬಾಗಲಕೋಟೆ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಮಳೆ ಎಫೆಕ್ಟ್‌; ಕೆಸರಿನಲ್ಲಿ ಸಿಲುಕಿಕೊಂಡ ಸ್ಕೂಲ್‌ ಬಸ್‌ಗಳು

ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಮಳೆಗೆ ರಸ್ತೆಗಳು ಕೆಸರು ಮಯವಾಗಿವೆ. ಪರಪ್ಪನ‌ ಆಗ್ರಹಾರ ಸಮೀಪದ ರಾಯಲ್ ಕಂಟ್ರಿ ಲೇಜೌಟ್‌ನಲ್ಲಿ ಎರಡು ಶಾಲಾ ಬಸ್‌ಗಳು ಕೆಸರಿನಲ್ಲಿ ಸಿಲುಕಿಕೊಡವು. ಬೆಳಗ್ಗೆ ಮಕ್ಕಳನ್ನು ಕರೆದುಕೊಂಡು ಹೋಗಲು ಬಂದಿದ್ದ ಬಸ್ ರಸ್ತೆಯಲ್ಲೇ ಲಾಕ್ ಆಯಿತು. ಒಂದೇ ರಸ್ತೆಯಲ್ಲಿ ಎರಡು ಬಸ್‌ಗಳ ಟಯರ್ ಸಿಕ್ಕಿಕೊಂಡ ಪರಿಣಾಮ ಚಾಲಕರು ಪರದಾಬೇಕಾಯಿತು. ಬಿಬಿಎಂಪಿ ನಿರ್ಲಕ್ಷ್ಯದ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದರು. ಸ್ಥಳೀಯರ ಸಹಾಯದಿಂದ ಚಾಲಕರು ಕೆಸರಿನಿಂದ ಬಸ್ ಹೊರ ತೆಗೆದಿದ್ದಾರೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 31 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 21 ಡಿ.ಸೆ
ಗದಗ: 32 ಡಿ.ಸೆ – 22 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 23 ಡಿ.ಸೆ
ಬೆಳಗಾವಿ: 31 ಡಿ.ಸೆ – 21 ಡಿ.ಸೆ
ಕಾರವಾರ: 34 ಡಿ.ಸೆ – 24 ಡಿ.ಸೆ

ಸೆಪ್ಟೆಂಬರ್‌ 1ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0423.5716107329
ಆಲಮಟ್ಟಿ ಜಲಾಶಯ
(Almatti Dam)
519.6121.6001793
ಮಲಪ್ರಭಾ ಜಲಾಶಯ (Malaprabha Dam)633.8022.5102194
ಘಟಪ್ರಭಾ ಜಲಾಶಯ
(Ghataprabha Dam)
662.9141.069961131
ತುಂಗಾಭದ್ರಾ ಜಲಾಶಯ (Tungabhadra Dam)497.7177.01261 9475
ಭದ್ರಾ ಜಲಾಶಯ (Bhadra Dam)657.7346.943513222
ಕಬಿನಿ ಜಲಾಶಯ (Kabini Dam)696.1313.6520382000
ಹಾರಂಗಿ
(Harangi Dam)
871.387.573261700
ಲಿಂಗನಮಕ್ಕಿ (Linganamakki Dam) 554.4470.1622737443
ಹೇಮಾವತಿ
(Hemavathi Dam)
890.5824.848055750
ಜಲಾಶಯಗಳ ನೀರಿನ ಮಟ್ಟ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version